Forest Department ಲಾಂಛನ ಬಿಡುಗಡೆ ಮಾಡಿದ ಸಚಿವ ಈಶ್ವರ ಖಂಡ್ರೆ
ಕರ್ತವ್ಯ ನಿರ್ಲಕ್ಷ್ಯಕ್ಕೆ ಕಠಿಣ ಕ್ರಮ: ಅರಣ್ಯಾಧಿಕಾರಿಗಳಿಗೆ ಎಚ್ಚರಿಕೆ
Team Udayavani, Jun 26, 2023, 2:20 PM IST
ಬೆಂಗಳೂರು: ಅರಣ್ಯ, ಸಸ್ಯಸಂಕುಲ,ಪ್ರಾಣಿ ಸಂಕುಲ, ಪಕ್ಷಿ ಸಂಕುಲದ ಸಂರಕ್ಷಣೆಯೇ ಅರಣ್ಯ ಇಲಾಖೆಯ ಆದ್ಯ ಕರ್ತವ್ಯವಾಗಿದ್ದು ಅರಣ್ಯ ವ್ಯಾಪ್ತಿಯಲ್ಲಿ ಯಾರೇ ಅಕ್ರಮವಾಗಿ ಮರ ಕಡಿದರೂ, ಅರಣ್ಯ ಭೂಮಿ ಒತ್ತುವರಿ ಮಾಡಿದರೂ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಎಚ್ಚರಿಕೆ ನೀಡಿದ್ದಾರೆ.
ವಿಧಾನಸೌಧದಲ್ಲಿಂದು ಅರಣ್ಯ ಇಲಾಖೆಯ ಲಾಂಛನ ಬಿಡುಗಡೆ ಮಾಡಿ ಮಾತನಾಡಿದ ಅವರು, ಅರಣ್ಯನಾಶ ಮತ್ತು ವನ್ಯ ಮೃಗಗಳ ಸಾವು, ಮಾನವ-ಮೃಗ ಸಂಘರ್ಷದ ವಿಚಾರ ಬಹಳ ಗಂಭೀರವಾದ್ದು. ಈ ನಿಟ್ಟಿನಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ತಿಳಿಸಲಾಗಿದೆ. ನಿರ್ಲಕ್ಷ್ಯ ವಹಿಸುವ ಅಧಿಕಾರಿಗಳ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ ಜರುಗಿಸಲಾಗುವುದು, ಕಳೆದ ಒಂದು ತಿಂಗಳಲ್ಲಿ ನೀವು ಅದನ್ನು ನೋಡಿದ್ದೀರಿ ಎಂದು ಖಂಡ್ರೆ ಹೇಳಿದರು.
ಅರಣ್ಯಕ್ಕೆ ಎದುರಾಗುವ ಪ್ರಮುಖ ಆಪತ್ತು. ಕಾಡ್ಗಿಚ್ಚು. ಈ ಕಾಡ್ಗಿಚ್ಚು ಉದ್ದೇಶಪೂರ್ವಕವಾದ್ದೋ, ಸ್ವಾಭಾವಿಕವಾದ್ದೋ ಎಂಬುದು ಮುಖ್ಯವಾಗುತ್ತದೆ. ಕೆಲವೆಡೆ ಮರ ಕಡಿದು ಬುಡಕ್ಕೆ ಬೆಂಕಿ ಹಚ್ಚಿ, ಜೆಸಿಬಿಯಿಂದ ಭೂಮಿ ಮಟ್ಟ ಮಾಡಿ ಅರಣ್ಯ ಭೂಮಿ ಕಬಳಿಸಲಾಗುತ್ತಿದೆ ಎಂಬ ಆರೋಪ ಇದೆ. ಈ ಬಗ್ಗೆ ಕಟ್ಟೆಚ್ಚರ ವಹಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದರು.
ಮಾನವ ಮತ್ತು ಕಾಡು ಮೃಗಗಳ ನಡುವಿನ ಸಂಘರ್ಷ ಕೂಡ ದೊಡ್ಡ ಸವಾಲಾಗಿದೆ. ರಾಜ್ಯದಲ್ಲಿ 2022-23ನೇ ಸಾಲಿನಲ್ಲಿ ವನ್ಯಮೃಗ ದಾಳಿಯಿಂದ 51 ಸಾವು ಸಂಭವಿಸಿದ್ದು, ಇದರಲ್ಲಿ 29 ಸಾವು ಆನೆಗಳಿಂದಲೇ ಆಗಿದೆ ಎಂದು ನನಗೆ ತಿಳಿಸಲಾಗಿದೆ. ರಾಜ್ಯದಲ್ಲಿ ಸುಮಾರು 6 ಸಾವಿರ 30 ಆನೆ ಇದೆ ಎಂದು ಅಂದಾಜು ಮಾಡಲಾಗಿದೆ. ಮನುಷ್ಯರ ಜೀವ ಅಮೂಲ್ಯವಾಗಿದ್ದು, ಅರಣ್ಯ ಇಲಾಖೆ ಜನರಪರ ಕಾಳಜಿಯಿಂದ ಕರ್ತವ್ಯ ನಿರ್ವಹಿಸಬೇಕು ಎಂದರು.
ಆನೆಗಳು ನಾಡಿಗೆ ಬರುವುದರಿಂದ ಅಪಾಯ ಹೆಚ್ಚು. ರಾಜ್ಯದಲ್ಲಿ ಸುಮಾರು 641 ಕಿ.ಮೀ. ರೈಲ್ವೆ ಬ್ಯಾರಿಕೇಡ್ ಅಳವಡಿಸಲು ಯೋಜನೆ ರೂಪಿಸಲಾಗಿದೆ. ಈ ಪೈಕಿ 310 ಕಿ.ಮೀ. ಪೂರ್ಣವಾಗಿದೆ. ಒಂದು ಕಿ.ಮೀ. ರೈಲ್ವೆ ಬ್ಯಾರಿಕೇಡ್ ಮಾಡಲು ಒಂದೂವರೆ ಕೋಟಿ ವೆಚ್ಚವಾಗುತ್ತದೆ. ಉಳಿದ ಕಾಮಗಾರಿ ಮಾಡಲು ಬಜೆಟ್ ನಲ್ಲಿ ಹೆಚ್ಚಿನ ಹಣ ಕೋರಲಾಗಿದೆ, 3 ವರ್ಷಗಳಲ್ಲಿ ಈ ಕಾಮಗಾರಿ ಪೂರ್ಣಗೊಳಿಸಲು ಕಾಲಮಿತಿ ಹಾಕಿಕೊಳ್ಳಲಾಗಿದೆ ಎಂದರು.
ಕಾಂಪಾ ನಿಧಿ ಬಳಸಿಕೊಂಡು ತಡೆಗೋಡೆ ನಿರ್ಮಿಸಲು ಉದ್ದೇಶಿಸಲಾಗಿದೆ. ಈ ವಿಚಾರದಲ್ಲಿ ಕೇಂದ್ರ ಅರಣ್ಯ ಸಚಿವರಿಗೆ ಕೆಲವು ತಪ್ಪು ಕಲ್ಪನೆ ಇದೆ. ಇದನ್ನು ಇತ್ತೀಚೆಗೆ ನಾನು ದೆಹಲಿಗೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಪರಿಹರಿಸಲು ಪ್ರಯತ್ನಿಸಿದ್ದೇವೆ. ಬ್ಯಾರಿಕೇಡ್ ನಿರ್ಮಾಣಕ್ಕೆ ಏಕೆ ಇಷ್ಟು ವೆಚ್ಚ ಮಾಡುತ್ತೀರಿ ಎಂಬುದು ಅವರ ಪ್ರಶ್ನೆಯಾಗಿದೆ. ಆದರೆ ಮಾನವನ ಜೀವ ಅಮೂಲ್ಯವಾದ್ದು, ಎಷ್ಟೇ ಹಣ ಕೊಟ್ಟರೂ ಅದು ಮರಳಿ ಬರುವುದಿಲ್ಲ. ನಾವು ಆನೆಗಳು ಕಾಡಿನಿಂದ ನಾಡಿಗೆ ಬಾರದಂತೆ ತಡೆದರೆ ಈ ಅಮೂಲ್ಯ ಜೀವ ಉಳಿಸಬಹುದು ಎಂದು ಅವರಿಗೆ ಮನವರಿಕೆ ಮಾಡಿಸಿದ್ದೇನೆ ಎಂದು ವಿವರಿಸಿದರು.
ಖಾಲಿ ಹುದ್ದೆ ಭರ್ತಿ: ಇಲಾಖೆಯಲ್ಲಿ ಖಾಲಿ ಇರುವ 335 ಹುದ್ದೆ ಭರ್ತಿಗೆ ಹಣಕಾಸು ಇಲಾಖೆ ಅನುಮೋದನೆ ಪಡೆದು ಶೀಘ್ರವೇ ಅಧಿಸೂಚನೆ ಹೊರಡಿಸಲಾಗುವುದು. ಕಲ್ಯಾಣ ಕರ್ನಾಟಕ ಭಾಗದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಹಣಕಾಸು ಇಲಾಖೆಯ ಅನುಮತಿಯ ಅಗತ್ಯವಿಲ್ಲ. ಹೀಗಾಗಿ ಈ ಭಾಗದಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಪ್ರಸ್ತಾವನೆ ಸಲ್ಲಿಸುವಂತೆ ಸೂಚಿಸಲಾಗಿದೆ ಎಂದರು.
ಭೂ ಮಾಪಕರ ಕೊರತೆ: ಅರಣ್ಯ ಮತ್ತು ಕಂದಾಯ ಭೂಮಿಯ ಸಮಸ್ಯೆಗೆ ಜಂಟಿ ಸರ್ವೆ ಪರಿಹಾರವಾಗಿದೆ. ಭೂಮಾಪಕರ ಕೊರತೆಯಿಂದ ಇದು ತಡವಾಗಿದೆ. ಅಧಿವೇಶನದ ವೇಳೆ ಕಂದಾಯ ಸಚಿವರೊಂದಿಗೆ ಸಭೆ ನಡೆಸಿ, ಖಾಸಗಿ ಭೂಮಾಪಕರ ನೆರವು ಪಡೆದು 6 ತಿಂಗಳೊಳಗೆ ಜಂಟಿ ಸರ್ವೆ ಮಾಡಿಸಲು ಪ್ರಯತ್ನಿಸಲಾಗುವುದು ಎಂದರು.
ಅರಣ್ಯ ವ್ಯಾಪ್ತಿ ಹೆಚ್ಚಳ: ರಾಜ್ಯದಲ್ಲಿ 1 ಲಕ್ಷ 2 ಸಾವಿರ ಹೆಕ್ಟೇರ್ ಹಸಿರು ವ್ಯಾಪ್ತಿ (ಗ್ರೀನ್ ಕವರ್) ಹೆಚ್ಚಳವಾಗಿದೆ ಎಂದು ಭಾರತೀಯ ಅರಣ್ಯ ಸಮೀಕ್ಷಾ ವರದಿ ಹೇಳಿದೆ. ಪ್ರಸ್ತುತ ರಾಜ್ಯದಲ್ಲಿ ಶೇ.21ರಷ್ಟು ಹಸಿರು ವ್ಯಾಪ್ತಿ ಇದ್ದು, ಇದನ್ನು ಶೇ.33ಕ್ಕೆ ಹೆಚ್ಚಿಸುವುದು ತಮ್ಮ ಗುರಿ ಎಂದರು.
ವನಮಹೋತ್ಸವ: ಜುಲೈ 1ರಿಂದ 7ರವರೆಗೆ ರಾಜ್ಯದಾದ್ಯಂತ ವನಮಹೋತ್ಸವ ಆಚರಿಸಲಾಗುತ್ತಿದ್ದು, ಈ ಅವಧಿಯಲ್ಲಿ 1 ಕೋಟಿ ಸಸಿ ನೆಡಲು ತೀರ್ಮಾನಿಸಲಾಗಿದೆ. ಈ ವರ್ಷ 5 ಕೋಟಿ ಸಸಿ ನೆಟ್ಟು ಪೋಷಿಸಲಾಗುವುದು ಎಂದರು.
ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಅವರು, ಕಳೆದ 3 ವರ್ಷದಲ್ಲಿ ನೆಟ್ಟ ಗಿಡಗಳ ಪೈಕಿ ಶೇ.50-60ರಷ್ಟು ಉಳಿದಿವೆ ಎಂದು ತಿಳಿಸಲಾಗಿದೆ. ಈ ಬಾರಿ ನೆಡಲಾಗುವ ಸಸಿಗಳ ಜಿಯೋ ಟ್ಯಾಗ್ ಮಾಡಲಾಗುತ್ತಿದ್ದು, ಕನಿಷ್ಠ ಶೇ.80ರಷ್ಟು ಸಸಿ ಉಳಿಸಲು ಪ್ರಯತ್ನಿಸಲಾಗುವುದು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ
Gold Fraud Case: ಐಶ್ವರ್ಯಗೌಡ ದಂಪತಿಯ 3 ಐಷಾರಾಮಿ ಕಾರು ಜಪ್ತಿ
Gold Cheating Case: ಚಿನಾಭರಣ ವಂಚನೆ… ಶ್ವೇತಾಗೌಡ ವಿರುದ್ಧ ಇನ್ನೊಂದು ದೂರು
Metro: ಮೆಟ್ರೋದಲ್ಲಿ ಮಹಿಳಾ ಟೆಕಿ ಫೋಟೋ ತೆಗೆದು ಸಿಕ್ಕಿಬಿದ್ದ ಆಯುರ್ವೇದಿಕ್ ವೈದ್ಯ
Karnataka Govt.,: ಹೊಸ ಗೋಶಾಲೆ ಇಲ್ಲ, ಇರುವುದಕ್ಕೆ ಬಲ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ
Mangaluru: ಪಿಎಂ ಸ್ವನಿಧಿ ಯೋಜನೆ; ನಗರದಲ್ಲಿ 17.87 ಕೋ.ರೂ. ಸಾಲ ವಿತರಣೆ
Shimoga; ಕಾಂಗ್ರೆಸ್ ಸರಕಾರ ಹಿಂದೂ ಸಮಾಜದ ತಾಳ್ಮೆ ಪರೀಕ್ಷೆ ಮಾಡುತ್ತಿದೆ: ಈಶ್ವರಪ್ಪ
Shimoga; ತೇಜೋವಧೆ ಮಾಡಲು ನನ್ನ ಹೆಸರಲ್ಲಿ ಕಳಪೆ ಸ್ವೀಟ್ ಹಂಚಿಕೆ; ಡಾ.ಸರ್ಜಿ
Father of the Nation: ಬಾಂಗ್ಲಾ ರಾಷ್ಟ್ರಪಿತನಿಗೆ ಪಠ್ಯದಿಂದಲೇ ಕೊಕ್!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.