ಹಳ್ಳಿಗಳಲ್ಲಿ ಕುಡಿಯುವ ನೀರಿನ ಕೊರತೆ ಆಗದಂತೆ ಕ್ರಮಕ್ಕೆ ಸೂಚನೆ
Team Udayavani, Jun 27, 2023, 6:01 AM IST
ಬೆಂಗಳೂರು: ರಾಜ್ಯದ ಗ್ರಾಮೀಣ ಭಾಗಗಳ ಕೆಲವೆಡೆಗಳಲ್ಲಿ ಎದುರಾಗಿರುವ ಕುಡಿಯುವ ನೀರಿನ ಸಮಸ್ಯೆಯನ್ನು ಅರಿತು, ತತ್ಕ್ಷಣದ ಪರಿಹಾರ ಕಂಡುಕೊಳ್ಳುವ ಸಲುವಾಗಿ ಜಿಪಂ ಸಿಇಒಗಳು ತಾಲೂಕು ಪ್ರವಾಸ ಕೈಗೊಳ್ಳಬೇಕೆಂದು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಸೂಚನೆ ನೀಡಿದ್ದಾರೆ.
ರಾಜ್ಯದಲ್ಲಿ ಮಳೆ ಕೊರತೆಯಿಂದ ಎದುರಾಗಿರುವ ನೀರಿನ ಸಮಸ್ಯೆ ಸಂಬಂಧ ರಾಜ್ಯದ ಎಲ್ಲ ಜಿ.ಪಂ. ಸಿಇಒಗಳ ಜತೆ ವೀಡಿಯೋ ಕಾನ್ಫರೆನ್ಸ್ ಸಭೆ ನಡೆಸಿದ ಸಚಿವರು, ಕುಡಿಯುವ ನೀರಿನ ಸಮಸ್ಯೆ ಆಗದಂತೆ ಎಚ್ಚರಿಕೆ ವಹಿಸಬೇಕೆಂದು ಹೇಳಿದರು.
ರಾಜ್ಯದ 16 ಜಿಲ್ಲೆಗಳಲ್ಲಿ ನೀರಿನ ಕೊರತೆಯುಂಟಾಗಿದ್ದು, ಇವುಗಳಲ್ಲಿ ದಕ್ಷಿಣ ಕನ್ನಡ, ಕೊಡಗು, ಶಿವಮೊಗ್ಗ, ಉತ್ತರ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಅಂತರ್ಜಲ ಮಟ್ಟ ಕುಸಿದಿರುವುದರಿಂದ ನೀರಿನ ತೀವ್ರ ಕೊರತೆಯಿದೆ. 4 ಜಿಲ್ಲೆಗಳಲ್ಲಿ ಪರಿಸ್ಥಿತಿ ಸುಧಾರಣೆಯಿದೆ ಎಂಬ ಮಾಹಿತಿಯನ್ನು ಅಧಿಕಾರಿಗಳು ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.