ವಂದೇ ಭಾರತ್‌ನಲ್ಲಿ ಟಿಕೆಟ್ ರಹಿತನ ಅವಾಂತರ
ಶೌಚಾಲಯದ ಬಾಗಿಲು ಜಡಿದು ಕುಳಿತ ಭೂಪ!
Team Udayavani, Jun 27, 2023, 7:57 AM IST
ಕಾಸರಗೋಡು: ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿನಲ್ಲಿ ಟಿಕೆಟ್ ರಹಿತ ಪ್ರಯಾಣಿಕನೊಬ್ಬ ಶೌಚಾಲಯಕ್ಕೆ ನುಗ್ಗಿ ಬಾಗಿಲು ಹಾಕಿಕೊಂಡು ಹೊರಗೆ ಬರಲೊಪ್ಪದೆ ಅವಾಂತರ ಸೃಷ್ಟಿಸಿದ ಘಟನೆ ನಡೆದಿದೆ.
ಉಪ್ಪಳ ಮಂಗಲ್ಪಾಡಿ ಕಲ್ಯಾಣಿ ನಿಲಯದ ನಿವಾಸಿ ಶರಣ್ (26) ಅವಾಂತರ ಸೃಷ್ಟಿಸಿದ ಪ್ರಯಾಣಿಕ.ಶರಣ್ ಜೂ. 25ರಂದು ಮಧ್ಯಾಹ್ನ 2.30ಕ್ಕೆ ಕಾಸರಗೋಡಿನಿಂದ ತಿರುವನಂತಪುರಕ್ಕೆ ಹೊರಟ ರೈಲನ್ನೇರಿದ್ದು, ಟಿಕೆಟ್ ಪರಿವೀಕ್ಷಕರು ಬರುತ್ತಿದ್ದಂತೆ ತನ್ನಲ್ಲಿ ಟಿಕೆಟ್ ಇಲ್ಲದ ಕಾರಣ ಶೌಚಾಲಯದೊಳಗೆ ಪ್ರವೇಶಿಸಿ ಒಳಗಿನಿಂದ ಚಿಲಕ ಹಾಕಿಕೊಂಡಿದ್ದ. ಹೊರಬರುವಂತೆ ಇಲಾಖೆಯ ಸಿಬಂದಿ ಮನವಿ ಮಾಡಿದರೂ ಆತ ಹೊರಬರಲಿಲ್ಲ.
ಕಣ್ಣೂರು ಮತ್ತು ಕೋಯಿಕ್ಕೋಡ್ ನಿಲ್ದಾಣಗಳಲ್ಲಿ ಹಲವರು ಸೇರಿ ಬಾಗಿಲನ್ನು ತೆರೆಯಲು ಪ್ರಯತ್ನಿಸಿದ್ದರು. ಸಾಧ್ಯವಾಗದಿದ್ದಾಗ ರೈಲ್ವೇ ಭದ್ರತಾ ಪಡೆ ಮತ್ತು ರೈಲ್ವೇ ಪೊಲೀಸರು ಆಗಮಿಸಿ ಬಾಗಿಲು ತೆರೆಯಲು ಪ್ರಯತ್ನಿಸಿ ದರು. ಅದೂ ವಿಫಲಗೊಂಡಿತು. ಕೊನೆಗೆ ರೈಲು ಶೊರ್ನೂರಿಗೆ ತಲುಪಿ ದಾಗ ಮೂವರು ಎಂಜಿನಿಯರ್‌ಗಳ ನೇತೃತ್ವದಲ್ಲಿ ಯತ್ನಿಸಿದರೂ ತೆರೆಯಲು ಸಾಧ್ಯವಾಗಲಿಲ್ಲ. ಎಲ್ಲ ಪ್ರಯತ್ನಗಳು ವಿಫಲವಾದ ಬಳಿಕ ಬೀಗವನ್ನೇ ಒಡೆದು ಬಾಗಿ ಲನ್ನು ತೆರೆಯಲಾಯಿತು. ಆತನನ್ನು ರೈಲ್ವೇ ಭದ್ರತಾ ದಳದವರು (ಆರ್‌ಪಿಎಫ್) ವಶಕ್ಕೆ ತೆಗೆದುಕೊಂಡಿದ್ದು, ಪ್ರಶ್ನಿಸುತ್ತಿದ್ದಾರೆ ಎಂದು ಇಲಾಖಾ ಮೂಲಗಳು ತಿಳಿಸಿವೆ.
ಆರಂಭದಲ್ಲಿ ತಾನು ಮಹಾರಾಷ್ಟ್ರದ ವನು ಎಂದು ಹೇಳಿಕೊಂಡು ಹಿಂದಿಯಲ್ಲಿ ಮಾತನಾಡುತ್ತಿದ್ದ; ಬಳಿಕ ಕೇರಳದವನು ಎಂದಿದ್ದಾನೆ ಎಂದು ರೈಲ್ವೇ ಅಧಿಕಾರಿಗಳು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kasaragod: ಕೊಲೆ ಯತ್ನ; ವೀಡಿಯೋ ಕಾನ್ಫರೆನ್ಸ್ ಮೂಲಕ ನಕ್ಸಲ್ ಸೋಮನ್ ವಿಚಾರಣೆ
Kasaragod: 300 ಪವನ್ ಚಿನ್ನ, 1 ಕೋಟಿ ರೂ. ಕಳವು ಕರ್ನಾಟಕ, ತಮಿಳುನಾಡಿಗೆ ತನಿಖೆ ವಿಸ್ತರಣೆ
Road Mishap: ಲಾರಿ ಹರಿದು ಇಬ್ಬರು ಮಕ್ಕಳು ಸೇರಿ ಐವರು ಮೃತ್ಯು
Road Mishap: ಪೊನ್ನಂಪೇಟೆ: ಲಾರಿ ಢಿಕ್ಕಿ; ಬಾಲಕಿ ಸಾವು
Kumble: ಹೆತ್ತವರನ್ನೇ ಕೊಠಡಿಯಲ್ಲಿ ಕೂಡಿ ಹಾಕಿದ ಪುತ್ರಿ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Ranchi: ಪ್ರೇಯಸಿಯನ್ನು ಕೊಂದು 40ರಿಂದ 50 ತುಂಡು ಮಾಡಿದ ಕಟುಕ!
Hunsur: ಟ್ರ್ಯಾಕ್ಟರ್ ಡಿಕ್ಕಿ ಹೊಡೆದು ರಸ್ತೆ ಬದಿ ನಿಂತಿದ್ದ ವ್ಯಕ್ತಿ ಸಾವು
ICC ಚಾಂಪಿಯನ್ಸ್ ಟ್ರೋಫಿ ಪಾಕಿಸ್ತಾನದಿಂದ ಸಂಪೂರ್ಣ ಸ್ಥಳಾಂತರ?: ಐಸಿಸಿ ಸಭೆಯಲ್ಲಿ ನಿರ್ಧಾರ
Maharashtra: ಬಿಜೆಪಿಗೆ ಮಹಾ ಸಿಎಂ ಅವಕಾಶ: ಇಬ್ಬರು ಮಿತ್ರರಿಗೂ ಡಿಸಿಎಂ ಪಟ್ಟ
ಪ್ರವಾಸಕ್ಕೆ ತೆರಳುತ್ತಿದ್ದ ಶಾಲಾ ವಿದ್ಯಾರ್ಥಿಗಳ ಬಸ್ ಪಲ್ಟಿ,ನಾಲ್ವರು ವಿದ್ಯಾರ್ಥಿಗಳಿಗೆ ಗಾಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.