Air India: ವಿಮಾನದಲ್ಲಿ ಪ್ರಯಾಣಿಕರ ಮುಂದೆಯೇ ಮಲ,ಮೂತ್ರ ವಿಸರ್ಜನೆ ಮಾಡಿದ ವ್ಯಕ್ತಿ
Team Udayavani, Jun 27, 2023, 9:53 AM IST
ನವದೆಹಲಿ: ವಿಮಾನದಲ್ಲಿ ಪ್ರಯಾಣಿಕರಿದ್ದ ಸ್ಥಳದಲ್ಲೇ ಮಲ ಮತ್ತು ಮೂತ್ರ ವಿಸರ್ಜನೆ ಮಾಡಿ ದುರ್ವರ್ತನೆ ತೋರಿದ ವ್ಯಕ್ತಿಯನ್ನು ಬಂಧಿಸಲಾಗಿದೆ.
ಮುಂಬೈ-ದೆಹಲಿ ಏರ್ ಇಂಡಿಯಾ ವಿಮಾನದಲ್ಲಿ ಜೂ.24 ರಂದು ಎಐಸಿ 866 ವಿಮಾನದಲ್ಲಿ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಸೀಟ್ ಸಂಖ್ಯೆ 17 ಎಫ್ನಲ್ಲಿ ಪ್ರಯಾಣಿಸುತ್ತಿದ್ದ ರಾಮ್ ಸಿಂಗ್, ವಿಮಾನದ 9 ನೇ ಸಾಲಿನಲ್ಲಿ ಮಲವಿಸರ್ಜನೆ, ಮೂತ್ರ ವಿಸರ್ಜನೆ ಮಾಡಿದ್ದಾರೆ. ಮತ್ತು ಅಲ್ಲೇ ಉಗುಳಿದ್ದಾರೆ. ಮೊದಲಿಗೆ ಸಿಬ್ಬಂದಿ ವ್ಯಕ್ತಿಯ ವರ್ತನೆಗೆ ಮೌಖಿಕವಾಗಿ ಎಚ್ಚರಿಕೆಯನ್ನು ನೀಡಿದ್ದಾರೆ. ಆ ಬಳಿಕ ಅವರನ್ನು ಇತರ ಪ್ರಯಾಣಿಕರಿಂದ ಪ್ರತ್ಯೇಕವಾಗಿ ಕೂರಿಸಿದ್ದಾರೆ.
ಇದನ್ನೂ ಓದಿ: UP criminal: ಮೋಸ್ಟ್ ವಾಂಟೆಡ್ ಕ್ರಿಮಿನಲ್ನನ್ನು ಎನ್ ಕೌಂಟರ್ ಮಾಡಿದ ಪೊಲೀಸರು
ಘಟನೆಯ ಬಗ್ಗೆ ಪೈಲಟ್-ಇನ್-ಕಮಾಂಡ್ ಅವರಿಗೆ ತಿಳಿಸಲಾಗಿದೆ. ಇತರ ಪ್ರಯಾಣಿಕರಿಗೆ ಈ ಘಟನೆ ಆಕ್ರೋಶಕ್ಕೆ ಕಾರಣವಾಗಿದೆ. ವಿಮಾನ ಲ್ಯಾಂಡ್ ಆದ ಬಳಿಕ ಏರ್ ಇಂಡಿಯಾದ ಭದ್ರತಾ ಮುಖ್ಯಸ್ಥರು ಪ್ರಯಾಣಿಕರನ್ನು ಸ್ಥಳೀಯ ಪೊಲೀಸ್ ಠಾಣೆಗೆ ಕರೆದುಕೊಂಡು ಹೋಗಿ ಎಫ್ ಐಆರ್ ದಾಖಲಿಸಿದ್ದಾರೆ. ಆ ಬಳಿಕ ಪೊಲೀಸರು ವ್ಯಕ್ತಿಯನ್ನು ಬಂಧಿಸಿದ್ದಾರೆ ಎಂದು ವರದಿ ತಿಳಿಸಿದೆ.
ಭಾರತೀಯ ದಂಡ ಸಂಹಿತೆಯ ಸೆಕ್ಷನ್ 294 (ಅಶ್ಲೀಲ ಕೃತ್ಯಗಳು) ಮತ್ತು 510 (ಕುಡಿತದಿಂದ ವ್ಯಕ್ತಿಯಿಂದ ಸಾರ್ವಜನಿಕವಾಗಿ ದುರ್ವರ್ತನೆ) ಅಡಿಯಲ್ಲಿ ಪ್ರಕರಣವನ್ನು ದಾಖಲಿಸಲಾಗಿದೆ.
ಈ ಹಿಂದೆ ನವೆಂಬರ್ 26, 2022 ರಂದು, ಮದ್ಯದ ನಶೆಯಲ್ಲಿದ್ದ ವ್ಯಕ್ತಿಯೊಬ್ಬ ನ್ಯೂಯಾರ್ಕ್ನಿಂದ ದೆಹಲಿಗೆ ಹೋಗುವ ಏರ್ ಇಂಡಿಯಾ ವಿಮಾನದಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಮಹಿಳಾ ಸಹ-ಪ್ರಯಾಣಿಕರ ಮೇಲೆ ಮೂತ್ರ ವಿಸರ್ಜನೆ ಮಾಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.