Chikkamagaluruಆಸ್ಪತ್ರೆ ಎದುರು ನರಳಾಡುತ್ತಿದ್ದ ತುಂಬು ಗರ್ಭಿಣಿಗೆ ಚಿಕಿತ್ಸೆ ನೀಡಿದ ವೈದ್ಯ
ಸ್ಥಳೀಯರಿಂದ ಮೆಚ್ಚುಗೆ
Team Udayavani, Jun 27, 2023, 10:23 AM IST
ಚಿಕ್ಕಮಗಳೂರು: ತರೀಕೆರೆ ಸರ್ಕಾರಿ ಆಸ್ಪತ್ರೆಯಲ್ಲೊಂದು ಮನಕಲಕುವ ಘಟನೆ ನಡೆದಿದೆ. ಆಸ್ಪತ್ರೆ ಮುಂಭಾಗ ನರಳಾಡುತ್ತಿದ್ದ ತುಂಬು ಗರ್ಭಿಣಿಗೆ ತಾಲೂಕು ವೈದ್ಯಾಧಿಕಾರಿ ಡಾ.ದೇವರಾಜ್ ಅವರು ಹೆರಿಗೆ ಮಾಡಿಸಿಕೊಂಡು ತಾಯಿ ಹಾಗೂ ಮಗುವಿನ ಪ್ರಾಣ ರಕ್ಷಿಸಿದ್ದಾರೆ.
ಅಜ್ಜಂಪುರ ತಾಲೂಕಿನ ಗಡಿರಂಗಾಪುರದ ತುಂಬು ಗರ್ಭಿಣಿ ಮಹಿಳೆ ಚಿಕಿತ್ಸೆಗೆಂದು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಹೋಗುತ್ತಿದ್ದಳು. ಬಿ ನೆಗೆಟೀವ್ ರಕ್ತಕ್ಕಾಗಿ ಮಹಿಳೆ ಶಿವಮೊಗ್ಗಕ್ಕೆ ಹೋಗುತ್ತಿದ್ದರು. ಆರಂಭದ 3 ತಿಂಗಳು ಖಾಸಗಿ ಆಸ್ಪತ್ರೆಯಲ್ಲಿ ತೋರಿಸಿದ್ದರು. ಖಾಸಗಿ ಆಸ್ಪತ್ರೆಯಲ್ಲಿ 30 ಸಾವಿರ ಕೇಳಿದರು ಎಂದು ಶಿವಮೊಗ್ಗಕ್ಕೆ ಹೋಗಲು ಮಹಿಳೆ ನಿರ್ಧರಿಸಿದ್ದರು.
ತರೀಕೆರೆಯಲ್ಲಿ ಬಸ್ಸಿಗಾಗಿ ಕಾಯುವಾಗ ಗರ್ಭಿಣಿ ಮಹಿಳೆಗೆ ತೀವ್ರ ಹೊಟ್ಟೆ ನೋವು ಕಾಣಿಸಿಕೊಂಡಿತ್ತು. ತರೀಕೆರೆ ಸರ್ಕಾರಿ ಆಸ್ಪತ್ರೆ ಬಾಗಿಲಿಗೆ ಹೋಗಿ ಗರ್ಭಿಣಿ ಮಹಿಳೆ ನೋವಿನಿಂದ ನರಳಾಡುತ್ತಿದ್ದರು. ರಸ್ತೆ ಬದಿ ಇದ್ದ ಗರ್ಭಿಣಿ ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಿ ಡಾ.ದೇವರಾಜ್ ಅವರು ಚಿಕಿತ್ಸೆ ನೀಡಿ ಹೆರಿಗೆ ಮಾಡಿಸಿದ್ದಾರೆ.
ರಸ್ತೆಯಲ್ಲಿ ಬಿದ್ದಿದ್ದ ಮಹಿಳೆಗೆ ಹೆರಿಗೆ ಮಾಡಿಸಿದ ವೈದ್ಯನಿಗೆ ಸ್ಥಳೀಯರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kaduru: ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿಗೆ ರಕ್ತದಲ್ಲಿ ಪತ್ರ ಬರೆದ ಕಾರ್ಯಕರ್ತ
Chikkamagaluru: ಸರ್ಕಾರಿ ಬಸ್-ಲಾರಿ ಮುಖಾಮುಖಿ ಡಿಕ್ಕಿ; ಹಲವರಿಗೆ ಗಾಯ
Chikkamagaluru: ಆಕಸ್ಮಿಕ ಬೆಂಕಿ ತಗುಲಿ ಸಂಪೂರ್ಣ ಸುಟ್ಟು ಭಸ್ಮವಾದ ಗುಡಿಸಲು
Datta peeta; ಸರಕಾರ ನೇಮಕ ಮಾಡಿದ್ದ ಅರ್ಚಕ ರಾಜೀನಾಮೆ
Kottigehara: ಅಪಘಾತದಿಂದ ಗಾಯಗೊಂಡ ನಾಗರಹಾವಿಗೆ ಚಿಕಿತ್ಸೆ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.