ಹೈವೇ ಅವ್ಯವಸೆಗೆ ಪರಿಹಾರ ಹುಡುಕಲು ಮುಂದಾದ ಸರ್ಕಾರ


Team Udayavani, Jun 27, 2023, 1:06 PM IST

ಹೈವೇ ಅವ್ಯವಸೆಗೆ ಪರಿಹಾರ ಹುಡುಕಲು ಮುಂದಾದ ಸರ್ಕಾರ

ರಾಮನಗರ: ರಾಷ್ಟ್ರೀಯ ಹೆದ್ದಾರಿ 275ರ ಬೆಂಗಳೂರು ಮತ್ತು ಮೈಸೂರು ನಡುವಿನ ದಶಪಥ ರಸ್ತೆ ಅವ್ಯವಸ್ಥೆಯತ್ತ ಕೊನೆಗೂ ಅಧಿಕಾರಿಗಳು ಎಚ್ಚೆತ್ತುಕೊಂಡಿದ್ದು, ಡೆತ್‌ವೇ ಎನಿಸಿರುವ ಈ ರಸ್ತೆಯಲ್ಲಿ ಪ್ರಯಾಣಿಕರ ಸುರಕ್ಷತೆಗೆ ಆದ್ಯತೆ ನೀಡಲು ಅಧಿಕಾರಿಗಳು ಮುಂದಾಗಿದ್ದಾರೆ.

ಈಗಾಗಲೇ ಎಕ್ಸ್‌ಪ್ರೆಸ್‌ ಹೈವೇಯಲ್ಲಿನ ಅವ್ಯವಸ್ಥೆಗಳಿಗೆ ಸಂಬಂಧಿಸಿದಂತೆ ಜಿಲ್ಲಾ ಪೊಲೀಸ್‌ ಇಲಾಖೆ ವರದಿ ನೀಡಿ, 54 ಅಂಶಗಳನ್ನು ಸರಿಪಡಿಸುವಂತೆ ಸೂಚನೆ ನೀಡಿತ್ತು. ಪಿಡಬ್ಲೂಡಿ ಸಚಿವ ಸತೀಶ್‌ ಜಾರಕೀಹೋಳಿ ಸಹ ಸೇಫ್ಟಿ ಆಡೀಟ್‌ ನಡೆಸುವುದಾಗಿ ತಿಳಿಸಿದ್ದರು. ಇನ್ನು ಹೈವೇಯಲ್ಲಿ ಎದುರಾಗಿರುವ ಸಣ್ಣಪುಟ್ಟ ಲೋಪದೋಷಗಳನ್ನು ಸರಿಪಡಿಸುವ ಕಾರ್ಯಕ್ಕೆ ಅಧಿಕಾರಿಗಳು ಮುಂದಾಗಿದ್ದಾರೆ.

ತಂತಿಬೇಲಿಗಳ ದುರಸ್ತಿ: ಬೆಂ-ಮೈ ಹೈವೇಯ ಎಕ್ಸ್ ಪ್ರಸ್‌ ವೇಗೆ ಸರ್ವೀಸ್‌ ರಸ್ತೆಯಿಂದ ಯಾರೂ ಪ್ರವೇಶ ಪಡೆಯದಂತೆ ತಂತಿಬೇಲಿಯನ್ನು ಅಳವಡಿ ಸಲಾಗಿತ್ತು. ಸ್ಥಳೀಯರು ಕೆಲವೆಡೆ ಬೇಲಿಗೆ ಅಳವಡಿ ಸಿದ್ದ ತಂತಿಯನ್ನು ತುಂಡರಿಸಿ ಹೆದ್ದಾರಿ ದಾಟುತ್ತಿದ್ದರೆ ಮತ್ತೆ ಕೆಲವೆಡೆ ತಂತಿ ಬೇಲಿ ಕಿತ್ತು ಬಂದಿತ್ತು. ಇದೀಗ ಹಾಳಾಗಿರುವ ತಂತಿ ಬೇಲಿ ದುರಸ್ತಿಕಾರ್ಯವನ್ನು ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಪೊಲೀಸರ ಜೊತೆಗೂಡಿ ಕೈಗೊಂಡಿದ್ದಾರೆ.

ಎಡಿಜಿಪಿ ಭೇಟಿ: ಬೆಂ-ಮೈ ಹೆದ್ದಾರಿಯಲ್ಲಿ ಅಪಘಾತದಿಂದ 155ಕ್ಕೂ ಹೆಚ್ಚು ಮಂದಿ ಸಾವಿಗೀಡಾಗಿರುವ ಹಿನ್ನೆಲೆಯಲ್ಲಿ ಸಂಚಾರ ಮತ್ತು ರಸ್ತೆ ಸುರಕ್ಷತಾ ವಿಭಾಗದ ಎಡಿಜಿಪಿ ಅಲೋಕ್‌ ಕುಮಾರ್‌ ಜೂ.27ರ ಮಂಗಳವಾರ ಹೆದ್ದಾರಿ ಪರಿಶೀಲನೆ ಮಾಡಲಿದ್ದಾರೆ. ಬೆಂಗಳೂರಿನಿಂದ ಮೈಸೂರು ವರೆಗೆ ಹೆದ್ದಾರಿ ಕಾಮಗಾರಿಯನ್ನು ಪರಿಶೀಲನೆ ನಡೆಸಿ ಅಪಘಾತಕ್ಕೆ ಕಾರಣವಾದ ಸ್ಥಳಗಳ ಬಗ್ಗೆ ಮಾಹಿತಿ ಸಂಗ್ರಹಿಸಲಿದ್ದಾರೆ.

ಸರ್ವೀಸ್‌ ರಸ್ತೆಗಳಲ್ಲೂ ಸುಧಾರಣೆಗೆ ಆದ್ಯತೆ: ಬೆಂ-ಮೈ ನಡುವಿನ ಎಕ್ಸ್‌ಪ್ರೆಸ್‌ ಹೈವೇ ಅವ್ಯವಸ್ಥೆಯ ಜೊತೆಗೆ ಸರ್ವೀಸ್‌ರಸ್ತೆಯಲ್ಲಿನ ಸಮಸ್ಯೆಗಳನ್ನು ಸರಿಪಡಿಸಲು ಆದ್ಯತೆ ನೀಡಲಾಗಿದೆ. ಕೆಲವೆಡೆ ಹಂಪ್‌ಗ್ಳನ್ನು ಅಳವಡಿಸುವುದು, ಬಿಳಿಪಟ್ಟೆಗಳನ್ನು ಬಳೆಯುವುದು ಸೇರಿ ದಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಪ್ರಯಾ ಣಿಕರ ಸುಕ್ಷತೆಗೆ ಸ್ಥಳೀಯವಾಗಿ ತೆಗೆದುಕೊಳ್ಳ ಬಹು ದಾದ ಕ್ರಮಗಳನ್ನು ಅಧಿಕಾರಿಗಳು ಕೈಗೊಳ್ಳುತ್ತಿದ್ದಾರೆ.

ಪ್ರಯಾಣಿಕರಲ್ಲಿ ಜಾಗೃತಿ: ಹೆದ್ದಾರಿಯಲ್ಲಿ ಸಂಭವಿಸು ತ್ತಿರುವ ಅಪಘಾತಗಳ ನಿಯಂತ್ರಣದ ಹಿನ್ನೆಲೆಯಲ್ಲಿ ಚಾಲಕರಿಗೆ ಟೋಲ್‌ಪ್ಲಾಜಾ ಬಳಿಯೇ ಅರಿವು ಮೂಡಿಸುವ ಕೆಲಸವನ್ನು ಮಾಡಲಾಗುತ್ತಿದೆ. ಪೊಲೀಸ್‌ ಅಧಿಕಾರಿ ಮತ್ತು ಸಿಬ್ಬಂದಿಗಳನ್ನು ಕಣ್ಕಿಣಕಿ ಬಳಿ ಇರುವ ಟೋಲ್‌ಪ್ಲಾಜಾ ಬಳಿ ನಿಯೋಜಿಸಿ ಚಾಲಕರಿಗೆ ಕರಪತ್ರ ಹಂಚುವ ಮೂಲಕ ಹಾಗೂ ಸುರಕ್ಷತೆಯ ಬಗ್ಗೆ ತಿಳಿಹೇಳುವ ಮೂಲಕ ಅರಿವು ಮೂಡಿಸಲಾಗುತ್ತಿದೆ. ಬೆಂ-ಮೈ ದಶಪಥ ರಸ್ತೆ ಅವ್ಯವಸ್ಥೆಗೆ ಸಂಬಂಧಿ ಸಿದಂತೆ ಉದಯವಾಣಿ ಸರಣಿ ಲೇಖನ ಪ್ರಕಟಿಸುವ ಮೂಲಕ ಸಂಬಂಧಿಸಿದವರನ್ನು ಎಚ್ಚರಿಸುವ ಕೆಲಸ ಮಾಡಿತ್ತು. ವರದಿ ಹಿನ್ನೆಲೆಯಲ್ಲಿ ಎಚ್ಚೆತ್ತುಕೊಂಡಿರುವ ಅಧಿಕಾರಿಗಳು ಹಾಗೂ ಚುನಾಯಿತ ಪ್ರತಿನಿಧಿಗಳು ಹೆದ್ದಾರಿ ಸಮಸ್ಯೆಯ ಬಗ್ಗೆ ಗಂಭೀರವಾಗಿ ಚಿಂತಿಸಿ ಪರಿಹಾರ ಕ್ರಮ ಕೈಗೊಳ್ಳಲು ಮುಂದಾಗಿದ್ದಾರೆ.

ಹೆದ್ದಾರಿ ಅಧಿಕಾರಿಗಳ ಪ್ರತ್ಯೇಕ ಸಭೆ ಹೆದ್ದಾರಿಯಲ್ಲಿ ಸಂಭವಿಸುತ್ತಿರುವ ಅಪಘಾತಗಳಿಗೆ ಸಂಬಂಧಿಸಿದಂತೆ ಹೆದ್ದಾರಿ ಪ್ರಾಧಿಕಾರದ ಪ್ರಾದೇಶಿಕ ಅಧಿಕಾರಿ(ಆರ್‌ಒ) ಯೋಜನಾ ನಿರ್ದೇಶಕರು ಸೇರಿದಂತೆ ವಿವಿಧ ಅಧಿಕಾರಿಗಳ ಸಭೆಯನ್ನು ಡಿಸಿಎಂ ಡಿ.ಕೆ. ಶಿವಕುಮಾರ್‌ ಅಧ್ಯಕ್ಷತೆಯಲ್ಲಿ ಮುಂದಿನ ಒಂದು ವಾರದಲ್ಲಿ ಕರೆದಿರುವುದಾಗಿ ಜಿಲ್ಲಾ ಉಸ್ತುವಾರಿ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.

ಈ ಸಭೆಯಲ್ಲಿ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳ ಜೊತೆಗೆ ಸ್ಥಳೀಯ ಪೊಲೀಸ್‌ ಅಧಿಕಾರಿಗಳು, ಹೆದ್ದಾರಿ ವ್ಯಾಪ್ತಿಯ ಚುನಾಯಿತ ಪ್ರತಿನಿಧಿಗಳು, ಜಿಲ್ಲಾಧಿಕಾರಿಗಳು ಸೇರಿದಂತೆ ಪ್ರಮುಖ ಅಧಿಕಾರಿಗಳು ಪಾಲ್ಗೊಳ್ಳಲಿದ್ದು, ಎಕ್ಸ್‌ಪ್ರೆಸ್‌ ಹೈವೇಯಲ್ಲಿ ಕಾಮಗಾರಿ ವೈಫಲ್ಯದ ಬಗ್ಗೆ ಚರ್ಚಿಸಿ ಸೂಕ್ತ ಕ್ರಮಕ್ಕೆ ನಿರ್ಧಾರ ತೆಗೆದುಕೊಳ್ಳಲಿರುವುದಾಗಿ ಸಚಿವರು ಮಾಹಿತಿ ನೀಡಿದ್ದಾರೆ.

ಟಾಪ್ ನ್ಯೂಸ್

5–COPD

COPD: ಕ್ರೋನಿಕ್‌ ಒಬ್‌ಸ್ಟ್ರಕ್ಟಿವ್‌ ಪಲ್ಮನರಿ ಡಿಸೀಸ್‌ (ಸಿಒಪಿಡಿ)

Maryade Prashne Review

Maryade Prashne Review: ಮಧ್ಯಮ ವರ್ಗದ ಮರ್ಯಾದೆ ಹೋರಾಟ

4-Laparoscopic

Laparoscopic surgery: ಸಂತಾನೋತ್ಪತ್ತಿ ಹೆಚ್ಚಿಸುವ ಲ್ಯಾಪರೊಸ್ಕೋಪಿಕ್ ಶಸ್ತ್ರಚಿಕಿತ್ಸೆ

3-darshan

Renukaswamy Case: ಹತ್ಯೆ ಸ್ಥಳದಲ್ಲಿ ನಟ ದರ್ಶನ್‌: ಫೋಟೋ ಸಾಕ್ಷ್ಯ

2–Chennamman-Kittur

Chennamman-Kittur: ಯೋಧ ನರೇಶ ಯಲ್ಲಪ್ಪ ಅಗಸರ ಕೆರೆಗೆ ಹಾರಿ ಆತ್ಮಹತ್ಯೆ

Kukke-Subhramanaya

Subhramanya: ಕುಕ್ಕೆ ಶ್ರೀಸುಬ್ರಹ್ಮಣ್ಯ ದೇವಸ್ಥಾನದ ಸೇವೆಗಳಲ್ಲಿ ವ್ಯತ್ಯಯ

Shivaraj-Kumar

Health Issue: ಸರ್ಜರಿಗಾಗಿ ಮುಂದಿನ ತಿಂಗಳು ಅಮೆರಿಕಕ್ಕೆ ಹೋಗುವೆ: ನಟ ಶಿವರಾಜ್‌ಕುಮಾರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

HDK (4)

JDS ರಾಮನಗರದಿಂದಲೂ ಔಟ್‌: ‘ಮೈತ್ರಿ’ಗೂ ಲಾಭ ತಂದು ಕೊಡದ ದಳ

Channaptna Result: ಕೊನೆ ಕ್ಷಣದಲ್ಲಿ ಪಕ್ಷ ಬದಲಿಸಿದರೂ ಗೆದ್ದ ಸೈನಿಕ: ನೆರವಾದ ಡಿಕೆ ತಂತ್ರ

Channaptna Result: ಕೊನೆ ಕ್ಷಣದಲ್ಲಿ ಪಕ್ಷ ಬದಲಿಸಿದರೂ ಗೆದ್ದ ಸೈನಿಕ: ನೆರವಾದ ಡಿಕೆ ತಂತ್ರ

By Election: CP Yogeshwar took the lead against Nikhil; Channapatna is curious

By Election: ನಿಖಿಲ್‌ ವಿರುದ್ದ ಮುನ್ನಡೆ ಸಾಧಿಸಿದ ಯೋಗೇಶ್ವರ್;‌ ಕುತೂಹಲದತ್ತ ಚನ್ನಪಟ್ಟಣ

venkatesh-gowda

Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ

Fraud: “ವಿಡಿಯೋಗೆ ಲೈಕ್‌ ನೀಡಿ’ 13.97 ಲಕ್ಷ ಕಳೆದುಕೊಂಡರು!

Fraud: “ವಿಡಿಯೋಗೆ ಲೈಕ್‌ ನೀಡಿ’ 13.97 ಲಕ್ಷ ಕಳೆದುಕೊಂಡರು!

MUST WATCH

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

ಹೊಸ ಸೇರ್ಪಡೆ

5–COPD

COPD: ಕ್ರೋನಿಕ್‌ ಒಬ್‌ಸ್ಟ್ರಕ್ಟಿವ್‌ ಪಲ್ಮನರಿ ಡಿಸೀಸ್‌ (ಸಿಒಪಿಡಿ)

Maryade Prashne Review

Maryade Prashne Review: ಮಧ್ಯಮ ವರ್ಗದ ಮರ್ಯಾದೆ ಹೋರಾಟ

4-Laparoscopic

Laparoscopic surgery: ಸಂತಾನೋತ್ಪತ್ತಿ ಹೆಚ್ಚಿಸುವ ಲ್ಯಾಪರೊಸ್ಕೋಪಿಕ್ ಶಸ್ತ್ರಚಿಕಿತ್ಸೆ

3-darshan

Renukaswamy Case: ಹತ್ಯೆ ಸ್ಥಳದಲ್ಲಿ ನಟ ದರ್ಶನ್‌: ಫೋಟೋ ಸಾಕ್ಷ್ಯ

2–Chennamman-Kittur

Chennamman-Kittur: ಯೋಧ ನರೇಶ ಯಲ್ಲಪ್ಪ ಅಗಸರ ಕೆರೆಗೆ ಹಾರಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.