ರಾಕ್‌ವ್ಯಾಲಿ ರೆಸಾರ್ಟ್‌ನಲ್ಲಿ ವೇಶ್ಯಾವಾಟಿಕೆ: ನಾಲ್ವರ ಬಂಧನ


Team Udayavani, Jun 27, 2023, 1:31 PM IST

tdy-15

ಕೋಲಾರ: ಜಿಲ್ಲೆಯ ಮುಳಬಾಗಿಲು ತಾಲೂಕಿನ ರಾಕ್‌ವ್ಯಾಲಿ ರೆಸಾರ್ಟ್‌ನಲ್ಲಿ ನಡೆಯುತ್ತಿದ್ದ ಹೈಟೆಕ್‌ ವೇಶ್ಯಾವಾಟಿಕೆ ಅಡ್ಡೆ ಮೇಲೆ ಭಾನುವಾರ ಮಧ್ಯರಾತ್ರಿ ದಾಳಿ ನಡೆಸಿ ನಾಲ್ವರನ್ನು ಬಂಧಿಸಲಾಗಿದೆ. ತಲೆಮರೆಸಿಕೊಂಡಿರುವ ಉಳಿದ ಮೂವರ ಬಂಧನಕ್ಕೆ ಶೋಧ ಕಾರ್ಯ ನಡೆದಿದೆ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಎಂ.ನಾರಾಯಣ ತಿಳಿಸಿದರು.

ನಗರದ ಮಹಿಳಾ ಪೊಲೀಸ್‌ ಠಾಣೆಯಲ್ಲಿ ಸೋಮವಾರ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ ಅವರು, ಕಾರ್ಯಾಚರಣೆಯಲ್ಲಿ ಆರು ಮಹಿಳೆಯನ್ನು ರಕ್ಷಿಸಲಾಗಿದೆ. ಈ ಮಹಿಳೆಯರನ್ನು ಹೆ„ದರಾಬಾದ್‌ ಮೂಲದ ವಿಜಯ್‌ ಎಂಬಾತ ಆಂಧ್ರದ ವಿಜಯವಾಡ, ವಿಶಾಖಪಟ್ಟಣಂ, ಚಿತ್ತೂರು ಸೇರಿದಂತೆ ಕೆಲವು ಭಾಗಗಳಿಂದ ಕರೆತಂದು ರೆಸ್ಟೋರೆಂಟ್‌ ಮಾಲೀಕರೊಂದಿಗೆ ಸೇರಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರಂಭದಲ್ಲಿ 14 ಜನರನ್ನು ವಶಕ್ಕೆ ಪಡೆದು ತನಿಖೆ ನಡೆಸಲಾಗಿದೆ.

7 ಜನರ ವಿರುದ್ಧ ಪ್ರಕರಣ : ರೆಸ್ಟೋರೆಂಟ್‌ ಮಾಲಿಕ, ಮ್ಯಾನೇಜರ್‌, ಸಪ್ಲೆ„ಯರ್‌, ರಿಸೆಪ್ಷನಿಸ್ಟ್‌ ಹಾಗೂ ಮಹಿಳೆಯರನ್ನು ಕರೆತಂದಿದ್ದ ಏಜೆಂಟ್‌ ಸೇರಿದಂತೆ 7 ಮಂದಿ ವಿರುದ್ಧ ಕೋಲಾರ ಮಹಿಳಾ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಏಜೆಂಟ್‌ ವಿಜಯ್‌, ಮಂಜುನಾಥ್‌, ಆಂಜಪ್ಪ, ಸತೀಶ್‌ ಎಂಬುವರನ್ನು ಬಂಧಿಸಿದ್ದು, ರೆಸ್ಟೋರೆಂಟ್‌ ಮಾಲೀಕ ಚಂದ್ರಹಾಸ ಸೇರಿದಂತೆ ಮೂವರು ತಲೆಮರೆಸಿ ಕೊಂಡಿದ್ದಾರೆ. ಬಂಧಿತ ಆರೋಪಿಗಳನ್ನು ನ್ಯಾಯಾಲಯ ವಶಕ್ಕೆ ಒಪ್ಪಿಸಲಾಗಿದೆ ಎಂದರು.

ನಗದು , ಮೊಬೈಲ್‌ ವಶ: ದಾಳಿ ವೇಳೆ 5,56,300 ನಗದು, ಸುಮಾರು 2 ಕೋಟಿ ಬೆಲೆ ಬಾಳುವ 10 ಐಷಾರಾಮಿ ಕಾರುಗಳು ಹಾಗೂ 14 ಮೊಬೈಲ್‌ ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಹೇಳಿದರು. ಮಾನವ ಕಳ್ಳಸಾಗಣೆ ನಿಯಂತ್ರಣ ಘಟಕದಲ್ಲಿ ಕಾರ್ಯನಿರ್ವಹಿಸುತ್ತಿರುವ ಕೋಲಾರ ಮಹಿಳಾ ಪೊಲೀಸ್‌ ಠಾಣೆಯ ಇನ್ಸಪೇಕ್ಟರ್‌ ಭೈರಾ ನೇತೃತ್ವದಲ್ಲಿ ವಿಶೇಷ ತಂಡ ದಾಳಿ ನಡೆಸಿದೆ. ನಂಗಲಿ ಪೊಲೀಸ್‌ ಠಾಣಾ ವ್ಯಾಪ್ತಿಯ ಬೈರಕೂರು ಹೋಬಳಿ ಎಚ್‌.ಬೈಯಪ್ಪನಹಳ್ಳಿ ಗ್ರಾಮ ವ್ಯಾಪ್ತಿಯ ಕರ್ನಾಟಕ-ಆಂಧ್ರ ಗಡಿ ವ್ಯಾಪ್ತಿಯಲ್ಲಿ ಸುಮಾರು ಏಳೆಂಟು ಎಕರೆ ಪ್ರದೇಶದಲ್ಲಿ ಈ ರೆಸಾರ್ಟ್‌ ಇದ್ದು. ಆವರಣದಲ್ಲಿರುವ ರಾಕ್‌ ವ್ಯಾಲಿ ಬಾರ್‌ ಅಂಡ್‌ ರೆಸ್ಟೋರೆಂಟ್‌ ಕಟ್ಟಡದ ಕೊಠಡಿಗಳಲ್ಲಿ ಮಹಿಳೆಯರನ್ನು ಇರಿಸಿಕೊಂಡು ವೇಶ್ಯಾವಾಟಿಕೆ ನಡೆಸುತ್ತಿದ್ದ ಮಾಹಿತಿ ಆಧಾರದ ಮೇಲೆ ದಾಳಿ ನಡೆಸಲಾಗಿದೆ ಎಂದು ತಿಳಿಸಿದರು.

ಕಾರ್ಯಾಚರಣೆಯಲ್ಲಿ ಭೈರಾ, ಸಿಬ್ಬಂದಿ ರಮೇಶ್‌, ಮುನಿರಾಜು, ಆಂಜನಪ್ಪ, ಮಂಜುನಾಥ್‌, ನಿಂಗಣ್ಣ, ಶಾಮೂರ್ತಿ,ರೇವಣ ಸಿದ್ದಪ್ಪ, ಮಹಿಳಾ ಸಿಬ್ಬಂದಿ ಶಿಲ್ಪಾ, ನಂದಿನಿ, ಲಾವಣ್ಯಾ, ಚಾಲಕರಾದ ಸುಭಾಷ್‌ ಪಾಲ್ಗೊಂಡಿದ್ದರು. ಇವರಿಗೆ ಕೇಂದ್ರ ವಲಯ ಐಜಿಪಿ ಡಾ.ಬಿ.ಆರ್‌.ರವಿಕಾಂತೇಗೌಡ ಪ್ರಶಂಸೆ ವ್ಯಕ್ತಪಡಿಸಿದ್ದಾರೆ ಎಂದರು.

ಟಾಪ್ ನ್ಯೂಸ್

ಕಸ್ತೂರಿಂಗನ್‌ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’

ಕಸ್ತೂರಿಂಗನ್‌ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’

1-lll

Border-Gavaskar Test series ಇಂದಿನಿಂದ: ಹೋರಾಟಕ್ಕೆ ಭಾರತ-ಆಸ್ಟ್ರೇಲಿಯ ಸಿದ್ಧ

ರಾಷ್ಟ್ರ ರಾಜಧಾನಿಗೆ ನಂದಿನಿ ಲಗ್ಗೆ: ಹೈನುಗಾರರಿಗೂ ಸಿಗಲಿ ಮನ್ನಣೆ

New Delhi: ರಾಷ್ಟ್ರ ರಾಜಧಾನಿಗೆ ನಂದಿನಿ ಲಗ್ಗೆ: ಹೈನುಗಾರರಿಗೂ ಸಿಗಲಿ ಮನ್ನಣೆ

Yasin Malik

Yasin Malik ವಿಚಾರಣೆಗೆ ತಿಹಾರ್‌ ಜೈಲಿನಲ್ಲೇ ಕೋರ್ಟ್‌ ರೂಂ: ಸುಪ್ರೀಂ

court

Himachal Pradesh;ನಷ್ಟದಲ್ಲಿರುವ ಹೊಟೇಲ್‌ ಮುಚ್ಚಲು ಹೈಕೋರ್ಟ್‌ ಆದೇಶ

1-moi

Prime Minister Modi; ಗಯಾನಾ, ಡೊಮಿನಿಕಾ ಗೌರವ ಪ್ರದಾನ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Karnataka: ಅನರ್ಹರ ಕಾರ್ಡ್‌ ಮಾತ್ರ ಎಪಿಎಲ್‌ಗೆ: ಮುನಿಯಪ್ಪ

Karnataka: ಅನರ್ಹರ ಕಾರ್ಡ್‌ ಮಾತ್ರ ಎಪಿಎಲ್‌ಗೆ: ಮುನಿಯಪ್ಪ

ಕೆಲ ಕಾರಣಗಳಿಂದ ಯೋಗೇಶ್ವರ್‌ಗೆ ನೋವಾಗಿದೆ: ಅಶ್ವತ್ಥನಾರಾಯಣ

C. N. Ashwath Narayan: ಕೆಲ ಕಾರಣಗಳಿಂದ ಯೋಗೇಶ್ವರ್‌ಗೆ ನೋವಾಗಿದೆ

Kolar: ಮಗುವನ್ನು ಆಸ್ಪತ್ರೆಯಲ್ಲೇ ಬಿಟ್ಟು ಪೋಷಕರು ಪರಾರಿ

Kolar: ಮಗುವನ್ನು ಆಸ್ಪತ್ರೆಯಲ್ಲೇ ಬಿಟ್ಟು ಪೋಷಕರು ಪರಾರಿ

0528

Bangarapet: ಗ್ರಾಪಂಗಳಲ್ಲಿ ಇಲ್ಲ ಅಧಿಕಾರಿ-ಸಿಬ್ಬಂದಿ; ಸಮಸ್ಯೆ

Kolar

Air Force Emergency: ಬಂಗಾರಪೇಟೆ ಬಳಿ ವಾಯುಪಡೆ ಹೆಲಿಕಾಪ್ಟರ್‌ ತುರ್ತು ಭೂ ಸ್ಪರ್ಶ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

ಕಸ್ತೂರಿಂಗನ್‌ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’

ಕಸ್ತೂರಿಂಗನ್‌ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’

1-lll

Border-Gavaskar Test series ಇಂದಿನಿಂದ: ಹೋರಾಟಕ್ಕೆ ಭಾರತ-ಆಸ್ಟ್ರೇಲಿಯ ಸಿದ್ಧ

ರಾಷ್ಟ್ರ ರಾಜಧಾನಿಗೆ ನಂದಿನಿ ಲಗ್ಗೆ: ಹೈನುಗಾರರಿಗೂ ಸಿಗಲಿ ಮನ್ನಣೆ

New Delhi: ರಾಷ್ಟ್ರ ರಾಜಧಾನಿಗೆ ನಂದಿನಿ ಲಗ್ಗೆ: ಹೈನುಗಾರರಿಗೂ ಸಿಗಲಿ ಮನ್ನಣೆ

Yasin Malik

Yasin Malik ವಿಚಾರಣೆಗೆ ತಿಹಾರ್‌ ಜೈಲಿನಲ್ಲೇ ಕೋರ್ಟ್‌ ರೂಂ: ಸುಪ್ರೀಂ

1-GM

General Motors;1,000 ಉದ್ಯೋಗಿಗಳು ಕೆಲಸದಿಂದ ವಜಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.