ಏಲಕ್ಕಿಯಿಂದ ಎಷ್ಟೆಲ್ಲಾ ಆರೋಗ್ಯ ಲಾಭಗಳಿವೆ ತಿಳಿದಿದೆಯೇ
Team Udayavani, Jun 27, 2023, 9:07 PM IST
ಭಾರತದ ಹೆಚ್ಚಿನವರ ಮನೆಯ ಅಡುಗೆಮನೆಯಲ್ಲಿ ಏಲಕ್ಕಿಯನ್ನು ಮಸಾಲೆ ಪದಾರ್ಥವಾಗಿ ಉಪಯೋಗಿಸುತ್ತಾರೆ. ಆದರೆ ಏಲಕ್ಕಿಯಲ್ಲಿರುವ ಆರೋಗ್ಯಕರ ಪ್ರಯೋಜನಗಳ ಬಗ್ಗೆ ಹಲವರಿಗೆ ತಿಳಿದಿಲ್ಲ. ವಿವಿಧ ಖಾದ್ಯಗಳ ತಯಾರಿಕೆಗೆ ಏಲಕ್ಕಿ ಬಳಸುವುದು ಸಾಮಾನ್ಯ. ಔಷಧೀಯ ಗುಣ ಹೊಂದಿರುವ ಏಲಕ್ಕಿ ವಾಸನೆ ಮತ್ತು ಆಹಾರದ ರುಚಿ ಹೆಚ್ಚಿಸುತ್ತದೆ. ಮಸಾಲೆಯಾಗಿ ಬಳಸಲಾಗುವ ಏಲಕ್ಕಿಯಿಂದ ಹಲವು ಆರೋಗ್ಯಕರ ಪ್ರಯೋಜನಗಳು ಇವೆ. ಏಲಕ್ಕಿಯ ಆರೋಗ್ಯಕರ ಉಪಯೋಗಳು ಹೀಗಿವೆ:
ವಾಂತಿ ಸಮಸ್ಯೆ:
ಕೆಲವರಿಗೆ ವಾಹನಗಳಲ್ಲಿ ದೂರದೂರಿಗೆ ಪ್ರಯಾಣ ಮಾಡುವಾಗ ವಾಂತಿಯಾಗುತ್ತದೆ. ಈ ಸಮಸ್ಯೆ ಇರುವವರು ಪ್ರಯಾಣ ಆರಂಭಿಸುವ ಮೊದಲು ಬಾಯಿಯಲ್ಲಿ ಏಲಕ್ಕಿಯನ್ನು ಇರಿಸಿಕೊಳ್ಳಬೇಕು. ಹೀಗೆ ಮಾಡುವುದರಿಂದ ವಾಂತಿಯಾಗುವುದರಿಂದ ದೂರವಿರಬಹುದು.
ಬಾಯಿಯ ದುರ್ವಾಸನೆಗೆ:
ಏಲಕ್ಕಿ ರುಚಿಯನ್ನು ಹೆಚ್ಚಿಸುವುದರೊಂದಿಗೆ ಬಾಯಿ ಫ್ರೆಶ್ನರ್ ಆಗಿಯೂ ಬಳಸಬಹುದು. ಏಲಕ್ಕಿ ತಿನ್ನುವುದರಿಂದ ಬಾಯಿಯ ದುರ್ವಾಸನೆ ನಿವಾರಣೆಗೆ ಸಹಾಯ ಮಾಡುತ್ತದೆ. ಏಲಕ್ಕಿಯನ್ನು ಎಲ್ಲಾ ಸಮಯದಲ್ಲೂ ಬಾಯಿಯಲ್ಲಿ ಇಟ್ಟುಕೊಳ್ಳಬಹುದು.
ಅಸ್ತಮಾ ಕಡಿಮೆಯಾಗಲು ಸಹಕರಿ:
ಏಲಕ್ಕಿಯಿಂದ ಅಸ್ತಮಾ ಮತ್ತು ನಾಯಿಕೆಮ್ಮುವಿನ ನಿವಾರಣೆ ಸಾಧ್ಯವಾಗುತ್ತದೆ. ಏಲಕ್ಕಿ ಹುಡಿಯೊಂದಿಗೆ ಜೇನುತುಪ್ಪ ಪೇಸ್ಟ್ ಮಾಡಿಕೊಳ್ಳಬೇಕು. ಈ ಮಿಶ್ರಣದ ನಿಯಮಿತವಾಗಿ ಸೇವಿಸುತ್ತಿದ್ದರೆ ನಾಯಿಕೆಮ್ಮು ಮತ್ತು ಅಸ್ತಮಾದಿಂದ ಪರಿಹಾರ ಸಾಧ್ಯ.
ಅಧಿಕ ರಕ್ತದೊತ್ತಡ ನಿವಾರಣೆಗೆ:
ನಿಯಮಿತವಾಗಿ ಏಲಕ್ಕಿ ತಿಂದರೆ ಹಾಗೂ ಏಲಕ್ಕಿಯನ್ನು ನೀರಿನಲ್ಲಿ ಹಾಕಿ ಕುದಿಸಿ ಕುಡಿದರೆ ಅಧಿಕ ರಕ್ತದೊತ್ತಡ ಮತ್ತು ಹೆಚ್ಚಿದ ಕೊಲೆಸ್ಟ್ರಾಲ್ ಮಟ್ಟ ಕಡಿಮೆ ಮಾಡುತ್ತದೆ. ಇದು ಹಲ್ಲುಗಳಲ್ಲಿ ಇರುವ ಬ್ಯಾಕ್ಟೀರಿಯಾ ತೊಡೆದು ಹಾಕಲು ಸಹಾಯ ಮಾಡುತ್ತದೆ. ಏಲಕ್ಕಿ ಪುಡಿಯನ್ನು ಮೂರು ವಾರ ದಿನಕ್ಕೆ ಮೂರು ಬಾರಿ ಸೇವಿಸಿದರೆ ರಕ್ತದೊತ್ತಡ ಸಮಸ್ಯೆ ಕಡಿಮೆ ಆಗುತ್ತದೆ.
ತಲೆ ನೋವು ನಿವಾರಣೆಗೆ:
ಏಲಕ್ಕಿ ಪುಡಿಯಿಂದ ಪೇಸ್ಟ್ ತಯಾರಿಸಿ ಅದನ್ನು ನೆತ್ತಿಗೆ ಹಚ್ಚಿಕೊಳ್ಳುವುದರಿಂದ ತಲೆನೋವು ನಿವಾರಣೆಯಾಗುತ್ತದೆ.
ಗ್ಯಾಸ್ಟ್ರಿಕ್ ನಿವಾರಣೆಗೆ:
ಏಲಕ್ಕಿಯಲ್ಲಿರುವ ಸಾರಭೂತ ತೈಲವು ಹೊಟ್ಟೆಯ ಒಳ ಪದರವನ್ನು ಬಲಪಡಿಸುತ್ತದೆ. ಇದರಿಂದಾಗಿ ಗ್ಯಾಸ್ಟ್ರಿಕ್ ಸಮಸ್ಯೆ ನಿವಾರಣೆಯಾಗಲು ಸಹಾಯ ಮಾಡುತ್ತದೆ.
ಒತ್ತಡ ಕಡಿಮೆಯಾಗುತ್ತದೆ:
ಒತ್ತಡದ ನಿವಾರಣೆಗೆ ಏಲಕ್ಕಿ ಸೇವನೆ ಪ್ರಯೋಜನಕಾರಿ. ನಿಮಗೆ ಒತ್ತಡ ಹೆಚ್ಚಾಗುತ್ತಿದೆ ಎಂದು ಅನಿಸಿದರೆ ಎರಡು ಏಲಕ್ಕಿಯನ್ನು ಬಾಯಿಗೆ ಹಾಕಿ ಅಗಿಯಿರಿ. ಏಲಕ್ಕಿ ಆಗಿಯುವುದರಿಂದ ಕೂಡಲೇ ಹಾರ್ಮೋನುಗಳು ಬದಲಾಯಿಸುತ್ತದೆ. ಇದರಿಂದಾಗಿ ಒತ್ತಡ ನಿವಾರಣೆ ಸಾಧ್ಯ ಎನ್ನಲಾಗುತ್ತದೆ.
ಹೃದಯಾಘಾತ:
ಹೃದಯಾಘಾತದ ವಿರುದ್ಧ ರಕ್ಷಣೆಯನ್ನು ನೀಡುವಲ್ಲಿ ಏಲಕ್ಕಿ ಸಹಕಾರಿಯಾಗಿದೆ. ಮನೆಯಿಂದ ಹೊರಹೋಗುವ ಸಂದರ್ಭ ಏಲಕ್ಕಿಯನ್ನು ಜಗಿಯುವುದು ಉತ್ತಮ ಪರಿಹಾರ.
ಹಲ್ಲಿನ ವಸಡಿನ ಸಮಸ್ಯೆ:
ಏಲಕ್ಕಿ ಹಲ್ಲಿನ ವಸಡಿನ ತೊಂದರೆ ಮತ್ತು ಇನ್‌ಫೆಕ್ಷನ್‌ನಿಂದ ಕಾಪಾಡುತ್ತದೆ.
ತೂಕ ನಷ್ಟಕ್ಕೆ ಸಹಕರಿ:
ತೂಕ ಮತ್ತು ಬೊಜ್ಜು ಕರಗಲು ಆಹಾರದಲ್ಲಿ ಏಲಕ್ಕಿ ಸೇರಿಸುವುದು ಉತ್ತಮ ಪರಿಹಾರ. ಏಲಕ್ಕಿಯಲ್ಲಿರುವ ಪೋಷಕಾಂಶಗಳು ತ್ವರಿತ ತೂಕ ನಷ್ಟಕ್ಕೆ ಸಹಾಯ ಮಾಡುತ್ತದೆ ಎನ್ನಲಾಗುತ್ತದೆ.
-ಕಾವ್ಯಶ್ರೀ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಪೊಂಗಲ್ – ಸಂಕ್ರಾಂತಿಗೆ ಮನರಂಜನೆಯ ಹಬ್ಬದೂಟ: ಇಲ್ಲಿದೆ ರಿಲೀಸ್ ಆಗಲಿರುವ ಚಿತ್ರಗಳ ಪಟ್ಟಿ
Jagdeep Singh: ಈ ಸಿಇಒ ಪ್ರತಿದಿನ ಪಡೆಯುವ ಸಂಬಳ 48 ಕೋಟಿ ರೂ!…ಯಾರೀತ ಜಗದೀಪ್ ಸಿಂಗ್?
Retirement: ವೃತ್ತಿ ನಿವೃತ್ತಿ ವ್ಯಕ್ತಿಯಲ್ಲಿ ಖಿನ್ನತೆಗೆ ಕಾರಣವಾಗುವುದೇ? ಇಲ್ಲಿದೆ ಮಾಹಿತಿ
Rohit Sharma; ಮುಗಿಯಿತಾ ರೋಹಿತ್ ಕ್ರಿಕೆಟ್ ವೃತ್ತಿಜೀವನ? ಗಂಭೀರ ಕೋಪಕ್ಕೆ ಕಾರಣವೇನು?
Healthy Recipe: ಹಳೇ ಕಾಲದ ರುಚಿ; ಈ ರೆಸಿಪಿ ಮಾಡದಿದ್ದರೆ ಒಮ್ಮೆಯಾದ್ರು ಮಾಡಿ ನೋಡಿ…
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Delhi; ರಸ್ತೆಗಳು ಪ್ರಿಯಾಂಕಾ ಗಾಂಧಿ ಕೆನ್ನೆಯಂತಿರಬೇಕು: ಬಿಜೆಪಿ ನಾಯಕನ ಹೇಳಿಕೆಗೆ ಟೀಕೆ
Snuff: ನಶ್ಯ ತಂದಿಟ್ಟ ಸಮಸ್ಯೆ
Nagavalli Bangale Movie: ಸೆನ್ಸಾರ್ ಪಾಸಾದ ನಾಗವಲ್ಲಿ
Sky Force: ಭಾರತದ ಮೊದಲ ವೈಮಾನಿಕ ದಾಳಿಯ ʼಸ್ಕೈ ಫೋರ್ಸ್ʼ ಟ್ರೇಲರ್ ಔಟ್- ಮಿಂಚಿದ ಅಕ್ಷಯ್
Doddaballapura: ಘಾಟಿ ಕ್ಷೇತ್ರದಲ್ಲಿ ಶ್ರೀ ಸುಬ್ರಹ್ಮಣ್ಯಸ್ವಾಮಿ ಬ್ರಹ್ಮ ರಥೋತ್ಸವ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.