ಒಕ್ಕಲಿಗ ಸಮುದಾಯ ಕಡೆಗಣನೆಗೆ ಖಂಡನೀಯ


Team Udayavani, Jun 28, 2023, 1:32 PM IST

ಒಕ್ಕಲಿಗ ಸಮುದಾಯ ಕಡೆಗಣನೆಗೆ ಖಂಡನೀಯ

ದೊಡ್ಡಬಳ್ಳಾಪುರ: ನಗರದಲ್ಲಿ ನಡೆದ ನಾಡಪ್ರಭು ಕೆಂಪೇಗೌಡರ ಜಯಂತಿ ಕಾರ್ಯಕ್ರಮ ಒಕ್ಕಲಿಗರ ಮುಖಂಡರಲ್ಲಿಯೇ ಭಿನ್ನಾಭಿಪ್ರಾಯಕ್ಕೆ ಕಾರಣವಾಗಿದೆ. ಒಕ್ಕಲಿಗ ಸಮುದಾಯದ ಮುಖಂಡರನ್ನು ಕಡೆಗಣಿಸಿ ನಾಡಪ್ರಭು ಕೆಂಪೇಗೌಡ ಜಯಂತಿ ಆಚರಣೆ ಕಾರ್ಯಕ್ರಮದ ಆಯೋಜನೆ ಕುರಿತಂತೆ ಸಮುದಾಯ ಮುಖಂಡರನ್ನು ಪರಿಗಣಿಸದೆ ಏಕಪಕ್ಷೀಯವಾಗಿ ನಿರ್ಧಾರ ಕೈಗೊಂಡಿದ್ದಾರೆಂಬುದು ಒಕ್ಕಲಿಗ ಸಮುದಾಯದ ಮುಖಂಡರ ಬೇಸರಕ್ಕೆ ಕಾರಣವಾಗಿದೆ.

ಕಾರ್ಯಕ್ರಮದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಮುಖಂಡರು ನಗರದ ತಾಲೂಕು ಕಚೇರಿ ವೃತ್ತದಲ್ಲಿ ನಾಡಪ್ರಭು ಕೆಂಪೇಗೌಡರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ಪುಷ್ಪ ನಮನ ಸಲ್ಲಿಸುವ ಮೂಲಕ ಪ್ರತ್ಯೇಕ ವಾಗಿ ಕೆಂಪೇಗೌಡರ ಜಯಂತಿ ಆಚರಿಸಿದರು.

ಈ ವೇಳೆ ಮಾತನಾಡಿದ ಮುಖಂಡರಾದ ವಿಶ್ವಾಸ್‌ ಹನಜಮಂತೇಗೌಡ, ನಾರಾಯಣಗೌಡ, ಹಲವು ವರ್ಷಗಳಿಂದ ನಾಡಪ್ರಭು ಕೆಂಪೇಗೌಡರ ಜಯಂತಿ ಯನ್ನು ಪಕ್ಷಾತೀತವಾಗಿ, ಜ್ಯಾತ್ಯಾತೀತವಾಗಿ ಆಚರಿ ಸಿಕೊಂಡು ಬರಲಾಗುತ್ತಿದೆ. ಕಾರ್ಯಕ್ರಮದ ಆಯೋಜನೆ ಕುರಿತಂತೆ ಸಮುದಾಯ ಮುಖಂಡರ ಸಭೆ ನಡೆಸಿ ಸಂಭ್ರಮದಿಂದ ಆಚರಿಸಿಕೊಂಡು ಬಂದಿರುವುದು ಸಾಕ್ಷಿಯಾಗಿದೆ. ಆದರೆ ಈ ವರ್ಷದ ಆಚರಣೆಯಲ್ಲಿ ಬೇಕಾಬಿಟ್ಟಿ ಸಭೆ ನಡೆಸಿ ಏಕಪಕ್ಷೀಯ ನಿರ್ಣಯ ಕೈಗೊಂಡು ಒಕ್ಕಲಿಗ ಸಮುದಾಯವನ್ನು ಕಡೆಗಣಿಸಿರುವುದು ಖಂಡನೀಯವಾಗಿದೆ.

ಕಳೆದ 10 ವರ್ಷ ಅಧಿಕಾರದಲ್ಲಿದ್ದ ಮಾಜಿ ಶಾಸಕ ಟಿ.ವೆಂಕಟರಮಣಯ್ಯ, ಕಳೆದ ನಾಲ್ಕು ಚುನಾವಣೆಯಲ್ಲಿ ಕೇತ್ರದ ಜನರ ಸೇವೆ ಸಲ್ಲಿಸಿರುವ ಮುನೇಗೌಡ ಸೇರಿದಂತೆ ಒಕ್ಕಲಿಗ ಸಮುದಾಯದ ಅನೇಕ ನಾಯಕರನ್ನು ಕಡೆಗಣಿಸಿ ಕಾರ್ಯಕ್ರಮ ನಡೆಸಲಾಗಿದೆ. ಮಹಾನಾಯಕರ ಜನ್ಮದಿನಾಚರಣೆ ಆಚರಣೆ ವೇಳೆ ಎಂದೂ ಈ ರೀತಿಯಾದ ಏಕಪಕ್ಷೀಯ ನಿಲುವು ತಾಲೂಕಿನಲ್ಲಿ ನಡೆದಿಲ್ಲ. 60 ಸಾವಿರಕ್ಕೂ ಹೆಚ್ಚು ಜನಸಂಖ್ಯೆ ಇರುವ ತಾಲೂಕಿನಲ್ಲಿ ಮೆರವಣಿಗೆ ಹಾಗೂ ಕಾರ್ಯಕ್ರಮಕ್ಕ ನೂರಾರು ಮಂದಿ ಭಾಗವಹಿಸುವಂತಾಗಿದೆ ಎಂದು ಆಕೊ›àಶ ವ್ಯಕ್ತಪಡಿಸಿದರು.

ಈ ವೇಳೆ ನಗರಸಭಾ ಸದಸ್ಯರಾದ ರಜನಿ ಸುಬ್ರಮಣಿ, ಎಚ್‌.ಎಸ್‌. ಶಿವಶಂಕರ್‌, ಸುಬ್ಬು, ಮುಖಂಡರಾದ ಅಪ್ಪಿ ವೆಂಕ ಟೇಶ್‌, ರಾಜಣ್ಣ ಬಿ.ಕೆ, ನಾಗರಾಜು , ಮಾಜಿ ನಗರಸಭಾ ಸದಸ್ಯರಾದ ಶಿವಿ, ಕುಮಾರ್‌, ರಾಜ ಘಟ್ಟರವಿ, ಲಕ್ಷ್ಮೀನಾರಾಯಣ ಗೌಡ ಇದ್ದರು.

ಆಹ್ವಾನ ಪತ್ರಿಕೆಯೂ ಗೊಂದಲ : ಜೂ.27ರಂದು ನಡೆದ ಕೆಂಪೇಗೌಡ ಜಯಂತಿಗೆ ಆಹ್ವಾನ ಪತ್ರಿಕೆ ಯನ್ನು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಪ್ರಕಟಿಸಿದ್ದು, ಇದರಲ್ಲಿ ನಮ್ಮ ಪಾತ್ರ ಇಲ್ಲ ಎಂದು ಕೆಂಪೇಗೌಡ ಜಯಂತ್ಯುತ್ಸವ ಆಚರಣ ಸಮಿತಿ ಅಧ್ಯಕ್ಷ ಟಿ.ವಿ.ಲಕ್ಷ್ಮೀನಾರಾಯಣ್ ಸ್ಪಷ್ಟನೆ ನೀಡಿದ್ದಾರೆ. ಆದರೆ ಇದು ರಾಷ್ಟ್ರೀಯ ಹಬ್ಬಗಳ ಆಚ ರಣಾ ಸಮಿತಿ ವತಿಯಿಂದ ನಡೆಯಬೇಕಿದ್ದ ಸರ್ಕಾರಿ ಕಾರ್ಯಕ್ರಮ ವಾಗಿದ್ದು, ವೇದಿಕೆ ಕಾರ್ಯಕ್ರಮ ಒಕ್ಕಲಿಗರ ಭವನದಲ್ಲಿ ನಡೆಯಲಿದೆ ಎಂದು ಆಹ್ವಾನ ಪತ್ರಿಕೆಯಲ್ಲಿ ಪ್ರಕಟವಾಗಿದೆ. ಆಹ್ವಾನ ಪತ್ರಿಕೆಯಲ್ಲಿ ತಾಲೂಕು ಕಚೇರಿ ಸಭಾಂಗಣ ಎಂದೇ ಮುದ್ರಿಸಬೇಕಿತ್ತು ಎಂದು ವಿವಿಧ ಸಂಘಟನೆಗಳ ಮುಖಂಡರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಒಟ್ಟಿನಲ್ಲಿ ಶಿಸ್ತುಬದ್ಧವಾಗಿ ನಡೆಯಬೇಕಿದ್ದ ಕಾರ್ಯಕ್ರಮ ಸೂಕ್ತ ಸಿದ್ಧತೆಗಳಿಲ್ಲದೇ ನೀರಸವಾಗಿ ನಡೆದಿದ್ದು, ಸಾರ್ವ ಜನಿಕರ ಅಸಮಾಧಾನಕ್ಕೆ ಕಾರಣವಾಗಿತ್ತು.

ಟಾಪ್ ನ್ಯೂಸ್

CT-Ravi

Congress: ಗ್ಯಾರಂಟಿಗಳ ಹಿಂಭಾರ, ಮುಂಭಾರ ಹೆಚ್ಚಾಗಿ ಮುಗ್ಗರಿಸುತ್ತಿದೆ ಸರಕಾರ: ಸಿ.ಟಿ.ರವಿ

Higher-Edu

Higher Education: ಕಾಲೇಜು ಸಿಬಂದಿ ರಜೆ ಹಾಕದೆ ಕೇಂದ್ರ ಕಚೇರಿಗೆ ಬರುವಂತಿಲ್ಲ

BJP_Cong

Local Bodies: ಸ್ಥಳೀಯ ಸಂಸ್ಥೆ ಉಪಚುನಾವಣೆ: ಕಾಂಗ್ರೆಸ್‌ 8, ಬಿಜೆಪಿ 3, ಪಕ್ಷೇತರ 1

newspaper

Medical Asist: ಪತ್ರಿಕಾ ವಿತರಕರಿಗೆ ವೈದ್ಯ ನೆರವು: 70 ವರ್ಷಕ್ಕೆ ವಯೋಮಿತಿ ಹೆಚ್ಚಳ

CM-Siddu-High-Court

MUDA Case: ಮುಡಾ ನಿವೇಶನ ಹಗರಣ ಸಿಬಿಐಗೆ: ಡಿ. 10ಕ್ಕೆ ವಿಚಾರಣೆ ಮುಂದೂಡಿಕೆ

High-Court

Order: ಮಗು ಆರೈಕೆ ರಜೆ: ಸಿಎಟಿ ಆದೇಶ ಎತ್ತಿಹಿಡಿದ ಹೈಕೋರ್ಟ್‌

Tamil-tahala

Pro Kabaddi: ಯೋಧಾಸ್‌ಗೆ ತಲೈವಾಸ್‌ ಆಘಾತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Leopard: ನೆಲಮಂಗಲ ಸಮೀಪ ಚಿರತೆ ಸೆರೆ: ನರಭಕ್ಷಕ ಇದೇನಾ? ವರದಿ ನಿರೀಕ್ಷೆ

Leopard: ನೆಲಮಂಗಲ ಸಮೀಪ ಚಿರತೆ ಸೆರೆ: ನರಭಕ್ಷಕ ಇದೇನಾ? ವರದಿ ನಿರೀಕ್ಷೆ

Anekal: ರೌಡಿಶೀಟರ್‌ ಮೇಲೆ ಮಾರಕಾಸ್ತ್ರಗಳಿಂದ ದಾಳಿ

Anekal: ರೌಡಿಶೀಟರ್‌ ಮೇಲೆ ಮಾರಕಾಸ್ತ್ರಗಳಿಂದ ದಾಳಿ

nelamangala

Leopard Attack: ನೆಲಮಂಗಲ ಸಮೀಪ ಚಿರತೆ ದಾಳಿಗೆ ರೈತ ಮಹಿಳೆ ಬಲಿ

Stray dogs: ಅಂ.ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬೀದಿ ನಾಯಿಗಳ ಹಾವಳಿ

Stray dogs: ಅಂ.ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬೀದಿ ನಾಯಿಗಳ ಹಾವಳಿ

Tragic: ಮರದ ಕಾರ್ಖಾನೆಯಲ್ಲಿ ಆಕಸ್ಮಿಕ ಬೆಂಕಿ; ಕಾರ್ಮಿಕ ಸಜೀವ ದಹನ

Tragic: ಮರದ ಕಾರ್ಖಾನೆಯಲ್ಲಿ ಆಕಸ್ಮಿಕ ಬೆಂಕಿ; ಕಾರ್ಮಿಕ ಸಜೀವ ದಹನ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

ban

Kumble: ಹೆತ್ತವರನ್ನೇ ಕೊಠಡಿಯಲ್ಲಿ ಕೂಡಿ ಹಾಕಿದ ಪುತ್ರಿ

CT-Ravi

Congress: ಗ್ಯಾರಂಟಿಗಳ ಹಿಂಭಾರ, ಮುಂಭಾರ ಹೆಚ್ಚಾಗಿ ಮುಗ್ಗರಿಸುತ್ತಿದೆ ಸರಕಾರ: ಸಿ.ಟಿ.ರವಿ

Higher-Edu

Higher Education: ಕಾಲೇಜು ಸಿಬಂದಿ ರಜೆ ಹಾಕದೆ ಕೇಂದ್ರ ಕಚೇರಿಗೆ ಬರುವಂತಿಲ್ಲ

BJP_Cong

Local Bodies: ಸ್ಥಳೀಯ ಸಂಸ್ಥೆ ಉಪಚುನಾವಣೆ: ಕಾಂಗ್ರೆಸ್‌ 8, ಬಿಜೆಪಿ 3, ಪಕ್ಷೇತರ 1

newspaper

Medical Asist: ಪತ್ರಿಕಾ ವಿತರಕರಿಗೆ ವೈದ್ಯ ನೆರವು: 70 ವರ್ಷಕ್ಕೆ ವಯೋಮಿತಿ ಹೆಚ್ಚಳ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.