ಕಳಪೆ ರಸಗೊಬ್ಬರ ಮಾರಾಟವಾದರೆ ಕ್ರಮ


Team Udayavani, Jun 28, 2023, 2:13 PM IST

ಕಳಪೆ ರಸಗೊಬ್ಬರ ಮಾರಾಟವಾದರೆ ಕ್ರಮ

ಮಂಡ್ಯ: ಜಿಲ್ಲೆಯಲ್ಲಿ ಮುಂಗಾರು ಪ್ರಾರಂಭವಾಗಿದ್ದು, ರೈತರಿಗೆ ಉತ್ತಮ ರಸಗೊಬ್ಬರ ಹಾಗೂ ಬಿತ್ತನೆ ಬೀಜ ಸಿಗಬೇಕು. ಕಳಪೆ ಗುಣಮಟ್ಟದ ಬಿತ್ತನೆ ಬೀಜ ಹಾಗೂ ರಸಗೊಬ್ಬರ ಮಾರಾಟ ಕಂಡುಬಂದಲ್ಲಿ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಎನ್‌.ಚಲುವರಾಯಸ್ವಾಮಿ ಎಚ್ಚರಿಕೆ ನೀಡಿದರು.

ನಗರದ ಜಿಲ್ಲಾ ಪಂಚಾಯತ್‌ ಕಾವೇರಿ ಸಭಾಂಗಣ ದಲ್ಲಿ ನಡೆದ ಕೆಡಿಪಿ ಸಭೆಯಲ್ಲಿ ಮಾತನಾಡಿ, ಬೆಳೆ ವಿಮೆ ಕುರಿತಂತೆ ರೈತರಲ್ಲಿ ಹೆಚ್ಚಿನ ಜಾಗೃತಿ ಮೂಡಿಸಿ, ಹೆಚ್ಚು ಜನರು ನೋಂದಾಯಿಸಿಕೊಳ್ಳಬೇಕು. ಈ ಹಿಂದೆ ಜಿಲ್ಲೆಯ ವಿವಿಧೆಡೆ ಕಳಪೆ ರಸಗೊಬ್ಬರ ಮಾರಾಟದ ಬಗ್ಗೆ ದೂರು ಗಳು ಬಂದಿದ್ದವು. ಇದರಿಂದ ರೈತರಿಗೆ ತೊಂದರೆಯಾಗ ಲಿದೆ. ಆದ್ದರಿಂದ ಮತ್ತೆ ಈ ರೀತಿಯ ಘಟನೆಗಳು ಮರು ಕಳುಹಿಸದಂತೆ ಎಚ್ಚರ ವಹಿಸಬೇಕು. ಯಾರೇ ಆದರೂ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಚರ್ಮಗಂಟು ರೋಗ ತಡೆಗಟ್ಟಿ: ರಾಸುಗಳಲ್ಲಿ ಕಂಡು ಬರುವ ಚರ್ಮಗಂಟು ರೋಗ ತಡೆಗಟ್ಟಬೇಕು. ಅದ ಕ್ಕಾಗಿ ಕಿಶಾನ್‌ ಕ್ರೆಡಿಟ್‌ ಕಾರ್ಡ್‌ಗಳ ವಿತರಣೆ ಮಾಡು ವಂತೆ ಪಶುಸಂಗೋಪನೆ ಇಲಾಖೆ ಅಧಿಕಾರಿಗಳಿಗೆ ತಿಳಿಸಿದರು. ಮೀನು ಮರಿ ಸಾಕಾಣಿಕೆಗೆ ಸಂಬಂಧಿಸಿದಂತೆ ದೊಡ್ಡ ಕೆರೆಗಳಲ್ಲಿ ಸಾಮಾನ್ಯವಾಗಿ ನಡೆಯುತ್ತದೆ. ಪಂಚಾಯತ್‌ ಹಂತದಲ್ಲಿ ಬರುವ ಸಣ್ಣ ಕೆರೆ, ಕೃಷಿ ಹೊಂಡಗಳಲ್ಲಿ ಮೀನು ಮರಿ ಸಾಕಾಣಿಕೆಯನ್ನು ಪ್ರೋತ್ಸಾಹಿಸಿದರೆ ರೈತರು ಆರ್ಥಿಕವಾಗಿ ಸದೃಢರಾಗುತ್ತಾರೆ ಎಂದರು.

ರೋಗಿಗಳಿಗೆ ಚಿಕಿತ್ಸೆ: ಮಿಮ್ಸ್‌ ಆಸ್ಪತ್ರೆಗೆ 450 ಬೆಡ್‌ಗೆ ಅನುಮೋದನೆ ಪಡೆದಿದ್ದು, 850 ಬೆಡ್‌ನ‌ಲ್ಲಿ ರೋಗಿಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ. 2000 ಜನ ಪ್ರತಿದಿನ ಹೊರ ರೋಗಿಗಳಿದ್ದು, ಇಲ್ಲಿ ಹೆಚ್ಚಿನ ವೈದ್ಯರು ಹಾಗೂ ಸಿಬ್ಬಂದಿಗಳ ಅವಶ್ಯವಿದೆ. ಇದನ್ನು ಸರ್ಕಾರದ ಹಂತದಲ್ಲಿ ಚರ್ಚಿಸಲಾಗುವುದು. ಮಿಮ್ಸ್‌ ಆಸ್ಪತ್ರೆ ಹತ್ತಿರ ಇರುವ ಸ್ಲಂ ಅನ್ನು ಸ್ಥಳಾಂತರ ಮಾಡಿದರೆ ಆಸ್ಪತ್ರೆ ವಿಸ್ತರಿಸಲು ಹಾಗೂ ಕ್ಯಾನ್ಸರ್‌ ಆಸ್ಪತ್ರೆ ನಿರ್ಮಾಣ ಸಾಧ್ಯವಾಗುತ್ತದೆ. ಪ್ರಾಥಮಿಕ ಹಂತದಲ್ಲೇ ಕ್ಯಾನ್ಸರ್‌ ರೋಗಿಗಳಿಗೆ ಚಿಕಿತ್ಸೆ ನೀಡಲು ಬೇಕಿರುವ ಉಪಕರಣಗಳು, ಬೇಕಿರುವ ಥೆರಪಿಸ್ಟ್‌ಗಳ ಪ್ರಸ್ತಾವನೆ ಸಲ್ಲಿಸುವಂತೆ ಅಧಿಕಾರಿಗಳಿಗೆ ತಿಳಿಸಿದರು.

ಎಫ್‌ಪಿಒ ರಚನೆಗೆ ನಿಗದಿತ ಗುರಿಯಿಲ್ಲ: ಜಿಲ್ಲಾಧಿಕಾರಿ ಡಾ.ಕುಮಾರ ಮಾತನಾಡಿ, ಆಯುಷ್ಮಾನ್‌ ಕಾರ್ಡ್‌ ನೋಂದಣಿ ಕುರಿತಂತೆ ಕಾರ್ಡ್‌ ನೋಂದಣಿ ಗ್ರಾಮ ಒನ್‌ ಸೆಂಟರ್‌ನಲ್ಲಿ ಮಾಡಲಾಗುತ್ತಿದೆ. ಇದನ್ನು ಹೆಚ್ಚಿಸಲು ಶಿಬಿರಗಳನ್ನು ನಡೆಸಲಾಗುವುದು. ಜಿಲ್ಲೆಯಲ್ಲಿ 45 ಸಾವಿರ ಮೀನುಗಾರರಿದ್ದು, ಎರಡು ಎಫ್‌ಪಿಒಗಳು ಮಾತ್ರ ಇದೆ. ಎಫ್‌ಪಿಒಗಳ ರಚನೆಗೆ ನಿಗದಿತ ಗುರಿ ಇಲ್ಲ. 100ರಿಂದ 150 ಮೀನುಗಾರರನ್ನು ಸೇರಿಸಿ ಚಟುವಟಿಕೆ ನಡೆಸಲು ಹೆಚ್ಚಿನ ಎಫ್‌ಪಿಒ ರಚಿಸಬೇಕು ಎಂದು ಮೀನುಗಾರಿಕೆ ಇಲಾಖೆ ಅಧಿಕಾರಿಗಳಿಗೆ ತಿಳಿಸಿದರು. ಶಾಸಕರಾದ ರಮೇಶ್‌ಬಾಬು ಬಂಡಿಸಿದ್ದೇಗೌಡ, ದರ್ಶನ್‌ ಪುಟ್ಟಣ್ಣಯ್ಯ, ಪಿ.ರವಿಕುಮಾರ್‌ಗೌಡ ಗಣಿಗ, ಕೆ.ಎಂ.ಉದಯ್‌, ಎಚ್‌.ಟಿ.ಮಂಜು, ವಿಧಾನ ಪರಿಷತ್‌ ಸದಸ್ಯರಾದ ಮರಿತಿಬ್ಬೇಗೌಡ, ದಿನೇಶ್‌ ಗೂಳಿಗೌಡ, ಮಧು ಜಿ.ಮಾದೇಗೌಡ, ಜಿಪಂ ಸಿಇಒ ಶೇಖ್‌ ತನ್ವೀರ್‌ ಆಸೀಫ್‌, ಅಪರ ಜಿಲ್ಲಾಧಿಕಾರಿ ಎಚ್‌. ಎಲ್‌.ನಾಗರಾಜು ಹಾಜರಿದ್ದರು.

ಶಾಸಕ ರಮೇಶ್‌ ಬಾಬುಗೆ ಬುದ್ಧಿ ಮಾತು ಹೇಳಿದ ಸಚಿವ: ಕೆಡಿಪಿ ಸಭೆಯಲ್ಲಿ ರಮೇಶ್‌ಬಾಬು ಬಂಡಿಸಿದ್ದೇ ಗೌಡಗೆ ಸಚಿವ ಎನ್‌.ಚಲುವರಾಯಸ್ವಾಮಿ ಬುದ್ಧಿ ಹೇಳಿದ ಪ್ರಸಂಗ ನಡೆಯಿತು. ಭತ್ತ ಖರೀದಿ ಕೇಂದ್ರ ವಿಚಾರದಲ್ಲಿ ಅಧಿಕಾರಿಗಳನ್ನು ರಮೇಶ್‌ ಬಂಡಿಸಿದ್ದೇ ಗೌಡ ತರಾಟೆಗೆ ತೆಗೆದು ಕೊಂಡಿದ್ದರು. ಭತ್ತ ಖರೀದಿ ಕೇಂದ್ರ ತೆರೆಯುವಲ್ಲಿ ವಿಳಂಬ ಮಾಡಲಾಗುತ್ತಿದೆ. ದೇಶಕ್ಕೆ ಒಂದು ಕಾನೂನು, ನಿಮಗೆ ಒಂದು ಕಾನೂನಾ?, ಮಾರ್ಕೆಟಿಂಗ್‌ ಫೆಡ ರೇಷನ್‌ ಅವರು ಯಾರು? ಅವರ ಮನೆ ಮುಂದೆ ರೈತ ಭತ್ತ ತಕೊಂಡು ಹೋಗ್ತಾರಾ?, ರೈತರಿಗೆ ನೂರಾರು ಸಮಸ್ಯೆ ಮಾಡಿಟ್ಟಿದ್ದಾರೆ. ಭತ್ತ ಕೊಡದೆ ಸುಮಾರು ರೈತರು ವಾಪಸ್‌ ಬಂದಿದ್ದಾರೆ ಎಂದು ತರಾಟೆಗೆ ತೆಗೆದುಕೊಂಡಿದ್ದರು. ಈ ವೇಳೆ ಮಧ್ಯೆ ಪ್ರವೇಶಿಸಿದ ಸಚಿವ ಎನ್‌. ಚಲುವರಾಯಸ್ವಾಮಿ, ಶಾಸಕರೇ, ಇದು ಕಳೆದ ಬಾರಿ ಯಾಗಿರುವ ಸಮಸ್ಯೆ. ದಯಮಾಡಿ 1 ನಿಮಿಷ ಇತ್ತ ಕಡೆ ತಿರುಗಿ, ಪದ ಉಪಯೋಗಿಸುವಾಗ ಒಳ್ಳೆಯ ರೀತಿಯಲ್ಲಿ ಉಪಯೋಗಿಸಿದರೆ ನಿಮಗೂ ಒಳ್ಳೆಯದು ಸಭೆಗೂ ಗೌರವ. ಫೆಡರೇಷನ್‌ ತೀರ್ಮಾನವನ್ನು ಸರ್ಕಾರ ತೆಗೆದುಕೊಳ್ಳಬೇಕು. ಸರಿ ಸಮಯಕ್ಕೆ ಖರೀದಿ ಮಾಡದಿದ್ದರೆ ಅವರೇ ಜವಾಬ್ದಾರರು. ಭತ್ತ ಕೊಯ್ಲಿಗೆ ಬಂದಿಲ್ಲ. ಭತ್ತ ಖರೀದಿ ಕೇಂದ್ರದ ಬಗ್ಗೆ ಕ್ಯಾಬಿನೆಟ್‌ನಲ್ಲಿ ಪ್ರಸ್ತಾಪ ಮಾಡುತ್ತೇನೆ. ಶೀಘ್ರದಲ್ಲೇ ಭತ್ತ ಖರೀದಿ ಕೇಂದ್ರ ತೆರೆಯಲು ಕ್ರಮ ವಹಿಸಲಾಗುವುದು ಎಂದು ಹೇಳಿದರು. ಸಚಿವರ ಸಲಹೆಗೆ ಎಚ್ಚೆತ್ತ ಶಾಸಕ ರಮೇಶ್‌ಬಾಬು ಸಮಸ್ಯೆ ಬಗ್ಗೆ ಸಚಿವರ ಬಳಿಯೇ ಪ್ರಸ್ತಾಪಿಸಿದರು.

ರೇಷ್ಮೆ ವಿಸ್ತೀರ್ಣ ಕೇಂದ್ರ ತೆರೆಯುವಂತೆ ಮನವಿ : ಮಳವಳ್ಳಿ, ಮದ್ದೂರು ತಾಲೂಕಿನಲ್ಲಿ ಹೆಚ್ಚಿನ ಜನರು ರೇಷ್ಮೆ ಬೆಳೆಗಾರರಿದ್ದು, ಈ ಭಾಗದಲ್ಲಿ ರೇಷ್ಮೆ ವಿಸ್ತೀರ್ಣ ಕೇಂದ್ರಗಳನ್ನು ಮುಚ್ಚಲಾಗುತ್ತಿದೆ. ರೇಷ್ಮೆ ವಿಸ್ತೀರ್ಣ ಕೇಂದ್ರಗಳನ್ನು ತೆರೆಯುವಂತೆ ಶಾಸಕ ಪಿ.ಎಂ.ನರೇಂದ್ರಸ್ವಾಮಿ ಸಚಿವ ಚಲುವರಾಯ ಸ್ವಾಮಿಗೆ ಮನವಿ ಸಲ್ಲಿಸಿದರು. ಮಳವಳ್ಳಿ ತಾಲೂಕು ಆಸ್ಪತ್ರೆ, ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಸಿಬ್ಬಂದಿಗಳಿಲ್ಲ. ಇರುವ ವೈದ್ಯಕೀಯ ಉಪಕರಣ ಗಳು ಸರಿಯಾಗಿ ಉಪಯೋಗವಾಗುತ್ತಿಲ್ಲ. ಇವು ಗಳ ಬಗ್ಗೆ ಕ್ರಮ ಕೈಗೊಳ್ಳಲು ಜಿಲ್ಲಾ ಆರೋಗ್ಯಾ ಧಿಕಾರಿಗಳಿಗೆ ತಿಳಿಸಿದರು. ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಸಿಎಸ್‌ಆರ್‌ ಅನುದಾನವನ್ನು ಬಳಸಿ ಕೊಳ್ಳಬಹುದು. ಆದ್ದರಿಂದ ಕಾರ್ಖಾನೆಗಳಿಂದ ನೀಡಬೇಕಿರುವ ಸಿಎಸ್‌ಆರ್‌ ಅನುದಾನವನ್ನು ಸಭೆ ನಡೆಸಿ ಕ್ರೋಢೀಕರಿಸುವಂತೆ ಸೂಚಿಸಿದ್ದಾರೆ.

ಟಾಪ್ ನ್ಯೂಸ್

CBI

ED ಅಧಿಕಾರಿ ಒಳಗೊಂಡ ಲಂಚ ಪ್ರಕರಣ; ಸಿಬಿಐನಿಂದ ಮಧ್ಯವರ್ತಿ ಬಂಧನ

ವಕ್ಫ್ ಆಸ್ತಿ ತಿದ್ದುಪಡಿ ವಿಚಾರದಲ್ಲಿ ಸಿಎಂ ಅಸಹಾಯಕರು: ಕುಮಾರ್ ಬಂಗಾರಪ್ಪ

ವಕ್ಫ್ ಆಸ್ತಿ ತಿದ್ದುಪಡಿ ವಿಚಾರದಲ್ಲಿ ಸಿಎಂ ಅಸಹಾಯಕರು: ಕುಮಾರ್ ಬಂಗಾರಪ್ಪ

Hospet: ವಕ್ಫ್ ನಿಂದ ಹಿಂದೂ – ಮುಸ್ಲಿಂ ಸಮಾಜಕ್ಕೆ ಅನ್ಯಾಯ; ರಮೇಶ್ ಜಾರಕಿಹೊಳಿ

Hospet: ವಕ್ಫ್ ನಿಂದ ಹಿಂದೂ – ಮುಸ್ಲಿಂ ಸಮಾಜಕ್ಕೆ ಅನ್ಯಾಯ; ರಮೇಶ್ ಜಾರಕಿಹೊಳಿ

1-urmila

Actor; ಖ್ಯಾತ ನಟಿ ಉರ್ಮಿಳಾ ಕೊಠಾರೆ ಅವರ ಕಾರು ಹರಿದು ಓರ್ವ ಸಾ*ವು

Yadgiri: ನಗರ ಪೊಲೀಸರ ಕಾರ್ಯಾಚರಣೆ… 7 ಲಕ್ಷ ರೂ. ಮೌಲ್ಯದ 22 ಬೈಕ್ ವಶ

Yadgir: ನಗರ ಪೊಲೀಸರ ಕಾರ್ಯಾಚರಣೆ… 7 ಲಕ್ಷ ರೂ. ಮೌಲ್ಯದ 22 ಬೈಕ್ ವಶ

Qatar: ಕತಾರ್‌ ರಾಜಕುಮಾರಿಯ ಹಿಂಬಾಲಿಸಿ, ಗಿಫ್ಟ್ ಕೊಟ್ಟು ಕಿರುಕುಳ… ಚಾಲಕನಿಗೆ ಶಿಕ್ಷೆ

Qatar: ಕತಾರ್‌ ರಾಜಕುಮಾರಿಯ ಹಿಂಬಾಲಿಸಿ, ಗಿಫ್ಟ್ ಕೊಟ್ಟು ಕಿರುಕುಳ… ಚಾಲಕನಿಗೆ ಶಿಕ್ಷೆ

priyank-kharge

Bidar contractor ಆತ್ಮಹ*ತ್ಯೆ ಪ್ರಕರಣ: ಸ್ವತಂತ್ರ ತನಿಖೆಗೆ ಪ್ರಿಯಾಂಕ್ ಖರ್ಗೆ ಒಲವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Robbery: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ “ಮೊಟ್ಟೆ ಗ್ಯಾಂಗ್‌”

Robbery: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ “ಮೊಟ್ಟೆ ಗ್ಯಾಂಗ್‌”

HD-Kumaraswamy

Belagavi: ಅಧಿವೇಶನ ಶತಮಾನೋತ್ಸವದಲ್ಲಿ ನಕಲಿ ಗಾಂಧಿಗಳೇ ಹೆಚ್ಚು: ಎಚ್‌ಡಿಕೆ ವ್ಯಂಗ್ಯ

Mandya-Sahitya

ಮಂಡ್ಯ ಸಾಹಿತ್ಯ ಸಮ್ಮೇಳನದಲ್ಲಿ ಕನ್ನಡಕ್ಕಾಗಿ ಕೈಗೊಂಡ 5 ನಿರ್ಣಯಗಳೇನು ಗೊತ್ತಾ?

ಬಳ್ಳಾರಿಯಲ್ಲೇ ಏಕೆ 88ನೇ ಕನ್ನಡ ಸಾಹಿತ್ಯ ಸಮ್ಮೇಳನ?

ಬಳ್ಳಾರಿಯಲ್ಲೇ ಏಕೆ 88ನೇ ಕನ್ನಡ ಸಾಹಿತ್ಯ ಸಮ್ಮೇಳನ?

Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ

Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

CBI

ED ಅಧಿಕಾರಿ ಒಳಗೊಂಡ ಲಂಚ ಪ್ರಕರಣ; ಸಿಬಿಐನಿಂದ ಮಧ್ಯವರ್ತಿ ಬಂಧನ

ವಕ್ಫ್ ಆಸ್ತಿ ತಿದ್ದುಪಡಿ ವಿಚಾರದಲ್ಲಿ ಸಿಎಂ ಅಸಹಾಯಕರು: ಕುಮಾರ್ ಬಂಗಾರಪ್ಪ

ವಕ್ಫ್ ಆಸ್ತಿ ತಿದ್ದುಪಡಿ ವಿಚಾರದಲ್ಲಿ ಸಿಎಂ ಅಸಹಾಯಕರು: ಕುಮಾರ್ ಬಂಗಾರಪ್ಪ

1-geeta

Udupi; ಬೃಹತ್ ಗೀತೋತ್ಸವ: ಭಗವದ್ಗೀತಾ ಯಜ್ಞ ಸಂಪನ್ನ

Hospet: ವಕ್ಫ್ ನಿಂದ ಹಿಂದೂ – ಮುಸ್ಲಿಂ ಸಮಾಜಕ್ಕೆ ಅನ್ಯಾಯ; ರಮೇಶ್ ಜಾರಕಿಹೊಳಿ

Hospet: ವಕ್ಫ್ ನಿಂದ ಹಿಂದೂ – ಮುಸ್ಲಿಂ ಸಮಾಜಕ್ಕೆ ಅನ್ಯಾಯ; ರಮೇಶ್ ಜಾರಕಿಹೊಳಿ

Court-1

Kasaragod: ಯೂತ್‌ ಕಾಂಗ್ರೆಸ್‌ ಕಾರ್ಯಕರ್ತರ ಕೊ*ಲೆ ಪ್ರಕರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.