ಜಿ.ಪಂ-ತಾ.ಪಂ ಚುನಾವಣೆ: 10 ವಾರದೊಳಗೆ ಮರುವಿಂಗಡಣೆ ಪ್ರಕ್ರಿಯೆ ಮುಗಿಸಲು ಹೈಕೋರ್ಟ್ ಸೂಚನೆ


Team Udayavani, Jun 28, 2023, 5:10 PM IST

ಜಿ.ಪಂ-ತಾ.ಪಂ ಚುನಾವಣೆ: 10 ವಾರದೊಳಗೆ ಮರುವಿಂಗಡಣೆ ಪ್ರಕ್ರಿಯೆ ಮುಗಿಸಲು ಕೋರ್ಟ್ ಸೂಚನೆ

ಬೆಂಗಳೂರು: ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯತಿ ಚುನಾವಣೆ ಹಿನ್ನೆಲೆಯಲ್ಲಿ ಕ್ಷೇತ್ರ ಮರುವಿಂಗಡಣೆ ಹಾಗೂ ಮೀಸಲಾತಿ ನಿಗದಿ ಪ್ರಕ್ರಿಯೆಯನ್ನು 10 ವಾರಗಳ ಒಳಗೆ ರೀಡೂ ಮಾಡಿ ಅಧಿಸೂಚನೆ ಹೊರಡಿಸಬೇಕೆಂದು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶಿಸಿದೆ. ಅಲ್ಲದೆ ಹೈಕೋರ್ಟ್ ವಿಚಾರಣೆಯನ್ನು 12 ವಾರಗಳ ಕಾಲ ಮುಂದೂಡಿದಿದೆ.

ಜಿಲ್ಲಾ ಪಂಚಾಯತ್ ಮತ್ತು ತಾಲೂಕು ಪಂಚಾಯತ್ ವಿಚಾರವನ್ನು ಅಡ್ವೊಕೇಟ್ ಜನರಲ್ ಪ್ರಸ್ತಾಪಿಸಿ ಕ್ಷೇತ್ರ ಪುನರ್ವಿಂಗಡಣೆ ಮೀಸಲಾತಿ ಅಧಿಸೂಚನೆಗಳನ್ನು ಪುನಃ ಮಾಡಲು 10 ವಾರಗಳ ಸಮಯ ಕೋರಿದರು.

10 ವಾರಗಳಲ್ಲಿ ಅಗತ್ಯ ಪುನರ್ವಿಂಗಡಣೆ ಮೀಸಲಾತಿಯನ್ನು ಒದಗಿಸುವಂತೆ ಮತ್ತು ಎಸ್‌ಇಸಿ ಕ್ರಮಗಳನ್ನು ತೆಗೆದುಕೊಳ್ಳುವಂತೆ ನ್ಯಾಯಾಲಯವು ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಿದೆ.

ಇದನ್ನೂ ಓದಿ:Ashes23 ಲಾರ್ಡ್ಸ್ ಮೈದಾನಕ್ಕೆ ನುಗ್ಗಿದ ಪ್ರತಿಭಟನಾಕಾರರು; ಭುಜಬಲ ಪ್ರದರ್ಶಿಸಿದ ಬೆರಿಸ್ಟೋ

ರಾಜ್ಯದಲ್ಲಿ ಜಿ.ಪಂ., ತಾ.ಪಂ.ಗಳಿಗೆ 2021ರ ಏಪ್ರಿಲ್‌ -ಮೇ ತಿಂಗಳಲ್ಲಿ ಅವಧಿ ಪೂರ್ಣಗೊಂಡಿತ್ತು. ಮೊದಲು ಕೊರೊನಾ ಕಾರಣಕ್ಕೆ ಚುನಾವಣೆ ಆಗಿರಲಿಲ್ಲ. ನಂತರ, ಪ್ರಕರಣ ಹೈಕೋರ್ಟ್‌ ಮೆಟ್ಟಿಲೇರಿತು. ಈ ಮಧ್ಯೆ, ಕ್ಷೇತ್ರ ಪುನರ್‌ ವಿಂಗಡಣೆ ಮತ್ತು ಮೀಸಲಾತಿ ನಿಗದಿ ಅಧಿಕಾರವನ್ನು ರಾಜ್ಯ ಚುನಾವಣಾ ಆಯೋಗದಿಂದ ವಾಪಸ್‌ ಪಡೆದು ರಾಜ್ಯ ಸರ್ಕಾರ ಹೊಸದಾಗಿ ಸೀಮಾ ನಿರ್ಣಯ ಆಯೋಗ ರಚಿಸಿತು. ಈ ಆಯೋಗವು ಎರಡು ವರ್ಷ ಪ್ರಹಸನ ನಡೆಸಿ ಕೊನೆಗೂ ಈ ವರ್ಷ ಮಾರ್ಚ್‌ನಲ್ಲಿ ಕ್ಷೇತ್ರ ಪುನರ್‌ವಿಂಗಡಣೆ ಅಧಿಸೂಚನೆ ಹೊರಡಿಸಿತು. ಅಷ್ಟರಲ್ಲೇ ವಿಧಾನಸಭೆ ಚುನಾವಣೆ ಘೋಷಣೆ ಆಯಿತು. ಹಾಗಾಗಿ, ಜಿ.ಪಂ., ತಾ.ಪಂ ಚುನಾವಣೆ ನನೆಗುದಿಗೆ ಬಿತ್ತು. ಈ ವಿಚಾರದಲ್ಲಿ ಸರ್ಕಾರ ನ್ಯಾಯಾಲಯಕ್ಕೆ ಅನೇಕ ಸಬೂಬುಗಳನ್ನು ಹೇಳುತ್ತಲೇ ಬಂತು. ಇದಕ್ಕಾಗಿ ಹೈಕೋರ್ಟ್‌ ಸರ್ಕಾರಕ್ಕೆ ಅನೇಕ ಬಾರಿ ಚಾಟಿ ಬೀಸಿದೆ, ಛೀಮಾರಿ ಹಾಕಿದೆ. 5 ಲಕ್ಷ ರೂ. ದಂಡ ಸಹ ಹಾಕಿತ್ತು.

ಪ್ರಕರಣ ಹೈಕೋರ್ಟ್‌ ನಲ್ಲಿ 2023ರ ಮೇ 29ಕ್ಕೆ ವಿಚಾರಣೆಗೆ ಬಂದಿದ್ದಾಗ ಈಗಷ್ಟೇ ಹೊಸ ಸರ್ಕಾರ ಅಸ್ತಿತ್ವಕ್ಕೆ ಬಂದಿದೆ. ಸಚಿವರಿಗೆ ಖಾತೆಗಳ ಹಂಚಿಕೆಯಾಗಿದ್ದು, ಜಿ.ಪಂ., ತಾ.ಪಂ ಚುನಾವಣೆಗೆ ಸಂಬಂಧಿಸಿದ ಇಲಾಖೆಯ ಸಚಿವರು ಇನ್ನಷ್ಟೇ ಅಧಿಕಾರ ವಹಿಸಿಕೊಂಡಿದ್ದಾರೆ. ಜಿ.ಪಂ., ತಾ.ಪಂ. ಚುನಾವಣೆ, ಕ್ಷೇತ್ರ ಮರುವಿಂಗಡಣೆ ಮತ್ತು ಮೀಸಲಾತಿ ನಿಗದಿಗೆ ಸಂಬಂಧಿಸಿದಂತೆ ಹೈಕೋರ್ಟ್‌ ನೀಡಿರುವ ಆದೇಶದಲ್ಲಿನ ಅಂಶಗಳ ಬಗ್ಗೆ ಅಧ್ಯಯನ ನಡೆಸಿ ಅದನ್ನು ಪಾಲಿಸಲು ಸ್ವಲ್ಪ ಸಮಯ ಬೇಕು. ಅದಕ್ಕಾಗಿ ನಾಲ್ಕು ವಾರ ಕಾಲಾವಕಾಶ ನೀಡಬೇಕೆಂದು ಸರ್ಕಾರ ಹೈಕೋರ್ಟ್‌ಗೆ ಮನವಿ ಮಾಡಿತ್ತು.

ಟಾಪ್ ನ್ಯೂಸ್

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

“ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ’: ಕೆಎಂಎಫ್ ಅಧ್ಯಕ್ಷ

KMF; “ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ’: ಭೀಮಾ ನಾಯ್ಕ

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

High Court: ಬಾಂಬ್‌ ಸ್ಫೋಟ ಹೇಳಿಕೆ; ಶೋಭಾ ಕರಂದ್ಲಾಜೆ ಮೇಲಿನ ಕೇಸ್‌ ರದ್ದು

High Court: ಬಾಂಬ್‌ ಸ್ಫೋಟ ಹೇಳಿಕೆ; ಶೋಭಾ ಕರಂದ್ಲಾಜೆ ಮೇಲಿನ ಕೇಸ್‌ ರದ್ದು

High Court; “ಅರ್ಧ ಪಾಕಿಸ್ಥಾನ’: ಯತ್ನಾಳ್‌ ಹೇಳಿಕೆಗೆ ಹೈಕೋರ್ಟ್‌ ಸಿಟ್ಟು

High Court; “ಅರ್ಧ ಪಾಕಿಸ್ಥಾನ’: ಯತ್ನಾಳ್‌ ಹೇಳಿಕೆಗೆ ಹೈಕೋರ್ಟ್‌ ಸಿಟ್ಟು

Kasturi Rangan ವರದಿ ಹಿನ್ನೆಲೆ: ನಯನಾ ಮೋಟಮ್ಮ ರಾಜೀನಾಮೆ ಬೆದರಿಕೆ

Kasturi Rangan ವರದಿ ಹಿನ್ನೆಲೆ: ನಯನಾ ಮೋಟಮ್ಮ ರಾಜೀನಾಮೆ ಬೆದರಿಕೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.