ಅಕ್ಕಿ ಜತೆ ಹಣ ನೀಡುವ ಕ್ರಮ ಸಮರ್ಥನೀಯ


Team Udayavani, Jun 29, 2023, 6:03 AM IST

RICE

ಅನ್ನಭಾಗ್ಯ ಯೋಜನೆಯಡಿ ಬಿಪಿಎಲ್‌ ಕಾರ್ಡ್‌ದಾರರಿಗೆ ಸದ್ಯ ನೀಡುತ್ತಿರುವ 5 ಕೆ.ಜಿ.ಅಕ್ಕಿ ಜತೆಗೆ ಹೆಚ್ಚುವರಿಯಾಗಿ ಐದು ಕೆಜಿ ಅಕ್ಕಿ ವಿತರಿಸುವ ಬದಲಿಗೆ ಫ‌ಲಾನುಭವಿಗಳ ಖಾತೆಗೆ ನೇರವಾಗಿ ಹಣ ಪಾವತಿಸುವ ರಾಜ್ಯ ಸರ್ಕಾರದ ನಿರ್ಧಾರ ಅತ್ಯಂತ ಸ್ವಾಗತಾರ್ಹ ಹಾಗೂ ಸಮಯೋಚಿತ. ಇದರೊಂದಿಗೆ ಕಳೆದ ಒಂದು ತಿಂಗಳಿಂದ ಅನ್ನಭಾಗ್ಯ ಯೋಜನೆಯಡಿ ಅಕ್ಕಿ ವಿತರಣೆ ಸಂಬಂಧ ಉಂಟಾಗಿದ್ದ ಗೊಂದಲ-ಸಮಸ್ಯೆ-ವಿವಾದಗಳು ಬಹುತೇಕ ಬಗೆಹರಿದಂತಾಗಿದೆ.

ಚುನಾವಣಾ ಪೂರ್ವದಲ್ಲಿ ಕಾಂಗ್ರೆಸ್‌ ಘೋಷಿಸಿದ್ದ 5 ಗ್ಯಾರಂಟಿಗಳ ಪೈಕಿ 10 ಕೆಜಿ ಅಕ್ಕಿ ವಿತರಣೆಯೂ ಒಂದು. ಈ ಯೋಜನೆ ಜಾರಿಗೆ ಕೇಂದ್ರದಿಂದ ಹೆಚ್ಚುವರಿ ಅಕ್ಕಿ ಖರೀದಿಸಲು ರಾಜ್ಯ ಸರ್ಕಾರ ನಡೆಸಿದ ಎಲ್ಲಾ ಪ್ರಯತ್ನಗಳು ಕೈಕೊಟ್ಟವು. ಈ ಬೆಳವಣಿಗೆ ರಾಜಕೀಯ ವಾಕ್ಸಮರಕ್ಕೂ ದಾರಿ ಮಾಡಿಕೊಟ್ಟಿತ್ತು. ಭತ್ತ ಬೆಳೆಯುವ ಪ್ರಮುಖ ರಾಜ್ಯಗಳಾದ ಛತ್ತೀಸಗಡ, ತೆಲಂಗಾಣ, ಆಂಧ್ರಪ್ರದೇಶದಿಂದ ಅಕ್ಕಿ ಸಿಗ ಲಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಹಾಗೂ ರಾಜ್ಯ ಆಹಾರ ಸಚಿವ ಕೆ.ಎಚ್‌.ಮುನಿಯಪ್ಪ ಅವರು ಕೇಂದ್ರ ಆಹಾರ ಹಾಗೂ ನಾಗರಿಕ ಪೂರೈಕೆ ಸಚಿವ ಪಿಯೂಷ್‌ ಗೋಯಲ್‌ ಅವರನ್ನು ಭೇಟಿ ಮಾಡಿ ಮನವಿ ಮಾಡಿದರೂ ಸ್ಪಂದನೆ ಸಿಗಲಿಲ್ಲ. ಎಫ್ಸಿಐನಿಂದ ಕೆಜಿಗೆ 34 ರೂ.ನಂತೆ ಖರೀದಿಸಲು ಸಿದ್ದವಿದ್ದರೂ ಕೇಂದ್ರ ಒಪ್ಪಲಿಲ್ಲ. ಜತೆಗೆ ಎನ್‌ಸಿಎಫ್, ನಾಫೆಡ್‌, ಕೇಂದ್ರೀಯ ಭಂಡಾರಗಳು ಎಫ್ಸಿಐಗಿಂತ ಹೆಚ್ಚು ದರ ಕೋಟ್‌ ಮಾಡಿದ್ದವು. ಹೀಗಾಗಿ ದುಬಾರಿ ಬೆಲೆ ನೀಡಿ ಅಕ್ಕಿ ಖರೀದಿಸಿ ವಿತರಣೆ ಬದಲಿಗೆ ಅಷ್ಟೇ ಹಣ ನೀಡುವ ತೀರ್ಮಾನ ನ್ಯಾಯಸಮ್ಮತವಾಗಿದೆ.

ಮಾಸಿಕ 2.28 ಲಕ್ಷ ಮೆಟ್ರಿಕ್‌ ಟನ್‌ ಅಕ್ಕಿ ಅಲಭ್ಯತೆ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಅಕ್ಕಿ ಬದಲಿಗೆ ಅಂದರೆ ಅಕ್ಕಿ ಖರೀದಿಗೆ ವ್ಯಯವಾಗುತ್ತಿದ್ದ ಹಣವನ್ನೇ ಈಗ ಕಾರ್ಡ್‌ದಾರರಿಗೆ ಪಾವತಿಸಲು ನಿರ್ಧರಿಸಿದೆ. ಹೀಗಾಗಿ 85 ಲಕ್ಷ ಕಾರ್ಡ್‌ದಾರ ಫ‌ಲಾನುಭವಿಗಳಿಗೆ ಅಕ್ಕಿ ಬದಲಿಗೆ ತಮ್ಮ ಖಾತೆಗೆ ಹಣ ಸೇರುತ್ತಿದೆ. ಬಿಪಿಎಲ್‌ ಕಾರ್ಡ್‌ನಲ್ಲಿ ಹೆಸರಿರುವ ಎಲ್ಲಾ ಮಂದಿಗೂ ತಲಾ 170 ರೂ.ಗಳಂತೆ ಅಂದರೆ ಕನಿಷ್ಟ 4 ಮಂದಿ ಇದ್ದರೆ ಆ ಮನೆಗೆ 680 ರೂ. ಇಲ್ಲವೇ ಐದು ಮಂದಿ ಇದ್ದರೆ 850 ರೂ. ದೊರೆಯಲಿದೆ. ಇದಕ್ಕಾಗಿ ಸರ್ಕಾರ ಪ್ರತಿ ತಿಂಗಳು 750 ರಿಂದ 800 ಕೋಟಿ ರೂ.ಗಳನ್ನು ವ್ಯಯ ಮಾಡಲಿದೆ. ಈ ನಿರ್ಧಾರದೊಂದಿಗೆ ರಾಜ್ಯ ಸರ್ಕಾರ ಮುಂದಿನ ವಾರದಿಂದ ಆರಂಭವಾಗಲಿರುವ ಅಧಿವೇಶನದಲ್ಲಿ ಪ್ರತಿಪಕ್ಷಗಳಿಂದ ಎದುರಾಗಬಹುದಾಗಿದ್ದ ಟೀಕಾಸ್ತ್ರಗಳನ್ನು ತಪ್ಪಿಸಿಕೊಂಡಂತೆ ಅಂದರೆ ಬೀಸೋದೊಣ್ಣೆಯಿಂದ ಪಾರಾದಂತೆ ಅಗಿದೆ.

ಅನ್ನಭಾಗ್ಯ ಯೋಜನೆಯ ಅಕ್ಕಿ ಪಡೆದ ಫ‌ಲಾನುಭವಿಗಳು ತಮಗೆ ಹೆಚ್ಚುವರಿಯಾದ ಅಕ್ಕಿಯನ್ನು ಕಾಳಸಂತೆಯಲ್ಲಿ ಮಾರಾಟ ಮಾಡಿ ಅದರಿಂದ ಬಂದ ಹಣವನ್ನು ತಮಗಿಷ್ಟ ಬಂದಂತೆ ವೆಚ್ಚ ಮಾಡುತ್ತಾರೆ ಎಂಬುದು ಮೊದಲಿನಿಂದಲೂ ಇರುವ ಆರೋಪ. ಈಗ ಸರ್ಕಾರವೇ ಅಕ್ಕಿ ಬದಲಿಗೆ ಹಣವನ್ನು ಖಾತೆಗೆ ಹಾಕುವುದರಿಂದ ಈ ಹಣ ದುರ್ಬಳಕೆ ಆಗಬಾರದು. ಸರ್ಕಾರ ಯಾವ ಉದ್ದೇಶಕ್ಕೆ ಹಣ ಕೊಟ್ಟಿದೆಯೋ ಅದೇ ಉದ್ದೇಶಕ್ಕೆ ಹಣ ಬಳಸಿದರೆ ಸೂಕ್ತ. ವಿಶೇಷವಾಗಿ ಅಕ್ಕಿ ಬದಲಿಗೆ ಹಣ ಹಾಕುವುದರಿಂದ ಇಡೀ ವ್ಯವಸ್ಥೆ ಪಾರದರ್ಶಕವಾಗಿರುತ್ತದೆ. ಅಕ್ಕಿ ಖರೀದಿ ಟೆಂಡರ್‌ನಲ್ಲಿ ಗೋಲ್‌ಮಾಲ್‌, ಸಾಗಣೆ ವೆಚ್ಚ ದುಬಾರಿ, ಕಳಪೆ ಅಕ್ಕಿ ಪೂರೈಕೆ, ಸಕಾಲಕ್ಕೆ ಬಾರದ ಅಕ್ಕಿ, ನ್ಯಾಯ ಬೆಲೆ ಅಂಗಡಿಗಳಲ್ಲಿ ತೂಕದಲ್ಲಿ ಮೋಸ, ಅಕ್ಕಿ ಪಡೆಯಲು ನೂಕುನುಗ್ಗಲು ಈ ರೀತಿಯ ಟೀಕೆಗಳಿಂದಲೂ ಸರ್ಕಾರ ಮುಕ್ತವಾಗಿರುತ್ತದೆ. ಹೀಗಾಗಿ ಸರ್ಕಾರದ ನಿರ್ಧಾರ ಪ್ರಶಂಸನೀಯವಾದುದು.

ಟಾಪ್ ನ್ಯೂಸ್

Australia’s assistant coach to skip Perth test because of the IPL auction!

BGT 2024: ಐಪಿಎಲ್‌ ಹರಾಜಿನ ಕಾರಣಕ್ಕೆ ತಂಡ ತೊರೆದ ಆಸ್ಟ್ರೇಲಿಯಾದ ಸಹಾಯಕ ಕೋಚ್‌!

Explained: ಈ ವರ್ಷ ಸೌದಿ ಅರೇಬಿಯಾ 100ಕ್ಕೂ ಅಧಿಕ ವಿದೇಶಿಯರನ್ನು ನೇಣಿಗೇರಿಸಲು ಕಾರಣ ಏನು!

Explained:ಈ ವರ್ಷ ಸೌದಿ ಅರೇಬಿಯಾ 100ಕ್ಕೂ ಅಧಿಕ ವಿದೇಶಿಯರನ್ನು ನೇಣಿಗೇರಿಸಲು ಕಾರಣ ಏನು!

ಹೋಮ್‌ ವರ್ಕ್‌ ಮಾಡದ್ದಕ್ಕೆ ಥಳಿಸಿದ ಶಿಕ್ಷಕ; ಕಣ್ಣ ದೃಷ್ಟಿಯನ್ನೇ ಕಳೆದುಕೊಂಡ ವಿದ್ಯಾರ್ಥಿ

ಹೋಮ್‌ ವರ್ಕ್‌ ಮಾಡದ್ದಕ್ಕೆ ಥಳಿಸಿದ ಶಿಕ್ಷಕ; ಕಣ್ಣ ದೃಷ್ಟಿಯನ್ನೇ ಕಳೆದುಕೊಂಡ ವಿದ್ಯಾರ್ಥಿ

Belagavi: ವರ್ಷದ ಹಿಂದೆ ಪಕ್ಷಕ್ಕೆ ಬರುವಂತೆ ಬಿಜೆಪಿ ಆಹ್ವಾನಿಸಿತ್ತು: ಬಾಬಾಸಾಹೇಬ ಪಾಟೀಲ್

Belagavi: ಹೊಸಬರು, ಹಳಬರನ್ನೂ ಬಿಜೆಪಿಯವರು ಟಚ್ ಮಾಡ್ತಿದ್ದಾರೆ: ಶಾಸಕ ಬಾಬಾಸಾಹೇಬ ಪಾಟೀಲ್

BGT Series: ವಿರಾಟ್‌ ಕೊಹ್ಲಿ ಜತೆ ವೈಯಕ್ತಿಕ ಪೈಪೋಟಿಗೆ ಇಳಿದಿದ್ದೆ: ಮಿಚೆಲ್‌ ಜಾನ್ಸನ್

BGT Series: ವಿರಾಟ್‌ ಕೊಹ್ಲಿ ಜತೆ ವೈಯಕ್ತಿಕ ಪೈಪೋಟಿಗೆ ಇಳಿದಿದ್ದೆ: ಮಿಚೆಲ್‌ ಜಾನ್ಸನ್

BGT 2024: Gill Injured: Lucky for Kannadiga in third position

BGT 2024: ಗಾಯಗೊಂಡ ಗಿಲ್:‌ ಮೂರನೇ ಕ್ರಮಾಂಕದಲ್ಲಿ ಕನ್ನಡಿಗನಿಗೆ ಒಲಿದ ಅದೃಷ್ಟ

Viral Video: ಪಟಾಕಿ ಸಿಡಿಸುತ್ತಿದ್ದ ವಧುವಿನ ಸಂಬಂಧಿಕರ ಮೇಲೆ ಕಾರು ಹತ್ತಿಸಿದ ವರನ ಕಡೆಯವ

Viral Video: ಪಟಾಕಿ ಸಿಡಿಸುತ್ತಿದ್ದ ವಧುವಿನ ಸಂಬಂಧಿಕರ ಮೇಲೆ ಕಾರು ಹತ್ತಿಸಿದ ವರನ ಕಡೆಯವ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-mani

Manipur conflict ಸಂಘರ್ಷ ಅಂತ್ಯಕ್ಕೆ ಸಂಧಾನ ಮಾರ್ಗವೇ ಸೂಕ್ತ

Farmer

Bagar Hukum ಅರ್ಜಿ ವಿಲೇವಾರಿ ಬಡ ರೈತರಲ್ಲಿ ಆಶಾವಾದ

4-editorial

Editorial: ಪಾಕ್‌ ಪ್ರೇರಿತ ಉಗ್ರರ ತಂತ್ರಕ್ಕೆ ಸೂಕ್ತ ಪ್ರತಿತಂತ್ರ ಈಗಿನ ತುರ್ತು

ಭಾರತ್‌ ಬ್ರ್ಯಾಂಡ್‌ ಆಹಾರಧಾನ್ಯ ಕಾಳಸಂತೆಕೋರರ ಮೇಲಿರಲಿ ನಿಗಾ

ಭಾರತ್‌ ಬ್ರ್ಯಾಂಡ್‌ ಆಹಾರಧಾನ್ಯ ಕಾಳಸಂತೆಕೋರರ ಮೇಲಿರಲಿ ನಿಗಾ

ಪದವಿ ವಿದ್ಯಾರ್ಥಿಗಳಿಗೆ ಉದ್ಯೋಗ ಅವಕಾಶಕ್ಕೆ ನೆರವಾಗುವ ಕೋರ್ಸ್‌

ಪದವಿ ವಿದ್ಯಾರ್ಥಿಗಳಿಗೆ ಉದ್ಯೋಗ ಅವಕಾಶಕ್ಕೆ ನೆರವಾಗುವ ಕೋರ್ಸ್‌

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

Australia’s assistant coach to skip Perth test because of the IPL auction!

BGT 2024: ಐಪಿಎಲ್‌ ಹರಾಜಿನ ಕಾರಣಕ್ಕೆ ತಂಡ ತೊರೆದ ಆಸ್ಟ್ರೇಲಿಯಾದ ಸಹಾಯಕ ಕೋಚ್‌!

Manipal: ಆರ್ಯಭಟ ಪ್ರಶಸ್ತಿ ಪುರಸ್ಕೃತ, ಯಕ್ಷಗಾನ ಕಲಾವಿದ ಚೇರ್ಕಾಡಿ ಕಮಲಾಕ್ಷ ಪ್ರಭು ನಿಧನ

Manipal: ಆರ್ಯಭಟ ಪ್ರಶಸ್ತಿ ಪುರಸ್ಕೃತ, ಯಕ್ಷಗಾನ ಕಲಾವಿದ ಚೇರ್ಕಾಡಿ ಕಮಲಾಕ್ಷ ಪ್ರಭು ನಿಧನ

9

Hosanagar: ಶೈಕ್ಷಣಿಕ ಪ್ರವಾಸಕ್ಕೆ ತೆರಳುತ್ತಿದ್ದ ಬಸ್ ಅಪಘಾತ: 29 ಮಂದಿಗೆ ಗಾಯ

ಸವದತ್ತಿ:ರೈಲು ಮಾರ್ಗ- ಸವದತ್ತಿಗೇ ಜಾಸ್ತಿ ಲಾಭ! ಆರ್ಥಿಕ ಅಭಿವೃದ್ಧಿಗೆ ನೆರವು…

ಸವದತ್ತಿ:ರೈಲು ಮಾರ್ಗ- ಸವದತ್ತಿಗೇ ಜಾಸ್ತಿ ಲಾಭ! ಆರ್ಥಿಕ ಅಭಿವೃದ್ಧಿಗೆ ನೆರವು…

Putturu-Police

Putturu: ಠಾಣೆ ಮುಂಭಾಗದಲ್ಲಿ ಜನರ ಆಕ್ರೋಶ; ಶಾಸಕ ಅಶೋಕ್‌ ಕುಮಾರ್‌ ರೈ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.