![IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ](https://www.udayavani.com/wp-content/uploads/2025/02/5-25-415x249.jpg)
![IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ](https://www.udayavani.com/wp-content/uploads/2025/02/5-25-415x249.jpg)
Team Udayavani, Jun 29, 2023, 11:49 AM IST
ಜೈಪುರ: ರಾಜಸ್ಥಾನದ ಜೈಪುರ-ಅಜ್ಮೀರ್ ರಸ್ತೆಬದಿಯಲ್ಲಿ ನಿಂತಿದ್ದ ಎರಡು ಟ್ರಕ್ಗಳಿಗೆ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ಬೆಂಕಿ ಹೊತ್ತಿಕೊಂಡು ಐವರು ಸಜೀವ ದಹನಗೊಂಡ ಘಟನೆ ನಡೆದಿದೆ.
ದನಗಳನ್ನು ಹೊತ್ತೊಯ್ಯುತ್ತಿದ್ದ ಟ್ರಕ್ ಸೇರಿದಂತೆ ಎಲ್ಲಾ ಮೂರು ವಾಹನಗಳು ಸುಟ್ಟುಹೋಗಿದ್ದು 12 ಗೋವುಗಳು ಸಹ ಸುಟ್ಟು ಕರಕಲಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.
ಡಿಕ್ಕಿಯ ನಂತರ ಉಂಟಾದ ಬೆಂಕಿ ಎಲ್ಲಾ ಮೂರು ಟ್ರಕ್‌ಗಳನ್ನುಆವರಿಸಿತ್ತುಈ ಘಟನೆಯಲ್ಲಿ ಒಂದು ಟ್ರಕ್‌ನ ಚಾಲಕ ಸೇರಿದಂತೆ ಐದು ಜನರು ಬೆಂಕಿಯಲ್ಲಿ ಸಜೀವ ದಹನವಾಗಿದ್ದಾರೆ ಎಂದು ಜೈಪುರ ಗ್ರಾಮಾಂತರ ಹೆಚ್ಚುವರಿ ಪೊಲೀಸ್ ಅಧೀಕ್ಷಕ ದಿನೇಶ್ ಶರ್ಮಾ ತಿಳಿಸಿದ್ದಾರೆ.
ಮೃತರನ್ನು ಹರ್ಯಾಣದ ಪವನ್(28), ಸಂಜು(18), ಧರಮ್‌ವೀರ್(34) ಮತ್ತು ಬಿಹಾರದ ಛಾಪ್ರಾ ಮೂಲದ ಜಾನ್ ವಿಜಯ್ (35) ಮತ್ತು ಬಿಜ್ಲಿ (26) ಎಂದು ಗುರುತಿಸಲಾಗಿದೆ.
ಎರಡು ಟ್ರಕ್‌ಗಳು ರಸ್ತೆಬದಿಯಲ್ಲಿ ನಿಂತಿದ್ದವು. ಹರಿಯಾಣದಿಂದ ಪುಣೆಗೆ ಜಾನುವಾರುಗಳನ್ನು ಸಾಗಿಸುತ್ತಿದ್ದ ಲಾರಿ ಅವುಗಳಲ್ಲಿ ಒಂದಕ್ಕೆ ಡಿಕ್ಕಿ ಹೊಡೆದಿದೆ. ಚಾಲಕನ ನಿದ್ರೆಯ ಮಂಪರು ಈ ಅಪಘಾತಕ್ಕೆ ಕಾರಣವಾಗಿರಬಹುದು ಎಂದು ಅಧಿಕಾರಿ ಹೇಳಿದ್ದಾರೆ.
ಫೋರೆನ್ಸಿಕ್ ತಂಡವು ಸ್ಥಳಕ್ಕೆ ಭೇಟಿ ನೀಡಿ ತನಿಖೆ ಆರಂಭಿಸಿದ್ದು, ಮರಣೋತ್ತರ ಪರೀಕ್ಷೆಯನ್ನೂ ನಡೆಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಜೈಪುರ ಜಿಲ್ಲಾಧಿಕಾರಿ ಪ್ರಕಾಶ್ ರಾಜಪುರೋಹಿತ್ ಹಾಗೂ ಹಿರಿಯ ಪೊಲೀಸ್ ಅಧಿಕಾರಿ ಕೂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!
ಹೆಚ್ಚು ವರದಕ್ಷಿಣೆ ನೀಡಲಿಲ್ಲವೆಂದು ಸೊಸೆಗೆ HIV ಸೋಂಕಿನ ಇಂಜೆಕ್ಷನ್ ನೀಡಿದ ಅತ್ತೆ ಮಾವ
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
You seem to have an Ad Blocker on.
To continue reading, please turn it off or whitelist Udayavani.