Mangaluru; ಹೋಟೆಲ್ ನಲ್ಲಿ 20 ದಿನ ದೇಹ ಸಂಪರ್ಕ: ಆರೋಪಿ ಬಂಧನ
ಇನ್ಸ್ಟಾ ಗ್ರಾಂ ನಲ್ಲಿ ಪರಿಚಯ, ಪ್ರೀತಿ...ಮದುವೆಯಾಗುವುದಾಗಿ ನಂಬಿಸಿ ಕೃತ್ಯ...!
Team Udayavani, Jun 29, 2023, 3:13 PM IST
ಮಂಗಳೂರು: ಇನ್ಸ್ಟಾ ಗ್ರಾಂ ನಲ್ಲಿ ಪರಿಚಯವಾದ 24 ವರ್ಷದ ಯುವತಿಯೊಬ್ಬಳನ್ನು ಪ್ರೀತಿಸಿ ಮದುವೆಯಾಗುವುದಾಗಿ ನಂಬಿಸಿ ಹೋಟೆಲ್ ರೂಂನಲ್ಲಿ ನಿರಂತರ 20 ದಿನಗಳ ಕಾಲ ದೇಹ ಸಂಪರ್ಕ ಬೆಳೆಸಿದ ಆರೋಪಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ.
ಸಂತ್ರಸ್ತೆ ಮಂಗಳೂರು ಮಹಿಳಾ ಠಾಣೆಯಲ್ಲಿ ದೂರು ದಾಖಲಿಸಿದ್ದು, ದೂರಿನ ಅನ್ವಯ ಆರೋಪಿ ಕಡಬ ಮೂಲದ ಅನೀಶ್ ರೆಹಮಾನ್ ಎಂಬಾತನನ್ನು ಬಂಧಿಸಿ ಜೂನ್ 27 ರಂದು ನ್ಯಾಯಾಲಯಕ್ಕೆ ಹಾಜರುಪಡಿಸಿ 15 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ.
ಮೇ 28 ರಿಂದ ನಿರಂತರವಾಗಿ 20 ದಿನಗಳ ಕಾಲ ದೈಹಿಕ ಸಂಪರ್ಕ ನಡೆಸಿದ್ದ, ಆತನಿಗೆ ವಿವಾಹವಾಗಿರುವ ವಿಚಾರ ತಿಳಿದು ಬಂದಿದೆ ಎಂದು ಸಂತ್ರಸ್ತೆ ದೂರಿನಲ್ಲಿ ಹೇಳಿಕೊಂಡಿದ್ದಾರೆ.
ಆರೋಪಿ ಅನೀಶ್ ರೆಹಮಾನ್ ವಿರುದ್ಧ ಕಾವೂರು ಠಾಣೆಯಲ್ಲಿ NDPS ಅಡಿಯಲ್ಲೂ ಪ್ರಕರಣ ದಾಖಲಾಗಿರುವ ಬಗ್ಗೆ ಪೊಲೀಸರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.