BJP ಸಾರಥ್ಯಕ್ಕೆ ಹಿಂಜರಿಕೆ: ಪಕ್ಷಕ್ಕೆ ಸವಾಲಾದ ವಿಪಕ್ಷ ನಾಯಕ, ಅಧ್ಯಕ್ಷರ ಆಯ್ಕೆ
ಮೇರೆ ಮೀರಿದ ಗುಂಪುಗಾರಿಕೆ ರಾಜಕಾರಣ, ಎಸ್‌ಐಟಿ ಭಯ
Team Udayavani, Jun 30, 2023, 7:15 AM IST
ಬೆಂಗಳೂರು: ವಿಧಾನಸಭೆ ಚುನಾವಣೆ ಬಳಿಕ ಬಿಜೆಪಿಯಲ್ಲಿ ಒಂದೆಡೆ ಬಣ ರಾಜಕಾರಣ ಮೇರೆ ಮೀರುತ್ತಿದ್ದರೆ ಇನ್ನೊಂದೆಡೆ ನವ ನಾಯಕತ್ವ ಸ್ವೀಕಾರಕ್ಕೆ ಎರಡನೇ ಹಂತದ ನಾಯಕರು ಹಿಂಜರಿಯುತ್ತಿದ್ದಾರೆ. ಅಧಿಕಾರದಲ್ಲಿದ್ದಾಗ ತಪ್ಪು ಮಾಡಿದವರನ್ನು ನಿತ್ಯ ಸಮರ್ಥನೆ ಮಾಡುವ ಬದಲು ಈಗ “ಮಾಡಿದ್ದುಣ್ಣಲಿ ಮಹಾರಾಯ’ ಎಂಬ ತಟಸ್ಥ ಧೋರಣೆ ಬಿಜೆಪಿಯ ಭರವಸೆಯ ಬುಡವನ್ನೇ ಅಲ್ಲಾಡಿಸಲಾರಂಭಿಸಿದೆ.
ಇದರ ಫಲವಾಗಿ ವಿಪಕ್ಷ ನಾಯಕ ಹಾಗೂ ರಾಜ್ಯಾಧ್ಯಕ್ಷ ಹುದ್ದೆಗೆ ಅರ್ಹರನ್ನು ಆಯ್ಕೆ ಮಾಡುವುದೇ ಬಿಜೆಪಿ ವರಿಷ್ಠರಿಗೆ ಸವಾಲಾಗಿ ಪರಿಣಮಿಸಿದೆ. ವಿಧಾನಮಂಡಲದ ಬಜೆಟ್ ಅಧಿವೇಶನಕ್ಕೆ ದಿನಗಣನೆ ಪ್ರಾರಂಭವಾಗಿದ್ದರೂ ವಿಪಕ್ಷ ನಾಯಕ ಯಾರು ಎಂಬುದನ್ನು ಇತ್ಯರ್ಥಗೊಳಿಸುವುದಕ್ಕೆ ಬಿಜೆಪಿಗೆ ಸಾಧ್ಯವಾಗುತ್ತಿಲ್ಲ. ಹೀಗಾಗಿ ಅಂತಿಮವಾಗಿ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ ಈ ಜವಾಬ್ದಾರಿ ಕಟ್ಟುವುದು ಅನಿವಾರ್ಯವಾಗಬಹುದು ಎಂದು ಪಕ್ಷದೊಳಗೆ ಹೇಳಲಾಗುತ್ತಿದೆ.
ಎಸ್‌ಐಟಿ ಭಯ
ಬಿಜೆಪಿಯ ಎರಡನೇ ಹಂತದ ನಾಯಕರು ಜವಾಬ್ದಾರಿ ವಹಿಸಿಕೊಳ್ಳುವುದಕ್ಕೆ ಹಿಂಜರಿಯಲು ಪ್ರಧಾನ ಕಾರಣ ವರ್ಚಸ್ಸಿನ ಪ್ರಜ್ಞೆ. ಈಗ ವಿಪಕ್ಷ ನಾಯಕ ಹಾಗೂ ರಾಜ್ಯಾಧ್ಯಕ್ಷ ಸ್ಥಾನಕ್ಕೆ ವರಿಷ್ಠರು ಪರಿಗಣಿಸಿರುವ ಹೆಸರುಗಳ ಪೈಕಿ ಬಹುತೇಕರಿಗೆ ಕಳಂಕದ ಹೊರೆ ಇಲ್ಲ. ಆದರೆ ಈಗ ಜವಾಬ್ದಾರಿ ಹೊತ್ತುಕೊಂಡರೆ ಕಳಂಕಿತರ ಸಮರ್ಥನೆ ಮಾಡುವುದೇ ನಿತ್ಯ ಕಾಯಕ ವಾಗಬೇಕಾಗುತ್ತದೆ. ಅಧಿಕಾರದಲ್ಲಿದ್ದಾಗ ತಪ್ಪು ಮಾಡಿ ದವರ ಸಮರ್ಥನೆಯನ್ನು ಅಧಿಕಾರ ವಂಚಿತರು ಅಥವಾ ಅಲ್ಪಕಾಲ ಅಧಿಕಾರ ಅನುಭವಿಸಿದವರು ಏಕೆ ಮಾಡಬೇಕೆಂಬುದು ಹೊಸಬರ ವಾದ.
ಎಲ್ಲಕ್ಕಿಂತ ಮುಖ್ಯವಾಗಿ ರಾಜ್ಯದಲ್ಲಿ ಈಗ ಮುಖ್ಯ ಮಂತ್ರಿಯಾಗಿರುವ ಸಿದ್ದರಾಮಯ್ಯ ಅತ್ಯಂತ ಚತುರ ರಾಜಕಾರಣಿ. ತಮ್ಮ ಹಳೆಯ ಪಟ್ಟುಗಳ ಮೂಲಕ ಎದುರಾಳಿಗಳನ್ನು ಕಂಗೆಡಿಸುವುದರಲ್ಲಿ ಎತ್ತಿದ ಕೈ. ಈಗಾಗಲೇ ಅವರು ಎಸ್‌ಐಟಿ ರಚನೆ ಮಾಡಿ ಬಿಜೆಪಿ ಕಾಲದ ಹಗರಣಗಳನ್ನು ತನಿಖೆ ಮಾಡಿಸುತ್ತೇವೆ ಎಂದು ಬಹಿರಂಗ ಹೇಳಿಕೆ ನೀಡಿದ್ದಾರೆ. ಎಸ್‌ಐಟಿ ರಚನೆಯಾದರೆ ದಿನಕ್ಕೊಬ್ಬ ಮಾಜಿ ಸಚಿವರಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಎದುರಾಗಬಹುದು, ಹಠಕ್ಕೆ ಬಿದ್ದರೆ ಕೆಲವರ ಬಂಧನವನ್ನೂ ತಳ್ಳಿ ಹಾಕುವಂತಿಲ್ಲ.
ಆಗ ಹಿಂದೆ ಹಗರಣ ಮಾಡಿದವರನ್ನು ಸಮರ್ಥನೆ ಮಾಡಿಕೊಳ್ಳುವುದು ಹೊಸದಾಗಿ ಅಧಿಕಾರ ವಹಿಸಿಕೊಂಡವರಿಗೆ ಸವಾಲಾಗಿ ಪರಿಣಮಿಸುತ್ತದೆ. ಹಿಂದಿನವರು ಮಾಡಿದ ಹಗರಣಗಳ ಸಮರ್ಥನೆ ಮಾಡಿ ಕೊಳ್ಳುತ್ತ ಕುಳಿತರೆ ಸಾರ್ವಜನಿಕವಾಗಿ ತಮ್ಮ ವರ್ಚಸ್ಸು ಮಂಕಾ ಗುತ್ತದೆ. ವಿಪಕ್ಷ ನಾಯಕನಾದರೆ ಸದನದೊಳಗೆ, ರಾಜ್ಯಾಧ್ಯಕ್ಷ ನಾದರೆ ಸದನದ ಹೊರಗೆ ಹಿಂದಿನ ಸರಕಾರದ ನಡೆಗಳನ್ನು ಸಮರ್ಥಿಸಿಕೊಳ್ಳುವುದೇ ಕಾಯಕವಾಗುತ್ತದೆ ಎಂಬುದು ಹೊಸಬರ ವಾದ. ಹೀಗಾಗಿ ಪಕ್ಷ ಪರಿಗಣಿಸಿ ಚರ್ಚೆಗೆ ಬಿಟ್ಟ ಹೆಸರುಗಳ ಪೈಕಿ ಬಹುತೇಕರು ಈಗ ಹಿಂದೆ ಸರಿದಿದ್ದಾರೆ.
ಜು. 2ರಂದು ಶಾಸಕಾಂಗ ಸಭೆ
ಇವೆಲ್ಲದರ ಮಧ್ಯೆ ಜುಲೈ 2ರಂದು ಬಿಜೆಪಿಯ ಶಾಸಕಾಂಗ ಪಕ್ಷದ ಸಭೆಗೆ ಕೊನೆಗೂ ದಿನಾಂಕ ನಿಗದಿಯಾಗಿದೆ. ಆದರೆ ಶಾಸಕಾಂಗ ಪಕ್ಷದ ನಾಯಕ ಯಾರು ಎಂಬುದೇ ನಿಗೂಢವಾಗಿ ಉಳಿದಿದೆ. ವಿಪಕ್ಷ ಸ್ಥಾನದ ಪ್ರಮುಖ ಆಕಾಂಕ್ಷಿಗಳ ಪೈಕಿ ಪ್ರಮುಖರೊಬ್ಬರಿಗೆ ಪಕ್ಷ ವಿರೋಧಿ ಹೇಳಿಕೆ ಹಿನ್ನೆಲೆಯಲ್ಲಿ ಶುಕ್ರವಾರ ಕಾರಣ ಕೇಳಿ ನೋಟಿಸ್ ನೀಡುವುದು ಅಂತಿಮಗೊಂಡಿದೆ. ಹೀಗಾಗಿ ಅವರು ರೇಸ್‌ನಿಂದ ಹೊರಬೀಳುವ ಸಾಧ್ಯತೆ ಹೆಚ್ಚಿದೆ.
ಯಡಿಯೂರಪ್ಪ ಸಭೆ
ಹೊಸಬರು ಹಿಂಜರಿಯುತ್ತಿದ್ದರೆ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಮಾತ್ರ ಮತ್ತೆ ಅಖಾಡಕ್ಕೆ ಇಳಿದಿದ್ದಾರೆ. ರಾಜ್ಯ ಸರಕಾರದ ವಿರುದ್ಧ ಪ್ರತಿಭಟನೆಯ ಎಚ್ಚರಿಕೆ ನೀಡಿದ್ದ ಅವರು ಶುಕ್ರವಾರ ಬೆಳಗ್ಗೆ ಪಕ್ಷದ ರಾಜ್ಯ ಕಚೇರಿಗೆ ತೆರಳಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಹಾಗೂ ಶಿಸ್ತು ಸಮಿತಿ ಸಂಚಾಲಕ ಲಿಂಗರಾಜ್ ಪಾಟೀಲ್ ಸೇರಿದಂತೆ ಪ್ರಮುಖರ ಜತೆಗೆ ಸಭೆ ನಡೆಸಲು ನಿರ್ಧರಿಸಿರುವುದು ತೀವ್ರ ಕುತೂಹಲಕ್ಕೆ ಕಾರಣವಾಗಿದೆ.
ರೇಣುಗೆ ನೋಟಿಸ್
ಬಿಜೆಪಿಯಲ್ಲಿನ ಬೆಳವಣಿಗೆಗಳ ಬಗ್ಗೆ ಬಹಿರಂಗವಾಗಿ ಹೇಳಿಕೆ ಕೊಡಬಾರದು ಎಂದು ಹೇಳಿದ್ದರೂ ಇದನ್ನು ಮೀರಿದ ಮಾಜಿ ಶಾಸಕ ರೇಣುಕಾಚಾರ್ಯ ಅವರಿಗೆ ಕಾರಣ ಕೇಳಿ ನೋಟಿಸ್ ಜಾರಿ ಮಾಡಲಾಗಿದೆ. ಹಾಗೆಯೇ ಶುಕ್ರವಾರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರಿಗೂ ನೋಟಿಸ್ ನೀಡುವ ಸಾಧ್ಯತೆ ಇದೆ.
ಕೇಂದ್ರ ಸಂಪುಟದಲ್ಲಿ ಭರ್ಜರಿ ಬದಲಾವಣೆ?
2024ರ ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಮ್ಯಾರಥಾನ್ ಕಾರ್ಯತಂತ್ರ ಸಭೆಗಳನ್ನು ಆಯೋಜಿಸುತ್ತಿರುವ ಬಿಜೆಪಿ ಹಿರಿಯ ನಾಯಕರು ಬುಧವಾರ ರಾತ್ರಿ ಪ್ರಧಾನಿ ನರೇಂದ್ರ ಮೋದಿಯವರ ನಿವಾಸದಲ್ಲಿ ಸಭೆ ನಡೆಸಿದ್ದಾರೆ. 5 ತಾಸುಗಳ ಕಾಲ ನಡೆದ ಸಭೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಮತ್ತು ಪಕ್ಷದ ಇತರ ಹಿರಿಯ ನಾಯಕರು ಭಾಗಿಯಾಗಿದ್ದರು. ಸಭೆಯಲ್ಲಿ ನಡ್ಡಾ ಅವರ ಪಾಲ್ಗೊಳ್ಳುವಿಕೆಯು ಸರಕಾರ ಮಾತ್ರವಲ್ಲದೆ ಬಿಜೆಪಿಯ ಸಂಘಟನೆಯಲ್ಲೂ ಸಂಭಾವ್ಯ ಬದಲಾವಣೆಯ ಸುಳಿವು ನೀಡಿದೆ. ವಿಶೇಷವೆಂದರೆ ಕರ್ನಾಟಕ ಸೇರಿದಂತೆ ರಾಜ್ಯಮಟ್ಟದಲ್ಲಿ ಸಂಘಟನಾತ್ಮಕ ಬದಲಾವಣೆಗಳು ನಡೆಯುವ ಸಾಧ್ಯತೆಗಳು ಹೆಚ್ಚಿವೆ.
ಜು. 3ರಂದು ಪ್ರಧಾನಿ ಮೋದಿ ಸಚಿವ ಸಂಪುಟದ ಸದಸ್ಯರ ಜತೆ ಮತ್ತೆ ಮಹತ್ವದ ಸಭೆ ನಡೆಸಲಿದ್ದು, ಅಲ್ಲಿ ಈ ಎಲ್ಲ ವಿಚಾರಗಳ ಬಗ್ಗೆ ಚರ್ಚೆಯಾಗಲಿದೆ.
ಇದೇ ವೇಳೆ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿನ ಸೋಲಿನ ಬಳಿಕ ಎಚ್ಚೆತ್ತುಕೊಂಡಿರುವ ಬಿಜೆಪಿಯು ಇದೇ ವರ್ಷಾಂತ್ಯದಲ್ಲಿ ನಡೆಯಲಿರುವ ಮಧ್ಯಪ್ರದೇಶ, ರಾಜಸ್ಥಾನ, ತೆಲಂಗಾಣ, ಛತ್ತೀಸ್‌ಗಢದಂತಹ ಪ್ರಮುಖ ರಾಜ್ಯಗಳ ವಿಧಾನಸಭೆ ಚುನಾವಣೆಗಳಿಗೆ ತನ್ನ ಒಟ್ಟಾರೆ ಕಾರ್ಯತಂತ್ರವನ್ನು ಬದಲಿಸುವ ಕುರಿತೂ ಬುಧವಾರದ ಸಭೆಯಲ್ಲಿ ಚರ್ಚಿಸಲಾಗಿದೆ.
ರಾಘವೇಂದ್ರ ಭಟ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BBMP ಸೇರಿ 11 ಮಸೂದೆ ಮಂಡನೆ? ಡಿ. 9ರ ಬೆಳಗಾವಿ ಅಧಿವೇಶನದಲ್ಲಿ ಮಂಡನೆಗೆ ನಿರ್ಣಯ
Karnataka Govt,.: ಸಂಪುಟ ಹುತ್ತಕ್ಕೆ ಈಗಲೇ ಕೈಹಾಕಲು ಸಿಎಂ ನಿರಾಸಕ್ತಿ?
Karnataka Govt.,: ದಿಲ್ಲಿಯಲ್ಲಿ ಸಂಪುಟ ರಹಸ್ಯ; ಹೈಕಮಾಂಡ್ ಭೇಟಿ ಸಾಧ್ಯತೆ
DA Hike: ಸರಕಾರಿ ನೌಕರರಿಗೆ ಶೇ. 2 ತುಟ್ಟಿ ಭತ್ಯೆ ಹೆಚ್ಚಳ… ಸಿಎಂಗೆ ಅಭಿನಂದನೆ
DK Shivakumar: ಮಹದಾಯಿ, ಮೇಕೆದಾಟು ಯೋಜನೆ ಅನುಮತಿಗೆ ದಿಲ್ಲಿಯಲ್ಲಿ ಡಿಕೆಶಿ ಲಾಬಿ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Bharamasagara: 3 ತಿಂಗಳ ಹಿಂದೆ ಮದುವೆಯಾಗಿ ಊರಿಗೆ ವಾಪಸ್ ಆದ ಯುವಕನ ಹತ್ಯೆ
Kiccha Sudeepa: ಕ್ರಿಸ್ಮಸ್ ಗೆ ಬರುತ್ತಿದೆ ʼಮ್ಯಾಕ್ಸ್ʼ
IPL : ಸಿಎಸ್‌ಕೆ ಮಾಲಿಕ ಶ್ರೀನಿವಾಸನ್ ವಿರುದ್ದ ಫಿಕ್ಸಿಂಗ್ ಆರೋಪ ಮಾಡಿದ ಲಲಿತ್ ಮೋದಿ
Ranchi: ಪ್ರೇಯಸಿಯನ್ನು ಕೊಂದು 40ರಿಂದ 50 ತುಂಡು ಮಾಡಿದ ಕಟುಕ!
Hunsur: ಟ್ರ್ಯಾಕ್ಟರ್ ಡಿಕ್ಕಿ ಹೊಡೆದು ರಸ್ತೆ ಬದಿ ನಿಂತಿದ್ದ ವ್ಯಕ್ತಿ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.