Delhi Metro: ಮದ್ಯ ತರಲು ಅನುಮತಿ ನೀಡಿದ ದಿಲ್ಲಿ ಮೆಟ್ರೋ, ಆದರ ಷರತ್ತುಗಳು ಅನ್ವಯ
Team Udayavani, Jun 30, 2023, 4:22 PM IST
ಹೊಸದಿಲ್ಲಿ: ಸದಾ ಸುದ್ದಿಯಲ್ಲಿರುವ ದಿಲ್ಲಿ ಮೆಟ್ರೋ ಇದೀಗ ಮತ್ತೊಂದು ವಿಚಾರಕ್ಕೆ ಸುದ್ದಿಯಾಗುತ್ತಿದೆ. ಅದೆಂದರೆ ಇನ್ನು ದಿಲ್ಲಿ ಮೆಟ್ರೋದಲ್ಲಿ ಮದ್ಯಕ್ಕೆ ಅನುಮತಿಸಲಾಗಿದೆ.
ದಿಲ್ಲಿ ಮೆಟ್ರೋ ಶುಕ್ರವಾರ ಈ ಬಗ್ಗೆ ಪ್ರಕಟಣೆ ಹೊರಡಿಸಿದ್ದು, ಒಬ್ಬರು ಎರಡು ಬಾಟಲಿ ಸೀಲ್ಡ್ ಮದ್ಯವನ್ನು ಮೆಟ್ರೋದೊಳಗೆ ತರಬಹುದು ಎಂದು ಹೇಳಿದೆ.
ಟ್ವಿಟರ್ ಬಳಕೆದಾರರೊಬ್ಬರ ಪ್ರಶ್ನೆಗೆ ಪ್ರತಿಕ್ರಿಯಿಸಿದ ದೆಹಲಿ ಮೆಟ್ರೋ ರೈಲು ನಿಗಮದ (ಡಿಎಂಆರ್ಸಿ) ಅಧಿಕೃತ ಹ್ಯಾಂಡಲ್, “ದೆಹಲಿ ಮೆಟ್ರೋದಲ್ಲಿ 2 ಸೀಲ್ ಮಾಡಿದ ಮದ್ಯದ ಬಾಟಲಿಗಳನ್ನು ಅನುಮತಿಸಲಾಗಿದೆ” ಎಂದು ಟ್ವೀಟ್ ಮಾಡಿದೆ.
ಇತ್ತೀಚಿನವರೆಗೂ, ಏರ್ಪೋರ್ಟ್ ಎಕ್ಸ್ ಪ್ರೆಸ್ ಲೈನ್ ಹೊರತುಪಡಿಸಿ ದೆಹಲಿ ಮೆಟ್ರೋದಲ್ಲಿ ಮದ್ಯ ಸಾಗಿಸುವುದನ್ನು ನಿಷೇಧಿಸಲಾಗಿತ್ತು.
“ಆದರೆ ತರುವಾಯ, ಸಿಐಎಸ್ಎಫ್ ಮತ್ತು ಡಿಎಂಆರ್ ಸಿ ಯ ಅಧಿಕಾರಿಗಳನ್ನೊಳಗೊಂಡ ಸಮಿತಿಯು ಪಟ್ಟಿಯನ್ನು ಪರಿಶೀಲಿಸಿದೆ ಮತ್ತು ಪರಿಷ್ಕೃತ ಪಟ್ಟಿಯ ಪ್ರಕಾರ, ಪ್ರತಿ ವ್ಯಕ್ತಿಗೆ ಎರಡು ಸೀಲ್ ಮಾಡಿದ ಮದ್ಯದ ಬಾಟಲಿಗಳನ್ನು ದೆಹಲಿ ಮೆಟ್ರೋದಲ್ಲಿ ಏರ್ಪೋರ್ಟ್ ಎಕ್ಸ್ಪ್ರೆಸ್ ಲೈನ್ ನಲ್ಲಿನ ನಿಬಂಧನೆಗಳಿಗೆ ಸಮನಾಗಿ ಸಾಗಿಸಲು ಅನುಮತಿಸಲಾಗಿದೆ” ಎಂದು ಡಿಎಂಆರ್ಸಿ ಹೇಳಿಕೆಯಲ್ಲಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?
Mahayuti ಗೆಲುವು: ಆ್ಯಕ್ಸಿಸ್ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ
Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ
MUST WATCH
ಹೊಸ ಸೇರ್ಪಡೆ
Someshwara ದೇಗುಲ: ಶಿವಪಂಚಾಕ್ಷರಿ ಕೋಟಿ ನಾಮಜಪ ಯಜ್ಞ ಸಂಪನ್ನ
Maryade Prashne: ಮಧ್ಯಮ ವರ್ಗದ ಸುತ್ತ ಹೀಗೊಂದು ಚಿತ್ರ
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ
Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.