ಮುಂಡರಗಿ: ಆದಾಯ ತೆರಿಗೆಯಿಂದ ದೇಶದ ಆರ್ಥಿಕ ಬೆಳವಣಿಗೆ

ಯಾವುದೇ ವಸ್ತುವಿಗೆ ತೆರಿಗೆ ಹಾಕುವಾಗ ಅದು ಜನತೆಗೆ ಹೊರೆ ಆಗುವಂತೆ ಇರಬಾರದು.

Team Udayavani, Jun 30, 2023, 2:11 PM IST

ಮುಂಡರಗಿ: ಆದಾಯ ತೆರಿಗೆಯಿಂದ ದೇಶದ ಆರ್ಥಿಕ ಬೆಳವಣಿಗೆ

ಮುಂಡರಗಿ: ರೈತರು ದೇಶದ ಬೆನ್ನೆಲುಬು. ಅದರಂತೆ, ತೆರಿಗೆದಾರರು ಕೂಡಾ ಈ ದೇಶದ ಬೆನ್ನೆಲುಬು ಇದ್ದಂತೆ. ವ್ಯಾಪಾರಸ್ಥರು,
ಉದ್ಯೋಗಿಗಳು ಆದಾಯ ತೆರಿಗೆ, ಜಿಎಸ್‌ಟಿ ಕಟ್ಟಿದರೆ ಮಾತ್ರ ದೇಶದ ಆರ್ಥಿಕ ಬೆಳವಣಿಗೆಯಾಗಲಿದೆ ಎಂದು ಗದಗ
ಜಿಲ್ಲಾ ವಾಣಿಜ್ಯೋದ್ಯಮ ಸಂಸ್ಥೆ ಅಧ್ಯಕ್ಷ ಮಧುಸೂದನ್‌ ಪುಣೇಕರ ಹೇಳಿದರು.

ಪಟ್ಟಣದ ಕ.ರಾ.ಬೆಲ್ಲದ ಕಾಲೇಜಿನ ಕಲಾ ಮತ್ತು ವಾಣಿಜ್ಯ ಮಹಾವಿದ್ಯಾಲಯ ಹಾಗೂ ಸ್ನಾತಕೋತ್ತರ ಅರ್ಥಶಾಸ್ತ್ರ ವಿಭಾಗದಿಂದ ಆಯೋಜಿಸಲಾಗಿದ್ದ ಭಾರತದಲ್ಲಿ ವಿವಿಧ ತೆರಿಗೆ ಪದ್ಧತಿಗಳು ಎನ್ನುವ ಒಂದು ದಿನದ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.

ವ್ಯಾಪಾರ ವಹಿವಾಟು ನಡೆಸುವವರು ಸರ್ಕಾರಕ್ಕೆ ತೆರಿಗೆ ಕಟ್ಟಲೇಬೇಕು. ವಿವಿಧ ವ್ಯಾಪಾರಗಳಿಗೆ ವಿವಿಧ ರೀತಿಯ
ತೆರಿಗೆಗಳಿರುತ್ತವೆ. ಅವುಗಳನ್ನು ಸಂಬಂಧಪಟ್ಟವರು ತಪ್ಪದೇ ಕಟ್ಟಬೇಕು. ಎಲ್ಲರೂ ತೆರಿಗೆ ಕಟ್ಟುವುದರಿಂದ ನಮ್ಮ ದೇಶದ
ಆರ್ಥಿಕ ಅಭಿವೃದ್ಧಿಗೆ ಮುಖ್ಯವಾಗುತ್ತದೆ.

ಮುಂಬರುವ ದಿನಗಳಲ್ಲಿ ಎಲ್ಲರೂ ದೊಡ್ಡ ದೊಡ್ಡ ಉದ್ಯೋಗಿಗಳಾಗಿ, ದೇಶಕ್ಕೆ ತೆರಿಗೆ ಕಟ್ಟುವ ಮೂಲಕ ದೇಶದ ಅಭಿವೃದ್ಧಿಗೆ
ಮುಂದಾಗಬೇಕಾಗಿದೆ. ಮುಂಡರಗಿ ಪಟ್ಟಣದಲ್ಲಿ ತಾಲೂಕು ಮಟ್ಟದ ವಾಣಿಜ್ಯೋದ್ಯಮ ಸಂಸ್ಥೆ ತೆರೆಯಲು ಇಲ್ಲಿನ
ವ್ಯಾಪಾರಸ್ಥರು, ಮುಖಂಡರು ಆಸಕ್ತಿ ತೋರಿದ್ದು, ಅದಕ್ಕಾಗಿ ಒಂದು ಕಚೇರಿ ಮಾಡಲು ಸ್ಥಳಾವಕಾಶ ಮಾಡಿಕೊಟ್ಟರೆ, ಶೀಘ್ರ ಪ್ರಾರಂಭಿಸಿ ಉದ್ಘಾಟಿಸಬಹುದು ಎಂದರು.

ಆಡಳಿತಾಧಿಕಾರಿ ಡಾ|ಬಿ.ಜಿ.ಜವಳಿ ಮಾತನಾಡಿ, ನಾಗರಿಕತೆಯ ಕುರುಹು ಎಂದರೆ ತೆರಿಗೆ. ಸಾರ್ವಜನಿಕರು ಕಟ್ಟಿದ ತೆರಿಗೆಯನ್ನು ಸರ್ಕಾರ ಮತ್ತೆ ಸಾರ್ವಜನಿಕರ ಅಭಿವೃದ್ಧಿಗಾಗಿಯೇ ನೀಡುತ್ತದೆ. ಸಾರ್ವಜನಿಕರ ಒಳಿತಿಗಾಗಿ ತೆರಿಗೆ ಸಂಗ್ರಹ ಮಾಡುವುದು
ಪುರಾತನ ಕಾಲದಿಂದಲೂ ಜಾರಿಯಲ್ಲಿದೆ.

2 ಸಾವಿರ ವರ್ಷಗಳ ಹಿಂದೆಯೇ ತೆರಿಗೆ ಪ್ರಾರಂಭಿಸಲಾಗಿದೆ. ಯಾವುದೇ ವಸ್ತುವಿಗೆ ತೆರಿಗೆ ಹಾಕುವಾಗ ಅದು ಜನತೆಗೆ ಹೊರೆ
ಆಗುವಂತೆ ಇರಬಾರದು. ಭಾರತೀಯ ತೆರಿಗೆ ಪದ್ಧತಿ ಬಹಳಷ್ಟು ಸಂಕೀರ್ಣವಾಗಿದ್ದು, ಅದನ್ನು ಒಂದಿಷ್ಟು ಸರಳೀಕರಣ ಮಾಡಬೇಕು. ಅಂದಾಗ ಜನತೆ ತೆರಿಗೆ ಕಟ್ಟಲು ಅನುಕೂಲವಾಗುತ್ತದೆ ಎಂದರು.

ಸಾನ್ನಿಧ್ಯ ವಹಿಸಿದ್ದ ಜ|ನಾಡೋಜ ಡಾ|ಅನ್ನದಾನೀಶ್ವರ ಮಹಾಶಿವಯೋಗಿಗಳು ಮಾತನಾಡಿ, ಪ್ರತಿಯೊಬ್ಬರೂ ಸಹ ತೆರಿಗೆ
ಕೊಡುವಂತಹ ಪದ್ಧತಿ ನಿರಂತರವಾಗಿ ಮುಂದುವರೆಯಬೇಕು. ಯಾರೂ ಅದರಿಂದ ತಪ್ಪಿಸಿಕೊಳ್ಳಬಾರದು. ನಾವು ಮಾಡುವ
ಕಾರ್ಯಗಳಿಗೆ ಅನುಗುಣವಾಗಿ ಸರ್ಕಾರಕ್ಕೆ ತೆರಿಗೆ ಸಲ್ಲಿಸಬೇಕಾಗುತ್ತದೆ. ಮೊದಲು ನಾವು ಸರ್ಕಾರಕ್ಕೆ ತೆರಿಗೆ ಕಟ್ಟುವುದು, ನಂತರ ನಮಗೆ ಸರ್ಕಾರ ಮತ್ತೆ ಅದೇ ಹಣವನ್ನು ಅಭಿವೃದ್ಧಿಗಾಗಿ ನೀಡುವುದು ಈ ಪ್ರಕ್ರಿಯೆ ನಿರಂತರವಾಗಿ ನಡೆಯಬೇಕು ಎಂದರು.

ಆರ್‌.ಎಲ್‌.ಪೊಲೀಸ್‌ ಪಾಟೀಲ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ಮುಕುಂದ್‌ ಪೋತ್ನಿàಸ್‌, ಡಿ.ಬಿ.ಸಜ್ಜನರ, ಕರಬಸಪ್ಪ
ಹಂಚಿನಾಳ, ನಾಗೇಶ ಹುಬ್ಬಳ್ಳಿ, ಪ್ರಾ.ಡಿ.ಸಿ.ಮಠ, ವೀರನಗೌಡ ಗುಡದಪ್ಪನವರ, ತಿಮ್ಮಪ್ಪ ದಂಡೀನ, ಡಾ.ಅಮರೇಶ ಶಿವಶೆಟ್ಟರ, ಅಶೋಕ ಅಂಗಡಿ, ಎಂ.ಎಸ್‌.ಶಿವಶೆಟ್ಟರ,ಅಮೀನಸಾಬ್‌ ಬಿಸನಳ್ಳಿ, ಪ್ರೊ.ಎನ್‌.ಹನುಮಂತಪ್ಪ ಸೇರಿದಂತೆ ಅನೇಕರು ಉಪಸ್ಥಿತರಿದ್ದರು. ಪ್ರಾ.ಆರ್‌. ಎಚ್‌.ಜಂಗನವಾರಿ ಸ್ವಾಗತಿಸಿ, ಡಾ.ಸಂತೋಷ ಹಿರೇಮಠ ನಿರೂಪಿಸಿದರು.

ಟಾಪ್ ನ್ಯೂಸ್

Perfect: ಎಡ್‌ ಶಿರನ್‌ ಹಾಡಿನಿಂದ ರಾಷ್ಟ್ರೀಯ ಸೆನ್ಸೇಶನ್‌ ಆದ ಉಡುಪಿಯ ಹುಡುಗ

Perfect: ಎಡ್‌ ಶಿರನ್‌ ಹಾಡಿನಿಂದ ರಾಷ್ಟ್ರೀಯ ಸೆನ್ಸೇಶನ್‌ ಆದ ಉಡುಪಿಯ ಹುಡುಗ | Video

Pushpa 2: ಖಾಕಿಗೆ ಸವಾಲು‌ ಹಾಕುವ ʼಪುಷ್ಪ-2ʼ ಹಾಡು ರಿಲೀಸ್; ವಿವಾದದ ಬೆನ್ನಲ್ಲೇ ಡಿಲೀಟ್

Pushpa 2: ಖಾಕಿಗೆ ಸವಾಲು‌ ಹಾಕುವ ʼಪುಷ್ಪ-2ʼ ಹಾಡು ರಿಲೀಸ್; ವಿವಾದದ ಬೆನ್ನಲ್ಲೇ ಡಿಲೀಟ್

IRCTC: ತಾಂತ್ರಿಕ ದೋಷ- ರೈಲು ಟಿಕೆಟ್‌ ಬುಕ್ಕಿಂಗ್‌ ಸಮಸ್ಯೆ-ಪ್ರಯಾಣಿಕರ ಆಕ್ರೋಶ

IRCTC Down: ತಾಂತ್ರಿಕ ದೋಷ- ರೈಲು ಟಿಕೆಟ್‌ ಬುಕ್ಕಿಂಗ್‌ ಸಮಸ್ಯೆ-ಪ್ರಯಾಣಿಕರ ಆಕ್ರೋಶ

Kazakhstan: ವಿಮಾನ ದುರಂತ ಸಂದರ್ಭದ ಕೊನೆಯ ಕ್ಷಣದ ಭಯಾನಕ ವಿಡಿಯೋ ವೈರಲ್…

Kazakhstan: ವಿಮಾನ ದುರಂತ ಸಂದರ್ಭದ ಕೊನೆಯ ಕ್ಷಣದ ಭಯಾನಕ ವಿಡಿಯೋ ವೈರಲ್…

Belagavi: ಮಹಾತ್ಮ ಗಾಂಧಿ ಪುತ್ಥಳಿ ಅನಾವರಣಗೊಳಿಸಿದ ಸಿಎಂ ಸಿದ್ದರಾಮಯ್ಯ

Belagavi: ಮಹಾತ್ಮ ಗಾಂಧಿ ಪುತ್ಥಳಿ ಅನಾವರಣಗೊಳಿಸಿದ ಸಿಎಂ ಸಿದ್ದರಾಮಯ್ಯ

ಹುತಾತ್ಮ ಯೋಧರ ಕುಟುಂಬಕ್ಕೆ ಸರ್ಕಾರದಿಂದ ನೆರವು: ಸಿಎಂ ಘೋಷಣೆ

Belagavi: ಹುತಾತ್ಮ ಯೋಧರ ಕುಟುಂಬಕ್ಕೆ ಸರ್ಕಾರದಿಂದ ನೆರವು: ಸಿಎಂ ಘೋಷಣೆ

Mumbai: ಚಲಿಸುತ್ತಿರುವಾಗಲೇ ರಸ್ತೆ ಮಧ್ಯೆ ಹೊತ್ತಿ ಉರಿದ ಲ್ಯಾಂಬೋರ್ಘಿನಿ ಕಾರು!

Mumbai: ಚಲಿಸುತ್ತಿರುವಾಗಲೇ ರಸ್ತೆ ಮಧ್ಯೆ ಹೊತ್ತಿ ಉರಿದ ಲ್ಯಾಂಬೋರ್ಘಿನಿ ಕಾರು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8-gadaga

Diesel theft; ಗದಗ: ಕೆ.ಎಸ್.‌ಆರ್.ಟಿ.ಸಿ. ಬಸ್ ಗಳ ಡೀಸೆಲ್ ಕಳ್ಳತನ

ದೆಹಲಿ ಪರೇಡ್‌ಗೆ ಬ್ರಹ್ಮ ಜಿನಾಲಯ ಸ್ತಬ್ಧಚಿತ್ರ; ಗತ ವೈಭವ ಸಾರಲಿದೆ ಟ್ಯಾಬ್ಲೊ

ದೆಹಲಿ ಪರೇಡ್‌ಗೆ ಬ್ರಹ್ಮ ಜಿನಾಲಯ ಸ್ತಬ್ಧಚಿತ್ರ; ಗತ ವೈಭವ ಸಾರಲಿದೆ ಟ್ಯಾಬ್ಲೊ

ಗದಗ: 4 ವರ್ಷವಾದರೂ ಮುಗಿಯದ ವಸತಿ ಶಾಲೆ ಕೆಲಸ! 20 ಕೋಟಿ ರೂ. ವೆಚ್ಚ…

ಗದಗ: 4 ವರ್ಷವಾದರೂ ಮುಗಿಯದ ವಸತಿ ಶಾಲೆ ಕೆಲಸ! 20 ಕೋಟಿ ರೂ. ವೆಚ್ಚ…

Protest: ಅಂಬೇಡ್ಕರ್‌ ಕುರಿತು ಅಮಿತ್ ಶಾ ಹೇಳಿಕೆ ಖಂಡಿಸಿ ಗದಗ, ಕಲಬುರಗಿ ಬಂದ್

Protest: ಅಂಬೇಡ್ಕರ್‌ ಕುರಿತು ಅಮಿತ್ ಶಾ ಹೇಳಿಕೆ ಖಂಡಿಸಿ ಗದಗ, ಕಲಬುರಗಿ ಬಂದ್

crime (2)

Gajendragad: ಮನೆಯಲ್ಲೇ ಮುಖ್ಯ ಶಿಕ್ಷಕಿಯ ಹ*ತ್ಯೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

5

Mangaluru: ಪದವು ಜಂಕ್ಷನ್‌- ಶರ್ಬತ್‌ ಕಟ್ಟೆ ರಸ್ತೆಗೆ ಅಗತ್ಯವಿದೆ ಫುಟ್‌ಪಾತ್‌

4

Padil: ಡಿಸಿ ಕಚೇರಿ ಸಂಕೀರ್ಣಕ್ಕೆ ಚಿನ್ನದ ಬಣ್ಣದ ರಾಷ್ಟ್ರ ಲಾಂಛನ

3(1

Uppunda: ಪಾಳು ಕೆರೆ ಈಗ ಈಜುಕೊಳ!; ಚೌಂಡಿ ಕೆರೆಗೆ ಊರಿನ ಯುವಕರಿಂದ ಕಾಯಕಲ್ಪ

2

Bajpe: ತಂಗುದಾಣ ತೆರವು, ಪ್ರಯಾಣಿಕರು ಅನಾಥ!

Perfect: ಎಡ್‌ ಶಿರನ್‌ ಹಾಡಿನಿಂದ ರಾಷ್ಟ್ರೀಯ ಸೆನ್ಸೇಶನ್‌ ಆದ ಉಡುಪಿಯ ಹುಡುಗ

Perfect: ಎಡ್‌ ಶಿರನ್‌ ಹಾಡಿನಿಂದ ರಾಷ್ಟ್ರೀಯ ಸೆನ್ಸೇಶನ್‌ ಆದ ಉಡುಪಿಯ ಹುಡುಗ | Video

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.