ನಿಗೂಢವಾಗಿ ನಾಪತ್ತೆಯಾಗಿದ್ದ ಯುವತಿಯರು ಪತ್ತೆ
Team Udayavani, Jul 1, 2023, 5:28 AM IST
ಕಾಸರಗೋಡು: ಕಳೆದ ಮೂರು ವರ್ಷಗಳಿಂದ ನಿಗೂಢವಾಗಿ ನಾಪತ್ತೆಯಾಗಿದ್ದ ಯುವಕ ಹಾಗೂ ಇಬ್ಬರು ಯುವತಿಯರನ್ನು ಜಿಲ್ಲಾ ಕ್ರೈಂ ಬ್ರಾಂಚ್ ಪತ್ತೆ ಹಚ್ಚಿದೆ.
ಮಂಜೇಶ್ವರ ಗೇರುಕಟ್ಟೆಯಿಂದ 2022ರ ಅಕ್ಟೋಬರ್ನಲ್ಲಿ ನಾಪತ್ತೆಯಾಗಿದ್ದ ಕುಂಞಾಬಿ (30) ಯನ್ನು ಉತ್ತರ ಪ್ರದೇಶದ ಲಕ್ನೋದಲ್ಲಿ ಪತ್ತೆ ಹಚ್ಚಲಾಗಿದೆ. ಇದೇ ರೀತಿ ಕಳೆದ ಮೇ ತಿಂಗಳಲ್ಲಿ ನಾಪತ್ತೆಯಾಗಿದ್ದ ಚಿತ್ತಾರಿಯ ಲಕ್ಷ್ಮಿ(23)ಯನ್ನು ಉತ್ತರ ಪ್ರದೇಶದ ಆಗ್ರಾದಲ್ಲಿ ಪತ್ತೆ ಹಚ್ಚಲಾಗಿದೆ. 2020ರ ಜುಲೈ 15ರಂದು ನಿಗೂಢವಾಗಿ ನಾಪತ್ತೆಯಾಗಿದ್ದ ಪೆರುವಾಡ್ ಕಡಪ್ಪುರದ ಬಿಲಾಲ್ನನ್ನು ತಮಿಳುನಾಡಿನ ಹೊಸೂರಿನಿಂದ ಪತ್ತೆ ಹಚ್ಚಲಾಗಿದೆ.
ನಿಗೂಢವಾಗಿ ನಾಪತ್ತೆಯಾಗು ವವರನ್ನು ಪತ್ತೆ ಹಚ್ಚಲು ರಾಜ್ಯ ಗೃಹ ಖಾತೆ ನೀಡಿದ ನಿರ್ದೇಶ ಪ್ರಕಾರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ| ವೈಭವ್ ಸಕ್ಸೇನಾ ಅವರು 2022ರ ಎಪ್ರಿಲ್ 18ರಂದು ಜಿಲ್ಲಾ ಕ್ರೈಂ ಬ್ರಾಂಚ್ ಡಿವೈಎಸ್ಪಿ ನೇತೃತ್ವದಲ್ಲಿ ವಿಶೇಷ ತಂಡವನ್ನು ರಚಿಸಿದ್ದರು.
ಈ ತಂಡ ನಡೆಸಿದ ಕಾರ್ಯಾ ಚರಣೆಯಲ್ಲಿ 2022ರಿಂದ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳ ವ್ಯಾಪ್ತಿಯಿಂದ ನಾಪತ್ತೆಯಾಗಿದ್ದ ಮಹಿಳೆಯರು ಮತ್ತು ಮಕ್ಕಳು ಸೇರಿ ದಂತೆ ಹತ್ತರಷ್ಟು ಮಂದಿಯನ್ನು ಪತ್ತೆ ಹಚ್ಚಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Madikeri: ಹಾಡಹಗಲೇ ಹಾರ್ಡ್ ವೇರ್ ಅಂಗಡಿಗೆ ನುಗ್ಗಿ ಒಂಟಿ ಮಹಿಳೆಯ ಸರಗಳ್ಳತನ
Madikeri:ರೈಲ್ವೆ ಕಂಬಿ ಬೇಲಿಯನ್ನೇ ಮುರಿದ ಕಾಡಾನೆಗಳು:ನಿತ್ಯ ಉಪಟಳದಿಂದ ಬೇಸತ್ತ ಗ್ರಾಮಸ್ಥರು
Madikeri: ವೀರ ಸೇನಾನಿಗಳಿಗೆ ಅಗೌರವ: ಆರೋಪಿ ಸೆರೆ
Kumbale: ವರ್ಕಾಡಿ ಪ್ಲೈವುಡ್ ಕಾರ್ಖಾನೆಯಲ್ಲಿ ಬೆಂಕಿ ಅನಾಹುತ: ಬೆಂಕಿ: ಕೋಟ್ಯಂತರ ರೂ. ನಷ್ಟ
Kasargod: ಬೆಕ್ಕಿಗಾಗಿ ಬಾವಿಗಿಳಿದ ವಿದ್ಯಾರ್ಥಿಯ ರಕ್ಷಣೆ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Siddakatte Kodange Kambala: ಈ ಸೀಸನ್ ನ ಮೊದಲ ಕಂಬಳದ ಫಲಿತಾಂಶ ಇಲ್ಲಿದೆ
Karkala: ನಿಟ್ಟೆಯಲ್ಲಿ ಬಾವಿಗೆ ಬಿದ್ದ ಒಂದು ವರ್ಷದ ಮರಿ ಚಿರತೆ ರಕ್ಷಣೆ
Maharashtra polls; ದೇಶ ಒಡೆಯುವ ಮಾತನಾಡುವವರಿಗೆ ತಕ್ಕ ಪಾಠ: ಕಂಗನಾ
IPL 2025 Auction: ಮೊದಲ ಎರಡು ಸುತ್ತಿನಲ್ಲಿ ಮಾರಾಟವಾದ ಆಟಗಾರರ ಸಂಪೂರ್ಣ ಪಟ್ಟಿ..
IPL Auction: ಡೆಲ್ಲಿ ಕ್ಯಾಪಿಟಲ್ಸ್ ಪಾಲಾದ ಕೆಎಲ್ ರಾಹುಲ್; ಖರೀದಿ ಆರಂಭಿಸಿದ ಆರ್ ಸಿಬಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.