![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Jul 1, 2023, 9:02 AM IST
ಮುಂಬಯಿ: ಖಾಸಗಿ ಬಸ್ ನಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ 26 ಮಂದಿ ಸಜೀವ ದಹನವಾಗಿರುವ ದುರಂತ ಘಟನೆ ಮುಂಬೈ-ನಾಗ್ಪುರ ಎಕ್ಸ್‌ಪ್ರೆಸ್‌ವೇಯಲ್ಲಿ ಶನಿವಾರ( ಜು. 1 ರಂದು) ನಡೆದಿದೆ.
ಮಹಾರಾಷ್ಟ್ರದ ಬುಲ್ಧಾನ ಜಿಲ್ಲೆಯಲ್ಲಿ ಶನಿವಾರ ಮುಂಜಾನೆ 2 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ ಎಂದು ಸುದ್ದಿ ಸಂಸ್ಥೆ ಎಎನ್‌ಐ ವರದಿ ಮಾಡಿದೆ.
33 ಜನರು ಪ್ರಯಾಣಿಸುತ್ತಿದ್ದ ಬಸ್ ಯವತ್ಮಾಲ್ ನಿಂದ ಪುಣೆಗೆ ತೆರಳುತ್ತಿದ್ದ ವೇಳೆ ಸಮೃದ್ಧಿ ಮಹಾಮಾರ್ಗ್ ಎಕ್ಸ್‌ಪ್ರೆಸ್‌ವೇಯಲ್ಲಿ ಬಸ್ಸಿನ ಟೈರ್ ಒಡೆದಿದೆ. ಆ ಬಳಿಕ ಬಸ್ ಪಲ್ಟಿಯಾಗಿ ಅದರಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಬಸ್ಸಿನಲ್ಲಿದ್ದ 26 ಮಂದಿ ಸಜೀವ ದಹನವಾಗಿದ್ದಾರೆ ಎಂದು ವರದಿ ತಿಳಿಸಿದೆ.
ಘಟನೆಯಲ್ಲಿ ಚಾಲಕ ಸುರಕ್ಷಿತವಾಗಿದ್ದಾರೆ. 6-8 ಜನ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ಬುಲ್ಧಾನ ಎಸ್ಪಿ ಸುನೀಲ್ ಕಡಸನೆ ಹೇಳಿದ್ದಾರೆ.
ಬಸ್ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಕ್ಕೆ 5 ಲಕ್ಷ ರೂಪಾಯಿ ಪರಿಹಾರ ಘೋಷಿಸಲಾಗಿದೆ.
ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರು ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರೊಂದಿಗೆ ಅಪಘಾತ ಸ್ಥಳಕ್ಕೆ ಭೇಟಿ ನೀಡಲಿದ್ದಾರೆ. ಘಟನೆಯ ಕುರಿತು ಸಿಎಂ ತನಿಖೆಗೆ ಆದೇಶಿಸಿದ್ದಾರೆ ಎಂದು ವರದಿ ತಿಳಿಸಿದೆ.
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
You seem to have an Ad Blocker on.
To continue reading, please turn it off or whitelist Udayavani.