Gujarat Riots : ತೀಸ್ತಾ ಸೆಟಲ್ವಾಡ್ ಜಾಮೀನು ಅರ್ಜಿ ತಿರಸ್ಕರಿಸಿದ ಗುಜರಾತ್ ಹೈಕೋರ್ಟ್
ತಕ್ಷಣವೇ ಶರಣಾಗುವಂತೆ ಸೂಚನೆ
Team Udayavani, Jul 1, 2023, 4:21 PM IST
ಗುಜರಾತ್: 2002ರ ಗುಜರಾತ್ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಕಲಿ ಸಾಕ್ಷ್ಯಗಳನ್ನು ಸೃಷ್ಟಿಸಿದ ಆರೋಪ ಎದುರಿಸುತ್ತಿರುವ ಮುಂಬೈ ಮೂಲದ ಸಾಮಾಜಿಕ ಹೋರಾಟಗಾರ್ತಿ ತೀಸ್ತಾ ಸೆಟಲ್ವಾಡ್‌ಗೆ ಗುಜರಾತ್ ಹೈಕೋರ್ಟ್ ಜಾಮೀನು ಅರ್ಜಿಯನ್ನು ತಿರಸ್ಕರಿಸಿದ್ದು ಮಾತ್ರವಲ್ಲದೆ, ತಕ್ಷಣವೇ ಶರಣಾಗುವಂತೆ ಸೂಚನೆ ನೀಡಿದೆ.
ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿ ತೀಸ್ತಾ ಸೆಟಲ್ವಾಡ್‌ಗೆ ಸುಪ್ರೀಂ ಕೋರ್ಟ್ ನೀಡಿದ ಮಧ್ಯಂತರ ಜಾಮೀನು ಆಕೆಯನ್ನು ಇಲ್ಲಿಯವರೆಗೆ ಬಂಧನದಿಂದ ರಕ್ಷಿಸಿದೆ. ಆದರೆ ಇಂದು ಜಾಮೀನು ಅರ್ಜಿಯ ವಿಚಾರಣೆ ಕೈಗೆತ್ತಿಕೊಂಡ ಗುಜರಾತ್ ಹೈಕೋರ್ಟ್ ಜಾಮೀನು ಅರ್ಜಿಯನ್ನು ತಿರಸ್ಕರಿಸಿ ಕೂಡಲೇ ಶರಣಾಗುವಂತೆ ಆದೇಶ ನೀಡಿದೆ.
ಏನಿದು ಪ್ರಕರಣ:
2002 ರ ಗುಜರಾತ್ ಗಲಭೆ ಪ್ರಕರಣಕ್ಕೆ ಸಂಬಂಧಿಸಿ ತೀಸ್ತಾ ಸೆಟಲ್ವಾಡ್ ಮತ್ತು ಮಾಜಿ ಟಾಪ್ ಕಾಪ್ ಆರ್ಬಿ ಶ್ರೀಕುಮಾರ್ ಅವರನ್ನು ಸುಳ್ಳು ಸಾಕ್ಷ್ಯಾಧಾರ, ನಕಲಿ ಮತ್ತು ಕ್ರಿಮಿನಲ್ ಪಿತೂರಿ ಮಾಡಿದ ಆರೋಪದ ಮೇಲೆ ಗುಜರಾತ್ ಪೊಲೀಸರು ಜೂನ್ 25, 2022 ರಂದು ಬಂಧಿಸಲಾಯಿತು.
ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್‌ನಿಂದ ಮಧ್ಯಂತರ ಜಾಮೀನು ಪಡೆದ ನಂತರ ತೀಸ್ತಾ ಸೆಪ್ಟೆಂಬರ್ 2022 ರಲ್ಲಿ ಗುಜರಾತ್‌ನ ಸಬರಮತಿ ಜೈಲಿನಿಂದ ಬಿಡುಗಡೆಯಾದರು.
ಇದನ್ನೂ ಓದಿ: ಒಂದೆರಡು ರಾಷ್ಟಗಳು ನಿರ್ನಾಮವಾಗಲಿವೆ; ಭಯಾನಕ ಭವಿಷ್ಯ ನುಡಿದ ಕೋಡಿಮಠ ಸ್ವಾಮೀಜಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Natural Disaster: ಅನಿರೀಕ್ಷಿತ ಮಳೆಗೆ ಸೊರಗಿದ ವಿಶಿಷ್ಟ ಗುಣದ ಹೆಮ್ಮಾಡಿ ಸೇವಂತಿಗೆ
Rain Alert: ರಾಜ್ಯದಲ್ಲಿ ಕನಿಷ್ಠ ತಾಪಮಾನ 4 ಡಿ.ಸೆ ಏರಿಕೆ; ಹಲವೆಡೆ 24ರಂದು ಮಳೆ ಸಾಧ್ಯತೆ
Karnataka; ರಾಜ್ಯದ ಕಾಡಿಗೆ ಕೊಡಲಿ! ಮಾನವ-ವನ್ಯಜೀವಿ ಸಂಘರ್ಷ ಹೆಚ್ಚಳ?
Puri; ವರ್ಷಾರಂಭದೊಂದಿಗೆ ಜಗನ್ನಾಥ ದೇಗುಲದಲ್ಲಿ ಹೊಸ ದರ್ಶನ ವ್ಯವಸ್ಥೆ
Tirupati; ದೇವಸ್ಥಾನದಲ್ಲೂ ಶೀಘ್ರ ಎಐ ಚಾಟ್‌ಬಾಟ್!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.