![IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ](https://www.udayavani.com/wp-content/uploads/2025/02/5-25-415x249.jpg)
![IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ](https://www.udayavani.com/wp-content/uploads/2025/02/5-25-415x249.jpg)
Team Udayavani, Jul 2, 2023, 2:47 PM IST
ಮುಂಬಯಿ : ಮಹತ್ವದ ರಾಜಕೀಯದ ವಿದ್ಯಮಾನದಲ್ಲಿ ಬಿಜೆಪಿ ಮತ್ತು ಶಿವಸೇನೆ ಶಿಂಧೆ ಬಣದ ಮೈತ್ರಿಕೂಟಕ್ಕೆ ಹೊಸ ಬಲ ಎಂಬಂತೆ ಎನ್‌ಸಿಪಿ ನಾಯಕ ಅಜಿತ್ ಪವಾರ್ ಭಾನುವಾರ ಮಹಾರಾಷ್ಟ್ರ ಡಿಸಿಎಂ ಪ್ರಮಾಣ ವಚನ ಸ್ವೀಕರಿಸಿದ್ದಾರೆ.
ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ ಮತ್ತು ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಸಮ್ಮುಖದಲ್ಲಿ ರಾಜಭವನದಲ್ಲಿ ಬೆಂಬಲಿಗರ ಸಮ್ಮುಖದಲ್ಲಿ ಅಜಿತ್ ಪವಾರ್ ಪ್ರಮಾಣವಚನ ಸ್ವೀಕರಿಸಿದ್ದಾರೆ.
ಅಜಿತ್ ಅವರೊಂದಿಗೆ ಇತರ ಎಂಟು ಎನ್ ಸಿಪಿ ಶಾಸಕರಾದ ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಮತ್ತು ಎನ್‌ಸಿಪಿ ನಾಯಕ ದಿಲೀಪ್ ವಾಲ್ಸೆ ಪಾಟೀಲ್, ಎನ್‌ಸಿಪಿ ನಾಯಕ ಛಗನ್ ಭುಜಬಲ್, ಧರ್ಮೋಬಾಬಾ ಅತ್ರಮ್, ಹಸನ್ ಮುಶ್ರೀಫ್, ಧನಂಜಯ್ ಮುಂಡೆ, ಅದಿತಿ ತತ್ಕರೆ, ಅನಿಲ್ ಪಾಟೀಲ್, ಸಂಜಯ್ ಭನ್ಸೋಡೆ ಕೂಡ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು.
ವಿಧಾನಸಭೆಯಲ್ಲಿ ವಿರೋಧ ಪಕ್ಷದ ನಾಯಕರಾಗಿದ್ದ ಅಜಿತ್ ಪವಾರ್ ಅವರೊಂದಿಗೆ 53 ಎನ್‌ಸಿಪಿ ಶಾಸಕರ ಪೈಕಿ 30 ಶಾಸಕರು ರಾಜ್ಯ ಇದ್ದಾರೆ ಎಂದು ಹೇಳಲಾಗಿದೆ.
ಮಹಾರಾಷ್ಟ್ರ ಸಚಿವ ಸುಧೀರ್ ಮುಂಗಂತಿವಾರ್ ಪ್ರತಿಕ್ರಿಯಿಸಿ “40 ಕ್ಕೂ ಹೆಚ್ಚು ಶಾಸಕರು ಸರ್ಕಾರಕ್ಕೆ ಬೆಂಬಲ ನೀಡುತ್ತಿದ್ದಾರೆ, ಬಹುತೇಕ ಸಂಪೂರ್ಣ ಎನ್‌ಸಿಪಿ ಎನ್ ಡಿಎ ಸೇರಲಿದೆ ಎಂದು ಹೇಳಿದ್ದಾರೆ.
ಮಹಾರಾಷ್ಟ್ರ ಬಿಜೆಪಿ ಅಧ್ಯಕ್ಷ ಚಂದ್ರಶೇಖರ ಬಾವಂಕುಲೆ ಪ್ರತಿಕ್ರಿಯಿಸಿ “ಅಜಿತ್ ಪವಾರ್ ಮತ್ತು ಇತರ ಎನ್‌ಸಿಪಿ ಶಾಸಕರು ಇಲ್ಲಿಗೆ ಬಂದಿದ್ದಾರೆ. ಪ್ರಧಾನಿ ಮೋದಿ ನೇತೃತ್ವದಲ್ಲಿ ಮಹಾರಾಷ್ಟ್ರ ಪ್ರಗತಿ ಸಾಧಿಸಲಿದೆ” ಎಂದಿದ್ದಾರೆ.
2019 ರಲ್ಲೂ ಅಜಿತ್ ಪವಾರ್ ಅವರು ಬಿಜೆಪಿಯೊಂದಿಗೆ ಹೊಂದಾಣಿಕೆ ಮಾಡಿಕೊಳ್ಳಲು ವಿಫಲ ಪ್ರಯತ್ನವನ್ನು ಮಾಡಿದ್ದರು. ಇಂದು ಉಪಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಅಜಿತ್ ಪವಾರ್, ಎನ್‌ಸಿಪಿಯಲ್ಲಿ ಕ್ಷೀಣಿಸುತ್ತಿದ್ದ ತನ್ನ ಸ್ಥಾನಮಾನವನ್ನು ಪುನರುತ್ಥಾನಗೊಳಿಸಲು ಮುಂದಾಗಿ ಈ ನಿರ್ಧಾರ ಕೈಗೊಂಡಿದ್ದಾರೆ ಎನ್ನಲಾಗಿದೆ.
ಪಕ್ಷದ ಯಾವುದೇ ಹುದ್ದೆಯನ್ನು ಹೊಂದಿಲ್ಲದಿದ್ದರೂ, ಸುಪ್ರಿಯಾ ಸುಳೆ ಮತ್ತು ಪಕ್ಷದ ನಾಯಕ ಪ್ರಫುಲ್ ಪಟೇಲ್ ಅವರನ್ನು ಜೂನ್ 10 ರಂದು ಎನ್‌ಸಿಪಿ ಕಾರ್ಯಾಧ್ಯಕ್ಷರನ್ನಾಗಿ ನೇಮಕ ಮಾಡಲಾಗಿತ್ತು.
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!
ಹೆಚ್ಚು ವರದಕ್ಷಿಣೆ ನೀಡಲಿಲ್ಲವೆಂದು ಸೊಸೆಗೆ HIV ಸೋಂಕಿನ ಇಂಜೆಕ್ಷನ್ ನೀಡಿದ ಅತ್ತೆ ಮಾವ
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
You seem to have an Ad Blocker on.
To continue reading, please turn it off or whitelist Udayavani.