Karnataka: “ಬೋಗಸ್ ಗ್ಯಾರಂಟಿ”ಗಳ ವಿರುದ್ಧ ಹೋರಾಟ: ಜೋಶಿ
Team Udayavani, Jul 3, 2023, 7:21 AM IST
ಧಾರವಾಡ: ರಾಜ್ಯ ವಿಧಾನಸಭೆ ಅಧಿವೇಶನದ ಒಳಗೆ ಮತ್ತು ಹೊರಗೆ ರಾಜ್ಯ ಸರ್ಕಾರದ ಬೋಗಸ್ ಗ್ಯಾರಂಟಿ ಯೋಜನೆಗಳ ವಿರುದ್ಧ ಬಿಜೆಪಿ ಪ್ರತಿಭಟನೆ ಮಾಡಲಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರದ ಜನವಿರೋಧಿ ಯೋಜನೆಗಳ ವಿರುದ್ಧ ಹೋರಾಟ ನಡೆಸಲಾಗುವುದು. ರಾಜ್ಯ ಸರ್ಕಾರ 10 ಕೆಜಿ ಅಕ್ಕಿಯ ಹಣ ಕೊಡಬೇಕು, ಇಲ್ಲವೇ ಕ್ಷಮೆ ಕೇಳಬೇಕು. ಕೇಂದ್ರದಿಂದ 5 ಕೆಜಿ ಅಕ್ಕಿ ಕೊಡುತ್ತಿರುವ ಬಗ್ಗೆ ಸತ್ಯವನ್ನು ಹೇಳಿ ಕ್ಷಮೆ ಕೇಳಬೇಕು. ಧಾರವಾಡ-ಬೆಂಗಳೂರು ವಂದೇ ಭಾರತ್ ರೈಲಿಗೆ ಕಲ್ಲೆಸೆದಿದ್ದು ಅವರ ವಿಕೃತ ಮನೋಭಾವ ಬಿಂಬಿಸುತ್ತದೆ. ದೇಶದ ಅನೇಕ ಭಾಗದಲ್ಲಿ ಈ ರೀತಿ ಆಗುತ್ತಿದೆ.
ಇದು ಒಳ್ಳೆಯ ಬೆಳವಣಿಗೆಯಲ್ಲ. ವಂದೇ ಭಾರತ್ ರೈಲು ದೇಶದ ಆಸ್ತಿ. ದೇಶದಲ್ಲಿ ಆಧುನಿಕ ಸೌಲಭ್ಯ ಬೆಳೆಯಲು ಈ ರೈಲು ಸಹಕಾರಿಯಾಗಿದೆ. ಈ ರೈಲುಗಳು ಭಾರತದಲ್ಲಿ ತಯಾರಾಗಬೇಕೆಂಬುದು ಪ್ರಧಾನಿ ಮೋದಿ ಕಾಳಜಿಯಾಗಿದೆ. ಕೆಲ ಕಿಡಿಗೇಡಿಗಳು ರಸ್ತೆ ಪಕ್ಕಕ್ಕೆ ನಿಂತು ಕಲ್ಲು ಎಸೆಯುತ್ತಿದ್ದಾರೆ. ರಾಜ್ಯ ಸರ್ಕಾರ ಕಾನೂನು ಸುವ್ಯವಸ್ಥೆ ಬಲಪಡಿಸಬೇಕು. ಪಕ್ಷದ ರಾಜ್ಯಾಧ್ಯಕ್ಷ ಕಟೀಲ್ ಅಧ್ಯಕ್ಷತೆಯಲ್ಲಿ ಯಡಿಯೂರಪ್ಪ ನೇತೃತ್ವದಲ್ಲಿ ಸಭೆ ನಡೆಸಲಾಗಿದೆ. ಬಿಎಸ್ವೈ ಅವರೂ ರೇಣುಕಾಚಾರ್ಯ ಅವರನ್ನು ಕರೆದು ಮಾತನಾಡಿದ್ದಾರೆ. ನಾನು ಸಹ ರೇಣುಕಾಚಾರ್ಯ ಅವರನ್ನು ಕರೆದು ಮಾತನಾಡುತ್ತೇನೆ. ನಮ್ಮದು ಒಂದು ಪರಿವಾರ ಇದ್ದಂತೆ ಎಂಬುದನ್ನು ಮನವರಿಕೆ ಮಾಡಿಕೊಡಲಾಗುವುದು. ಸ್ವಲ್ಪ ಆಕ್ರೋಶದಲ್ಲಿ ಕೆಲವರು ಮಾತನಾಡಿದ್ದರು. ಪಕ್ಷದ ಮೇಲೆ ಯಾರಿಗೂ ಬೇಸರವಿಲ್ಲ. ಸಾರ್ವಜನಿಕವಾಗಿ ಹೇಳಿಕೆ ನೀಡದಂತೆ ಸೂಚಿಸಲಾಗಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Railway: ಗಂಗಾವತಿ ರೈಲ್ವೆ ನಿಲ್ದಾಣಕ್ಕೆ ಅಂಜನಾದ್ರಿ ಹೆಸರು ಶಿಫಾರಸು: ಸಚಿವ ಎಂ.ಬಿ.ಪಾಟೀಲ್
Waqf ವಿರುದ್ದ ಮಠಾಧೀಶರು,ಯತ್ನಾಳ್ ತಂಡದಿಂದ ಮತ್ತೊಂದು ಹಂತದ ಹೋರಾಟ
Belagavi; ಕಿತ್ತೂರು ರಾಣಿ ಚನ್ನಮ್ಮ ಕಿರು ಮೃಗಾಲಯದಲ್ಲಿದ್ದ ಹುಲಿ ಶೌರ್ಯ ಇನ್ನಿಲ್ಲ
Channapatna bypoll; ಗೆಲುವಿಗೆ ಬಿಜೆಪಿ-ಜೆಡಿಎಸ್ ನವರೂ ಸಹಕರಿಸಿದ್ದಾರೆ: ಡಿ.ಕೆ.ಶಿವಕುಮಾರ್
Vijayapura: ಜಿಲ್ಲಾಸ್ಪತ್ರೆಯಲ್ಲಿ ಒಂದು ವರ್ಷದ ಮಗು ಅಪಹರಣ: ಸಿಸಿಟಿವಿಯಲ್ಲಿ ದೃಶ್ಯ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.