BJP: ವಿಪಕ್ಷ ನಾಯಕ ಕಗ್ಗಂಟು-  ಇಂದು ಕೇಂದ್ರದಿಂದ ಇಬ್ಬರು ವೀಕ್ಷಕರ ಆಗಮನ

Team Udayavani, Jul 3, 2023, 7:18 AM IST

BJP FLAG 1

ಬೆಂಗಳೂರು: ವಿಧಾನ ಸಭೆಯಲ್ಲಿ ವಿಪಕ್ಷ ನಾಯಕನ ಆಯ್ಕೆ ಕಗ್ಗಂಟು ಇನ್ನೂ ಬಗೆಹರಿಯುವಂತೆ ಕಾಣುತ್ತಿಲ್ಲ.

ಸೋಮವಾರ ವಿಪಕ್ಷ ನಾಯಕನ ಆಯ್ಕೆ ಸಂಬಂಧ ವೀಕ್ಷಕರಾಗಿ ಕೇಂದ್ರ ಆರೋಗ್ಯ ಸಚಿವ ಮನಸುಖ್‌ ಮಾಂಡವಿಯ ಮತ್ತು ವಿನೋದ್‌ ತಾವಡೆ ರಾಜ್ಯಕ್ಕೆ ಆಗಮಿಸಲಿದ್ದಾರೆ. ಬಿ.ಎಸ್‌. ಯಡಿಯೂರಪ್ಪ ಅವರು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಮತ್ತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರೊಂದಿಗೆ ಸಭೆ ನಡೆಸಿದ ಬಳಿಕ ಮಾತನಾಡಿದ್ದು, ಕೇಂದ್ರ ವೀಕ್ಷಕರು ಆಗಮಿಸಲಿದ್ದಾರೆ ಎಂಬ ಮಾಹಿತಿ ನೀಡಿದರು.

ಇಬ್ಬರೂ ವೀಕ್ಷಕರು ಶಾಸಕರ ಅಭಿಪ್ರಾಯ ಸಂಗ್ರಹಿಸಿ, ವರಿಷ್ಠರ ಗಮನಕ್ಕೆ ತರಲಿದ್ದಾರೆ. ಬಳಿಕವಷ್ಟೇ ತೀರ್ಮಾನ ಹೊರಬೀಳಲಿದೆ ಎಂದು ಯಡಿಯೂರಪ್ಪ ತಿಳಿಸಿದ್ದಾರೆ. ಅಗತ್ಯಬಿದ್ದರೆ ಇನ್ನೊಮ್ಮೆ ತಮ್ಮನ್ನು ದಿಲ್ಲಿಗೆ ಕರೆಸಿಕೊಳ್ಳಬಹುದು ಎಂದೂ ಬಿಎಸ್‌ವೈ ಹೇಳಿದ್ದಾರೆ.

ಮೂವರ ಹೆಸರು ಅಂತಿಮ?

ವಿಪಕ್ಷ ನಾಯಕನ ಸ್ಥಾನಕ್ಕೆ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಸಚಿವರಾದ ಆರಗ ಜ್ಞಾನೇಂದ್ರ ಅವರ ಹೆಸರು ಅಂತಿಮ ಗೊಳಿಸಲಾಗಿದೆ. ಈ ಮಧ್ಯೆ ಅಂತಿಮ ಕ್ಷಣದಲ್ಲಿ ಮಾಜಿ ಸಚಿವ ಸುನಿಲ್‌ ಕುಮಾರ್‌ ಅವರಿಗೂ ಅದೃಷ್ಟ ಖುಲಾಯಿಸುವ ಸಾಧ್ಯತೆಯಿದೆ ಎಂದು ಉನ್ನತ ಮೂಲಗಳಿಂದ ತಿಳಿದು ಬಂದಿದೆ.

ರವಿವಾರ ಸಂಜೆ ನಾಲ್ಕು ಗಂಟೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ, ಕೇಂದ್ರ ಗೃಹ ಸಚಿವ ಅಮಿತ್‌ ಶಾ ಮತ್ತು ಮಾಜಿ ಮುಖ್ಯ

ಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರ ಮಧ್ಯೆ ಸಮಾಲೋಚನೆ ನಡೆದು ರಾತ್ರಿ ವೇಳೆಗೆ ಹೆಸರು ಪ್ರಕಟಗೊಳ್ಳಬಹುದು ಎಂಬ ನಿರೀಕ್ಷೆಯಿತ್ತು. ಆದರೆ ಮಹಾರಾಷ್ಟ್ರದಲ್ಲಿ ನಡೆದ ಕ್ಷಿಪ್ರ ರಾಜಕೀಯ ಬೆಳವಣಿಗೆ ಹಿನ್ನೆಲೆಯಲ್ಲಿ ಬಿಜೆಪಿ ಹೈಕಮಾಂಡ್‌ ಮಟ್ಟದಲ್ಲಿ ಚರ್ಚೆ ನಡೆಯುತ್ತಿದ್ದ ಕಾರಣ ಕರ್ನಾಟಕದ ವಿಚಾರ ಮುಂದೂಡಲ್ಪಟ್ಟಿತು. ಈ ಹಿನ್ನೆಲೆಯಲ್ಲಿ ಸಂಜೆ ವಾಪಸ್‌ ಬೆಂಗಳೂರಿಗೆ ಹಿಂದಿರುಗುವ ಯೋಚನೆಯಲ್ಲಿದ್ದ ಯಡಿ ಯೂರಪ್ಪ  ದಿಲ್ಲಿಯಲ್ಲೇ ಉಳಿದುಕೊಂಡರು.

ಪಕ್ಷದ ಉನ್ನತ ಮೂಲಗಳ ಪ್ರಕಾರ ಬೊಮ್ಮಾಯಿ, ಆರಗ ಜ್ಞಾನೇಂದ್ರ ಮತ್ತು ಸುನಿಲ್‌ ಕುಮಾರ್‌ ಹೆಸರುಗಳು ಅಂತಿಮ ಪಟ್ಟಿಯಲ್ಲಿವೆ. ಈ ಪೈಕಿ ಬೊಮ್ಮಾಯಿ ಹೆಸರು ಮುಂಚೂಣಿಯಲ್ಲಿದೆ ಎಂದು ಹೇಳಲಾಗುತ್ತಿದೆ.

ಈ ಮಧ್ಯೆ ಮಾಜಿ ಸಿಎಂ ಯಡಿಯೂರಪ್ಪ ಅವರು ರಾತ್ರಿ 9ರ ವೇಳೆಗೆ ಜೆ.ಪಿ ನಡ್ಡಾ ಅವರನ್ನು ಭೇಟಿ ಮಾಡಿ ಸಮಾಲೋಚನೆ ನಡೆಸಿದ ಬಳಿಕ ಅಮಿತ್‌ ಶಾ ಅವರನ್ನು ಭೇಟಿ ಮಾಡಿದರು. ಬಳಿಕ ಮಾಧ್ಯಮಗಳ ಜತೆಗೆ ಮಾತನಾಡಿದರು.

ಯಾರು ಮೇಲ್ಮನೆ ವಿಪಕ್ಷ ನಾಯಕ ?

ವಿಧಾನ ಪರಿಷತ್‌ನ ವಿಪಕ್ಷ ನಾಯಕ ಮತ್ತು ಪಕ್ಷದ ರಾಜ್ಯಾಧ್ಯಕ್ಷ ಸ್ಥಾನಗಳಿಗೂ ಆಯ್ಕೆ ನಡೆಯಬೇಕಿದ್ದು, ವಿಧಾನಸಭೆಯ ವಿಪಕ್ಷ ನಾಯಕನ ಆಯ್ಕೆಯ ಜತೆಗೆ ಈ ಹುದ್ದೆಗಳ ಆಯ್ಕೆಯೂ ತಳಕು ಹಾಕಿಕೊಂಡಿದೆ. ಮುಂದಿನ ಲೋಕಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡೇ ಈ ಮೂರು ಸ್ಥಾನಗಳಿಗೆ ನೇಮಕ ನಡೆಯ ಲಿವೆ. ಆದ್ದರಿಂದ ಈ ಮೂರು ಸ್ಥಾನ ಗಳೊಂದಿಗೆ ಬಿಜೆಪಿಯ ಭವಿಷ್ಯದ ನಾಯ ಕತ್ವದ ಬಗ್ಗೆಗಿನ ಹೈಕಮಾಂಡ್‌ನ‌ ಒಲವು, ನಿಲುವುಗಳು ಪ್ರಕಟವಾಗಲಿದೆ ಎಂದು ಬಿಜೆಪಿ ನಾಯಕರು ಅಭಿಪ್ರಾಯ ಪಟ್ಟಿದ್ದಾರೆ.

ಟಾಪ್ ನ್ಯೂಸ್

1-eqwewewqe

Ayodhya: ಭಾಗಶಃ ನಿರ್ಮಿಸಿದ ರಾಮ ಮಂದಿರದಲ್ಲಿ ಪ್ರಾರ್ಥನೆ ಸಲ್ಲಿಸಲು ಸಾಧ್ಯವಿಲ್ಲ!

Congress: ತುಷ್ಟೀಕರಣದಿಂದ ಮತಾಂಧ ಶಕ್ತಿಗಳಿಗೆ ಶಕ್ತಿ; ಜೋಶಿ ಕಿಡಿ

Congress: ತುಷ್ಟೀಕರಣದಿಂದ ಮತಾಂಧ ಶಕ್ತಿಗಳಿಗೆ ಶಕ್ತಿ; ಜೋಶಿ ಕಿಡಿ

Nandini

Thirupathi Laddu: ತಿರುಪತಿಗೆ ತೆರಳುವ ನಂದಿನಿ ತುಪ್ಪದ ಟ್ಯಾಂಕರ್‌ಗೆ ಜಿಪಿಎಸ್‌ ಕಣ್ಗಾವಲು!

MP Yaduveer Wadiyar: ಭಾವನೆಗೆ ಧಕ್ಕೆಯಾಗದಂತೆ ಮಹಿಷಾ ದಸರಾ ಆಚರಿಸಲಿ

Yaduveer Wadiyar: ಭಾವನೆಗೆ ಧಕ್ಕೆಯಾಗದಂತೆ ಮಹಿಷಾ ದಸರಾ ಆಚರಿಸಲಿ

1-asasa

Lingayat ಪಂಚಮಸಾಲಿ 2A ಹೋರಾಟ: ವಕೀಲರ ಸಮಾವೇಶದಲ್ಲಿ 3 ನಿರ್ಣಯ ಅಂಗೀಕಾರ

mbಆಡಳಿತದಲ್ಲಿ ರಾಜ್ಯಪಾಲರ ಹಸ್ತಕ್ಷೇಪ ಸಲ್ಲ: ಸಚಿವ ಎಂ.ಬಿ.ಪಾಟೀಲ್‌ಆಡಳಿತದಲ್ಲಿ ರಾಜ್ಯಪಾಲರ ಹಸ್ತಕ್ಷೇಪ ಸಲ್ಲ: ಸಚಿವ ಎಂ.ಬಿ.ಪಾಟೀಲ್‌

Minister MB Patil: ಆಡಳಿತದಲ್ಲಿ ರಾಜ್ಯಪಾಲರ ಹಸ್ತಕ್ಷೇಪ ಸಲ್ಲ

PSI Parshuram ಕುಟುಂಬಕ್ಕೆ ಪರಿಹಾರ ಕೊಡಿ: ಛಲವಾದಿ ಆಗ್ರಹ

PSI Parshuram ಕುಟುಂಬಕ್ಕೆ ಪರಿಹಾರ ಕೊಡಿ: ಛಲವಾದಿ ಆಗ್ರಹ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Nandini

Thirupathi Laddu: ತಿರುಪತಿಗೆ ತೆರಳುವ ನಂದಿನಿ ತುಪ್ಪದ ಟ್ಯಾಂಕರ್‌ಗೆ ಜಿಪಿಎಸ್‌ ಕಣ್ಗಾವಲು!

1-asasa

Lingayat ಪಂಚಮಸಾಲಿ 2A ಹೋರಾಟ: ವಕೀಲರ ಸಮಾವೇಶದಲ್ಲಿ 3 ನಿರ್ಣಯ ಅಂಗೀಕಾರ

PSI Parshuram ಕುಟುಂಬಕ್ಕೆ ಪರಿಹಾರ ಕೊಡಿ: ಛಲವಾದಿ ಆಗ್ರಹ

PSI Parshuram ಕುಟುಂಬಕ್ಕೆ ಪರಿಹಾರ ಕೊಡಿ: ಛಲವಾದಿ ಆಗ್ರಹ

Rain: ಸೆ.23 ರಂದು ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆ ಬೀಳುವ ಸಾಧ್ಯತೆ

Rain: ಸೆ.23 ರಂದು ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆ ಬೀಳುವ ಸಾಧ್ಯತೆ

1-siddu-aa

TB Dam; ಮೈತುಂಬಿಕೊಂಡ ತುಂಗಭದ್ರೆಗೆ ಸಿಎಂ ಸಿದ್ದರಾಮಯ್ಯ ಅವರಿಂದ ಬಾಗಿನ ಅರ್ಪಣೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

1-eqwewewqe

Ayodhya: ಭಾಗಶಃ ನಿರ್ಮಿಸಿದ ರಾಮ ಮಂದಿರದಲ್ಲಿ ಪ್ರಾರ್ಥನೆ ಸಲ್ಲಿಸಲು ಸಾಧ್ಯವಿಲ್ಲ!

4

Hiriydaka: ಹೃದಯಾಘಾತದಿಂದ ಗ್ರಾಮ ಪಂಚಾಯತ್ ಸದಸ್ಯ ಮೃತ್ಯು

Court-1

Udupi: ಚೆಕ್‌ ಅಮಾನ್ಯ ಪ್ರಕರಣ; ಆರೋಪಿ ಖುಲಾಸೆ

Congress: ತುಷ್ಟೀಕರಣದಿಂದ ಮತಾಂಧ ಶಕ್ತಿಗಳಿಗೆ ಶಕ್ತಿ; ಜೋಶಿ ಕಿಡಿ

Congress: ತುಷ್ಟೀಕರಣದಿಂದ ಮತಾಂಧ ಶಕ್ತಿಗಳಿಗೆ ಶಕ್ತಿ; ಜೋಶಿ ಕಿಡಿ

Nandini

Thirupathi Laddu: ತಿರುಪತಿಗೆ ತೆರಳುವ ನಂದಿನಿ ತುಪ್ಪದ ಟ್ಯಾಂಕರ್‌ಗೆ ಜಿಪಿಎಸ್‌ ಕಣ್ಗಾವಲು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.