Madhya Pradesh: ಪತ್ನಿ ಶವವನ್ನು ಮೂರು ದಿನ ಫ್ರೀಜರ್ ನಲ್ಲಿಟ್ಟ ಪತಿ; ಕೊಲೆ ಆರೋಪ
Team Udayavani, Jul 3, 2023, 9:43 AM IST
ಭೋಪಾಲ್: ಮೃತಪಟ್ಟ ಪತ್ನಿಯ ಶವವನ್ನು ಪತಿಯೊಬ್ಬ ಮೂರು ದಿನಗಳ ಕಾಲ ಮನೆಯ ಫ್ರೀಜರ್ ನಲ್ಲಿಟ್ಟ ಘಟನೆ ಮಧ್ಯ ಪ್ರದೇಶದ ರೇವಾ ಜಿಲ್ಲೆಯಲ್ಲಿ ನಡೆದಿರುವುದು ವರದಿಯಾಗಿದೆ.
ಮೃತ ಮಹಿಳೆಯನ್ನು ಸುಮಿತ್ರಿ (40) ಎಂದು ಗುರುತಿಸಲಾಗಿದೆ. ಭಾನುವಾರ ಮೃತ ಮಹಿಳೆಯ ಸಹೋದರ ಕೊಲೆ ಆರೋಪದ ಮೇಲೆ ದೂರು ನೀಡಿದ ಬಳಿಕ ಶವವನ್ನು ವಶ ಪಡಿಸಿಕೊಂಡಿದ್ದಾರೆ.
ಶುಕ್ರವಾರ ನನ್ನ ಪತ್ನಿ ಜಾಂಡೀಸ್ ನಿಂದ ಮೃತಪಟ್ಟಿದ್ದಾಳೆ. ತಮ್ಮ ಮಗ ಮುಂಬೈಯಿಂದ ಬರುವವರೆಗೆ ನಾನು ಶವವನ್ನು ಫ್ರೀಜರ್ ನಲ್ಲಿಟ್ಟಿದ್ದೆ. ಆ ಬಳಿಕ ಅಂತ್ಯಕ್ರಿಯೆಯನ್ನು ನಡೆಸಲಿದ್ದೆ ಎಂದು ಸುಮಿತ್ರಿ ಅವರ ಪತಿ ಪೊಲೀಸರ ಬಳಿ ಹೇಳಿದ್ದಾರೆ.
ಆದರೆ ಸುಮಿತ್ರಿ ಅವರ ಸಹೋದರ ತನ್ನ ಭಾವ ಅಕ್ಕನ ಮೇಲೆ ದೌರ್ಜನ್ಯವೆಸಗುತ್ತಿದ್ದರು. ಅವರೇ ಅಕ್ಕನನ್ನು ಹತ್ಯೆಗೈದು ಶವವನ್ನು ಫ್ರೀಜರ್ ನಲ್ಲಿಟ್ಟಿದ್ದಾರೆ ಎಂದು ಆರೋಪಿಸಿ ಪೊಲೀಸರಿಗೆ ದೂರು ನೀಡಿದ್ದಾರೆ.
“ಸುಮಿತ್ರಿ ಎಂದು ಗುರುತಿಸಲಾದ 40 ವರ್ಷದ ಮಹಿಳೆಯ ಶವವನ್ನು ನಾವು ವಶಪಡಿಸಿಕೊಂಡಿದ್ದೇವೆ. ಆಕೆಯ ಸಹೋದರ ಅಭಯ್ ತಿವಾರಿ ತನ್ನ ಭಾವ ಅವರನ್ನು ಕೊಂದಿದ್ದಾನೆ ಎಂದು ನಮಗೆ ದೂರು ನೀಡಿದ ನಂತರ ನಾವು ಶವವನ್ನು ಪಡೆದುಕೊಂಡಿದ್ದೇವೆ” ಎಂದು ಸಿಟಿ ಕೊತ್ವಾಲಿ ಪೊಲೀಸ್ ಪೊಲೀಸ್ ಇನ್ಸ್ಪೆಕ್ಟರ್ ಹೇಳಿದ್ದಾರೆ.
ಜೂ.30 ರಂದು ಪತ್ನಿ ಜಾಂಡೀಸ್ ನಿಂದ ಮೃತಪಟ್ಟಿದ್ದಾಳೆ ಎಂದು ಪತಿ ಹೇಳಿರುವುದಾಗಿ ಪೊಲೀಸರು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pegasus spyware ಬಗ್ಗೆ ಸುಪ್ರೀಂಕೋರ್ಟ್ ತನಿಖೆ ನಡೆಸಲಿ: ಸುರ್ಜೇವಾಲಾ
Allu Arjun ನಿವಾಸದಲ್ಲಿ ದಾಂಧಲೆ!; 8 ಮಂದಿ ಬಂಧನ: ಕೃತ್ಯ ಎಸಗಿದ್ದು ಯಾರು?
Vasundhara Raje ಬೆಂಗಾವಲು ವಾಹನ ಪಲ್ಟಿ; ನಾಲ್ವರು ಪೊಲೀಸರಿಗೆ ಗಾಯ
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್ನ ಅತ್ಯುನ್ನತ ಗೌರವ ಪ್ರದಾನ
Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ
Disaster: ಪೆರ್ಲದಲ್ಲಿ ಭಾರೀ ಬೆಂಕಿ ದುರಂತ; ಐದು ಅಂಗಡಿಗಳು ಸಂಪೂರ್ಣ ಭಸ್ಮ
Pegasus spyware ಬಗ್ಗೆ ಸುಪ್ರೀಂಕೋರ್ಟ್ ತನಿಖೆ ನಡೆಸಲಿ: ಸುರ್ಜೇವಾಲಾ
Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ
Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.