Ajit pawarಗೆ ಸಿಎಂ ಪಟ್ಟ; ಶಿಂಧೆ ಬಣದ 16 ಶಾಸಕರು ಅನರ್ಹ: ಉದ್ಧವ್ ಬಣದ ಬಾಂಬ್

Team Udayavani, Jul 3, 2023, 10:48 AM IST

Ajit Pawar To Replace Eknath Shinde: Team Uddhav

ಮುಂಬೈ: ಮಹಾರಾಷ್ಟ್ರ ರಾಜಕೀಯದಲ್ಲಿ ನಡೆದ ಮಹಾ ಟ್ವಿಸ್ಟ್ ನಲ್ಲಿ ನ್ಯಾಷಲಿಸ್ಟ್ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಶರದ್ ಪವಾರ್ ಸೋದರಳಿಯ ಅಜಿತ್ ಪವಾರ್ ಬಿಜೆಪಿ ಜೊತೆಗೆ ಕೈಜೋಡಿಸಿದ್ದಾರೆ. ರವಿವಾರ ನಡೆದ ರಾಜಕೀಯ ಬೆಳವಣಿಗೆಯಲ್ಲಿ ಅಜಿತ್ ಅವರು ಏಕನಾಥ್ ಶಿಂಧೆ ಸರ್ಕಾರದ ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.

ವರ್ಷದ ಹಿಂದೆ ಶಿವಸೇನೆಯನ್ನು ಇಬ್ಭಾಗ ಮಾಡಿ ಶಿಂಧೆ ಬಣದ ಸಹಾಯದಿಂದ ಸರ್ಕಾರ ಕಟ್ಟಿದ್ದ ಬಿಜೆಪಿ ಇದೀಗ ಮತ್ತೊಂದು ವಿರೋಧ ಪಕ್ಷ ಎನ್ ಸಿಪಿಯನ್ನು ಒಡೆದಿದೆ.

ಇಷ್ಟೆಲ್ಲಾ ಬೆಳವಣಿಗೆಗಳ ನಡುವೆ ಉದ್ಧವ್ ಠಾಕ್ರೆ ಬಣದ ಶಿವಸೇನೆಯು ಹೊಸ ಶಾಕಿಂಗ್ ವಿಚಾರವನ್ನು ಹೊರಹಾಕಿದೆ. ಶೀಘ್ರದಲ್ಲೇ ಮುಖ್ಯಮಂತ್ರಿ ಏಕನಾಥ್ ಶಿಂಧೆ ಸ್ಥಾನದಲ್ಲಿ ಅಜಿತ್ ಪವಾರ್ ಇರಲಿದ್ದಾರೆ ಎಂದಿದೆ.

ಶಿವಸೇನೆ ಮುಖವಾಣಿ ಸಾಮ್ನಾದಲ್ಲಿ ಈ ರೀತಿ ಬರೆಯಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ನೇತೃತ್ವದ ಭಾರತೀಯ ಜನತಾ ಪಕ್ಷ (ಬಿಜೆಪಿ) ಮಹಾರಾಷ್ಟ್ರದ ರಾಜಕೀಯವನ್ನು ಮಾತ್ರವಲ್ಲದೆ ದೇಶದ ರಾಜಕೀಯವನ್ನು ಕೆಸರು ಮಾಡಿದೆ ಎಂದಿದೆ.

ಅಜಿತ್ ಪವಾರ್ ಅವರು ಡಿಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿ ದಾಖಲೆ ಬರೆದಿದ್ದಾರೆ. ಈ ಬಾರಿ ‘ಡೀಲ್’ ದೊಡ್ಡದಾಗಿರಬೇಕು. ಪವಾರ್ ಅವರು ಡಿಸಿಎಂ ಹುದ್ದೆಗಾಗಿ ಹೋಗಿಲ್ಲ. ಸಿಎಂ ಏಕನಾಥ್ ಶಿಂಧೆ ಮತ್ತು ಶಿವಸೇನೆಯ ಬಂಡಾಯ ಅಭ್ಯರ್ಥಿಗಳನ್ನು ಶೀಘ್ರದಲ್ಲಿ ಅನರ್ಹ ಮಾಡಲಾಗುತ್ತದೆ. ಅಜಿತ್ ಪವಾರ್ ಗೆ ಪಟ್ಟಾಭಿಷೇಕ ಮಾಡಲಾಗುತ್ತದೆ ಎಂದು ಸಾಮ್ನಾದಲ್ಲಿ ಬರೆಯಲಾಗಿದೆ.

ಇದನ್ನೂ ಓದಿ:Gadar 2: ಸಿನಿಮಾ ರಿಲೀಸ್‌ಗೂ ಮುನ್ನ ನಿರ್ದೇಶಕರ ವಿರುದ್ದ ಗಂಭೀರ ಆರೋಪ ಮಾಡಿದ ನಟಿ ಅಮೀಶಾ

ಶಿಂಧೆ ಮತ್ತು ಇತರ ಶಾಸಕರು ಶಿವಸೇನೆಯನ್ನು ತೊರೆದಾಗ, ಅವರು ಪಕ್ಷದ ಅಧ್ಯಕ್ಷ ಮತ್ತು (ಅಂದಿನ) ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರು ನಿಧಿ ವಿತರಣೆ ಮತ್ತು ಕೆಲಸದ ಆದೇಶಗಳನ್ನು ಮಂಜೂರು ಮಾಡುವಲ್ಲಿ ಅಪಾರ ಹಿಡಿತವನ್ನು ಹೊಂದಿದ್ದ ಅಂದಿನ ಹಣಕಾಸು ಸಚಿವ ಅಜಿತ್ ಪವಾರ್ ಅವರನ್ನು ನಿಯಂತ್ರಿಸಲಿಲ್ಲ ಎಂದು ಹೇಳಿದ್ದರು. ಬಂಡಾಯ ಶಾಸಕರ ಪ್ರಕಾರ, ಅವರು ಪಕ್ಷ ತೊರೆಯಲು ಪ್ರಾಥಮಿಕ ಕಾರಣವೆಂದರೆ ಅದು ಎನ್‌ ಸಿಪಿ ಎಂದು ಸಂಪಾದಕೀಯ ಹೇಳಿದೆ.

ಇವರೆಲ್ಲಾ ಈಗ ಏನು ಮಾಡುತ್ತಾರೆ? ರವಿವಾರ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಶಿಂಧೆ ಬಣದ ಸಚಿವರ ಮುಖಚಹರೆಯಲ್ಲಿ ಮುಂದಿನ ದಿನಗಳ ಬಗ್ಗೆ ಸ್ಪಷ್ಟವಾಗಿ ಕಾಣುತ್ತಿತ್ತು ಎಂದು ಮರಾಠಿ ದಿನಪತ್ರಿಕೆ ಸಾಮ್ನಾ ಬರೆದಿದೆ.

ಟಾಪ್ ನ್ಯೂಸ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಯಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!

Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!

Mother-in-law gives HIV injection to daughter-in-law for not giving much dowry

ಹೆಚ್ಚು ವರದಕ್ಷಿಣೆ ನೀಡಲಿಲ್ಲವೆಂದು ಸೊಸೆಗೆ HIV ಸೋಂಕಿನ ಇಂಜೆಕ್ಷನ್‌ ನೀಡಿದ ಅತ್ತೆ ಮಾವ

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಯಾನಿಯ ಪ್ರಾರ್ಥನೆ

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.