Gadar 2: ಸಿನಿಮಾ ರಿಲೀಸ್‌ಗೂ ಮುನ್ನ ನಿರ್ದೇಶಕರ ವಿರುದ್ದ ಗಂಭೀರ ಆರೋಪ ಮಾಡಿದ ನಟಿ ಅಮೀಶಾ


Team Udayavani, Jul 3, 2023, 10:38 AM IST

Gadar 2: ಸಿನಿಮಾ ರಿಲೀಸ್‌ಗೂ ಮುನ್ನ ನಿರ್ದೇಶಕರ ವಿರುದ್ದ ಗಂಭೀರ ಆರೋಪ ಮಾಡಿದ ನಟಿ ಅಮೀಶಾ

ಮುಂಬಯಿ: ಸನ್ನಿ ಡಿಯೋಲ್ – ಅಮೀಶಾ ಪಟೇಲ್ ಅಭಿನಯದ ʼಗದರ್‌ -2ʼ ಸಿನಿಮಾ ತೆರೆಗೆ ಬರಲು ಸಿದ್ದವಾಗಿದೆ. 2001 ರಲ್ಲಿ ಬಂದ ʼಗದರ್‌ʼ ಬಾಲಿವುಡ್‌ ನಲ್ಲಿ ಸೂಪರ್‌ ಹಿಟ್‌ ಆಗಿತ್ತು. ತಾರಾ ಸಿಂಗ್ ಹಾಗೂ ಸಕೀನಾ ಜೋಡಿಯನ್ನು ಹೊಸ ಅವತಾರದಲ್ಲಿ ನೋಡಲು ಫ್ಯಾನ್ಸ್‌ ಗಳು ಕಾಯುತ್ತಿದ್ದಾರೆ.

ತನ್ನ ಹಾಟ್‌ ನೋಟವುಳ್ಳ ಫೋಟೋಗಳನ್ನು ಸೋಶಿಯಲ್‌ ಮೀಡಿಯಾದಲ್ಲಿ ಪೋಸ್ಟ್‌ ಮಾಡುವ ಮೂಲಕ ಸದಾ ಸುದ್ದಿಯಲ್ಲಿರುವ ನಟಿ ಅಮೀಶಾ ಪಟೇಲ್‌ ʼಗದರ್‌ -2ʼ ಸಿನಿಮಾ ರಿಲೀಸ್‌ ನ ಸನಿಹದಲ್ಲೇ ಚಿತ್ರದ ನಿರ್ದೇಶಕ ಹಾಗೂ ಪ್ರೊಡಕ್ಷನ್‌ ತಂಡದ ಮೇಲೆ ಕೆಲವೊಂದು ಆರೋಪಗಳನ್ನು ಮಾಡಿರುವುದು ಸದ್ದು ಮಾಡಿದೆ.

ನಿರ್ದೇಶಕ ಅನಿಲ್‌ ಶರ್ಮಾ ಹಾಗೂ ಪ್ರೊಡಕ್ಷನ್‌ ತಂಡ ಮಾಡಿದ ತಪ್ಪು ನಿರ್ವಹಣೆಯಿಂದ ಹಲವರಿಗೆ ಸಮಸ್ಯೆಯಾಗಿದೆ ಎಂದು ಸರಣಿ ಟ್ವೀಟ್‌ ಮಾಡಿ ಹೇಳಿದ್ದಾರೆ.

ಮೇಕಪ್ ಕಲಾವಿದರು, ವಸ್ತ್ರ ವಿನ್ಯಾಸಕರು ಮತ್ತು ಅನೇಕ ತಂತ್ರಜ್ಞರು ಅನಿಲ್ ಶರ್ಮಾ ಪ್ರೊಡಕ್ಷನ್ಸ್‌ನಿಂದ ತಮ್ಮ ಸರಿಯಾದ ಸಂಭಾವನೆ ಮತ್ತು ಬಾಕಿಯನ್ನು ಪಡೆದಿಲ್ಲ. ಜೀ ಸ್ಟುಡಿಯೋಸ್ ವೃತ್ತಿಪರ ಕಂಪನಿಯಾಗಿರುವುದರಿಂದ ಎಲ್ಲಾ ಬಾಕಿಗಳನ್ನು ಇತ್ಯರ್ಥಗೊಳಿಸಿದ್ದಾರೆ ಎಂದು ಟ್ವೀಟ್‌ ಮಾಡಿದ್ದಾರೆ.

ವಸತಿಯಿಂದ ಹಿಡಿದು, ಅಂತಿಮ ದಿನ ಚಂಡೀಗಢ ವಿಮಾನ ನಿಲ್ದಾಣದಲ್ಲಿ  ಆಹಾರದ ಬಿಲ್‌ಗಳನ್ನು ಪಾವತಿಸದೆ ಬಿಡಲಾಯಿತು ಮತ್ತು ಕೆಲವು ಪಾತ್ರವರ್ಗ ಮತ್ತು ಸಿಬ್ಬಂದಿ ಸದಸ್ಯರಿಗೆ ಕಾರುಗಳನ್ನು ಒದಗಿಸಲಾಗಿಲ್ಲ, ಆದರೆ ಮತ್ತೊಮ್ಮೆ ಜೀ ಸ್ಟುಡಿಯೋಸ್ ಮಧ್ಯ ಪ್ರವೇಶಿಸಿ ಅನಿಲ್ ಶರ್ಮಾ ಪ್ರೊಡಕ್ಷನ್ಸ್‌ನಿಂದ ಉಂಟಾದ ಈ ಸಮಸ್ಯೆಗಳನ್ನು ಸರಿಪಡಿಸಿದೆ ಎಂದು ಟ್ವೀಟ್‌ ಮೂಲಕ ಹೇಳಿದ್ದಾರೆ.

ಎಲ್ಲಾ ಸಮಸ್ಯೆಗಳನ್ನು ಸಮಯಕ್ಕೆ ಸರಿಯಾಗಿ ಇತ್ಯರ್ಥಪಡಿಸಿದ್ದಕ್ಕಾಗಿ ನಟಿ ಜೀ ಸ್ಟುಡಿಯೋಸ್‌ಗೆ ಧನ್ಯವಾದ ಹೇಳಿದ್ದಾರೆ. ಶಾರಿಕ್ ಪಟೇಲ್, ನೀರಜ್ ಜೋಶಿ, ಕಬೀರ್ ಘೋಷ್ ಮತ್ತು ನಿಶ್ಚಿತ್ ಅವರಿಗೆ ವಿಶೇಷವಾಗಿ ಧನ್ಯವಾದವನ್ನು ನಟಿ ಹೇಳಿದ್ದಾರೆ.

ಟೀಸರ್‌ ನಿಂದ ಸಿಕ್ಕಾಪಟ್ಟೆ ಸದ್ದು ಮಾಡಿರುವ ʼಗದರ್-2‌ʼ ಇದೇ ಆಗಸ್ಟ್‌ 11 ರಂದು ತೆರೆಗೆ ಬರಲಿದೆ.

ಟಾಪ್ ನ್ಯೂಸ್

CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿದ್ದರಾಮಯ್ಯ

CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿಎಂ ಸಿದ್ದರಾಮಯ್ಯ

Udupi: ಭಗವದ್ಗೀತೆ ಜೀವನದ ಭಾಗವಾಗಲಿ: ಸುಬ್ರಹ್ಮಣ್ಯ ಶ್ರೀ

Udupi: ಭಗವದ್ಗೀತೆ ಜೀವನದ ಭಾಗವಾಗಲಿ: ಸುಬ್ರಹ್ಮಣ್ಯ ಶ್ರೀ

Yathanal

Winter Session: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ; ಶಾಸಕ ಯತ್ನಾಳ್‌ ಆಕ್ರೋಶ

BY-Vijayendra

Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ

1-deee

Allu Arjun ನಿವಾಸದಲ್ಲಿ ದಾಂಧಲೆ!; 8 ಮಂದಿ ಬಂಧನ: ಕೃತ್ಯ ಎಸಗಿದ್ದು ಯಾರು?

sullia

Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ

Baduta-Mandya

Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Year Ender 2024: ಈ ವರ್ಷ ಅತೀ ಹೆಚ್ಚು ಗಳಿಕೆ ಕಂಡ ಭಾರತೀಯ ಸಿನಿಮಾಗಳ ಪಟ್ಟಿ ಇಲ್ಲಿದೆ..

Year Ender 2024: ಈ ವರ್ಷ ಅತೀ ಹೆಚ್ಚು ಗಳಿಕೆ ಕಂಡ ಭಾರತೀಯ ಸಿನಿಮಾಗಳ ಪಟ್ಟಿ ಇಲ್ಲಿದೆ..

10

Year Ender: Horror movies-2024 ರ ಟಾಪ್‌ 5 ಹಾರರ್ ಚಲನಚಿತ್ರಗಳು

Atlee to collaborate with Salman Khan

Atlee Kumar; ಸಲ್ಮಾನ್‌ ಖಾನ್‌ ಜತೆಗೆ ಅಟ್ಲಿ ಸಿನಿಮಾ

15

Bollywood: ಬಾಲಿವುಡ್‌ ನಟ ಶಾಹಿದ್‌ ಕಪೂರ್‌ ಜತೆ ರಶ್ಮಿಕಾ ರೊಮ್ಯಾನ್ಸ್: ಯಾವ ಸಿನಿಮಾ?  

‌Actress: 31 ವರ್ಷದ ನಟಿಗೆ 71 ವರ್ಷದ ಹಿರಿಯ ನಟನ ಜತೆ ಪ್ರೀತಿ..? ಫೋಟೋ ವೈರಲ್

‌Actress: 31ರ ನಟಿಗೆ 71 ವರ್ಷದ ಹಿರಿಯ ನಟನ ಜತೆ ಪ್ರೀತಿ..? ಫೋಟೋ ವೈರಲ್

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿದ್ದರಾಮಯ್ಯ

CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿಎಂ ಸಿದ್ದರಾಮಯ್ಯ

1-max

Max; ಟ್ರೈಲರ್ ಬಿಡುಗಡೆ: ಭರ್ಜರಿ ಲುಕ್ ನಲ್ಲಿ ಕಿಚ್ಚ!

Udupi: ಭಗವದ್ಗೀತೆ ಜೀವನದ ಭಾಗವಾಗಲಿ: ಸುಬ್ರಹ್ಮಣ್ಯ ಶ್ರೀ

Udupi: ಭಗವದ್ಗೀತೆ ಜೀವನದ ಭಾಗವಾಗಲಿ: ಸುಬ್ರಹ್ಮಣ್ಯ ಶ್ರೀ

Yathanal

Winter Session: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ; ಶಾಸಕ ಯತ್ನಾಳ್‌ ಆಕ್ರೋಶ

sand 1

Padubidri: ಮರಳು ಅಕ್ರಮ ಸಾಗಾಟ; ವಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.