![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, Jul 4, 2023, 8:00 AM IST
ನವದೆಹಲಿ: ವಿದೇಶಗಳನ್ನು ಸುತ್ತಬೇಕೆಂಬ ಆಸೆ ಯಾರಿಗಿರುವುದಿಲ್ಲ ಹೇಳಿ? ಆದರೆ ದುಬಾರಿಯಾದ ವಿಮಾನ ಪ್ರಯಾಣದ ಬದಲು, ವಿದೇಶಗಳಿಗೂ ರಸ್ತೆ ಪ್ರಯಾಣವಿದ್ದಿದ್ದರೆ ಚೆನ್ನಾಗಿರುತ್ತಿತ್ತು ಎನ್ನುವ ಭಾವವೂ ಮೂಡಿರಬಹುದಲ್ಲವೇ? ಈ ಕನಸು ಇನ್ನೇನು 2-3 ವರ್ಷಗಳಲ್ಲೇ ಸಾಕಾರಗೊಳ್ಳಲಿದೆ.. ನೆರೆರಾಷ್ಟ್ರ ಥಾಯ್ಲೆಂಡ್‌ಗೆ ನೀವು ಭಾರತದಿಂದ ರಸ್ತೆ ಮೂಲಕವೇ ಸಂಚರಿಸಬಹುದಾಗಿದ್ದು, ಈಗಾಗಲೇ ಈ ರಸ್ತೆ ಕಾಮಗಾರಿ ಶೇ.70ರಷ್ಟು ಪೂರ್ಣಗೊಂಡಿದೆ.
ಹೌದು, ಈ ಕುರಿತಂತೆ ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಮಾಹಿತಿ ನೀಡಿದ್ದಾರೆ. ಆ ಪ್ರಕಾರ, 1,400 ಕಿ.ಮೀ ಉದ್ದದ ಭಾರತ-ಮ್ಯಾನ್ಮಾರ್-ಥಾಯ್ಲೆಂಡ್ ರಾಷ್ಟ್ರೀಯ ಹೆದ್ದಾರಿಯ ಕಾಮಗಾರಿ ಇನ್ನೇನು ಬಹುಪಾಲು ಸಂಪೂರ್ಣಗೊಂಡಿದೆ. ಶೀಘ್ರವೇ ಇದನ್ನು ಪೂರ್ಣಗೊಳಿಸಿ, ಸೇವೆಗೆ ಲಭ್ಯಗೊಳಿಸುವುದಾಗಿ ಗಡ್ಕರಿ ತಿಳಿಸಿದ್ದಾರೆ.
ವಾಜಪೇಯಿ ಕನಸಿನ ಸ್ನೇಹ ಸೇತುವೆ:
ಭಾರತ ಹಾಗೂ ಮ್ಯಾನ್ಮಾರ್ ನಡುವೆ ಸ್ನೇಹ ಪೂರ್ವಕವಾಗಿ ಈ ಹೆದ್ದಾರಿ ನಿರ್ಮಿಸಲು ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ನೇತೃತ್ವದಲ್ಲಿ 2022ರಲ್ಲಿ ಭಾರತ-ಮ್ಯಾನ್ಮಾರ್-ಥಾಯ್ಲೆಂಡ್ ಸಚಿವರ ಮಟ್ಟದ ಮಾತುಕತೆ ಪೂರ್ಣಗೊಳಿಸಲಾಯಿತು. ಬಳಿಕ 2019ರ ವೇಳೆಗೆ ಕಾಮಗಾರಿ ಪೂರ್ಣಗೊಳಿಸಲು ಭಾರತ ಯೋಜಿಸಿತ್ತು. ಆದರೆ ಕಾರಣಾಂತರಗಳಿಂದ ಕಾಮಗಾರಿ ವಿಳಂಬವಾಗಿತ್ತು. ಇದೀಗ ಮತ್ತೆ ಕಾಮಗಾರಿ ವೇಗ ಪಡೆದುಕೊಂಡಿದೆ.
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
You seem to have an Ad Blocker on.
To continue reading, please turn it off or whitelist Udayavani.