ಕಂಡಿಷನ್ ಇಲ್ಲದೆ ವಿವಿಧ ಗ್ಯಾರಂಟಿಗಳ ಅನುಷ್ಠಾನಕ್ಕೆ ಆಗ್ರಹಿಸಿ ಬಿಜೆಪಿ ಬೃಹತ್ ಪ್ರತಿಭಟನೆ
Team Udayavani, Jul 4, 2023, 1:09 PM IST
ಬೆಂಗಳೂರು: ರಾಜ್ಯದ ಕಾಂಗ್ರೆಸ್ ಸರಕಾರವು ತನ್ನ ಪ್ರಣಾಳಿಕೆಯಲ್ಲಿ ತಿಳಿಸಿದಂತೆ ಕಂಡಿಷನ್ ಇಲ್ಲದೆ ಗ್ಯಾರಂಟಿ ಜಾರಿ ಮಾಡಲು ಆಗ್ರಹಿಸಿ ಬಿಜೆಪಿ ವತಿಯಿಂದ ನಗರದಲ್ಲಿ ಇಂದು ಬೃಹತ್ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿತ್ತು.
ಬೆಂಗಳೂರು ಮಹಾನಗರ ಬಿಜೆಪಿ ಘಟಕಗಳ ವತಿಯಿಂದ “ಸ್ವಾತಂತ್ರ್ಯ ಉದ್ಯಾನವನ’ ದಲ್ಲಿ ಬೃಹತ್ ಪ್ರತಿಭಟನೆ ನಡೆಯಿತು. ವಿದ್ಯುತ್ ದರ ಹೆಚ್ಚಳವನ್ನು ಯಥಾಸ್ಥಿತಿಗೆ ತರಬೇಕು; 10 ಕೆಜಿ ಅಕ್ಕಿ ಕೊಡುವ ಭರವಸೆಯನ್ನು ಯಥಾವತ್ ಜಾರಿ ಮಾಡಬೇಕು ಎಂದು ಆಗ್ರಹಿಸಲಾಯಿತು. ಕಾಂಗ್ರೆಸ್ ಸರಕಾರದ ಸುಳ್ಳು ಭರವಸೆಗಳ ವಿರುದ್ಧ ಘೋಷಣೆ ಕೂಗಲಾಯಿತು.
ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಸಂಸದ ನಳಿನ್ಕುಮಾರ್ ಕಟೀಲ್, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಸಂಸದ ಡಿ.ವಿ. ಸದಾನಂದಗೌಡ, ಮಾಜಿ ಸಭಾಪತಿ ವಿಶ್ವೇಶ್ವರ ಹೆಗಡೆ ಕಾಗೇರಿ, ಮಾಜಿ ಸಚಿವರಾದ ಗೋವಿಂದ ಕಾರಜೋಳ, ಮುರುಗೇಶ್ ನಿರಾಣಿ, ಬಿ.ಸಿ.ನಾಗೇಶ್, ಹಾಲಪ್ಪ ಆಚಾರ್, ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಎನ್.ರವಿಕುಮಾರ್, ಸಿದ್ದರಾಜು, ಮಾಜಿ ಶಾಸಕ ಎನ್.ಮಹೇಶ್, ಒಬಿಸಿ ಮೋರ್ಚಾ ರಾಜ್ಯ ಅಧ್ಯಕ್ಷ ನೆ.ಲ.ನರೇಂದ್ರ ಬಾಬು, ಮುಖಂಡರಾದ ತಾರಾ ಅನುರಾಧಾ, ಮಾಜಿ ಸಚಿವರು, ಸಂಸದರು, ಶಾಸಕರು, ವಿಧಾನಪರಿಷತ್ ಸದಸ್ಯರು ಮತ್ತು ಪಕ್ಷದ ಪದಾಧಿಕಾರಿಗಳು, ಕಾರ್ಯಕರ್ತರು ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Guarantee schemes; ಸಿದ್ದರಾಮಯ್ಯ ವಿರುದ್ಧದ ಅರ್ಜಿ: ವಿಚಾರಣೆ ಡಿ. 6ಕ್ಕೆ ಮುಂದೂಡಿಕೆ
Congress: ಸರ್ಕಾರದಲ್ಲಿ ಒಬ್ಬರು ಏತಿ ಅಂದರೆ ಮತ್ತೊಬ್ಬರು ಪ್ರೇತಿ ಅಂತಾರೆ: ಆರ್.ಅಶೋಕ್
50 cr for 50 Cong MLAs ; ಎಸ್ ಐಟಿ ತನಿಖೆಗೆ ಎಚ್.ಡಿ.ಕುಮಾರಸ್ವಾಮಿ ಒತ್ತಾಯ
Save Life: ಆಯತಪ್ಪಿ ಬಿದ್ದು ರೈಲಿನಡಿ ಸಿಲುಕುತ್ತಿದ್ದ ಪ್ರಯಾಣಿಕನ ಕಾಪಾಡಿದ ಹೋಂಗಾರ್ಡ್!
Belagavi: ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸ್ಥಿತಿ ಬರಲಿದೆ: ಈರಣ್ಣ ಕಡಾಡಿ
MUST WATCH
ಹೊಸ ಸೇರ್ಪಡೆ
Thiruvananthapuram: ಶಬರಿಮಲೆ ಅಯ್ಯಪ್ಪ ಸ್ವಾಮಿ ದರ್ಶನ, ಮಂಡಲ ಪೂಜೆ ಶುರು
Maharashtra: ಲೈಂಗಿಕ ಕಿರುಕುಳ ನೀಡುವವರ ಪರ ಬಿಜೆಪಿ ಪ್ರಚಾರ: ಉದ್ಧವ್ ಠಾಕ್ರೆ
Congress: ರಾಹುಲ್ಗೆ ಸಂವಿಧಾನದ ಎಬಿಸಿ ಕೂಡ ಗೊತ್ತಿಲ್ಲ: ಸಚಿವ ಜೆ.ಪಿ.ನಡ್ಡಾ ಟೀಕೆ
Maharashtra Election: ಮಲ್ಲಿಕಾರ್ಜುನ ಖರ್ಗೆ ಬಳಿಕ ಯೋಗಿ ವಿರುದ್ಧ ಶರದ್ ಪವಾರ್ ಟೀಕೆ
Rahul Gandhi; ಕಾಪ್ಟರ್ ಟೇಕಾಫ್ ವಿಳಂಬ: ಕಾಂಗ್ರೆಸ್ನಿಂದ ಆಕ್ಷೇಪ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.