Maharashtra: ಕಾರಿಗೆ ಕಂಟೈನರ್ ಟ್ರಕ್ ಡಿಕ್ಕಿ; 10 ಮಂದಿ ಸಾವು; 20 ಮಂದಿಗೆ ಗಾಯ
Team Udayavani, Jul 4, 2023, 2:39 PM IST
ಮುಂಬಯಿ: ಕಂಟೈನರ್ ಟ್ರಕ್ ವೊಂದು ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಕನಿಷ್ಠ 10 ಮಂದಿ ಸಾವನ್ನಪ್ಪಿದ್ದಾರೆ ಮತ್ತು 20 ಕ್ಕೂ ಹೆಚ್ಚು ಜನರು ಗಾಯಗೊಂಡ ಘಟನೆ ಮುಂಬೈ ಧುಲೆ ಜಿಲ್ಲೆಯ ಮುಂಬೈ-ಆಗ್ರಾ ಹೆದ್ದಾರಿಯಲ್ಲಿ ಮಂಗಳವಾರ ನಡೆದಿದೆ.
ಮುಂಬೈನಿಂದ 300 ಕಿಲೋಮೀಟರ್ ದೂರದಲ್ಲಿರುವ ಧುಲೆಯ ಮುಂಬೈ-ಆಗ್ರಾ ಹೆದ್ದಾರಿಯ ಪಲಾಸ್ನರ್ ಗ್ರಾಮದ ಬಳಿ ಈ ಅಪಘಾತ ಸಂಭವಿಸಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಸುದ್ದಿ ಸಂಸ್ಥೆ ಪಿಟಿಐಗೆ ತಿಳಿಸಿದ್ದಾರೆ.
ಟ್ರಕ್ ಮಧ್ಯಪ್ರದೇಶದಿಂದ ಧುಲೆ ಕಡೆಗೆ ಸಂಚರಿಸುತ್ತಿತ್ತು ಎನ್ನಲಾಗಿದೆ. ಟ್ರಕ್ ನ ಚಾಲಕ ಅತೀ ವೇಗದಲ್ಲಿ ಬಂದು ಕಾರಿಗೆ ಡಿಕ್ಕಿ ಹೊಡೆದು ನಂತರ ಬಸ್ ನಿಲ್ದಾಣದಲ್ಲಿ ಬಸ್ಸಿಗಾಗಿ ಕಾಯುತ್ತಿದ್ದವರಿಗೆ ಡಿಕ್ಕಿ ಹೊಡೆದ ಪರಿಣಾಮ ಸಾವಿನ ಸಂಖ್ಯೆ ಹೆಚ್ಚಾಗಿದೆ ಎಂದು ತಿಳಿದುಬಂದಿದೆ.
ಟ್ರಕ್ ನ ಚಾಲಕನ ನಿರ್ಲಕ್ಷ್ಯದಿಂದ ಅಪಘಾತ ಸಂಭವಿಸಿದೆ ಎಂದು ಹೇಳಲಾಗಿದೆ.
ಘಟನೆ ಕುರಿತು ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದಾರೆ. ಗಾಯಾಳುಗಳನ್ನು ಶಿರ್ಪುರ ಮತ್ತು ಧುಲೆ ಆಸ್ಪತ್ರೆಗಳಿಗೆ ರವಾನಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.