ಶೂ ಕದ್ದವರಿಗೆ ಏಳು ವರ್ಷ ಜೈಲು
Team Udayavani, Jul 6, 2023, 7:37 AM IST
ಚಂಡೀಗಢ: ಶೂ ಶೋರೂಂ ಒಂದಕ್ಕೆ ಲಗ್ಗೆಇಟ್ಟು, ಮಾಲಿಕರ ನೆತ್ತಿಗೆ ಗನ್ ಇಟ್ಟು 4 ಜತೆ ಶೂ ಗಳನ್ನು ದೋಚಿ ಪರಾರಿಯಾಗಿದ್ದ ಖದೀಮರಿಬ್ಬರಿಗೆ ಹರ್ಯಾಣದ ನ್ಯಾಯಾಲಯವೊಂದು 7 ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ.
2 ವರ್ಷಗಳ ಹಿಂದೆ ಅಂದರೆ, 2021ರಂದು ಹರ್ಯಾಣದ ರೇವರಿ ನಗರದಲ್ಲಿ ಅಶೋಕ್ ಕುಮಾರ್ ಎಂಬವರ ಶೂ ಅಂಗಡಿಯನ್ನು ಖದೀಮರು ಲೂಟಿ ಗೈದಿದ್ದರು. ಬೈಕ್‌ನಲ್ಲಿ ಬಂದಿದ್ದ ದುಷ್ಕರ್ಮಿಗಳು ಅಶೋಕ್ ಅವರಿಗೆ ಪಿಸ್ತೂಲು ತೋರಿಸಿ ಹೆದರಿಸಿ, ತಲಾ 8,000 ರೂ. ಮೌಲ್ಯದ 4 ಜೊತೆ ಶೂ ಗಳನ್ನು ಕದ್ದಿದ್ದರು.
ಘಟನೆ ನಡೆದ ಕೆಲವೇ ಗಂಟೆಗಳಲ್ಲಿ ದುಷ್ಮರ್ಮಿಗಳನ್ನು ಬಂಧಿಸಲಾಗಿತ್ತಾದರೂ, ಸಾಕ್ಷ್ಯಾಧಾರಗಳನ್ನು ಪರಿಗಣಿಸಿ ಅವರಿಗೀಗ ಶಿಕ್ಷೆ ವಿಧಿಸಲಾಗಿದೆ. 7 ವರ್ಷದ ಜೈಲುವಾಸದ ಜತೆಗೆ 41 ಸಾವಿರ ರೂ.ದಂಡ ವಿಧಿಸಲಾಗಿದೆ. ದಂಡ ಪಾವತಿಸದೇ ಇದ್ದಲ್ಲಿ ಹೆಚ್ಚುವರಿ 6 ತಿಂಗಳ ಸೆರೆವಾಸ ಅನುಭವಿಸಬೇಕಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?
Mahayuti ಗೆಲುವು: ಆ್ಯಕ್ಸಿಸ್ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ
Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ
Adani ಬಂಧಿಸಿ, ಸೆಬಿ ಮುಖ್ಯಸ್ಥೆ ವಜಾ ಮಾಡಿ: ರಾಹುಲ್ ಪಟ್ಟು
MUST WATCH
ಹೊಸ ಸೇರ್ಪಡೆ
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
BBK11: ಸೆಡೆಗಳನ್ನೆಲ್ಲ ಕಳ್ಸಿಯೇ ನಾನು ಮನೆಗೆ ಹೋಗೋದು- ಮತ್ತೆ ಗುಡುಗಿದ ರಜತ್
Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ
Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ
ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.