ಪ್ರಯಾಣಿಕನಿಂದ 41.78 ಲಕ್ಷ ರೂ. ಕಾಳಧನ ವಶಕ್ಕೆ
Team Udayavani, Jul 6, 2023, 5:46 AM IST
ಮಂಜೇಶ್ವರ: ಬಸ್ ಪ್ರಯಾಣಿಕನಿಂದ 41.78 ಲಕ್ಷ ರೂ. ಕಾಳಧನವನ್ನು ವಶಪಡಿಸಿಕೊಂಡಿದ್ದು, ಈ ಸಂಬಂಧ ಕರ್ನಾಟಕ ಹೊನ್ನಾವರ ನಿವಾಸಿ ಪ್ರಕಾಶ್ ವಿನಯ್ ಶೇs… (45)ನನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.
ಬುಧವಾರ ಬೆಳಗ್ಗೆ ಸುಮಾರು 7 ಗಂಟೆಗೆ ಮಂಜೇಶ್ವರ ಚೆಕ್‌ಪೋಸ್ಟ್‌ನಲ್ಲಿ ಅಬಕಾರಿ ಇನ್ಸ್‌ಪೆಕ್ಟರ್ ಎಂ.ಯೂನಸ್ ನೇತೃತ್ವದಲ್ಲಿ ನಡೆಸಿದ ವಾಹನ ತಪಾಸಣೆ ಸಂದರ್ಭದಲ್ಲಿ ಕಾಳಧನ ಪತ್ತೆಯಾಯಿತು. ಬಸ್‌ನಲ್ಲಿ ಕಾಳಧನ ಸಾಗಿಸುತ್ತಿರುವ ಬಗ್ಗೆ ಲಭಿಸಿದ ರಹಸ್ಯ ಮಾಹಿತಿಯಂತೆ ಅಬಕಾರಿ ಅಧಿಕಾರಿಗಳು ಕಾರ್ಯಾಚರಣೆ ನಡೆಸಿದ್ದರು. ಮಂಗಳೂರಿನಿಂದ ಕಾಸರಗೋಡಿಗೆ ಪ್ರಯಾಣಿಸುತ್ತಿದ್ದ ಕರ್ನಾಟಕ ಕೆಎಸ್‌ಆರ್‌ಟಿಸಿ ಬಸ್‌ನಿಂದ ಕಾಳಧನ ವಶಪಡಿಸಲಾಗಿದೆ.
ಬಸ್‌ನ ಸೀಟಿನಡಿಯಲ್ಲಿ ಇಟ್ಟಿದ್ದ ಬ್ಯಾಗ್‌ನಿಂದ ಹಣ ಪತ್ತೆಯಾಗಿದೆ. ಈ ಹಣದ ಬಗ್ಗೆ ಯಾವುದೇ ಮಾಹಿತಿ ನೀಡಿಲ್ಲ ಎಂದು ಅಬಕಾರಿ ಅಧಿಕಾರಿಗಳು ತಿಳಿಸಿದ್ದಾರೆ. ವಶಕ್ಕೆ ತೆಗೆದುಕೊಂಡ ಪ್ರಕಾಶ್ ವಿನಯ್ ಶೇಖ್‌ನನ್ನು ಹಾಗು ಹಣವನ್ನು ಮಂಜೇಶ್ವರ ಪೊಲೀಸರಿಗೆ ಹಸ್ತಾಂತರಿಸಲಾಗಿದೆ. ಕಾಸರಗೋಡು ಅಥವಾ ಕಾಂಞಂಗಾಡ್‌ಗೆ ತಲುಪಿದಾಗ ಫೋನ್ ಕರೆ ಬರುತ್ತದೆ. ಆಗ ತಿಳಿಸುವ ವ್ಯಕ್ತಿಗೆ ಈ ಹಣವನ್ನು ನೀಡುವಂತೆ ತನ್ನಲ್ಲಿ ತಿಳಿಸಲಾಗಿತ್ತೆಂದು ಪ್ರಕಾಶ್ ವಿನಯ್ ಶೇಖ್ ಹೇಳಿದ್ದಾನೆ.
ಪ್ರಿವೆಂಟೀವ್ ಆಫೀಸರ್‌ಗಳಾದ ಜನಾರ್ದನನ್, ಸುರೇಶ್ ಬಾಬು, ಸಿವಿಲ್ ಅಬಕಾರಿ ಅಧಿಕಾರಿಗಳಾದ ಮುಹಮ್ಮದ್ ಇಜಾಸ್, ಮಂಜುನಾಥನ್, ಅಖೀಲೇಶ್ ಮೊದಲಾದವರು ಕಾರ್ಯಾಚರಣೆ ತಂಡದಲ್ಲಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kasaragod: ಯೂತ್ ಕಾಂಗ್ರೆಸ್ ಕಾರ್ಯಕರ್ತರಿಬ್ಬರ ಕೊಲೆ; ಇಂದು ಶಿಕ್ಷೆ ಪ್ರಮಾಣ ಘೋಷಣೆ
Madikeri: ದೇಗುಲದಲ್ಲಿ ಸಮಾನತೆಯೇ ಉದ್ದೇಶ ; ಕಟ್ಟೆಮಾಡಿನ ಶ್ರೀ ಮಹಾ ಮೃತ್ಯುಂಜಯ ವಿವಾದ
Kasaragod: ವೈದ್ಯಕೀಯ ಕಾಲೇಜು ಆಗಿ ಭಡ್ತಿಗೊಳ್ಳಲಿರುವ ಕಾಸರಗೋಡು ಜಿಲ್ಲಾ ಜನರಲ್ ಆಸ್ಪತ್ರೆ
Kodagu: ಯೋಧ ದಿವಿನ್ ಪಂಚಭೂತಗಳಲ್ಲಿ ಲೀನ
Kasaragod ಅಪರಾಧ ಸುದ್ದಿಗಳು: ಅಂಗಡಿಗೆ ಲಾರಿ ಢಿಕ್ಕಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ನಾನು ಶೀಶಮಹಲ್ ಕಟ್ಟಿಲ್ಲ, ಜನರಿಗೆ ಮನೆ ಕಟ್ಟಿಸಿದ್ದೇನೆ: ಕೇಜ್ರಿವಾಲ್ ಗೆ ಮೋದಿ ಟಾಂಗ್
Venur; ಚಿರತೆ ಓಡಾಟ; ಸಾರ್ವಜನಿಕರಲ್ಲಿ ಆತಂಕ; ಅರಣ್ಯಾಧಿಕಾರಿ- ಸಾರ್ವಜನಿಕರ ಸಭೆ
Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ
Governor: ಮಣಿಪುರದ 19 ನೇ ರಾಜ್ಯಪಾಲರಾಗಿ ಅಜಯ್ ಭಲ್ಲಾ ಪ್ರಮಾಣ ವಚನ ಸ್ವೀಕಾರ
Bidar; ಗುತ್ತಿಗೆದಾರ ಸಚಿನ್ ಕೇಸ್; ತನಿಖೆ ಆರಂಭಿಸಿದ ಸಿಐಡಿ ತಂಡ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.