ಕಾಡುಪ್ರಾಣಿಗಳ ಕಾಟ, ಕಣ್ಮುಚ್ಚಿದ ಇಲಾಖೆ!


Team Udayavani, Jul 6, 2023, 2:49 PM IST

ಕಾಡುಪ್ರಾಣಿಗಳ ಕಾಟ, ಕಣ್ಮುಚ್ಚಿದ ಇಲಾಖೆ!

ಯಳಂದೂರು: ಯಳಂದೂರು ತಾಲೂಕು ಅರಣ್ಯ ಪ್ರದೇಶದಿಂದಲೇ ಹೆಚ್ಚು ಆವೃತವಾಗಿದೆ. ಇಲ್ಲಿನ ಅನೇಕ ಗ್ರಾಮಗಳು ಬಿಆರ್‌ಟಿ ಹುಲಿ ರಕ್ಷಿತ ಅರಣ್ಯ ಪ್ರದೇಶ ವ್ಯಾಪ್ತಿಗೆ ಬರಲಿದ್ದು ಕಾಡು ಪ್ರಾಣಿಗಳ ಉಪಟಳಕ್ಕೆ ನಿತ್ಯ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಅದರಲ್ಲೂ ಕೃಷಿಭೂಮಿಯ ಹೆಚ್ಚು ಭಾಗ ಅರಣ್ಯದಂಚಿನಲ್ಲೇ ಇದೆ.

ಇತ್ತೀಚೆಗೆ ಈ ಭಾಗದಲ್ಲಿ ಕಾಡುಪ್ರಾಣಿಗಳ ಉಪಟಳ ಹೆಚ್ಚಾಗುತ್ತಿದ್ದು ಇದರಿಂದ ರೈತರು ಪರದಾಡುವ ಸ್ಥಿತಿಯಿದೆ. ತಾಲೂಕಿನ ಗೌಡಹಳ್ಳಿ, ಮಲಾರಪಾಳ್ಯ ಯರಗಂಬಳ್ಳಿ, ಗುಂಬಳ್ಳಿ, ದಾಸನಹುಂಡಿ, ಗಂಗವಾಡಿ, ಆಲ್ಕೆರೆ ಅಗ್ರಹಾರ ಸೇರಿ ಅನೇಕ ಗ್ರಾಮಗಳ ರೈತರು ಕಾಡುಪ್ರಾಣಿಗಳ ಭಯದಿಂದಲೇ ತಮ್ಮ ಬೆಳೆಗಳನ್ನು ಸಂರಕ್ಷಿಸಿಕೊಳ್ಳಲು ಇನ್ನಿಲ್ಲದೇ ಪರದಾಡುತ್ತಿದ್ದಾರೆ.

ಫ‌ಸಲಿನ ಮೇಲೆ ನಿತ್ಯ ದಾಳಿ: ಮುರಿದು ಬಿದ್ದ ಸೋಲಾರ್‌ ಬೇಲಿ, ಮುಚ್ಚಿದ ಕಂದಕ: ಅರಣ್ಯದಂಚಿನಲ್ಲಿ ಅರಣ್ಯ ಇಲಾಖೆ ವತಿಯಿಂದ ಸೋಲಾರ್‌ ಬೇಲಿಯನ್ನು ನಿರ್ಮಾಣ ಮಾಡಲಾಗಿದ್ದು ಇದು ಅನೇಕ ಕಡೆ ಮುರಿದು ಬಿದ್ದಿದೆ. ಗೌಡಹಳ್ಳಿ ಸೇರಿ ಅನೇಕ ಕಡೆ ಆನೆ ಕಂದಕಗಳೂ ಮುಚ್ಚಿ ಹೋಗಿವೆ. ಇಲ್ಲಿಂದ ಆನೆ, ಜಿಂಕೆ, ಕಡವೆ, ಕಾಡುಹಂದಿ ಸೇರಿ ಕಾಡುಪ್ರಾಣಿಗಳು ರೈತರ ಬೆಳೆಗಳ ಮೇಲೆ ನಿತ್ಯ ದಾಳಿ ಮಾಡುತ್ತಿದ್ದು ಫ‌ಸಲು ಹಾಳಾಗುತ್ತಿದೆ.

ಗಸ್ತಿನ ಪಾಳಿಯನ್ನು ಕೂಡಲೇ ಸರಿಪಡಿಸಲು ಮುಂದಾಗಿ: ಈ ಪ್ರದೇಶದಲ್ಲಿ ಪ್ರತಿ ರೈತರ ಜಮೀನುಗಳಿಗೂ ಪ್ರತಿನಿತ್ಯ ಕಾಡುಪ್ರಾಣಿಗಳು ಬಂದು ಉಪಟಳ ನೀಡುತ್ತಿವೆ. ಇಲ್ಲಿನ ಬಾಳೆ, ಮುಸುಕಿನ ಜೋಳ, ತೆಂಗು, ಮಾವು, ಟೊಮೆಟೋ ಸೇರಿದಂತೆ ಎಲ್ಲಾ ಬೆಳೆಗಳನ್ನು ನಾಶ ಮಾಡುತ್ತಿವೆ. ಇಲ್ಲಿ ಅರಣ್ಯ ಇಲಾಖೆ ಹಾಕಿರುವ ಸೋಲಾರ್‌ ತಂತಿ ಬೇಲಿ ಕಿತ್ತು ಬಂದಿದೆ. ಕಂದಕಗಳು ಮುಚ್ಚಿವೆ, ಅರಣ್ಯ ಇಲಾಖೆ ಸಿಬ್ಬಂದಿ ರಾತ್ರಿ ಗಸ್ತಿನ ಪಾಳಿಯನ್ನು ಸರಿಯಾಗಿ ನಿರ್ವಹಿಸುತ್ತಿಲ್ಲ. ಇದನ್ನು ಸರಿಪಡಿಸಬೇಕು ಎಂದು ಸ್ಥಳೀಯ ರೈತರು ಆರೋಪಿಸಿದ್ದಾರೆ.

ಜಮೀನುಗಳಿಗೆ ಪ್ರತಿನಿತ್ಯ ಕಾಡಾನೆ, ಕಾಡುಹಂದಿ, ಜಿಂಕೆ, ಕಡವೆ, ಕಾಡುಕುರಿಗಳು ದಾಳಿ ನಡೆಸಿ ಫ‌ಸಲನ್ನು ನಾಶಗೊಳಿಸುತ್ತಿವೆ. ಈ ಬಗ್ಗೆ ದೂರನ್ನು ನೀಡಿದ್ದರೂ ಇನ್ನೂ ಪರಿಹಾರ ಸಿಕ್ಕಿಲ್ಲ. ಈಗ ಮತ್ತೆ ಆನೆಗಳ ಹಿಂಡು ಫ‌ಸಲನ್ನು ನಾಶಮಾಡುತ್ತಿವೆ. ● ಮಹದೇವಸ್ವಾಮಿ, ಯರಗಂಬಳ್ಳಿ ಗ್ರಾಮದ ರೈತ

ಸೋಲಾರ್‌ ತಂತಿ ಕಿತ್ತಿವೆ. 3 ಕಿ.ಮೀ. ವರೆಗೆ ರೈಲುಕಂಬಿಯ ಬ್ಯಾರಿಕಾಡ್‌ ಹಾಕಲು ಈಗಾಗಲೇ ಪ್ರಕ್ರಿಯೆ ಆರಂಭಗೊಂಡಿದೆ. ಯಳಂದೂರು ವಲಯದಲ್ಲಿ 34 ಕಿ.ಮೀ. ಅರಣ್ಯ ಗಡಿ ಇದೆ. ಹೀಗಾಗಿ ಸಿಬ್ಬಂದಿ ಸರಿದೂಗಿಸಲು ಕೊರತೆ ಇದೆ. ಮೇಲಧಿಕಾರಿಗಳ ಗಮನಕ್ಕೆ ಈ ವಿಷಯ ತರಲಿದ್ದು ರೈತರಿಗೆ ಅನುಕೂಲ ಮಾಡಲು ಕ್ರಮ ವಹಿಸಲಾಗುವುದು. ● ಲೋಕೇಶ್‌ ಮೂರ್ತಿ, ಆರ್‌ಎಫ್ಒ, ಯಳಂದೂರು ವಲಯ

– ಫೈರೋಜ್‌ ಖಾನ್‌

ಟಾಪ್ ನ್ಯೂಸ್

Perth Test: Jaiswal scores century; record partnership with Rahul

Perth Test: ಜೈಸ್ವಾಲ್‌ ಶತಕದಾಟ; ರಾಹುಲ್‌ ಜತೆ ದಾಖಲೆಯ ಜೊತೆಯಾಟ

Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು

Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು

6-1

Infections: ಅಗೋಚರ ಕೊಲೆಗಾರ – ಸೋಂಕುಗಳ ವಿರುದ್ಧದ ಹೋರಾಟದಲ್ಲಿ ನಾವು ಸೋಲುತ್ತಿದ್ದೇವೆಯೇ?

5–COPD

COPD: ಕ್ರೋನಿಕ್‌ ಒಬ್‌ಸ್ಟ್ರಕ್ಟಿವ್‌ ಪಲ್ಮನರಿ ಡಿಸೀಸ್‌ (ಸಿಒಪಿಡಿ)

Maryade Prashne Review

Maryade Prashne Review: ಮಧ್ಯಮ ವರ್ಗದ ಮರ್ಯಾದೆ ಹೋರಾಟ

4-Laparoscopic

Laparoscopic surgery: ಸಂತಾನೋತ್ಪತ್ತಿ ಹೆಚ್ಚಿಸುವ ಲ್ಯಾಪರೊಸ್ಕೋಪಿಕ್ ಶಸ್ತ್ರಚಿಕಿತ್ಸೆ

3-darshan

Renukaswamy Case: ಹತ್ಯೆ ಸ್ಥಳದಲ್ಲಿ ನಟ ದರ್ಶನ್‌: ಫೋಟೋ ಸಾಕ್ಷ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Road Mishap: ಶಬರಿಮಲೆ ಯಾತ್ರಿಕರಿದ್ದ ಬಸ್‌ ಡಿಕ್ಕಿ: ಮೊಪೆಡ್‌ ಚಾಲಕ ಸಾವು

Road Mishap: ಶಬರಿಮಲೆ ಯಾತ್ರಿಕರಿದ್ದ ಬಸ್‌ ಡಿಕ್ಕಿ: ಮೊಪೆಡ್‌ ಸವಾರ ಸಾವು

Road Mishap: ಬೈಕ್ ಗೆ ಕಾರು ಡಿಕ್ಕಿ: ಓರ್ವ ಸಾವು, ಇಬ್ಬರಿಗೆ ಗಾಯ

Road Mishap: ಬೈಕ್ ಗೆ ಕಾರು ಡಿಕ್ಕಿ: ಓರ್ವ ಸಾವು, ಇಬ್ಬರಿಗೆ ಗಾಯ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾCourt: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Road Mishap: ಶಾಲಾ ವಾಹನ ಹರಿದು 4 ವರ್ಷದ ಬಾಲಕಿ ಸಾ*ವು

Road Mishap: ಶಾಲಾ ವಾಹನ ಹರಿದು 4 ವರ್ಷದ ಬಾಲಕಿ ಸಾ*ವು

Minister K.J. George: ಒಂದೇ ದಿನದಲ್ಲಿ 2500 ಲೈನ್‌ಮ್ಯಾನ್‌ನೇಮಕ ಸಂದರ್ಶನ

Minister K.J. George: ಒಂದೇ ದಿನದಲ್ಲಿ 2500 ಲೈನ್‌ಮ್ಯಾನ್‌ ನೇಮಕ ಸಂದರ್ಶನ

MUST WATCH

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

ಹೊಸ ಸೇರ್ಪಡೆ

7-bus

Chikkamagaluru: ಸರ್ಕಾರಿ ಬಸ್-ಲಾರಿ ಮುಖಾಮುಖಿ ಡಿಕ್ಕಿ; ಹಲವರಿಗೆ ಗಾಯ

Perth Test: Jaiswal scores century; record partnership with Rahul

Perth Test: ಜೈಸ್ವಾಲ್‌ ಶತಕದಾಟ; ರಾಹುಲ್‌ ಜತೆ ದಾಖಲೆಯ ಜೊತೆಯಾಟ

Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು

Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು

6-1

Infections: ಅಗೋಚರ ಕೊಲೆಗಾರ – ಸೋಂಕುಗಳ ವಿರುದ್ಧದ ಹೋರಾಟದಲ್ಲಿ ನಾವು ಸೋಲುತ್ತಿದ್ದೇವೆಯೇ?

5–COPD

COPD: ಕ್ರೋನಿಕ್‌ ಒಬ್‌ಸ್ಟ್ರಕ್ಟಿವ್‌ ಪಲ್ಮನರಿ ಡಿಸೀಸ್‌ (ಸಿಒಪಿಡಿ)

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.