ನಿರಂತರ ಮಳೆ- ಕೃಷ್ಣೆ-ಉಪನದಿಗಳಿಗೆ ಒಳಹರಿವು ಹೆಚ್ಚಳ
ಬಾಗಲಕೋಟೆ ಹಾಗೂ ಬೆಳಗಾವಿ ಜಿಲ್ಲೆಯ ಪಕ್ಕದ ಗ್ರಾಮಗಳ ರೈತರ ಮುಖದಲ್ಲಿ ಮಂದಹಾಸ ಮೂಡಿದೆ.
Team Udayavani, Jul 6, 2023, 12:31 PM IST
ಚಿಕ್ಕೋಡಿ: ಮಹಾರಾಷ್ಟ್ರದ ಕೊಂಕಣ ಭಾಗದಲ್ಲಿ ನಿರಂತರ ಮಳೆ ಆರಂಭವಾಗಿದೆ. ಇದರಿಂದ ಗಡಿ ಭಾಗದ ಕೃಷ್ಣಾ, ದೂಧಗಂಗಾ ಮತ್ತು ವೇಧಗಂಗಾ ನದಿಗಳಿಗೆ ಬರುವ ಸಂಭವನೀಯ ಪ್ರವಾಹ ಎದುರಿಸಲು ಅಧಿ ಕಾರಿಗಳು ಮತ್ತು ಎನ್‌ಡಿಆರ್‌ಎಫ್ ತಂಡ ಸಿದ್ಧರಾಗಬೇಕು ಎಂದು ಉಪವಿಭಾಗಾಧಿಕಾರಿ ಮಾಧವ ಗಿತ್ತೆ ಹೇಳಿದರು.
ಬುಧವಾರ ತಾಲೂಕಿನ ಮಾಂಜರಿ, ಕಲ್ಲೋಳ ಮತ್ತು ಯಡೂರ ಗ್ರಾಮದ ಹತ್ತಿರ ಕೃಷ್ಣಾ ನದಿ ತೀರದ ಪ್ರದೇಶ ವೀಕ್ಷಿಸಿ ಎನ್‌ಡಿಆರ್‌ಎಫ್ ತಂಡದ ಜೊತೆ ಅವರು ಮಾತನಾಡಿದರು. ಕೃಷ್ಣಾ ನದಿಯ ಅಪಾಯ ಮಟ್ಟದ ಕುರಿತು ಸ್ಥಳವನ್ನು ಪರಿಶೀಲಿಸಿದರು.
ಕೃಷ್ಣಾ ನದಿಯಲ್ಲಿ ಪ್ರವಾಹ ಎದುರಾದರೆ ಅಂಕಲಿ, ಯಡೂರ, ಕಲ್ಲೊಳ, ಚಂದೂರ, ಇಂಗಳಿ, ಯಡೂರವಾಡಿ ಸೇರಿದಂತೆ ಮುಂತಾದ ಗ್ರಾಮಗಳಲ್ಲಿ ನದಿಯ ನೀರು ಆವರಿಸಿಕೊಳ್ಳುತ್ತದೆ. ಇದರಿಂದ ಜನ-ಜಾನುವಾರು ರಕ್ಷಣೆ ಮಾಡಬೇಕಾಗುತ್ತದೆ.
ಸುರಕ್ಷಿತ ಸ್ಥಳಕ್ಕೆ ಜನರನ್ನು ರಕ್ಷಣೆ ಮಾಡುವುದರ ಜೊತೆಗೆ ಜಾನುವಾರು ರಕ್ಷಣೆ ಮಾಡಲು ಸೂಕ್ತ ಕ್ರಮದ ಕುರಿತು ಅಧಿಕಾರಿಗಳ ಜೊತೆ ಚರ್ಚೆ ನಡೆಸಿದರು. ಮಹಾರಾಷ್ಟ್ರದ ವಿವಿಧ ಜಲಾಶಯಗಳ ಪರಿಸರದಲ್ಲಿ ಮತ್ತು ಘಟ್ಟ ಪ್ರದೇಶದಲ್ಲಿ ಮಳೆಯಿಂದ ಕೃಷ್ಣಾ ನದಿ ನೀರಿನ ಒಳಹರಿವು ದಿಢೀರನೆ ಹೆಚ್ಚಾಗಿದೆ. ಹೀಗಾಗಿ ಪ್ರವಾಹ ಎದುರಿಸಲು ತಾಲೂಕಾಡಳಿತ ಸಕಲ ಸಿದ್ಧತೆ ಮಾಡಿಕೊಂಡಿದೆ ಎಂದು ಮಾಧವ ಗಿತ್ತೆ ತಿಳಿಸಿದರು.
ಹಿಪ್ಪರಗಿ ಜಲಾಶಯಕ್ಕೆ 12,400 ಕ್ಯೂಸೆಕ್ ನೀರು
ರಬಕವಿ-ಬನಹಟ್ಟಿ: ಮಹಾರಾಷ್ಟ್ರದ ಕೃಷ್ಣಾ ಜಲಾನಯನ ಪ್ರದೇಶಗಳಲ್ಲಿ ಮಳೆಯಾಗುತ್ತಿರುವುದರಿಂದ ರಾಜಾಪುರ ಡ್ಯಾಂಗಳಿಂದ ನೀರು ಬಿಡುತ್ತಿದ್ದು, ಹಿಪ್ಪರಗಿ ಅಣೆಕಟ್ಟೆಗೆ ಸರಾಗವಾಗಿ ಹರಿದು ಬರುತ್ತಿದೆ. ಬೇಸಿಗೆ ಬವಣೆಯಿಂದ ಬೇಸತ್ತಿದ್ದ ಜನತೆಗೆ ಕೃಷ್ಣಾ ನದಿಗೆ ನೀರು ಬಂದಿರುವುದಿಂದ ಬಾಗಲಕೋಟೆ ಹಾಗೂ ಬೆಳಗಾವಿ ಜಿಲ್ಲೆಯ ಪಕ್ಕದ ಗ್ರಾಮಗಳ ಜನರು ಹಾಗೂ ರೈತರ ಮುಖದಲ್ಲಿ ಮಂದಹಾಸ ಮೂಡಿದೆ.
ಮಹಾರಾಷ್ಟ್ರದ ಕೃಷ್ಣಾ ಜಲಾನಯನ ಪ್ರದೇಶಗಳಲ್ಲಿ ಮಳೆಯಾಗುತ್ತಿದ್ದು, ಬುಧವಾರ ಹಿಪ್ಪರಗಿ ಜಲಾಶಯದಲ್ಲಿ ನೀರಿನ ಮಟ್ಟ 519.35 ಮೀ. ಇದ್ದು, ಒಟ್ಟು 12,400 ಕ್ಯೂಸೆಕ್ ನೀರು ಹರಿದು ಬರುತ್ತಿದ್ದು, 3,720 ಕ್ಯೂಸೆಕ್ ನೀರು ಜಲಾಶಯದಿಂದ ಹರಿಬಿಡಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಜೀವಂತ ವ್ಯಕ್ತಿ ಹೆಸರಿನಲ್ಲಿ ಮರಣ ಪ್ರಮಾಣ ಪತ್ರ ನೀಡಿದ ಅಧಿಕಾರಿಗಳು!
ಅಂತಾರಾಜ್ಯ ಮಕ್ಕಳ ಮಾರಾಟ ಜಾಲ ಪತ್ತೆ… 4.50 ಲಕ್ಷಕ್ಕೆ ಗೋವಾಕ್ಕೆ ಮಾರಿದ್ದ ಮಗುವಿನ ರಕ್ಷಣೆ
Belagavi: ತಹಶೀಲ್ದಾರ್ ಮನೆ ಮೇಲೆ ಲೋಕಾಯುಕ್ತ ದಾಳಿ
Belagavi; ಸಂಘದ ಹೆಸರಲ್ಲಿ ಮಹಿಳೆಯರಿಗೆ 19.35 ಕೋಟಿ ರೂ. ಮಹಾ ವಂಚನೆ!
Cancer ತೀವ್ರಗತಿಯಲ್ಲಿ ವ್ಯಾಪಿಸುತ್ತಿರುವದು ಕಳವಳಕಾರಿ: ರಾಷ್ಟ್ರಪತಿ ದ್ರೌಪದಿ ಮುರ್ಮು
MUST WATCH
ಹೊಸ ಸೇರ್ಪಡೆ
ನಕ್ಸಲರನ್ನು ಅಮಿತ್ ಶಾ ಸ್ವಾಗತಿಸಿದಾಗ ಏಕೆ ಬೆಚ್ಚಿ ಬಿದ್ದಿಲ್ಲ?: ಸಿಎಂ ತಿರುಗೇಟು
Naxal Package: “ಮೊದಲೇ ಪ್ಯಾಕೇಜ್ ನೀಡಿದ್ದರೆ ವಿಕ್ರಂಗೌಡ ಪ್ರಾಣ ಉಳಿಯುತ್ತಿತ್ತು’: ಸಹೋದರ
Belagavi: ಜೀವಂತ ವ್ಯಕ್ತಿ ಹೆಸರಿನಲ್ಲಿ ಮರಣ ಪ್ರಮಾಣ ಪತ್ರ ನೀಡಿದ ಅಧಿಕಾರಿಗಳು!
Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ
Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.