Rajasthan: ರಾಜಸ್ಥಾನದಲ್ಲಿ ಮತ್ತೆ ಒಗ್ಗಟ್ಟಿನ ಮಂತ್ರ
Team Udayavani, Jul 7, 2023, 7:17 AM IST
ಹೊಸದಿಲ್ಲಿ: ಸಂಪೂರ್ಣ ಒಗ್ಗಟ್ಟಿನಿಂದ ರಾಜಸ್ಥಾನ ವಿಧಾನಸಭೆ ಚುನಾವಣೆಯನ್ನು ಎದುರಿಸಿದರೆ ಗೆಲುವು ಸಾಧ್ಯವಿದೆ ಎಂದು ಕಾಂಗ್ರೆಸ್ ಹೇಳಿದೆ. ಇದೇ ವೇಳೆ ಶಿಸ್ತು ಕಾಪಾಡುವಂತೆ ಹಾಗೂ ಪಕ್ಷದ ವೇದಿಕೆ ಬಿಟ್ಟು ಹೊರಗೆ ಪಕ್ಷದ ವಿಚಾರಗಳನ್ನು ಮಾತನಾಡದಂತೆ ನಾಯಕರಿಗೆ ಕಿವಿಮಾತು ಹೇಳಿದೆ.
ಸಿಎಂ ಅಶೋಕ್ ಗೆಹ್ಲೋಟ್ ಮತ್ತು ಮಾಜಿ ಡಿಸಿಎಂ ಸಚಿನ್ ಪೈಲಟ್ ನಡುವೆ ಬಿಕ್ಕಟ್ಟು ಸೃಷ್ಟಿಯಾಗಿರುವ ನಡುವೆಯೇ ರಾಜ್ಯದಲ್ಲಿನ ಚುನಾವಣ ಸಿದ್ಧತೆ ಕುರಿತು ಗುರುವಾರ ಸಭೆ ನಡೆದಿದೆ. ಸಭೆ ಬಳಿಕ ಪೈಲಟ್ ಅವರೂ ಮಾತನಾಡಿದ್ದು, ಯುವಜನರ ಕ್ಷೇಮಾಭಿವೃದ್ಧಿ, ಭ್ರಷ್ಟಾಚಾರ ಸೇರಿದಂತೆ ನಾನು ಎತ್ತಿರುವ ಅಂಶಗಳಿಗೆ ಸಂಬಂಧಿಸಿ ಸೂಕ್ತ ಸ್ಪಂದನೆ ವ್ಯಕ್ತವಾಗಿದೆ. ಹೀಗಾಗಿ ಎಲ್ಲರೂ ಒಗ್ಗಟ್ಟಾಗಿ ಶ್ರಮಿಸಿ ಪಕ್ಷವನ್ನು ಅಧಿಕಾರಕ್ಕೆ ತರುತ್ತೇವೆ ಎಂದಿದ್ದಾರೆ.
ಸಭೆಯ ಅನಂತರ ಪತ್ರಕರ್ತರೊಂದಿಗೆ ಮಾತನಾಡಿದ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್, “ಗೆಲುವಿನ ಮಾನದಂಡದ ಆಧಾರದಲ್ಲಿ ಸೆಪ್ಟಂಬರ್ ಮೊದಲ ವಾರದಲ್ಲಿ ಅಭ್ಯರ್ಥಿಗಳ ಪಟ್ಟಿಯನ್ನು ಸಿದ್ಧಪಡಿಸಲಾಗುವುದು. ರಾಜಸ್ಥಾನ ಕಾಂಗ್ರೆಸ್ ಸರಕಾರದ ಯೋಜನೆಗಳ ಬಗ್ಗೆ ಶುಕ್ರವಾರದಿಂದ ಕಾರ್ಯಕರ್ತರು ಮನೆ ಮನೆಗೆ ತೆರಳಿ ಪ್ರಚಾರ ಮಾಡಲಿದ್ದಾರೆ” ಎಂದು ತಿಳಿಸಿದರು.
ಮುಖ್ಯಮಂತ್ರಿ ಅಭ್ಯರ್ಥಿಯನ್ನು ಮೊದಲೇ ಘೋಷಿಸುವುದಿಲ್ಲ. ಸಾಮೂಹಿಕ ನಾಯಕತ್ವದಲ್ಲಿ ಚುನಾವಣೆ ಎದುರಿಸಲಾಗುವುದು ಎಂದರು. ಸಭೆಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಸಹಿತ ಪ್ರಮುಖ ನಾಯಕರು ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಗೂಗಲ್ ಮ್ಯಾಪ್ ನಂಬಿ ಸೇತುವೆಯಿಂದ ನದಿಗೆ ಬಿದ್ದ ಕಾರು, ಮದುವೆಗೆ ಹೊರಟಿದ್ದ ಮೂವರು ಮೃತ್ಯು
India: ಅರ್ಮೇನಿಯಾಗೆ ದೇಶಿ ನಿರ್ಮಿತ ಪಿನಾಕಾ ರಾಕೆಟ್ ಪೂರೈಕೆ ಶುರು
Maharashtra Election: ಅಘಾಡಿ ಸೋಲಿಗೆ ಉದ್ಧವ್,ಶರದ್ ಕಾರಣ: ಕಾಂಗ್ರೆಸ್
Mann Ki Baat: ಮೈಸೂರಿನ ‘ಅರ್ಲಿ ಬರ್ಡ್’ಗೆ ಪ್ರಧಾನಿ ನರೇಂದ್ರ ಮೋದಿ ಮೆಚ್ಚುಗೆ
Amaravati: ತಿರುಪತಿಯಲ್ಲಿ ಮುರಿದಿದ್ದ ರಾಮನ ಬೆರಳು ದುರಸ್ತಿ!
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
ಗೂಗಲ್ ಮ್ಯಾಪ್ ನಂಬಿ ಸೇತುವೆಯಿಂದ ನದಿಗೆ ಬಿದ್ದ ಕಾರು, ಮದುವೆಗೆ ಹೊರಟಿದ್ದ ಮೂವರು ಮೃತ್ಯು
JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ
Cape Canaveral: ತಾತ್ಕಾಲಿಕ ಉಪಗ್ರಹವಾಗಿದ್ದ “ಮಿನಿ ಮೂನ್’ಗೆ ಗುಡ್ ಬೈ
Result: ಮಹಾರಾಷ್ಟ್ರ ಚುನಾವಣೆ ಗೆಲ್ಲಲು ಇವಿಎಂ ಹ್ಯಾಕ್ ಕಾರಣ: ಗೃಹ ಸಚಿವ ಡಾ.ಪರಮೇಶ್ವರ್
Fish Farming: ಲಾಭದಾಯಕ ಪಂಜರ ಮೀನು ಕೃಷಿ ಯೋಜನೆಯೇ ಸ್ತಬ್ಧ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.