Budget: ಶಿಕ್ಷಣ ಕ್ಷೇತ್ರಕ್ಕೆ ಬಜೆಟ್ ನಲ್ಲಿ ಸಿಕ್ಕಿದ್ದೇನು? ಇಲ್ಲಿದೆ ಸಂಪೂರ್ಣ ಮಾಹಿತಿ


Team Udayavani, Jul 7, 2023, 2:07 PM IST

Budget: ಶಿಕ್ಷಣ ಕ್ಷೇತ್ರಕ್ಕೆ ಬಜೆಟ್ ನಲ್ಲಿ ಸಿಕ್ಕಿದ್ದೇನು? ಇಲ್ಲಿದೆ ಸಂಪೂರ್ಣ ಮಾಹಿತಿ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಬಜೆಟ್ ಮಂಡನೆ ಮಾಡಿದ್ದು ಶಿಕ್ಷಣ ಕ್ಷೇತ್ರದಲ್ಲಿ ಹಲವಾರು ಬದಲಾವಣೆಗಳನ್ನು ಮಾಡಿದ್ದಾರೆ ಅಲ್ಲದೆ ಶಿಕ್ಷಣ ಕ್ಷೇತ್ರದಲ್ಲಿ ಕೆಲವೊಂದು ಮಾರ್ಪಾಡುಗಳನ್ನು ಮಾಡಿದ್ದು ಹಾಗಾದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿರುವ ಬಜೆಟ್ ನಲ್ಲಿ ರಾಜ್ಯದ ಶಿಕ್ಷಣ ಕ್ಷೇತ್ರಕ್ಕೆ ಏನೇನು ಸಿಕ್ಕಿದೆ ಎಂಬುದರ ವಿವರ ಇಲ್ಲಿದೆ.

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ:

1. ಶಾಲಾ ಶಿಕ್ಷಣ ಮಗುವಿನ ವ್ಯಕ್ತಿತ್ವ ನಿರ್ಮಾಣದಲ್ಲಿ, ಆ ಮೂಲಕ ಸಮಾಜ ನಿರ್ಮಾಣದಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ಶಿಕ್ಷಣವು ಮಕ್ಕಳ ಶಾರೀರಿಕ ಹಾಗೂ ಭಾವನಾತ್ಮಕ ಬೆಳವಣಿಗೆಗೆ, ಜ್ಞಾನ ಮತ್ತು ಮನೋವಿಕಾಸಕ್ಕೆ ಪೂರಕವಾಗಿರಬೇಕು. ಶಿಕ್ಷಣವು ಬಾಂಧವ್ಯ, ಭ್ರಾತೃತ್ವ, ಸಾಮರಸ್ಯ ಮತ್ತು ಸಹಬಾಳ್ವೆಯ ಮನೋಭಾವ ಮೂಡಿಸುವಂತಿರಬೇಕು. ಈ ಆಶಯಕ್ಕೆ ವಿರುದ್ಧವಾದ ಪಠ್ಯಗಳನ್ನು ಹಿಂದಿನ ಸರ್ಕಾರವು ಪಠ್ಯ ಪರಿಷ್ಕರಣೆಯಲ್ಲಿ ಸೇರ್ಪಡೆಗೊಳಿಸಿದ್ದು, ಅವುಗಳನ್ನು ಪ್ರಸಕ್ತ ಸಾಲಿನಿಂದಲೇ ಕೈಬಿಡಲು ಕ್ರಮ ಕೈಗೊಳ್ಳಲಾಗಿದೆ.

2. ರಾಜ್ಯದ ಸರ್ಕಾರಿ ಶಾಲಾ ಕಾಲೇಜುಗಳಲ್ಲಿ ಉತ್ತಮ ಸೌಲಭ್ಯಗಳನ್ನು ನೀಡಲು ಶಾಲಾ ಕೊಠಡಿಗಳಿಗೆ 310 ಕೋಟಿ ರೂ.ಗಳು ಹಾಗೂ ಪದವಿ ಪೂರ್ವ ಕಾಲೇಜು ಕೊಠಡಿಗಳಿಗೆ 240 ಕೋಟಿ ರೂ. ಸೇರಿದಂತೆ ಒಟ್ಟು 550 ಕೋಟಿ ರೂ.ಗಳ ವೆಚ್ಚದಲ್ಲಿ
8,311 ಕೊಠಡಿಗಳ ನಿರ್ಮಾಣ ಕಾಮಗಾರಿಗಳನ್ನು ಶೀಘ್ರದಲ್ಲಿಯೇ ಪೂರ್ಣಗೊಳಿಸಲಾಗುವುದು.

3. ವಿದ್ಯಾರ್ಥಿಗಳ ಶಿಕ್ಷಣ ಮತ್ತು ಆರೋಗ್ಯದ ದೃಷ್ಟಿಯಿಂದ, ಮಕ್ಕಳ ಸಂಖ್ಯೆಗೆ ಅನುಗುಣವಾಗಿ, ಕಡಿಮೆ ಶೌಚಾಲಯಗಳಿರುವ
5,775 ಶಾಲೆಗಳಲ್ಲಿ ಹಾಗೂ 150 ಕಾಲೇಜುಗಳಲ್ಲಿ ಶೌಚಾಲಯ ಘಟಕಗಳನ್ನು ನರೇಗಾ ಯೋಜನೆಯ ಸಂಯೋಜನೆಯೊಂದಿಗೆ 200 ಕೋಟಿ ರೂ.ಗಳ ವೆಚ್ಚದಲ್ಲಿ ನಿರ್ಮಾಣ ಮಾಡಲಾಗುವುದು.

4. ಹಳೆಯ ಶಾಲಾ ಕಾಲೇಜು ಕಟ್ಟಡಗಳು ಹಾಗೂ ಮಳೆಯಿಂದಾಗಿ ಶಿಥಿಲಗೊಂಡಿರುವ 3,833 ಶಾಲೆಗಳು ಹಾಗೂ 724 ಪದವಿ ಪೂರ್ವ ಕಾಲೇಜು ಕೊಠಡಿಗಳನ್ನು 100 ಕೋಟಿ ರೂ.ಗಳ ವೆಚ್ಚದಲ್ಲಿ ದುರಸ್ತಿಗೊಳಿಸುವ ಮೂಲಕ ಬಳಕೆಗೆ ಯೋಗ್ಯಗೊಳಿಸಲಾಗುವುದು.

5. ರಾಜ್ಯದ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ನಿರ್ವಹಣೆಗಾಗಿ ನೀಡುತ್ತಿರುವ ಅನುದಾನವನ್ನು ಕನಿಷ್ಠ 20,000 ರೂ. ದಿಂದ 45,000 ರೂ. ಗಳವರೆಗೆ ಹೆಚ್ಚಿಸಿ 47,272 ಶಾಲೆಗಳು ಹಾಗೂ 1,231 ಪದವಿ ಪೂರ್ವ ಕಾಲೇಜುಗಳ ನಿರ್ವಹಣೆಗಾಗಿ ಒಟ್ಟಾರೆಯಾಗಿ 153 ಕೋಟಿ ರೂ. ಅನುದಾನ ಒದಗಿಸಲಾಗುವುದು.

6. ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ 1 ರಿಂದ 8 ನೇ ತರಗತಿಯ ವಿದ್ಯಾರ್ಥಿಗಳಿಗೆ ವಾರದಲ್ಲಿ ಒಂದು ಬಾರಿ ಮೊಟ್ಟೆ/ ಶೇಂಗಾ ಚಿಕ್ಕಿ/ ಬಾಳೆಹಣ್ಣನ್ನು ವಿತರಿಸಲಾಗುತ್ತಿದ್ದು, ಈಗ ವಾರದಲ್ಲಿ ಎರಡು ದಿವಸ ವಿತರಿಸಲಾಗುವುದು. ಪ್ರಸಕ್ತ ಸಾಲಿನಿಂದ ಈ ಯೋಜನೆಯನ್ನು 9 ಮತ್ತು 10ನೇ ತರಗತಿಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೂ ವಿಸ್ತರಿಸಿ 280 ಕೋಟಿ ರೂ.ಗಳ ವೆಚ್ಚದಲ್ಲಿ 60 ಲಕ್ಷ ಮಕ್ಕಳಿಗೆ ಒದಗಿಸಲಾಗುವುದು.

7. ಮಕ್ಕಳಲ್ಲಿ ಉಂಟಾಗಿರುವ ಕಲಿಕಾ ನ್ಯೂನತೆಯನ್ನು ಹೋಗಲಾಡಿಸಲು ಸುಮಾರು 33 ಲಕ್ಷ ವಿದ್ಯಾರ್ಥಿಗಳಿಗೆ 80 ಕೋಟಿ ರೂ.ಗಳ ವೆಚ್ಚದಲ್ಲಿ ಕಲಿಕಾ ಬಲವರ್ಧನೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುವುದು. ʻಮರುಸಿಂಚನʼ ಎಂಬ ಹೊಸ ಯೋಜನೆಯಡಿಯಲ್ಲಿ ಕಲಿಕೆಯಲ್ಲಿ ಹಿಂದುಳಿದ ಒಂದೂವರೆ ಲಕ್ಷ ವಿದ್ಯಾರ್ಥಿಗಳನ್ನು ಪ್ರೌಢ ಹಂತದ ಪರೀಕ್ಷೆಗಳಿಗೆ ಸಜ್ಜುಗೊಳಿಸಲು ವಿಶೇಷ ತರಬೇತಿಯನ್ನು ನೀಡಲಾಗುವುದು.

8. ಶಾಲಾ ಶಿಕ್ಷಣ ಇಲಾಖೆಯಲ್ಲಿನ ವಿವಿಧ ಕಾರ್ಯಕ್ರಮಗಳನ್ನು ನಿರ್ವಹಿಸುವ ಸ್ಯಾಟ್ಸ್ ತಂತ್ರಾಂಶವನ್ನು SATS 2.0 ಎಂದು ಉನ್ನತೀಕರಿಸಲಾಗುವುದು.

9. ಹೊಸ ಕಲ್ಪನೆಯನ್ನು ವಾಸ್ತವಕ್ಕೆ ತರಲು ವಿದ್ಯಾರ್ಥಿಗಳಿಗೆ ಅಗತ್ಯ ಸೌಲಭ್ಯಗಳನ್ನು ಒದಗಿಸಲು ಮಾಧ್ಯಮಿಕ ಮತ್ತು ಪದವಿ ಪೂರ್ವ ಕಾಲೇಜುಗಳಲ್ಲಿ ಇನ್ನೋವೇಶನ್‌ ಲ್ಯಾಬ್‌ಗಳನ್ನು ಸ್ಥಾಪಿಸಲಾಗುವುದು.
2023-24ನೇ ಸಾಲಿನಲ್ಲಿ ರಾಜ್ಯದ ಪ್ರತಿ ಕಂದಾಯ ವಿಭಾಗದಲ್ಲಿ ನಾಲ್ಕು ಪ್ರಯೋಗಾಲಯಗಳನ್ನು ಎರಡು ಕೋಟಿ ರೂ.ಗಳ ವೆಚ್ಚದಲ್ಲಿ ಸ್ಥಾಪಿಸಲಾಗುವುದು.

10. ಶಿಕ್ಷಣ ಇಲಾಖೆ ಮತ್ತು ಅರಣ್ಯ ಇಲಾಖೆಯ ಸಹಭಾಗಿತ್ವದಲ್ಲಿ ಸ್ಥಳಾವಕಾಶವುಳ್ಳ ಶಾಲೆಗಳ ಸುತ್ತಮುತ್ತ ಒಂದು ವರ್ಷದ ಕಾಲಾವಧಿಯಲ್ಲಿ 50 ಲಕ್ಷ ಸಸಿಗಳನ್ನು ನೆಡುವ ವಿನೂತನ ʻಸಸ್ಯ ಶ್ಯಾಮಲʼ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುವುದು.

11. ರಾಜ್ಯದ ಸಾಹಿತಿಗಳ ಹಾಗೂ ಪ್ರಕಾಶಕರ ಬೇಡಿಕೆಗಳಿಗೆ ಸ್ಪಂದಿಸಿ ಸಾರ್ವಜನಿಕ ಗ್ರಂಥಾಲಯಗಳಿಗೆ ಉತ್ತಮ ಪುಸ್ತಕಗಳನ್ನು ಖರೀದಿಸಲು ಪ್ರಸಕ್ತ ಸಾಲಿನಲ್ಲಿ 10 ಕೋಟಿ ರೂ. ಅನುದಾನ ಒದಗಿಸಲಾಗುವುದು.

ಉನ್ನತ ಶಿಕ್ಷಣ:

1. ಕೇಂದ್ರ ಸರ್ಕಾರ ಜಾರಿಗೊಳಿಸಿದ ರಾಷ್ಟ್ರೀಯ ಶಿಕ್ಷಣ ನೀತಿಯು ಒಕ್ಕೂಟ ವ್ಯವಸ್ಥೆಗೆ ಮಾರಕವಾಗಿರುವಂತಹ ಹಾಗೂ ಸಂವಿಧಾನ ಮತ್ತು ಪ್ರಜಾಪ್ರಭುತ್ವಕ್ಕೆ ವಿರುದ್ಧವಾಗಿರುವ ಅವೈಜ್ಞಾನಿಕ ಅಂಶಗಳನ್ನು ಒಳಗೊಂಡಿದೆ. ಬಹುಧರ್ಮ, ಬಹುಭಾಷೆ, ಬಹುಸಂಸ್ಕೃತಿ ಇರುವ ನಮ್ಮ ದೇಶಕ್ಕೆ ಏಕರೂಪದ ಶಿಕ್ಷಣ ವ್ಯವಸ್ಥೆ ಹೊಂದಿಕೊಳ್ಳುವುದಿಲ್ಲ. ರಾಜ್ಯದ ಅಸ್ಮಿತೆಯನ್ನು ಎತ್ತಿ ಹಿಡಿಯುವ, ಉನ್ನತ ಶಿಕ್ಷಣವನ್ನು ಜಾಗತಿಕ ಮಟ್ಟಕ್ಕೆ ಕೊಂಡೊಯ್ಯಲು ವಿದ್ಯಾರ್ಥಿಗಳಿಗೆ ಉದ್ಯೋಗಾಧಾರಿತ ಶಿಕ್ಷಣವನ್ನು ನೀಡಿ ಯುವಜನರನ್ನು ಸಾಮಾಜಿಕವಾಗಿ ಮತ್ತು ಆರ್ಥಿಕವಾಗಿ ಸಬಲಗೊಳಿಸಲು ಒತ್ತು ನೀಡುವ ನಿಟ್ಟಿನಲ್ಲಿ ಸ್ಥಳೀಯವಾದ ಸಾಮಾಜಿಕ, ಸಾಂಸ್ಕೃತಿಕ ಮತ್ತು ಆರ್ಥಿಕ ವಾಸ್ತವಾಂಶಗಳನ್ನು ಒಳಗೊಂಡ ಹೊಸ ಶಿಕ್ಷಣ ನೀತಿಯನ್ನು ರೂಪಿಸಲಾಗುವುದು.

2. ಬೆಂಗಳೂರಿನಲ್ಲಿರುವ ವಿಶ್ವೇಶ್ವರಯ್ಯ ಕಾಲೇಜ್‌ ಆಫ್‌ ಇಂಜಿನಿಯರಿಂಗ್‌ ಯೂನಿವರ್ಸಿಟಿಯನ್ನು (UVCE) ಉನ್ನತೀಕರಣಗೊಳಿಸಲು ಮೂಲಭೂತ ಸೌಕರ್ಯಕ್ಕಾಗಿ 25 ಕೋಟಿ ರೂ. ಅನುದಾನ ಒದಗಿಸಲಾಗುವುದು.

3. ನಕಲಿ ಅಂಕಪಟ್ಟಿ ಹಾವಳಿಯನ್ನು ತಪ್ಪಿಸುವ ದೃಷ್ಟಿಯಿಂದ ರಾಜ್ಯದ ಎಲ್ಲಾ ಉನ್ನತ ಶಿಕ್ಷಣದ ವಿದ್ಯಾರ್ಥಿಗಳು Academic Bank of Credits ನಲ್ಲಿ ನೋಂದಾಯಿಸಿಕೊಂಡು ಹಾಗೂ ನೇಮಕಾತಿಯಲ್ಲಿ NAD/Digilocker ನಲ್ಲಿನ ಅಂಕಪಟ್ಟಿ ಹಾಗೂ ಪ್ರಮಾಣ ಪತ್ರವನ್ನು ಕಡ್ಡಾಯಗೊಳಿಸಲು ಕ್ರಮಕೈಗೊಳ್ಳಲಾಗುವುದು.

4. ಉನ್ನತ ಶಿಕ್ಷಣ ಇಲಾಖೆಯಡಿ ನಿರ್ಮಿಸಿರುವ 13,169 ವಿದ್ಯಾರ್ಥಿಗಳ ಸಾಮರ್ಥ್ಯ ಹೊಂದಿರುವ 224 ವಸತಿ ನಿಲಯಗಳನ್ನು ವಿದ್ಯಾರ್ಥಿಗಳಿಗೆ ಅನುಕೂಲ ಮಾಡುವ ದೃಷ್ಟಿಯಿಂದ ಸಮಾಜ ಕಲ್ಯಾಣ ಇಲಾಖೆ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಗೆ ವರ್ಗಾಯಿಸಲಾಗುವುದು.

5. ಉನ್ನತ ಶಿಕ್ಷಣ ಇಲಾಖೆಯಡಿ ಎಲ್ಲಾ ಶಿಷ್ಯ ವೇತನ ಕಾರ್ಯಕ್ರಮಗಳನ್ನು ಒಗ್ಗೂಡಿಸಿ ಏಕ ಶಿಷ್ಯ ವೇತನ ಕಾರ್ಯಕ್ರಮದಡಿ ನಿರ್ವಹಿಸಲು ಕ್ರಮ ಕೈಗೊಳ್ಳಲಾಗುವುದು.

6. ಸಾರ್ವಜನಿಕ ವಿಶ್ವವಿದ್ಯಾಲಯಗಳ ಆಡಳಿತ ವ್ಯವಸ್ಥೆಯನ್ನು ಉತ್ತಮಪಡಿಸಲು 10 ಸುಶಾಸನ ಸೂಚ್ಯಂಕಗಳನ್ನು (Good Governance Indicators) ರಚಿಸಲಾಗಿದ್ದು, ಇದರನ್ವಯ ಅತ್ಯುತ್ತಮ ಸಾಧನೆ ಮಾಡುವ ವಿಶ್ವವಿದ್ಯಾಲಯಗಳಿಗೆ ತಲಾ 50 ಲಕ್ಷ ರೂ. ಗಳಂತೆ ಪ್ರೋತ್ಸಾಹ ಧನ ನೀಡಲಾಗುವುದು.

7. ವೃತ್ತಿ ಚೈತನ್ಯ ಯೋಜನೆಯಡಿಯಲ್ಲಿ ಇಲಾಖೆಯ ಸುಮಾರು 7,800 ಸಿಬ್ಬಂದಿಗಳಿಗೆ ಸೂಕ್ತ ತರಬೇತಿ ಕಾರ್ಯಕ್ರಮಗಳನ್ನು ಧಾರವಾಡದ ಉನ್ನತ ಶಿಕ್ಷಣ ಅಕಾಡೆಮಿಯಲ್ಲಿ 10 ಕೋಟಿ ರೂ. ಅಂದಾಜು ವೆಚ್ಚದಲ್ಲಿ ಆಯೋಜಿಸಲಾಗುವುದು.

8. ರಾಜ್ಯದ ಎಲ್ಲಾ ವಿಶ್ವವಿದ್ಯಾಲಯಗಳಲ್ಲಿ Ph.D. ಸೀಟುಗಳನ್ನು ಭರ್ತಿ ಮಾಡುವ ವಿಧಾನದಲ್ಲಿ ಏಕರೂಪತೆಯನ್ನು ತರಲಾಗುವುದು. ಎಲ್ಲಾ ಸರ್ಕಾರಿ ವಿಶ್ವವಿದ್ಯಾಲಯಗಳ Ph.D. ಸೀಟುಗಳಿಗೆ ಮತ್ತು ಖಾಸಗಿ ವಿಶ್ವವಿದ್ಯಾಲಯಗಳ ಶೇ.40 ಸೀಟುಗಳಿಗೆ ಕೌನ್ಸೆಲಿಂಗ್ ನಡೆಸಲಾಗುವುದು.

9. ಬೆಂಗಳೂರಿನ ಎಸ್‌.ಕೆ.ಎಸ್‌.ಜೆ.ಟಿ.ಐ ಎಂಜಿನಿಯರಿಂಗ್‌ ಕಾಲೇಜಿನಲ್ಲಿರುವ ಜವಳಿ ತಂತ್ರಜ್ಞಾನ ವಿಭಾಗವನ್ನು ರಾಷ್ಟ್ರೀಯ Technical Textile ಅಭಿಯಾನ ಮತ್ತು ಪಿಎಂ-ಮಿತ್ರ ಯೋಜನೆಗಳಡಿ Smart and Technical Textile Centre ಆಗಿ ಉನ್ನತೀಕರಿಸಲಾಗುವುದು.

10. ರಾಜ್ಯದ ಎಲ್ಲಾ ಸರ್ಕಾರಿ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಬ್ರಿಟಿಷ್‌ ಕೌನ್ಸಿಲ್‌ ಮತ್ತು ಪ್ರಾದೇಶಿಕ ಆಂಗ್ಲ ಸಂಸ್ಥೆಯ ಸಹಕಾರದೊಂದಿಗೆ ವ್ಯಾವಹಾರಿಕ ಆಂಗ್ಲ ತರಗತಿಗಳನ್ನು ಪ್ರಾರಂಭಿಸಲಾಗುವುದು.

11. ಉನ್ನತ ಶಿಕ್ಷಣ ಪಡೆಯಲು ಇರುವ ಭಾಷೆಯ ತೊಡಕು ನಿವಾರಿಸಲು ಕರ್ನಾಟಕದ ಎಲ್ಲಾ ವಿಶ್ವವಿದ್ಯಾಲಯಗಳಲ್ಲಿ ಕನ್ನಡದಲ್ಲಿ ಪರೀಕ್ಷೆ ಬರೆಯಲು ಅನುವಾಗುವಂತೆ ವ್ಯಾಪಕ ಬಳಕೆಯಲ್ಲಿರುವ ರೆಫರೆನ್ಸ್‌ ಪುಸ್ತಕಗಳನ್ನು ಹಾಗೂ ಪಠ್ಯ ವಿಷಯಗಳನ್ನು ಭಾಷಾಂತರಿಸಲು ಕ್ರಮ ಕೈಗೊಳ್ಳಲಾಗುವುದು.

ವೈದ್ಯಕೀಯ ಶಿಕ್ಷಣ
1. ರಾಜ್ಯದಲ್ಲಿ ಈಗಾಗಲೇ ಆರಂಭಿಸಲಾಗಿರುವ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗಳ ಕಟ್ಟಡ ನಿರ್ಮಾಣ ಕಾಮಗಾರಿಗಳಿಗೆ
450 ಕೋಟಿ ರೂ.ಗಳನ್ನು ಮೀಸಲಿಡಲಾಗಿದೆ. ಪ್ರಸಕ್ತ ಸಾಲಿನಲ್ಲಿ ಗದಗ, ಕೊಪ್ಪಳ, ಕಾರವಾರ ಮತ್ತು ಕೊಡಗು ಜಿಲ್ಲೆಗಳಲ್ಲಿ 450 ಬೆಡ್‌ ಆಸ್ಪತ್ರೆಗಳ ನಿರ್ಮಾಣ ಕಾರ್ಯವನ್ನು ಆದ್ಯತೆ ಮೇಲೆ ಪೂರ್ಣಗೊಳಿಸಲಾಗುವುದು.

2. ರಾಜೀವ್‌ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ವತಿಯಿಂದ ರಾಮನಗರ ಜಿಲ್ಲೆಯ ಕನಕಪುರ ತಾಲ್ಲೂಕಿನಲ್ಲಿ ಒಂದು ಹೊಸ ವೈದ್ಯಕೀಯ ಕಾಲೇಜನ್ನು ಸ್ಥಾಪಿಸಲಾಗುವುದು.

3. ಮೈಸೂರು, ಕಲಬುರಗಿ ಮತ್ತು ಬೆಳಗಾವಿ ಜಿಲ್ಲೆಗಳಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳ ಕಾರ್ಯಾರಂಭ ಮತ್ತು ಸುಟ್ಟ ಗಾಯಗಳ ಘಟಕ ಸ್ಥಾಪನೆಗೆ 155 ಕೋಟಿ ರೂ.ಗಳನ್ನು ಒದಗಿಸಲಾಗುವುದು.

4. NIMHANS ಸಂಸ್ಥೆಯ ಆವರಣದಲ್ಲಿ 146 ಕೋಟಿ ರೂ.ಗಳ ವೆಚ್ಚದಲ್ಲಿ ಅಂಗಾಂಗ ಜೋಡಣೆಗೆ ಮೀಸಲಾದ ದೇಶದ ಪ್ರಥಮ ಸಾರ್ವಜನಿಕ ಆಸ್ಪತ್ರೆಯನ್ನು ಸ್ಥಾಪಿಸಲಾಗುವುದು. ಜೊತೆಯಲ್ಲಿ ನಾನ್‌ ಆಲ್ಕೋಹಾಲಿಕ್‌ ಫ್ಯಾಟಿ ಲಿವರ್‌ ಖಾಯಿಲೆಯ (NAFLD) ರೋಗಿಗಳಲ್ಲಿ ಸಿರೋಸಿಸ್‌ ಮತ್ತು ಕ್ಯಾನ್ಸರ್‌ ಪತ್ತೆ ಹಚ್ಚಲು ಒಂದು FibroScan ಅನ್ನು ಒದಗಿಸಲಾಗುವುದು.

5. ಕಲಬುರಗಿಯ ಗುಲ್ಬರ್ಗಾ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ (GIMS) 200 ಹಾಸಿಗೆಯ ಹೊಸ ತಾಯಿ ಮತ್ತು ಮಕ್ಕಳ ಆಸ್ಪತ್ರೆಯನ್ನು 70 ಕೋಟಿ ರೂ. ಗಳ ವೆಚ್ಚದಲ್ಲಿ ನಿರ್ಮಿಸಲಾಗುವುದು.

6. ರಾಜೀವ್‌ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ ವತಿಯಿಂದ ಬೆಳಗಾವಿ, ಕಲಬುರಗಿ, ಹುಬ್ಬಳ್ಳಿ, ದಾವಣಗೆರೆ, ದಕ್ಷಿಣ ಕನ್ನಡ ಮತ್ತು ಮೈಸೂರು ಜಿಲ್ಲೆಗಳಲ್ಲಿ ಅತ್ಯಾಧುನಿಕ ಕೌಶಲ್ಯ ಪ್ರಯೋಗಾಲಯಗಳು, ಸಂಶೋಧನಾ ಕೇಂದ್ರ ಮತ್ತು ಒಳಾಂಗಣ ಕ್ರೀಡಾ ಸೌಲಭ್ಯಗಳನ್ನು ಹಾಗೂ ಕಲಬುರಗಿ ಮತ್ತು ಮೈಸೂರು ಜಿಲ್ಲೆಗಳಲ್ಲಿ ಅಲೈಡ್ ಹೆಲ್ತ್ ಸೈನ್ಸಸ್ (Allied Health Sciences) ಕಾಲೇಜುಗಳನ್ನು ಸ್ಥಾಪಿಸಲಾಗುವುದು.

7. ಮೈಸೂರು ಮತ್ತು ಕಲಬುರಗಿಯಲ್ಲಿ ಟ್ರಾಮಾ ಕೇರ್ ಸೆಂಟರ್‌ಗಳ (Trauma Care Center) ಕಾರ್ಯಾಚರಣೆಗೆ 30 ಕೋಟಿ ರೂ.ಗಳನ್ನು ಒದಗಿಸಲಾಗುವುದು.

8. ರಾಜ್ಯದ ಸಾವಿರಾರು ಬಡಜನರಿಗೆ ಕೈಗೆಟಕುವ ದರದಲ್ಲಿ ಕ್ಯಾನ್ಸರ್‌ ರೋಗಕ್ಕೆ ಚಿಕಿತ್ಸೆ ನೀಡುವ ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆಯು (Kidwai Memorial Institute of Oncology) ಸುವರ್ಣ ಮಹೋತ್ಸವದ ಹೊಸ್ತಿಲಿನಲ್ಲಿದೆ. ಈ ಸಂದರ್ಭದಲ್ಲಿ ಆಸ್ಪತ್ರೆಯ ಕಲಬುರಗಿ ಮತ್ತು ಮೈಸೂರಿನಲ್ಲಿರುವ ಪ್ರಾದೇಶಿಕ ಘಟಕಗಳಲ್ಲಿ ಸೌಲಭ್ಯಗಳ ಸುಧಾರಣೆಗೆ 20 ಕೋಟಿ ರೂ. ಒದಗಿಸಲಾಗುವುದು.

9. ಚಿತ್ರದುರ್ಗದ ವೈದ್ಯಕೀಯ ಕಾಲೇಜು ಪ್ರಾರಂಭಿಸಲು ಎಲ್ಲಾ ಪೂರ್ವ ಸಿದ್ಧತೆಗಳು ಪೂರ್ಣಗೊಂಡಿದ್ದು, ಶೀಘ್ರದಲ್ಲಿಯೇ ವಿದ್ಯಾರ್ಥಿಗಳ ದಾಖಲಾತಿ ಪ್ರಕ್ರಿಯೆ ಪ್ರಾರಂಭವಾಗಲಿದೆ.

10. ಬೆಂಗಳೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯಲ್ಲಿ ಸಂಪೂರ್ಣ ಸ್ವಯಂಚಾಲಿತ ಮತ್ತು ಕೇಂದ್ರೀಕೃತ ರಕ್ತನಿಧಿ ನಿರ್ವಹಣಾ ವ್ಯವಸ್ಥೆಯನ್ನು ಐದು ಕೋಟಿ ರೂ. ವೆಚ್ಚದಲ್ಲಿ ಸ್ಥಾಪಿಸಲಾಗುವುದು ಎಂದು ಹೇಳಿದ್ದಾರೆ.

ಇದನ್ನೂ ಓದಿ: Budget: ಆಶಾಕಿರಣ ಯೋಜನೆ, ಸಿ.ಟಿ ಸ್ಕ್ಯಾನ್ ಸೆಂಟರ್; ಆರೋಗ್ಯ ಕ್ಷೇತ್ರಕ್ಕೆ ಸಿಕ್ಕಿದ್ದೇನು?

ಟಾಪ್ ನ್ಯೂಸ್

UV-Navaroopa

Manipal: ಗ್ರಾಮೀಣ ಓದುಗರ ಸ್ಪಂದನೆಯೇ ಯಶಸ್ಸು: ಎಂಡಿ, ಸಿಇಒ ವಿನೋದ್‌ ಕುಮಾರ್‌

uppunda1

Uppunda: ಶ್ರೀದುರ್ಗಾಪರಮೇಶ್ವರಿ ಅಮ್ಮನವರ ಸಂಭ್ರಮದ ಮನ್ಮಹಾರಥೋತ್ಸವ

Govinda-pai-Book

Udupi: ಗೋವಿಂದ ಪೈಗಳ ಸಂಶೋಧನ ಬರಹಗಳು ಸಮಗ್ರತೆಯ ಹೂರಣ: ಡಾ.ವಿವೇಕ್‌ ರೈ

DK SHI NEW

MLAs 50 ಕೋಟಿ ರೂ.; ಸಾಕ್ಷಿ ಕೊಡುವ ಹೊಣೆ ಯತ್ನಾಳ್‌ದು: ಡಿಕೆಶಿ

Patla-yakshadruva

Mangaluru: ಎಲ್ಲ ವರ್ಗದ ಜನರ ಸಹಕಾರದಿಂದ ಸಾಮಾಜಿಕ ಸಾಧನೆ: ಕನ್ಯಾನ ಸದಾಶಿವ ಶೆಟ್ಟಿ

Vijayendra (2)

Congress 40 ಪರ್ಸೆಂಟ್‌ ಕಮಿಷನ್‌ ಆರೋಪ ಸುಳ್ಳೆಂದು ಸಾಬೀತು: ಬಿಜೆಪಿ

police

Belgavi; ವೇಶ್ಯಾವಾಟಿಕೆ ಆರೋಪ: ತಾಯಿ, ಮಗಳನ್ನು ರಸ್ತೆಗೆ ಎಳೆದು ಹಲ್ಲೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ʻಬ್ರಾಂಡ್‌ ಬೆಂಗಳೂರುʼ ಪರಿಕಲ್ಪನೆಯಡಿ ಬೆಂಗಳೂರನ್ನು ಅಂತಾರಾಷ್ಟ್ರೀಯ ಮಟ್ಟಕ್ಕೆ ಏರಿಸುವ ಗುರಿ

ʻಬ್ರಾಂಡ್‌ ಬೆಂಗಳೂರುʼ ಪರಿಕಲ್ಪನೆಯಡಿ ಬೆಂಗಳೂರನ್ನು ಅಂತಾರಾಷ್ಟ್ರೀಯ ಮಟ್ಟಕ್ಕೆ ಏರಿಸುವ ಗುರಿ

ಎಲ್ಲಾ ದೇವಸ್ಥಾನಗಳಿಗೆ ಸಮಾನ ಸಹಾಯ ಅನುದಾನ: ಧಾರ್ಮಿಕ ದತ್ತಿ ಕ್ಷೇತ್ರಕ್ಕೆ ಸಿಕ್ಕಿದ್ದೇನು?

ಎಲ್ಲಾ ದೇವಸ್ಥಾನಗಳಿಗೆ ಸಮಾನ ಸಹಾಯ ಅನುದಾನ: ಧಾರ್ಮಿಕ ದತ್ತಿ ಕ್ಷೇತ್ರಕ್ಕೆ ಸಿಕ್ಕಿದ್ದೇನು?

Budget: ಮಹಿಳೆಯರಿಗೆ ಶಕ್ತಿ ತುಂಬಲು: ‘ಉದ್ಯಮ ಶಕ್ತಿ’ ಯೋಜನೆಯಡಿ 100 ಪೆಟ್ರೋಲ್ ಬಂಕ್

Budget: ಮಹಿಳೆಯರಿಗೆ ಶಕ್ತಿ ತುಂಬಲು ‘ಉದ್ಯಮ ಶಕ್ತಿ’ ಯೋಜನೆಯಡಿ 100 ಪೆಟ್ರೋಲ್ ಬಂಕ್

ಮೂಲಸೌಕರ್ಯ ಅಭಿವೃದ್ಧಿ, ಬಂದರು,ಒಳನಾಡು ಜಲಸಾರಿಗೆ ಇಲಾಖೆಗೆ ಬಜೆಟ್‍ನಲ್ಲಿ ಸಿಕ್ಕಿದ್ದೇನು?

ಮೂಲಸೌಕರ್ಯ ಅಭಿವೃದ್ಧಿ, ಬಂದರು,ಒಳನಾಡು ಜಲಸಾರಿಗೆ ಇಲಾಖೆಗೆ ಬಜೆಟ್‍ನಲ್ಲಿ ಸಿಕ್ಕಿದ್ದೇನು?

Budget ಕೆರೆ ಪುನರುಜ್ಜೀವನಕ್ಕೆ ಹಲವು ಕ್ರಮ; ಜಲಸಂಪನ್ಮೂಲ & ಸಣ್ಣನೀರಾವರಿಗೆ ಸಿಕ್ಕಿದ್ದೇನು?

Budget ಕೆರೆ ಪುನರುಜ್ಜೀವನಕ್ಕೆ ಹಲವು ಕ್ರಮ; ಜಲಸಂಪನ್ಮೂಲ & ಸಣ್ಣನೀರಾವರಿಗೆ ಸಿಕ್ಕಿದ್ದೇನು?

MUST WATCH

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

ಹೊಸ ಸೇರ್ಪಡೆ

UV-Navaroopa

Manipal: ಗ್ರಾಮೀಣ ಓದುಗರ ಸ್ಪಂದನೆಯೇ ಯಶಸ್ಸು: ಎಂಡಿ, ಸಿಇಒ ವಿನೋದ್‌ ಕುಮಾರ್‌

puttige-4

Udupi; ಗೀತಾರ್ಥ ಚಿಂತನೆ 96 : ವ್ಯಾಮೋಹ ಜಾಲ vs ಜಾಗೃತಾತ್ಮ

uppunda1

Uppunda: ಶ್ರೀದುರ್ಗಾಪರಮೇಶ್ವರಿ ಅಮ್ಮನವರ ಸಂಭ್ರಮದ ಮನ್ಮಹಾರಥೋತ್ಸವ

Govinda-pai-Book

Udupi: ಗೋವಿಂದ ಪೈಗಳ ಸಂಶೋಧನ ಬರಹಗಳು ಸಮಗ್ರತೆಯ ಹೂರಣ: ಡಾ.ವಿವೇಕ್‌ ರೈ

DK SHI NEW

MLAs 50 ಕೋಟಿ ರೂ.; ಸಾಕ್ಷಿ ಕೊಡುವ ಹೊಣೆ ಯತ್ನಾಳ್‌ದು: ಡಿಕೆಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.