Budget:ಅನುಗ್ರಹ ಯೋಜನೆ ಮತ್ತೆ ಜಾರಿಗೆ; ಆಕಸ್ಮಿಕವಾಗಿ ಸಾವನ್ನಪ್ಪಿದ ಜಾನುವಾರುಗಳಿಗೆ ಪರಿಹಾರ
Team Udayavani, Jul 7, 2023, 3:16 PM IST
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಬಜೆಟ್ ನಲ್ಲಿ ಪಶುಸಂಗೋಪನೆ ಕ್ಷೇತ್ರಕ್ಕೆ ಹಲವು ಯೋಜನೆ ಘೋಷಿಸಿದ್ದಾರೆ. ಈ ಹಿಂದೆ ಜಾರಿಯಲ್ಲಿದ್ದ ಅನುಗ್ರಹ ಯೋಜನೆಯನ್ನು ಮತ್ತೆ ಜಾರಿಗೊಳಿಸಲಾಗಿದೆ.
ಪ್ರಮುಖ ಅಂಶಗಳು ಇಲ್ಲಿವೆ
1 ಕಾಂಗ್ರೆಸ್ ಸರ್ಕಾರದ ಹಿಂದಿನ ಅವಧಿಯಲ್ಲಿ ಜಾನುವಾರುಗಳ ಆಕಸ್ಮಿಕ ಸಾವಿನ ಸಂದರ್ಭದಲ್ಲಿ ರೈತರು ಅನುಭವಿಸುವ ಸಂಕಷ್ಟ ನಿವಾರಣೆಗೆ ʻಅನುಗ್ರಹʼ ಯೋಜನೆಯನ್ನು ಪ್ರಾರಂಭಿಸಲಾಗಿತ್ತು. ಈ ಯೋಜನೆಯನ್ನು ಪುನರ್‌ಸ್ಥಾಪಿಸಿ ಕುರಿ ಮತ್ತು ಮೇಕೆಗಳಿಗೆ 5,000 ರೂ. ಹಾಗೂ ಹಸು, ಎಮ್ಮೆ ಮತ್ತು ಎತ್ತುಗಳಿಗೆ 10,000 ರೂ. ಪರಿಹಾರ ಒದಗಿಸಲಾಗುವುದು.
2 ʻಗೋವಿನಿಂದ ಗ್ರಾಹಕರವರೆಗೆ ಗುಣಮಟ್ಟದ ಶ್ರೇಷ್ಠತೆʼ ಎಂಬ ಧ್ಯೇಯವಾಕ್ಯ ಹೊಂದಿರುವ ʻನಂದಿನಿʼಯು ಕೋಟ್ಯಾಂತರ ಜನರ ಬದುಕಿಗೆ ಆಸರೆಯಾಗಿದೆ. ನಂದಿನಿ ಬ್ರಾಂಡ್ ಕನ್ನಡಿಗರೊಂದಿಗೆ ಭಾವನಾತ್ಮಕ ಬೆಸುಗೆಯನ್ನು ಹೊಂದಿದ್ದು, ಇದನ್ನು ಉಳಿಸಿ ಇನ್ನಷ್ಟು ಬೆಳೆಸಲು ನಮ್ಮ ಸರ್ಕಾರ ಬದ್ಧವಾಗಿದೆ.
3 ರಾಜ್ಯದಲ್ಲಿ 2022-23 ನೇ ಸಾಲಿನಲ್ಲಿ ಚರ್ಮಗಂಟು ರೋಗದ ಹರಡುವಿಕೆ, ಪಶು ಆಹಾರದ ಕಚ್ಚಾ ಪದಾರ್ಥಗಳ ಬೆಲೆ ಏರಿಕೆ, ವಾಣಿಜ್ಯ ಬೆಳೆಗಳ ಪ್ರದೇಶಗಳ ಹೆಚ್ಚಳ ಹಾಗೂ ಮುಂಗಾರು ತಡವಾಗಿರುವ ಕಾರಣಗಳಿಂದ ಹಿಂದಿನ ವರ್ಷಗಳಿಗೆ ಹೋಲಿಸಿದಲ್ಲಿ ಹಾಲಿನ ಇಳುವರಿಯಲ್ಲಿ ಶೇ.5 ರಿಂದ ಶೇ.7 ರಷ್ಟು ಇಳಿಕೆಯಾಗಿರುತ್ತದೆ. ಉತ್ತಮ ಹಾಲು ನೀಡುವ ತಳಿಗಳನ್ನು ಅಭಿವೃದ್ಧಿಪಡಿಸುವ ಹಾಗೂ ರೋಗಗಳಿಂದ ಬಳಲುತ್ತಿರುವ ಜಾನುವಾರುಗಳಿಗೆ ಸೂಕ್ತ ಸಮಯದಲ್ಲಿ ಸಮರ್ಪಕ ಚಿಕಿತ್ಸೆ, ಔಷಧಿ ಮತ್ತು ಲಸಿಕೆಗಳನ್ನು ಒದಗಿಸುವ ಮೂಲಕ ಹಾಲಿನ ಇಳುವರಿಯನ್ನು ಹೆಚ್ಚಿಸಲು ಪ್ರಯತ್ನಿಸಲಾಗುವುದು.
4 ಕಳೆದ ಸಾಲಿನಲ್ಲಿ ರಾಜ್ಯದಲ್ಲಿ ಚರ್ಮಗಂಟು ರೋಗದಿಂದ ಒಟ್ಟು 32,045 ಜಾನುವಾರುಗಳು ಮರಣ ಹೊಂದಿರುತ್ತವೆ. ಈ ಪೈಕಿ ಒಟ್ಟು 25,859 ಮರಣ ಹೊಂದಿದ ಜಾನುವಾರುಗಳಿಗೆ 53 ಕೋಟಿ ರೂ. ಪರಿಹಾರಧನವನ್ನು ವಿತರಿಸಲಾಗಿದೆ. ಬಾಕಿ ಇರುವ 5,851 ಮರಣಹೊಂದಿದ ಜಾನುವಾರುಗಳ ಮಾಲೀಕರಿಗೆ 12 ಕೋಟಿ ರೂ. ಪರಿಹಾರಧನವನ್ನು ವಿತರಿಸಲು ಕ್ರಮ ವಹಿಸಲಾಗುವುದು.
5 ಗ್ರಾಹಕರಿಗೆ ಅಗ್ಗದ ದರದಲ್ಲಿ ಗುಣಮಟ್ಟದ ಪ್ರೋಟೀನ್‌ಯುಕ್ತ ಮಾಂಸ ಮತ್ತು ಮೊಟ್ಟೆ ಪೂರೈಕೆಗೆ ಅವಕಾಶ ಕಲ್ಪಿಸಲು ಖಾಸಗಿ ಸಹಭಾಗಿತ್ವದಲ್ಲಿ ಜಾನುವಾರು ಉತ್ಪನ್ನಗಳ ಸಂಸ್ಕರಣೆ ಮತ್ತು ಮೌಲ್ಯವರ್ಧನೆ ಘಟಕಗಳು ಹಾಗೂ ಉತ್ತಮವಾದ ಮಾರುಕಟ್ಟೆ ಅಭಿವೃದ್ಧಿ ಮಾಡಲಾಗುವುದು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ
Waqf: ರೈತರಿಗೆ ನೀಡಿರುವ ನೋಟಿಸ್ ತಕ್ಷಣ ವಾಪಸ್: ಅಧಿಕಾರಿಗಳಿಗೆ ಸಿಎಂ ಖಡಕ್ ಸೂಚನೆ
Waqf Issue: ನ.4ರಂದು ರಾಜ್ಯಾದ್ಯಂತ ಕಾಂಗ್ರೆಸ್ ಸರ್ಕಾರದ ವಿರುದ್ದ ಬಿಜೆಪಿ ಪ್ರತಿಭಟನೆ
High Court: ಕ್ರಿಮಿನಲ್ ಕೇಸ್ ಡೈರಿ ಪ್ರತೀ ಪುಟಕ್ಕೆ ಸಹಿ:ಅರ್ಜಿ ವಜಾಗೊಳಿಸಿದ ಹೈಕೋರ್ಟ್
Bengaluru: ಸುವರ್ಣ ಸಂಭ್ರಮದಲ್ಲಿ ರಾಜ್ಯೋತ್ಸವ ವೈಭವ
MUST WATCH
ಹೊಸ ಸೇರ್ಪಡೆ
Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ
Subrahmanya; ಅನ್ಯಕೋಮಿನ ವಿದ್ಯಾರ್ಥಿನಿಗೆ ಮೆಸೇಜ್: ಗುಂಪಿನಿಂದ ಯುವಕನಿಗೆ ಥಳಿತ
Kundapura; ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದ ಬೈಕ್: ಸವಾರ ದುರ್ಮರ*ಣ
J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ
Pushpa2: ಅಲ್ಲು ಅರ್ಜುನ್ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.