ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ: ಯುವಕನಿಗೆ 20 ವರ್ಷ ಕಠಿಣ ಸಜೆ
Team Udayavani, Jul 7, 2023, 8:42 PM IST
ಚಾಮರಾಜನಗರ: ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಯುವಕನೋರ್ವನಿಗೆ ನಗರದ ಮಕ್ಕಳ ಸ್ನೇಹಿ ಮತ್ತು 1ನೇ ಹೆಚ್ಚುವರಿಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ 20 ವರ್ಷಗಳ ಕಠಿಣ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.
ತಾಲೂಕಿನ ಗ್ರಾಮವೊಂದರ ರಂಗಸ್ವಾಮಿ (21) ಶಿಕ್ಷೆಗೊಳಗಾದ ಅಪರಾಧಿ. ನಗರದ ಗ್ರಾಮಾಂತರ ಠಾಣೆಯಲ್ಲಿ 2020ರ ಮಾರ್ಚ್ 11 ರಂದು ಈ ಕುರಿತು ಪ್ರಕರಣ ದಾಖಲಾಗಿತ್ತು.
ರಂಗಸ್ವಾಮಿಯು 15 ವರ್ಷದ ಅಪ್ರಾಪ್ತ ಬಾಲಕಿಯನ್ನು ಬೈಕ್ನಲ್ಲಿ ಕರೆದುಕೊಂಡು ಹೋಗುವ ಹೋಗುವ ಸಮಯದಲ್ಲಿ ಮೈ ಕೈ ಮುಟ್ಟಿ, ಅಸಭ್ಯವಾಗಿ ನಡೆದುಕೊಂಡಿದ್ದ. ಈ ಸಂದರ್ಭದಲ್ಲಿ ನೊಂದ ಬಾಲಕಿ, ನೀನು ನನಗೆ ಅಣ್ಣನಾಗಬೇಕು. ಇದೆಲ್ಲ ಬೇಡ ಎಂದರೂ ಕೇಳದೇ ಅಕೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ. ಈ ಸಂಬಂಧ ಠಾಣೆಯಲ್ಲಿ ಪೋಕ್ಸೊ ಕಾಯ್ದೆ ಅಡಿಯಲ್ಲಿ ರಂಗಸ್ವಾಮಿ ವಿರುದ್ಧ ಪ್ರಕರಣ ದಾಖಲಾಗಿತ್ತು.
ತನಿಖೆ ನಡೆಸಿದ್ದ ಆಗಿನ ಸರ್ಕಲ್ ಇನ್ಸ್ಪೆಕ್ಟರ್ ಕೆ.ಎಂ. ಮಂಜು ಆರೋಪಿ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು. ನ್ಯಾಯಾಲಯದಲ್ಲಿ ವಿಚಾರಣೆ ನಡೆದು, ಆರೋಪ ಸಾಬೀತಾಗಿದ್ದರಿಂದ ನಗರದ ಮಕ್ಕಳ ಸ್ನೇಹಿ ಮತ್ತು 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರಾದ ನಿಶಾರಾಣಿ ಅವರು ರಂಗಸ್ವಾಮಿಗೆ 20 ವರ್ಷಗಳ ಕಠಿಣ ಶಿಕ್ಷೆ ವಿಧಿಸಿ ಆದೇಶ ಹೊರಡಿಸಿದ್ದಾರೆ. ಅಲ್ಲದೇ 40 ಸಾವಿರ ರೂ. ದಂಡ ವಿಧಿಸಿದ್ದಾರೆ.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವು ನೊಂದ ಬಾಲಕಿಗೆ 30 ದಿನಗಳ ಒಳಗಾಗಿ 4 ಲಕ್ಷ ರೂ. ಹಣವನ್ನು ಪರಿಹಾರ ರೂಪದಲ್ಲಿ ನೀಡಬೇಕು ಎಂದು ನ್ಯಾಯಾಧೀಶರು ಆದೇಶದಲ್ಲಿ ತಿಳಿಸಿದ್ದಾರೆ. ಪ್ರಾಸಿಕ್ಯೂಷನ್ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕ ಕೆ. ಯೋಗೇಶ್ ವಾದ ಮಂಡಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Udupi: ಶ್ರೀಕೃಷ್ಣ ಮಠ: ಗೀತೋತ್ಸವಕ್ಕೆ ಪರ್ತಗಾಳಿ ಶ್ರೀಗಳಿಗೆ ಆಹ್ವಾನ
Udupi: ಸಮಾಜ ರೂಪಿಸುವಲ್ಲಿ ಯಕ್ಷಗಾನ ಪಾತ್ರ ಹಿರಿದು: ಪೇಜಾವರ ಶ್ರೀ
Kaup: ಹೊಸ ಮಾರಿಗುಡಿ ದೇವಸ್ಥಾನ: ಬೆಂಗಳೂರಿನಲ್ಲಿ ವಾಗೀಶ್ವರಿ ಪೂಜೆ, ಲೇಖನ ಸಂಕಲ್ಪ
Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ
ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಚಿತ್ತೂರು ಪ್ರಭಾಕರ ಆಚಾರ್ಯರಿಗೆ ಗೌರವಾರ್ಪಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.