Telangana ; 6100 ಕೋಟಿ ರೂ.ಗಳ ಅಭಿವೃದ್ಧಿ ಯೋಜನೆಗಳಿಗೆ ಪ್ರಧಾನಿ ಮೋದಿ ಶಂಕುಸ್ಥಾಪನೆ
ಬಿಜೆಪಿ ಹೊಸ ರಾಜ್ಯಾಧ್ಯಕ್ಷರ ನೇಮಕದ ಬೆನ್ನಲ್ಲೇ ಚುನಾವಣ ಕಣಕ್ಕೆ ರಂಗು
Team Udayavani, Jul 8, 2023, 3:04 PM IST
ವಾರಂಗಲ್: 21ನೇ ಶತಮಾನದ ಮೂರನೇ ದಶಕವು ಸುವರ್ಣ ಅವಧಿಯಾಗಿದ್ದು, ಇದನ್ನು ಸಂಪೂರ್ಣವಾಗಿ ಬಳಸಿಕೊಳ್ಳಬೇಕು ಮತ್ತು ರಾಷ್ಟ್ರದ ಯಾವುದೇ ಭಾಗವು ವೇಗವಾಗಿ ಪ್ರಗತಿ ಸಾಧಿಸುವಲ್ಲಿ ಹಿಂದೆ ಬೀಳಬಾರದು ಎಂದು ಪ್ರಧಾನಿ ನರೇಂದ್ರ ಮೋದಿ ಶನಿವಾರ ಹೇಳಿದ್ದಾರೆ.
ಚುನಾವಣೆ ನಡೆಯಲಿರುವ ತೆಲಂಗಾಣದಲ್ಲಿ ಆಡಳಿತಾರೂಢ ಬಿಆರ್ಎಸ್ ಬಹಿಷ್ಕಾರದ ಮಧ್ಯೆ, ಮೋದಿ ಅವರು ದಕ್ಷಿಣ ರಾಜ್ಯಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಸುಮಾರು 6,100 ಕೋಟಿ ರೂಪಾಯಿ ಮೌಲ್ಯದ ಹಲವಾರು ಮೂಲಸೌಕರ್ಯ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ಮಾಡಿದ್ದಾರೆ.
ಸಭೆಯನ್ನುದ್ದೇಶಿಸಿ ಮಾತನಾಡಿದ ಮೋದಿ, ಇಂದು ಇಡೀ ವಿಶ್ವವೇ ಭಾರತದಲ್ಲಿ ಹೂಡಿಕೆ ಮಾಡಲು ಮುಂದೆ ಬರುತ್ತಿದೆ. ಇಂದಿನ ಭಾರತ ಯುವ ಮತ್ತು ಶಕ್ತಿಯಿಂದ ತುಂಬಿದೆ.ದೇಶದ ಯಾವುದೇ ಭಾಗವು ಬೆಳವಣಿಗೆಯಲ್ಲಿ ಹಿಂದುಳಿದಿಲ್ಲ. ತೆಲಂಗಾಣವು ಎಲ್ಲಾ ನೆರೆಯ ಆರ್ಥಿಕ ಕಾರಿಡಾರ್ಗಳನ್ನು ಸಂಪರ್ಕಿಸುವ ಕೇಂದ್ರವಾಗಿ ಬದಲಾಗುತ್ತಿದೆ. ರಾಜ್ಯದ ಕೈಗಾರಿಕೆಗಳು ಮತ್ತು ಪ್ರವಾಸೋದ್ಯಮವು ಇದರಿಂದ ಪ್ರಯೋಜನ ಪಡೆಯುತ್ತಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.