ಆಷಾಢ ಶುಕ್ರವಾರ: ದೇವಿ ದರ್ಶನಕ್ಕೆ ಭಕ್ತ ಸಾಗರ
Team Udayavani, Jul 8, 2023, 4:24 PM IST
ಶ್ರೀರಂಗಪಟ್ಟಣ/ಮಂಡ್ಯ: ಆಷಾಢ ಮಾಸದ 3ನೇ ಶುಕ್ರವಾರದ ಅಂಗವಾಗಿ ಶ್ರೀರಂಗಪಟ್ಟಣದ ಚಾಮುಂಡೇಶ್ವರಿ, ಶ್ರೀಲಕ್ಷ್ಮೀದೇವಿ, ಗಾಂಜಾಂನ ನಿಮಿಷಾಂಬ ಸೇರಿ ಮಂಡ್ಯ ಜಿಲ್ಲಾದ್ಯಂತ ವಿಶೇಷ ಪೂಜಾ ಕೈಂಕರ್ಯಗಳು ನಡೆದು, ಸಾವಿರಾರು ಭಕ್ತರು ಪಾಲ್ಗೊಂಡು ದೇವಿ ದರ್ಶನ ಪಡೆದರು.
ಶ್ರೀರಂಗಪಟ್ಟಣದ ಚಾಮುಂಡೇಶ್ವರಿ ಬೀದಿಯಲ್ಲಿನ ದೇವಿಯನ್ನು ವಿಶೇಷವಾಗಿ ಮಾವಿನ ಹಣ್ಣುಗಳಿಂದ ಅಲಂಕರಿಸಲಾಗಿತ್ತು. ಪಟ್ಟ ಣದ ಮುಖ್ಯ ಬೀದಿಯಲ್ಲಿನ ಶ್ರೀ ಲಕ್ಷ್ಮೀ ದೇವಿಗೆ ವಿವಿಧ ಬಗೆಯ ಹೂ ಗಳಿಂದ ದೇವಿ, ದೇಗುಲ ಪ್ರಾಂಗಣವನ್ನು ಅಲಂಕರಿಸ ಲಾ ಗಿತ್ತು. ಭಕ್ತರು ಸಾಲಿನಲ್ಲಿ ನಿಂತು ದರ್ಶನ ಪಡೆದರು. ಪಟ್ಟಣ ಮಾತ್ರವಲ್ಲದೆ, ಸುತ್ತಮು ತ್ತಲ ಗ್ರಾಮಗಳಿಂದ ಭಕ್ತರು ಆಗಮಿಸಿ ದೇವಿ ದರ್ಶನ ಪಡೆದು, ವಿಶೇಷ ಪೂಜೆ ಸಲ್ಲಿಸಿ ಭಕ್ತಿಭಾವ ಮೆರೆದರು. ಬೆಳಗ್ಗಿನಿಂದ ರಾತ್ರಿ ವರೆಗೂ ದೇವರ ದರ್ಶನಕ್ಕೆ ಆಗಮಿಸಿದ್ದ ಭಕ್ತರಿಗೆ ಬೆಲ್ಲದನ್ನ, ತರ ಕಾರಿ ಬಾತು, ಮೊಸರನ್ನು ವಿತರಿಸಲಾಯಿತು.
ನಿಮಿಷಾಂಬಗೆ ವಿಶೇಷ ಪೂಜೆ: ಶ್ರೀರಂಗ ಪಟ್ಟಣ ಸಮೀಪದ ಗಂಜಾಂನ ನಿಮಿಷಾಂಬ ದೇವಾಲಯದಲ್ಲಿ ಆಷಾಢ ಶುಕ್ರವಾರ ಅಂಗವಾಗಿ ಬೆಳಗ್ಗಿನಿಂದಲೇ ವಿಶೇಷ ಪೂಜೆಗಳು ನಡೆದವು. ಮಂಡ್ಯ, ಮೈಸೂರು, ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಭಾಗಗಳಿಂದ ಭಕ್ತರು ಆಗಮಿಸಿ ಪೂಜೆ ಸಲ್ಲಿಸಿದರು. ಎಲ್ಲಾ ಶಕ್ತಿ ದೇಗುಲ ದಲ್ಲಿ ಭಕ್ತ ರಿಗೆ ಅನ್ನ ಸಂತ ರ್ಪಣೆ ಏರ್ಪಡಿಸಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಂಡ್ಯ ಸಾಹಿತ್ಯ ಸಮ್ಮೇಳನದಲ್ಲಿ ಕನ್ನಡಕ್ಕಾಗಿ ಕೈಗೊಂಡ 5 ನಿರ್ಣಯಗಳೇನು ಗೊತ್ತಾ?
ಬಳ್ಳಾರಿಯಲ್ಲೇ ಏಕೆ 88ನೇ ಕನ್ನಡ ಸಾಹಿತ್ಯ ಸಮ್ಮೇಳನ?
Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ
Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ
H.D. Kumaraswamy: 15,000 ಕೋಟಿ ರೂ. ವೆಚ್ಚದಲ್ಲಿ ಭದ್ರಾವತಿ ಕಬ್ಬಿಣ ಕಾರ್ಖಾನೆಗೆ ಮರುಜೀವ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ
Road Mishap: ಬೈಕ್- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು
Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು
Rule; 5, 8ನೇ ತರಗತಿಯಲ್ಲಿ ಫೈಲ್ ಆದರೆ ಭಡ್ತಿ ನೀಡುವಂತಿಲ್ಲ; ಅದೇ ಕ್ಲಾಸಲ್ಲಿ ಮುಂದುವರಿಕೆ!
Manipur; ಪೊಲೀಸ್ ಇಲಾಖೆಯಲ್ಲಿ ಮೈತೇಯಿ ಮತ್ತು ಕುಕಿಗಳು ಒಟ್ಟಾಗಿ ಕೆಲಸ ಮಾಡಬೇಕು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.