ಬೆಳಗಾವಿ: ಖಾಸಗಿ ತರಕಾರಿ ಮಾರುಕಟ್ಟೆ ರದ್ದುಗೊಳಿಸಲು ಒತ್ತಾಯ
ಈ ಖಾಸಗಿ ತರಕಾರಿ ಮಾರುಕಟ್ಟೆಗೆ ರಾಜಕೀಯ ಪ್ರಭಾವ ಬಹಳಷ್ಟಿದೆ.
Team Udayavani, Jul 8, 2023, 5:35 PM IST
ಬೆಳಗಾವಿ: ನಗರದಲ್ಲಿರುವ ನಿರ್ಮಾಣಗೊಂಡಿರುವ ಕಾನೂನು ಬಾಹಿರ ಖಾಸಗಿ ತರಕಾರಿ ಮಾರುಕಟ್ಟೆ ರದ್ದುಗೊಳಿಸಿ ಕೃಷಿ
ಉತ್ಪನ್ನ ಮಾರುಕಟ್ಟೆ ಸಮಿತಿ ಆವರಣದಲ್ಲಿ ಮಾರುಕಟ್ಟೆ ಆರಂಭಿಸುವಂತೆ ಆಗ್ರಹಿಸಿ ಎಪಿಎಂಸಿ ತರಕಾರಿ ವ್ಯಾಪಾರಿಗಳ ಸಂಘಟನೆ ವತಿಯಿಂದ ಶುಕ್ರವಾರ ಮಹಾನಗರ ಪಾಲಿಕೆ ಎದುರು ಪ್ರತಿಭಟನೆ ನಡೆಸಲಾಯಿತು.
ಮಹಾನಗರ ಪಾಲಿಕೆ ಕಚೇರಿ ಎದುರು ಪ್ರತಿಭಟನೆ ನಡೆಸಿದ ವ್ಯಾಪಾರಸ್ಥರು ಬಳಿಕ ಪಾಲಿಕೆ ಆಯುಕ್ತ ಅಶೋಕ ದುಡಗುಂಟಿ
ಹಾಗೂ ಮೇಯರ್ ಶೋಭಾ ಸೋಮನಾಚೆ ಅವರಿಗೆ ಮನವಿ ಸಲ್ಲಿಸಿದರು.
ಸದ್ಯ ಬೆಳಗಾವಿ ನಗರದಲ್ಲಿರುವ ಖಾಸಗಿ ಮಾರುಕಟ್ಟೆ ಕಾನೂನು ಬಾಹಿರವಾಗಿ ಹಿಂದಿನ ಸರ್ಕಾರದ ಅವಧಿಯಲ್ಲಿ
ನಿರ್ಮಾಣಗೊಂಡಿದೆ. ಈ ಕಟ್ಟಡ ನಿರ್ಮಾಣಕ್ಕೆ 2015ರಲ್ಲಿ ಕಟ್ಟಡ ನಿರ್ಮಾಣಕ್ಕೆ 321 ಕಾಯ್ದೆ ಪ್ರಕಾರ ಅನುಮತಿ ಇಲ್ಲದ್ದಕ್ಕೆ ತಡೆಯಾಜ್ಞೆ ನೀಡಲಾಗಿತ್ತು. ಆದರೆ ಕಟ್ಟಡ ನಿರ್ಮಾಣಕ್ಕೆ ಕಾನೂನು ಬಾಹಿರವಾಗಿ ಅನುಮತಿ ನೀಡಿರುವ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದರು.
ಈ ಖಾಸಗಿ ತರಕಾರಿ ಮಾರುಕಟ್ಟೆಗೆ ರಾಜಕೀಯ ಪ್ರಭಾವ ಬಹಳಷ್ಟಿದೆ. ರಾಜಕೀಯ ಹಸ್ತಕ್ಷೇಪದಿಂದ ಈ ಕಟ್ಟಡ ನಿರ್ಮಿಸಲಾಗಿದೆ. ಈ ಬಗ್ಗೆ ಹಲವಾರು ಬಾರಿ ನಾವು ಕಟ್ಟಡ ನಿರ್ಮಾಣದ ಬಗ್ಗೆ ಮಾಹಿತಿ ಕೇಳಿದರೂ ಕೊಡುತ್ತಿಲ್ಲ. ಖಾಸಗಿ ಮಾರುಕಟ್ಟೆಯಲ್ಲಿ ಮುಕ್ತ ಮಾರುಕಟ್ಟೆಗೆ ಅವಕಾಶವಿಲ್ಲ. ಸ್ವಾರ್ಥಕ್ಕಾಗಿ ಬಂಡವಾಳಶಾಹಿಗಳು ಮಾತ್ರ ವ್ಯಾಪಾರ
ನಡೆಸುತ್ತಿದ್ದಾರೆ. ರೈತರ ಮೇಲೆ ಶೋಷಣೆ ನಡೆದಿದೆ. ಹೀಗಾಗಿ ಈಗಿನ ರಾಜ್ಯ ಸರ್ಕಾರ ಖಾಸಗಿ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ
ಕಾಯ್ದೆ ತಿದ್ದುಪಡಿ ಮಾಡಿ ರದ್ದುಗೊಳಿಸಿದೆ.
ಕೂಡಲೇ ಎಪಿಎಂಸಿ ಆವರಣದಲ್ಲಿ ತರಕಾರಿ ಮಾರುಕಟ್ಟೆಗೆ ಅವಕಾಶ ನೀಡಬೇಕು ಎಂದು ಒತ್ತಾಯಿಸಿದರು. ಈ ವೇಳೆ ವ್ಯಾಪಾರಿಗಳ ಸಂಘದ ಅಧ್ಯಕ್ಷ ಗಜಾನನ ಶಹಾಪುರಕರ, ಸದಾನಂದ ಹುಂಕರಿಪಾಟೀಲ, ಬಸನಗೌಡ ಪಾಟೀಲ, ಸತೀಶ ಪಾಟೀಲ, ವಿನೋದ ರಾಜಗೋಳಕರ, ಆಸೀಫ್ ಕಲಮನಿ, ಸಂದೀಪ ಅಂಬೋಜಿ, ಜಾವೇದ್ ಸನದಿ, ಸುರೇಶ ಮೋದಗೇಕರ ಸೇರಿದಂತೆ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi; ಕಿತ್ತೂರು ರಾಣಿ ಚನ್ನಮ್ಮ ಕಿರು ಮೃಗಾಲಯದಲ್ಲಿದ್ದ ಹುಲಿ ಶೌರ್ಯ ಇನ್ನಿಲ್ಲ
Chennamman-Kittur: ಯೋಧ ನರೇಶ ಯಲ್ಲಪ್ಪ ಅಗಸರ ಕೆರೆಗೆ ಹಾರಿ ಆತ್ಮಹತ್ಯೆ
Setback BJP: ಜನರಿಂದ ವಿಜಯೇಂದ್ರ ನಾಯಕತ್ವ ತಿರಸ್ಕಾರ, ರಾಜೀನಾಮೆ ನೀಡಲಿ: ಶಾಸಕ ಯತ್ನಾಳ್
ಮಹಾರಾಷ್ಟ್ರ ಸೋಲಿನ ಬೆನ್ನಲ್ಲೇ ಇವಿಎಂ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಸತೀಶ್ ಜಾರಕಿಹೊಳಿ
ಬೆಳಗಾವಿ:ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡಿದ ಹುಡುಗ..ಜಿಲ್ಲಾ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Sirsi: ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿ ಪರಾರಿ; ಆರೋಪಿ ಬಂಧನ
EVM: ಸೋತಾಗ ಮಾತ್ರ ಯಾಕೆ ಇವಿಎಂ ಮೇಲೆ ಆರೋಪ ಮಾಡುತ್ತೀರಿ: ಸುಪ್ರೀಂ ಕೋರ್ಟ್ ಟೀಕೆ
Sirsi: ರಕ್ಷಣಾ ಸಚಿವ ರಾಜನಾಥ ಸಿಂಗ್ ಅವರನ್ನು ಭೇಟಿಯಾದ ಸಂಸದ ಕಾಗೇರಿ
India: 68 ಮಿಲಿಯನ್ ಟನ್ ಆಹಾರ ಪೋಲು…ದೇಶದ ಅಭಿವೃದ್ಧಿ, ಜನರ ಸಾವು, ಆಹಾರ ಭದ್ರತೆಗೂ ಮಾರಕ
ದೋಟಿಹಾಳ: ಉದ್ಘಾಟನೆ ಕಾಣದೆ ಅಂಗನವಾಡಿ ಕಟ್ಟಡ ಅನಾಥ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.