ವರ್ಷಧಾರೆಗೆ ಬೆಚ್ಚಿದ ಉತ್ತರ: ದಿಲ್ಲಿ, ಹಿಮಾಚಲ,ಕಾಶ್ಮೀರದಲ್ಲಿ ಧಾರಾಕಾರ ಮಳೆ- ಜನಜೀವನ ತತ್ತರ
Team Udayavani, Jul 9, 2023, 7:58 AM IST
ಮುಂಗಾರು ಮಾರುತಗಳು ಹಾಗೂ ರಾಜಸ್ಥಾನದ ನೈರುತ್ಯ ಭಾಗದಲ್ಲಿ ಚಂಡಮಾರುತದ ಚಟುವಟಿಕೆಗಳಿಂದಾಗಿ ದಕ್ಷಿಣ ಭಾರತ ಮಾತ್ರವಲ್ಲದೇ ರಾಷ್ಟ್ರ ರಾಜಧಾನಿ ದಿಲ್ಲಿ ಸೇರಿದಂತೆ ಉತ್ತರ ಭಾಗದಲ್ಲೂ ವರುಣ ಅಬ್ಬರಿಸತೊಡಗಿದ್ದಾನೆ. ದಿಲ್ಲಿಯಲ್ಲಿ ಶನಿವಾರ ಈ ಋತುವಿನ ಮೊದಲ ಮಳೆ ಸುರಿದಿದ್ದು, ಒಂದೇ ದಿನದ ವರ್ಷಧಾರೆಗೆ ಇಡೀ ಜನಜೀವನ ಅಸ್ತವ್ಯಸ್ತವಾಯಿತು. ದಿಲ್ಲಿ ಮಾತ್ರವಲ್ಲದೇ ರಾಜಸ್ಥಾನ, ಹರ್ಯಾಣ, ಜಮ್ಮು-ಕಾಶ್ಮೀರ, ಹಿಮಾಚಲಪ್ರದೇಶ, ಕೇರಳ, ಮಹಾರಾಷ್ಟ್ರ ಸೇರಿದಂತೆ ಶನಿವಾರ ದೇಶಾದ್ಯಂತ ಧಾರಾಕಾರ ಮಳೆಯಾಗಿದೆ.
ಹಿಮಾಚಲ ಪ್ರದೇಶ
ಜೂ.24ರಿಂದ ಈವರೆಗೆ ಮಳೆ ಸಂಬಂಧಿ ಅವಘಡಗಳಿಗೆ 43 ಮಂದಿ ಬಲಿಯಾಗಿದ್ದಾರೆ. 352 ಕೋಟಿ ರೂ. ನಷ್ಟ ಉಂಟಾಗಿದೆ. ಶನಿವಾರ ಮತ್ತು ಭಾನುವಾರ ರಾಜ್ಯದ 7 ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಇಲ್ಲಿ ಒಂದೇ ದಿನ 204 ಮಿ.ಮೀ. ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಸೋಲನ್ ಜಿಲ್ಲೆಯಲ್ಲಿ ಉಂಟಾದ ಭೂಕುಸಿತದಿಂದ ಮೂರು ಮನೆಗಳು ಕುಸಿದುಬಿದ್ದಿವೆ. ದಿಢೀರ್ ಪ್ರವಾಹ ಉಂಟಾಗುವ ಭೀತಿಯೂ ಎದುರಾಗಿದೆ.
ಜಮ್ಮು ಮತ್ತು ಕಾಶ್ಮೀರ
ಝೇಲಂ ನದಿ ಮತ್ತು ಅದರ ಉಪ ನದಿಗಳಲ್ಲಿ ನೀರಿನ ಮಟ್ಟ ಏರಿಕೆಯಾಗಿದೆ. ನಿರಂತರ ಮಳೆಯಿಂದಾಗಿ ಪ್ರವಾಹ ಭೀತಿ ಎದುರಾಗಿದ್ದು, ತೀರ ಪ್ರದೇಶದಲ್ಲಿರುವ ಜನರಿಗೆ ಸ್ಥಳಾಂತರಗೊಳ್ಳುವಂತೆ ಸೂಚಿಸಲಾಗಿದೆ. ಪೂಂಛ… ಜಿಲ್ಲೆಯಲ್ಲಿ ಉಕ್ಕಿ ಹರಿಯುತ್ತಿದ್ದ ನಾಲೆಯೊಂದಕ್ಕೆ ಜಾರಿ ಬಿದ್ದು ಇಬ್ಬರು ಯೋಧರು ಅಸುನೀಗಿದ್ದಾರೆ. ರಾತ್ರಿಪೂರ್ತಿ ಮಳೆಯಾದ ಕಾರಣ ಹಲವು ಕಡೆ ಭೂಕುಸಿತ ಉಂಟಾಗಿದ್ದು, ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿ ಮತ್ತು ಮುಘಲ್ ರಸ್ತೆಯಲ್ಲಿ ವಾಹನಗಳ ಸಂಚಾರವನ್ನು ತಾತ್ಕಾಲಿಕವಾಗಿ ರದ್ದು ಮಾಡಲಾಗಿದೆ.
ಮಹಾರಾಷ್ಟ್ರ
ರಾಜಧಾನಿ ಮುಂಬಯಿ ಸೇರಿದಂತೆ ರಾಜ್ಯದ ಹಲವೆಡೆ ಮಳೆ ಮುಂದುವರಿದಿದೆ. ವಾರಾಂತ್ಯದ ಮಳೆಯು ಜನಜೀವನವನ್ನು ಸಂಪೂರ್ಣವಾಗಿ ಅಸ್ತವ್ಯಸ್ತಗೊಳಿ ಸಿದೆ. ಹಲವು ಪ್ರದೇಶಗಳು ಜಲಾವೃತಗೊಂಡಿದ್ದು, ಭಾರೀ ಸಂಚಾರ ದಟ್ಟಣೆ ಉಂಟಾಗಿದೆ.
ದಿಲ್ಲಿ
ದಿಲ್ಲಿಯಲ್ಲಿ ಶನಿವಾರ ಸುರಿದ ಭಾರೀ ಮಳೆಯಿಂದ ಸಂಚಾರ ದಟ್ಟಣೆ, ರಸ್ತೆ-ರೈಲು ಸಂಚಾರ ವ್ಯತ್ಯಯ ಉಂಟಾಯಿತು. ಹಲವು ರಸ್ತೆಗಳು ಮುಳುಗಡೆಯಾ ದವು. ಭಾನುವಾರವೂ ಭಾರೀ ಮಳೆಯಾಗಲಿದ್ದು, ಹಳದಿ ಅಲರ್ಟ್ ಘೋಷಿಸಲಾಗಿದೆ.
ಕೇರಳ
ದೇವರ ನಾಡಲ್ಲಿ ಮಳೆಯಬ್ಬರ ಮುಂದುವರಿದಿದೆ. ಪರಿಹಾರ ಶಿಬಿರಗಳ ಸಂಖ್ಯೆಯನ್ನು 186ಕ್ಕೆ ಹೆಚ್ಚಳ ಮಾಡಲಾಗಿದೆ. ಶುಕ್ರವಾರದವರೆಗೆ ಒಟ್ಟು 8 ಮಂದಿ ಮಳೆ ಸಂಬಂಧಿ ಅವಘಡಗಳಿಗೆ ಬಲಿಯಾಗಿದ್ದಾರೆ. ಕಲ್ಲಿಕೋಟೆ, ವಯನಾಡ್, ಕಣ್ಣೂರು ಮತ್ತು ಕಾಸರಗೋಡಿನಲ್ಲಿ ಶನಿವಾರ ಯೆಲ್ಲೋ ಅಲರ್ಟ್ ಘೋಷಿಸಲಾಗಿತ್ತು.
ಅಮರನಾಥ ಯಾತ್ರೆ ಸ್ಥಗಿತ; ಸಾವಿರಾರು ಮಂದಿ ಅತಂತ್ರ
ನಿರಂತರ ಮಳೆ, ಭೂಕುಸಿತದ ಹಿನ್ನೆಲೆಯಲ್ಲಿ ಸತತ 2ನೇ ದಿನವೂ ಅಮರನಾಥ ಯಾತ್ರೆಯನ್ನು ಸ್ಥಗಿತಗೊಳಿಸಲಾಗಿದೆ. ಹೀಗಾಗಿ ಗುಹಾಂತರ ದೇಗುಲದತ್ತ ಹೊರಟಿದ್ದ ಸಾವಿರಾರು ಮಂದಿ ಯಾತ್ರಿಕರು ಜಮ್ಮು ಮತ್ತು ಬೇರೆ ಬೇರೆ ಪ್ರದೇಶಗಳಲ್ಲಿ ಸಿಲುಕಿಕೊಂಡಿದ್ದಾರೆ. ಈ ಕುರಿತು ಪ್ರತಿಕ್ರಿಯಿಸಿರುವ ಕೇಂದ್ರ ಸಚಿವ ಜಿತೇಂದ್ರ ಸಿಂಗ್, “ಯಾರೂ ಆತಂಕಕ್ಕೆ ಒಳಗಾಗಬೇಡಿ. ಹಿರಿಯ ಅಧಿಕಾರಿಗಳು ಪರಿಸ್ಥಿತಿ ಪರಿಶೀಲಿಸುತ್ತಿ ದ್ದಾರೆ’ ಎಂದಿದ್ದಾರೆ. ಭಗವತಿ ನಗರ ಬೇಸ್ ಕ್ಯಾಂಪ್‌ನಿಂದಲೂ ಯಾತ್ರಿಕರ ತಂಡಕ್ಕೆ ಹೊರಡಲು ಅವಕಾಶ ಕೊಟ್ಟಿಲ್ಲ. ಭೂಕುಸಿತದಿಂದ ಪಂಥಿಯಾಲ್ ಸುರಂಗದಲ್ಲಿ ರಸ್ತೆಯ ಒಂದು ಭಾಗವೇ ಕೊಚ್ಚಿ ಹೋಗಿದೆ. ಜು.14ರವರೆಗೂ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿಮ ಬಂಗಾಲ ಗವರ್ನರ್
Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್: ನದಿಗೆ ಬಿದ್ದು ಮೂವರ ಸಾವು
Jharkhand: ಬಿಜೆಪಿ ಗೆದ್ದೇ ಗೆಲ್ಲುತ್ತದೆ ಎಂದಿಲ್ಲ: ಅಸ್ಸಾಂ ಸಿಎಂ ಬಿಸ್ವಾ ವಾದ
NCP Vs NCP: ಶರದ್ ಬಣದ ವಿರುದ್ಧ 29 ಕ್ಷೇತ್ರ ಗೆದ್ದ ಅಜಿತ್ ಬಣ
Maharashtra: ಉದ್ದವ್ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.