ವೆಡ್ಡಿಂಗ್‌ ಡೇ ಆಚರಿಸಬೇಕಾದವ ಹೆಣವಾದ!

Team Udayavani, Jul 9, 2023, 10:45 AM IST

ವೆಡ್ಡಿಂಗ್‌ ಡೇ ಆಚರಿಸಬೇಕಾದವ ಹೆಣವಾದ!

ಬೆಂಗಳೂರು: ಅಡುಗೆ ಕ್ಯಾಟರಿಂಗ್‌ ಕೆಲಸಗಾರ ನನ್ನು ಕೊಲೆ ಮಾಡಿ ಪೀಣ್ಯದ ಚನ್ನನಾಯಕ ನಪಾಳ್ಯದಲ್ಲಿ ಶವ ಸುಟ್ಟು ಹಾಕಿದ್ದ ಪ್ರಕರಣ ಭೇದಿಸಿರುವ ಪೊಲೀಸರು ಮೂವರನ್ನು ಬಂಧಿ ಸಿದ್ದು, ವಿವಾಹ ವಾರ್ಷಿಕೋತ್ಸವ ಆಚರಿಸಬೇಕಿ ದ್ದವ ಹೆಣವಾಗಿರುವುದು ತನಿಖೆಯಲ್ಲಿ ಬೆಳಕಿಗೆ ಬಂದಿದೆ.

ಹೆಗ್ಗನಹಳ್ಳಿ ನಿವಾಸಿ ಸತೀಶ್‌, ಪುಟ್ಟ ಹಾಗೂ ದಯಾನಂದ್‌ ಬಂಧಿತರು.

ತಮಿಳುನಾಡು ಮೂಲದ ಆನಂದ್‌ ಕೊಲೆಯಾದವ. ಕೊಲೆಯಾದ ಆನಂದ್‌ 8 ವರ್ಷಗಳಿಂದ ಆರೋಪಿ ಸತೀಶ್‌ ಬಳಿ ಅಡುಗೆ ಕೆಲಸ ಮಾಡಿಕೊಂಡಿದ್ದರು. ಐದಾರು ತಿಂಗಳ ಹಿಂದೆ ಆನಂದ್‌ ಸ್ವಂತ ಅಡುಗೆ ಕೇಟರಿಂಗ್‌ ವ್ಯವಹಾರ ಆರಂಭಿಸಿದ್ದರು. ಇದರಿಂದ ಅರೋಪಿ ಸತೀಶ್‌ ನಡೆಸುತ್ತಿದ್ದ ಕೇಟರಿಂಗ್‌ ವ್ಯವಹಾರಕ್ಕೆ ನಷ್ಟ ಉಂಟಾಗಿತ್ತು. ಆನಂದ್‌ ಬೆಳೆಯುತ್ತಿರುವುದನ್ನು ಸಹಿಸದ ಸತೀಶ್‌ 3 ತಿಂಗಳಿಂದ ಆತನನ್ನು ಕೊಲೆ ಮಾಡಲು ಸಂಚು ರೂಪಿಸುತ್ತಿದ್ದ. ತನ್ನ ಜತೆ ಕೆಲಸ ಮಾಡುತ್ತಿದ್ದ ಕೆಲಸಗಾರರಾದ ಪುಟ್ಟ ಹಾಗೂ ದಯಾನಂದ್‌ಗೆ ಕೊಲೆ ಮಾಡಲು ಸಹಕರಿಸುವಂತೆ ಕೇಳಿಕೊಂಡಿದ್ದ. ಕೃತ್ಯ ಎಸಗಲು ಇವರು ಕೈ ಜೋಡಿಸಿದ್ದರು. ಜು.1ರಂದು ಪಾರ್ಟಿ ಮಾಡುವ ನೆಪದಲ್ಲಿ ಚನ್ನರಾಯನಪಾಳ್ಯಕ್ಕೆ ಆನಂದ್‌ನನ್ನು ಆರೋಪಿಗಳು ಕರೆಸಿಕೊಂಡಿದ್ದರು. ಪಾರ್ಟಿ ಮಾಡಿದ ಬಳಿಕ ಸಂಚಿನಂತೆ ಆನಂದ್‌ಗೆ ಕಂಠಪೂರ್ತಿ ಕುಡಿಸಿ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿದ್ದರು. ಬಳಿಕ ಗುರುತು ಸಿಗದಿರಲೆಂದು ಶವದ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಸುಟ್ಟು ಹಾಕಿ ಪರಾರಿಯಾಗಿದ್ದರು.

ಶವ ಪತ್ತೆ: ಚನ್ನನಾಯಕನಪಾಳ್ಯದ ನಿರ್ಜನ ಪ್ರದೇಶದಲ್ಲಿ ಜು.2 ರಂದು ಆನಂದ್‌ ಶವ ಪತ್ತೆಯಾಗಿತ್ತು. ಆದರೆ, ಆನಂದ್‌ ಗುರುತು ಪತ್ತೆಯಾಗಿರಲಿಲ್ಲ. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಹಿರಿಯ ಪೊಲೀಸ್‌ ಅಧಿಕಾರಿಗಳು ಆರೋಪಿಗಳ ಪತ್ತೆಗೆ ವಿಶೇಷ ತಂಡ ರಚಿಸಿದ್ದರು. ಈ ತಂಡವು ಪೊಲೀಸ್‌ ಪ್ರಕಟಣೆ ಹೊರಡಿಸಿತ್ತು. ಜುಲೈ 2 ರಂದು ಮದುವೆ ವಾರ್ಷಿಕೋತ್ಸವ ಹಿನ್ನೆಲೆ ತಮಿಳುನಾಡಿನಲ್ಲಿ ನೆಲೆಸಿದ್ದ ಪತ್ನಿಯನ್ನು ಆನಂದ್‌ ಬೆಂಗಳೂರಿಗೆ ಬರಲು ಹೇಳಿದ್ದ. ಅದರಂತೆ ಜು.2ರಂದು ವಿವಾಹ ವಾರ್ಷಿಕೋತ್ಸವ ಆಚರಿಸಲು ತಮಿಳುನಾಡಿನಿಂದ ಬೆಂಗಳೂರಿನ ಸೆಟಲೈಟ್‌ ಬಸ್‌ ನಿಲ್ದಾಣಕ್ಕೆ ಆನಂದ್‌ನ ಪತ್ನಿ ಆಗಮಿಸಿದ್ದರು. ಪತಿಗೆ ಹಲವು ಬಾರಿ ಕರೆ ಮಾಡಿ ದರೂ ಕರೆ ಸ್ವೀಕರಿಸದಿದ್ದಾಗ ರಾಜಗೋಪಾಲನಗರ ಪೊಲೀಸ್‌ ಠಾಣೆಗೆ ತೆರಳಿ ಪತಿ ನಾಪತ್ತೆ ಯಾಗಿರುವುದಾಗಿ ತಿಳಿಸಿದ್ದರು.

ಇತ್ತ ಪೀಣ್ಯ ಪೊಲೀಸರು ಕೃತ್ಯ ನಡೆದ ಕೆಲ ದಿನಗಳ ಹಿಂದೆ ನಾಪತ್ತೆಯಾಗಿದ್ದ ವ್ಯಕ್ತಿಗಳ ಬಗ್ಗೆ ಮಾಹಿತಿ ಕಲೆ ಹಾಕಿದಾಗ ಆನಂದ್‌ ಸುಳಿವು ಸಿಕ್ಕಿತ್ತು. ಕೂಡಲೇ ಆತನ ಪತ್ನಿಗೆ ಶವ ತೋರಿಸಿದಾಗ ಇದು ತನ್ನ ಪತಿಯ ಶವವೆಂದು ದೃಢಪಡಿಸಿದ್ದರು. ಕೃತ್ಯ ನಡೆದ ಸ್ಥಳದ ಆಸು-ಪಾಸಿನಲ್ಲಿ ಅಳವಡಿಸಿದ್ದ ಸಿಸಿ ಕ್ಯಾಮೆರಾ ಹಾಗೂ ಇತರ ತಾಂತ್ರಿಕ ಕಾರ್ಯಾಚರಣೆ ನಡೆಸಿದಾಗ ಆರೋಪಿ ಸತೀಶ್‌ ಹಾಸನದಲ್ಲಿ ತಲೆಮರೆಸಿಕೊಂಡಿರುವುದು ಪತ್ತೆಯಾಗಿತ್ತು. ಹಾಸನಕ್ಕೆ ತೆರಳಿದ ಪೀಣ್ಯ ಪೊಲೀಸರ ತಂಡ ಮೂವರು ಆರೋಪಿಗಳನ್ನು ವಶಕ್ಕೆ ಪಡೆದು ನಗರಕ್ಕೆ ಕರೆ ತಂದಿದ್ದರು. ಸಮಾರಂಭಗಳಲ್ಲಿ ಅಡುಗೆ ಮಾಡುವ ಕೆಲಸದ ಗುತ್ತಿಗೆ ಪಡೆಯುವ ವಿಚಾರದಲ್ಲಿ ಆನಂದ್‌ಗೂ ಆರೋಪಿಗಳ ನಡುವೆ ಜಗಳವಾಗಿತ್ತು. ಆತನಿಂದ ತಮ್ಮ ವ್ಯವಹಾರಕ್ಕೆ ಹಿನ್ನಡೆಯಾಗುತ್ತದೆ ಎಂಬ ಕಾರಣಕ್ಕೆ ಆತನನ್ನು ಕೊಲೆ ಮಾಡಿರುವುದಾಗಿ ಆರೋಪಿಗಳು ವಿಚಾರಣೆ ವೇಳೆ ತಿಳಿಸಿದ್ದಾರೆ.

ಟಾಪ್ ನ್ಯೂಸ್

AI world: ಕ್ರಿಮಿನಲ್‌ಗ‌ಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್‌!

AI world: ಕ್ರಿಮಿನಲ್‌ಗ‌ಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್‌!

5-video

ಹೊಸ ಟ್ರೆಂಡ್ ನ ಪ್ಯಾಂಟ್ ಧರಿಸಿದ ಯುವಕ;ಸ್ನೇಹಿತರಿಂದ ಅವಮಾನ, ನೊಂದ ಯುವಕ ಆತ್ಮಹತ್ಯೆಗೆ ಯತ್ನ

Perth Test: ಟೀಂ ಇಂಡಿಯಾಗಿಲ್ಲ ಶುಭಾರಂಭ: ಮೊದಲ ಸೆಶನ್‌ ನಲ್ಲೇ ಪರದಾಡಿದ ಬ್ಯಾಟರ್‌ ಗಳು

Perth Test: ಟೀಂ ಇಂಡಿಯಾಗಿಲ್ಲ ಶುಭಾರಂಭ: ಮೊದಲ ಸೆಶನ್‌ ನಲ್ಲೇ ಪರದಾಡಿದ ಬ್ಯಾಟರ್‌ ಗಳು

Amazon Employee: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು

Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು

3-yellapur

Yellapur: ಕಣ್ಣಿಗೆ ಖಾರಾಪುಡಿ ಎರಚಿ ಹಣ, ಸ್ಕೂಟಿ ದರೋಡೆ; ಆರೋಪಿಗಳ ಬಂಧನ

venkatesh-gowda

Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ

Three Nation Trip: ಮೂರು ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ

Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Smart Bus Stan: ಕೋರಮಂಗಲದಲ್ಲಿ ಸ್ಮಾರ್ಟ್‌ ಬಸ್‌ ನಿಲ್ದಾಣ!

Smart Bus Stan: ಕೋರಮಂಗಲದಲ್ಲಿ ಸ್ಮಾರ್ಟ್‌ ಬಸ್‌ ನಿಲ್ದಾಣ!

Bengaluru: ಇವಿ ಬೈಕ್‌ ಶೋರೂಮ್‌ನಲ್ಲಿ ಬೆಂಕಿ ಅವಘಡ; ಮಾಲೀಕ, ಮ್ಯಾನೇಜರ್‌ ಬಂಧನ, ಬಿಡುಗಡೆ

Bengaluru: ಇವಿ ಬೈಕ್‌ ಶೋರೂಮ್‌ನಲ್ಲಿ ಬೆಂಕಿ ಅವಘಡ; ಮಾಲೀಕ, ಮ್ಯಾನೇಜರ್‌ ಬಂಧನ, ಬಿಡುಗಡೆ

Bengaluru: ನಗರದಲ್ಲಿ ನಿಷೇಧಿತ ಕಲರ್‌ ಕಾಟನ್‌ ಕ್ಯಾಂಡಿ ತಯಾರಿಕಾ ಘಟಕ ಬಂದ್‌

Bengaluru: ನಗರದಲ್ಲಿ ನಿಷೇಧಿತ ಕಲರ್‌ ಕಾಟನ್‌ ಕ್ಯಾಂಡಿ ತಯಾರಿಕಾ ಘಟಕ ಬಂದ್‌

3

Shobha Karandlaje: ಶೋಭಾ ಲೋಕಸಭಾ ಸದಸ್ಯತ್ವ ರದ್ದು ಕೋರಿ ಅರ್ಜಿ: ಡಿ.6ಕ್ಕೆ ವಿಚಾರಣೆ 

Arrested: ನಕಲಿ ದಾಖಲೆ ನೀಡಿ ಟಿಡಿಎಸ್‌ ಪಡೆಯುತ್ತಿದ್ದ ಆರೋಪಿಯ ಬಂಧಿಸಿದ ಜಾರಿ ನಿರ್ದೇಶನಾಲಯ

Arrested: ನಕಲಿ ದಾಖಲೆ ನೀಡಿ ಟಿಡಿಎಸ್‌ ಪಡೆಯುತ್ತಿದ್ದ ಆರೋಪಿಯ ಬಂಧಿಸಿದ ಜಾರಿ ನಿರ್ದೇಶನಾಲಯ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

AI world: ಕ್ರಿಮಿನಲ್‌ಗ‌ಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್‌!

AI world: ಕ್ರಿಮಿನಲ್‌ಗ‌ಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್‌!

5-video

ಹೊಸ ಟ್ರೆಂಡ್ ನ ಪ್ಯಾಂಟ್ ಧರಿಸಿದ ಯುವಕ;ಸ್ನೇಹಿತರಿಂದ ಅವಮಾನ, ನೊಂದ ಯುವಕ ಆತ್ಮಹತ್ಯೆಗೆ ಯತ್ನ

Perth Test: ಟೀಂ ಇಂಡಿಯಾಗಿಲ್ಲ ಶುಭಾರಂಭ: ಮೊದಲ ಸೆಶನ್‌ ನಲ್ಲೇ ಪರದಾಡಿದ ಬ್ಯಾಟರ್‌ ಗಳು

Perth Test: ಟೀಂ ಇಂಡಿಯಾಗಿಲ್ಲ ಶುಭಾರಂಭ: ಮೊದಲ ಸೆಶನ್‌ ನಲ್ಲೇ ಪರದಾಡಿದ ಬ್ಯಾಟರ್‌ ಗಳು

4-siruguppa

Siruguppa: ಜೋಡೆತ್ತಿನ ಬಂಡಿಗೆ ಡಿಕ್ಕಿ ಹೊಡೆದ ಬಸ್‌; ಎತ್ತು ಸಾವು

Amazon Employee: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು

Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.