ಕಲಘಟಗಿಯ ಮಾಜಿ ಶಾಸಕ ಸಿ.ಎಂ.ನಿಂಬಣ್ಣನವರ ನಿಧನ
Team Udayavani, Jul 9, 2023, 2:34 PM IST
ಹುಬ್ಬಳ್ಳಿ: ಕಲಘಟಗಿಯ ಮಾಜಿ ಶಾಸಕ ಸಿ.ಎಂ. ನಿಂಬಣ್ಣನವರ ರವಿವಾರ ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ.
ಮಾಜಿ ಶಾಸಕ ಸಿ.ಎಂ. ನಿಂಬಣ್ಣನವರ ಅನಾರೋಗ್ಯ ಪೀಡಿತರಾಗಿದ್ದು ಕೆಲದಿನಗಳಿಂದ ಬೆಂಗಳೂರಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೆ ರವಿವಾರ ಮಧ್ಯಾಹ್ನ ನಿಧನರಾಗಿದ್ದಾರೆ.
ಸಿ.ಎಂ. ನಿಂಬಣ್ಣವರ ಹಲವು ವರ್ಷಗಳಿಂದ ಬಿಜೆಪಿಯೊಂದಿಗೆ ಗುರುತಿಸಿಕೊಂಡಿದ್ದು, 2018ರಲ್ಲಿ ಕಲಘಟಗಿ ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಶಾಸಕರಾಗಿ ಆಯ್ಕೆಯಾಗಿದ್ದರು.
2023ರ ಚುನಾವಣೆಯಲ್ಲಿ ಬಿಜೆಪಿ ಅವರಿಗೆ ಟಿಕೆಟ್ ನಿರಾಕರಿಸಿ ಕಾಂಗ್ರೆಸ್ ನಿಂದ ಆಗಮಿಸಿದ್ದ ವಿಧಾನ ಪರಿಷತ್ ಮಾಜಿ ಸದಸ್ಯ ನಾಗರಾಜ ಚಬ್ಬಿ ಅವರಿಗೆ ಟಿಕೆಟ್ ನೀಡಿತ್ತು.
ಈ ಹಿಂದೆ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಬಿಜೆಪಿಯಿಂದ ಹೊರಬಂದು ಕೆಜೆಪಿ ಪಕ್ಷ ಸ್ಥಾಪಿಸಿದಾಗ ಅವರೊಂದಿಗೆ ಗುರುತಿಸಿಕೊಂಡಿದ್ದರು.
2023ರ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ನಿರಾಕರಿಸಿದರಿಂದ ತೀವ್ರವಾಗಿ ಅಸಮಾಧಾನಗೊಂಡಿದ್ದ ನಿಮ್ಮ ಪಕ್ಷೇತರರಾಗಿ ಸ್ಪರ್ಧೆ ಇಳಿಯುವುದಾಗಿ ಘೋಷಿಸಿದ್ದರಾದರೂ ನಂತರ ಪಕ್ಷದ ಹಿರಿಯರ ಸೂಚನೆ ಮೇರೆಗೆ ಸ್ಪರ್ಧೆಗಿಳಿಯದೆ ಪಕ್ಷದಲ್ಲಿಯೇ ಮುಂದುವರೆದಿದ್ದರು.
ಮೂಲತಃ ಶಿಕ್ಷಕ ವೃತ್ತಿಯವರಾಗಿದ್ದ ನಿಂಬಣ್ಣನವರ ರಾಜಕೀಯಕ್ಕೆ ಸೇರ್ಪಡೆಗೊಂಡು ಹಲವು ವರ್ಷಗಳಿಂದ ರಾಜಕೀಯದಲ್ಲಿ ಸಕ್ರಿಯರಾಗಿದ್ದರು.
ಸಿಎಂ ನಿಂಬಣ್ಣವರ ಅಂತ್ಯಕ್ರಿಯೆ ಸೋಮವಾರ ಮಧ್ಯಾಹ್ನ 3 ಗಂಟೆಗೆ ಕಲಘಟಗಿಯಲ್ಲಿ ನೆರವೇರಲಿದೆ ಎಂದು ಬಿಜೆಪಿ ಪಕ್ಷದ ಮೂಲಗಳು ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು
ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ
Hubli: ಅಡವಿಸಿದ್ದೇಶ್ವರ ಮಠದ ಶ್ರೀ ಶಿವಲಿಂಗೇಶ್ವರ ಸ್ವಾಮೀಜಿ ಲಿಂಗೈಕ್ಯ
Hubli: ದಿವಾಳಿಯಾದ ಸರ್ಕಾರ ಬಿಪಿಎಲ್ ಕಾರ್ಡ್ ಕಡಿತ ಮಾಡುತ್ತಿದೆ: ಪ್ರಹ್ಲಾದ ಜೋಶಿ
MUST WATCH
ಹೊಸ ಸೇರ್ಪಡೆ
Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ
Someshwara ದೇಗುಲ: ಶಿವಪಂಚಾಕ್ಷರಿ ಕೋಟಿ ನಾಮಜಪ ಯಜ್ಞ ಸಂಪನ್ನ
Maryade Prashne: ಮಧ್ಯಮ ವರ್ಗದ ಸುತ್ತ ಹೀಗೊಂದು ಚಿತ್ರ
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.