![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
Team Udayavani, Jul 10, 2023, 7:39 AM IST
ಪ್ಯಾರಿಸ್: ಪ್ರಧಾನಿ ನರೇಂದ್ರಮೋದಿ ಜು.14ರಂದು ಮುಖ್ಯ ಅತಿಥಿಯಾಗಿ ಭಾಗವಹಿಸಲಿರುವ ಫ್ರಾನ್ಸ್ ರಾಷ್ಟ್ರೀಯ ದಿನಾಚರಣೆ (ಬ್ಯಾಸ್ಟಿಲ್ ಡೇ) ಕವಾಯತಿನಲ್ಲಿ ಭಾರತೀಯ ನೌಕಾಪಡೆ ತುಕಡಿಯ ಭಾಗವಾಗಿ ಮಂಗಳೂರು ಮೂಲದ ನೌಕಾಪಡೆಯ ಲೆಫ್ಟಿನೆಂಟ್ ಕಮಾಂಡರ್ ದಿಶಾ ಅಮೃತ್ ಭಾಗವಹಿಸಲಿದ್ದಾರೆ.
ಜು.14ರಂದು ನಡೆಯಲಿರುವ ಬ್ಯಾಸ್ಟಿಲ್ ಪರೇಡ್‌ನಲ್ಲಿ ಭಾಗವಹಿಸಲು ಈಗಾಗಲೇ ನೌಕಾಪಡೆಯ ನಾಲ್ವರು ಅಧಿಕಾರಿಗಳು ಹಾಗೂ 64 ನಾವಿಕರ ತಂಡ ಪ್ಯಾರಿಸ್ ತಲುಪಿದೆ. ಈ ನಾಲ್ವರು ಅಧಿಕಾರಿಗಳ ಪೈಕಿ ದಿಶಾ ಕೂಡ ಓರ್ವರಾಗಿದ್ದಾರೆ. ನೌಕಾ ತುಕಡಿಯನ್ನು ಕಮಾಂಡರ್ ವ್ರತ್ ಬಘೇಲ್ ಮುನ್ನಡೆಸಲಿದ್ದು, ಲೆ. ಕಮಾಂಡರ್ ದಿಶಾ ಹಾಗೂ ಲೆಫ್ಟಿನೆಂಟ್ ಕಮಾಂಡರ್ ರಜತ್ ತ್ರಿಪಾಠಿ, ಲೆಫ್ಟಿನೆಂಟ್ ಕಮಾಂಡರ್ ಜಿತಿನ್ ಲಲಿತಾ ಧರ್ಮರಾಜ್ ಅವರು ತುಕಡಿಯನ್ನು ಪ್ರತಿನಿಧಿಸಲಿದ್ದಾರೆ.
ಫ್ರಾನ್ಸ್‌ನ ರಾಷ್ಟ್ರೀಯ ದಿನಾಚರಣೆ ಮಾತ್ರವಲ್ಲದೇ, ಅದೇ ದಿನವೇ ಇಂಡೋ-ಫ್ರಾನ್ಸ್ ಕಾರ್ಯತಂತ್ರ ಪಾಲುದಾರಿಕೆಯ 25ನೇ ವಾರ್ಷಿಕೋತ್ಸವವೂ ನಡೆಯುತ್ತಿರುವುದು ಗಮನಾರ್ಹ.
You seem to have an Ad Blocker on.
To continue reading, please turn it off or whitelist Udayavani.