ಮನೆಗೆ ನುಗ್ಗಿ ಬೆದರಿಸಿ ದರೋಡೆ; ಹಗಲಲ್ಲೇ ನಡೆದ ಸಿನಿಮೀಯ ರೀತಿ ಘಟನೆ

50 ಲಕ್ಷ ರೂ.-120 ಗ್ರಾಂ ಚಿನ್ನಾ ಭರಣ ಅಪಹರಣ

Team Udayavani, Jul 10, 2023, 8:34 AM IST

2-chitradurga

ಚಿತ್ರದುರ್ಗ: ಹಾಡಹಗಲೇ ಪಿಸ್ತೂಲ್‌ ಹಾಗೂ ಮಾರಕಾಸ್ತ್ರಗಳನ್ನು ತೋರಿಸಿ 50 ಲಕ್ಷ ರೂ. ನಗದು ಹಾಗೂ ಚಿನ್ನಾಭರಣ ಸುಲಿಗೆ ಮಾಡಿರುವ ಸಿನಿಮೀಯ ಘಟನೆಯೊಂದು ನಗರದ ಬ್ಯಾಂಕ್‌ ಕಾಲೋನಿಯಲ್ಲಿ ನಡೆದಿದೆ.

ಬ್ಯಾಂಕ್‌ ಕಾಲೋನಿಯಲ್ಲಿರುವ ಹೋಟೆಲ್‌ ಉದ್ಯಮಿ ನಜೀರ್‌ ಅಹ್ಮದ್‌ ಮನೆಯಲ್ಲಿ ಶನಿವಾರ ಬೆಳಗ್ಗೆ 9:20ರ ಸುಮಾರಿಗೆ ಈ ಘಟನೆ ನಡೆದಿದೆ.

ದುಷ್ಕರ್ಮಿಗಳು ಪಿಸ್ತೂಲ್‌ ಹಾಗೂ ಮಾರಕಾಸ್ತ್ರಗಳಿಂದ ಬೆದರಿಸಿ ಮನೆಯ ಇಬ್ಬರು ಸದಸ್ಯರನ್ನು ಒತ್ತೆಯಾಳಾಗಿಟ್ಟುಕೊಂಡು 50 ಲಕ್ಷ ರೂ. ನಗದು ಹಾಗೂ ಮನೆಯ ಸದಸ್ಯರನ್ನು ಕೊಠಡಿಯಲ್ಲಿ ಕೂಡಿ ಹಾಕಿ 120 ಗ್ರಾಂ ಚಿನ್ನಾಭರಣ ದರೋಡೆ ಮಾಡಿದ್ದಾರೆ ಎಂದು ನಜೀರ್‌ ಅಹ್ಮದ್‌ ಬಡಾವಣೆ ಠಾಣೆಗೆ ದೂರು ನೀಡಿದ್ದಾರೆ.

ಬೆಳಗ್ಗೆ ಮನೆಗೆ ಬಂದ ದುಷ್ಕರ್ಮಿಗಳು ಮಧ್ಯಾಹ್ನದವರೆಗೆ ಮನೆಯಲ್ಲೇ ಇದ್ದು, ಕುಟುಂಬದವರಿಗೆ ಪಿಸ್ತೂಲ್‌ ತೋರಿಸಿ ಬೆದರಿಕೆ ಹಾಕಿದ್ದಾರೆ. ಈ ವೇಳೆ ಹಣಕ್ಕೆ ಬೇಡಿಕೆ ಇಟ್ಟಾಗ ದೂರವಾಣಿ ಮೂಲಕ ಸ್ನೇಹಿತರನ್ನು ಸಂಪರ್ಕಿಸಿ 50 ಲಕ್ಷ ರೂ. ಹಣ ಹೊಂದಿಸಿದ್ದಾರೆ. ನಜೀರ್‌ ಅವರ ಪುತ್ರ ಸಮೀರ್‌ ಹಾಗೂ ಅಳಿಯ ಶಹಜಹಾನ್‌ ಅವರನ್ನು ಒತ್ತೆಯಾಗಿಟ್ಟುಕೊಂಡು ಕಾರಿನಲ್ಲಿ ಕರೆದೊಯ್ದ ದುಷ್ಕರ್ಮಿಗಳು ಸರ್ವೋದಯ ಹೋಟೆಲ್‌ ಸಮೀಪ 25 ಲಕ್ಷ ಹಣ ಪಡೆದಿದ್ದಾರೆ. ದಾವಣಗೆರೆ ಸಂಬಂಧಿಕರ ಮನೆಯಲ್ಲಿ 25 ಲಕ್ಷ ರೂ. ಪಡೆದು ಚನ್ನಗಿರಿ ಮಾರ್ಗವಾಗಿ ಶನಿವಾರ ರಾತ್ರಿ ಪರಾರಿಯಾಗುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ದಾವಣಗೆರೆಯಿಂದ ಚನ್ನಗಿರಿ ಮಾರ್ಗವಾಗಿ ಪರಾರಿಯಾಗುತ್ತಿದ್ದಾಗ ಸಂತೆಬೆನ್ನೂರು ಬಳಿಯ ಚೆಕ್‌ಪೋಸ್‌ rನಲ್ಲಿ ಪೊಲೀಸರು ಕಾರು ಪರಿಶೀಲನೆಗೆ ಮುಂದಾಗಿದ್ದಾರೆ. ಕಾರು ನಿಲ್ಲಿಸದ ಕಾರಣ ಅನುಮಾನಗೊಂಡು ಬೆನ್ನಟ್ಟಿದಾಗ ಚಿಕ್ಕಬ್ಬಿಗೆರೆ ಮಾರ್ಗವಾಗಿ ತೆರಳುತ್ತಿದ್ದ ದುಷ್ಕರ್ಮಿಗಳು ರಸ್ತೆ ಬಂದ್‌ ಆಗಿದ್ದರಿಂದ ಕಾರು ಇಳಿದು, ಪರಾರಿಯಾಗಲು ಯತ್ನಿಸಿದ್ದಾರೆ. ರಾತ್ರಿ ಹೊತ್ತಿನಲ್ಲಿ ಆರೋಪಿಯೊಬ್ಬ ಸೆರೆ ಸಿಕ್ಕಿದ್ದಾನೆ ಎಂದು ಎಸ್ಪಿ ಕೆ.ಪರಶುರಾಮ್‌ ಮಾಹಿತಿ ನೀಡಿದ್ದಾರೆ.

ಇದೇ ಕಾರಿನಲ್ಲಿ ಒತ್ತೆಯಾಳಾಗಿದ್ದ ಸಮೀರ್‌ ಹಾಗೂ ಶಹಜಹಾನ್‌ ಅವರನ್ನು ಪೊಲೀಸರು ರಕ್ಷಿಸಿದ್ದಾರೆ. ಆರೋಪಿ ಸಿಕ್ಕಿಬಿದ್ದ ಬಳಿಕ ನಜೀರ್‌ ಅಹ್ಮದ್‌ ಅವರು ಬಡಾವಣೆ ಠಾಣೆಗೆ ತೆರಳಿ ದೂರು ದಾಖಲಿಸಿದ್ದಾರೆ. ಐಜಿಪಿ ತ್ಯಾಗರಾಜನ್‌ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣದ ಕುರಿತು ಇನ್ನಷ್ಟು ಮಾಹಿತಿಗಳು ಹೊರಬರಬೇಕಿದೆ.

ಟಾಪ್ ನ್ಯೂಸ್

Arrest

Davanagere: ಪೂಜೆಯಿಂದ ಕಷ್ಟ ಪರಿಹರಿಸುವ ನೆಪದಲ್ಲಿ ಮನೆಯಿಂದ ಕಳವು: ಇಬ್ಬರ ಬಂಧನ

Kodagu-Polcie

Madikeri: ವಿವಿಧ ಕಳವು ಪ್ರಕರಣ: ಕೊಡಗು ಪೊಲೀಸರಿಂದ ಮೂವರ ಸೆರೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

Chitradurga: ಪರೀಕ್ಷಾ ಭಯದಿಂದ ಎಸೆಸೆಲ್ಸಿ ವಿದ್ಯಾರ್ಥಿ ಆತ್ಮಹ*ತ್ಯೆ

Chitradurga: ಪರೀಕ್ಷಾ ಭಯದಿಂದ ಎಸೆಸೆಲ್ಸಿ ವಿದ್ಯಾರ್ಥಿ ಆತ್ಮಹ*ತ್ಯೆ

Chi-narabalui

Chitradurga: ನಿಧಿಯ ಆಸೆಗೆ ಜ್ಯೋತಿಷಿ ಮಾತು ಕೇಳಿ ನರಬಲಿ: ಅಮಾಯಕನ ಕೊಲೆ!

CTD-Nagasadhu-Died

Stampede: ಮಹಾಕುಂಭ ಮೇಳದ ಕಾಲ್ತುಳಿತದಲ್ಲಿ ಕರ್ನಾಟಕ ಮೂಲದ ನಾಗಾಸಾಧು ಮೃತ್ಯು!

ಬಿಜೆಪಿ ಸರ್ಕಾರದಲ್ಲೇ ಮುಡಾ ಬದಲಿ ನಿವೇಶನ ಹಂಚಿಕೆ: ಸಚಿವ

BJP ಸರ್ಕಾರದಲ್ಲೇ ಮುಡಾ ಬದಲಿ ನಿವೇಶನ ಹಂಚಿಕೆ: ಸಚಿವ ವೆಂಕಟೇಶ್‌

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Suside-Boy

Sulya: ಪಯಸ್ವಿನಿ ನದಿಯಲ್ಲಿ ಯುವಕನ ಶವ ಪತ್ತೆ

Arrest

Davanagere: ಪೂಜೆಯಿಂದ ಕಷ್ಟ ಪರಿಹರಿಸುವ ನೆಪದಲ್ಲಿ ಮನೆಯಿಂದ ಕಳವು: ಇಬ್ಬರ ಬಂಧನ

Kodagu-Polcie

Madikeri: ವಿವಿಧ ಕಳವು ಪ್ರಕರಣ: ಕೊಡಗು ಪೊಲೀಸರಿಂದ ಮೂವರ ಸೆರೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.