ಯುವ ಮತದಾರರ ಸೆಳೆಯಲು ರಕ್ಷಾರಾಮಯ್ಯ ತಂತ್ರ


Team Udayavani, Jul 10, 2023, 5:40 PM IST

ಯುವ ಮತದಾರರ ಸೆಳೆಯಲು ರಕ್ಷಾರಾಮಯ್ಯ ತಂತ್ರ

ಚಿಕ್ಕಬಳ್ಳಾಪುರ: ಮುಂಬರುವ ಲೋಕಸಭಾ ಚುನಾವಣೆ ಟಿಕೆಟ್‌ ವಿಚಾರದಲ್ಲಿ ಕಾಂಗ್ರೆಸ್‌ ನಾಯಕರಲ್ಲಿ ಬಹಿರಂಗವಾಗಿ ಟಿಕೆಟ್‌ ವಾರ್‌ ಶುರುವಾಗಿರುವ ಬೆನ್ನಲ್ಲೇ ಮುಂದಿನ ಲೋಕಸಭಾ ಚುನಾವಣೆ ಮೇಲೆ ಕಣ್ಣಿಟ್ಟಿರುವ ರಾಷ್ಟ್ರೀಯ ಯುವ ಕಾಂಗ್ರೆಸ್‌ ಪ್ರಧಾನ ಕಾರ್ಯ ದರ್ಶಿ ಆಗಿರುವ ರಕ್ಷಾ ರಾಮಯ್ಯ ಸದ್ದಿಲ್ಲದೇ ಚುನಾವಣಾ ಅಖಾಡಕ್ಕೆ ಇಳಿದಿದ್ದಾರೆ.

ಹೌದು, ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಟಿಕೆಟ್‌ ವಿಚಾರದಲ್ಲಿ ಈಗಾಗಲೇ ಮಾಜಿ ಮುಖ್ಯಮಂತ್ರಿ ಎಂ.ವೀರಪ್ಪ ಮೊಯ್ಲಿ ಹಾಗೂ ಮಾಜಿ ಸಚಿವ ಎಂ.ಆರ್‌. ಸೀತಾರಾಮ್‌ ನಡುವೆ ನೀನಾ, ನಾನಾ ಎನ್ನುವಷ್ಟರ ಮಟ್ಟಿಗೆ ಟಿಕೆಟ್‌ಗೆ ಗುದ್ದಾಟ ಆರಂಭವಾಗಿದ್ದು, ಜಿಲ್ಲೆಯ ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಮೂಡಿಸಿದೆ.

ಯುವ ಮತದಾರರ ಸೆಳೆಯಲು ತಂತ್ರ: ಮಾಜಿ ಸಚಿವ ಎಂ.ರ್‌.ಸೀತಾರಾಮ್‌ ಅವರ ಪುತ್ರ ರಕ್ಷಾ ರಾಮಯ್ಯ ಲೋಕಸಭಾ ಕ್ಷೇತ್ರದ ಯುವ ಮತದಾರರನ್ನು ಗುರಿಯಾಗಿಸಿಕೊಂಡು ಸದ್ದಿಲ್ಲದೇ ಚುನಾವಣಾ ಪ್ರಚಾರದಲ್ಲಿ ತೊಡಗಿದ್ದಾರೆ. ಕ್ಷೇತ್ರದ ವ್ಯಾಪ್ತಿಗೆ ಬರುವ ಜಿಲ್ಲೆಯ ಗೌರಿಬಿದನೂರು, ಚಿಕ್ಕಬಳ್ಳಾಪುರ, ಬಾಗೇಪಲ್ಲಿ, ಗುಡಿಬಂಡೆ ತಾಲೂಕುಗಳಲ್ಲಿ ಯುವ ಮತದಾರರನ್ನು ಸೆಳೆಯುವ ನಿಟ್ಟಿನಲ್ಲಿ ಪ್ರಚಾರ ವಾಹನಕ್ಕೆ ರಕ್ಷಾ ರಾಮಯ್ಯ ಚಾಲನೆ ನೀಡಿದ್ದು, ವಿಶೇಷವಾಗಿ 18 ವರ್ಷ ತುಂಬಿರುವ ಯುವ ಮತದಾರರು ಮತದಾರರ ಪಟ್ಟಿಗೆ ಹೆಸರು ನೋಂದಾಯಿಸಿಕೊಳ್ಳಿ ಎಂಬ ಅಭಿಯಾನ ಶುರು ಮಾಡಿರುವುದು ತೀವ್ರ ಕುತೂಹಲ ಮೂಡಿಸಿದೆ. ಇದಕ್ಕಾಗಿಯೇ ವಿಶಿಷ್ಟ ಮಾದರಿಯ ಪ್ರಚಾರ ವಾಹನವನ್ನು ಸಿದ್ಧಪಡಿಸಿ ಪ್ರತಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಪ್ರಚಾರಕ್ಕೆ ಬಿಟ್ಟಿರುವುದು ಗಮನ ಸೆಳೆಯುತ್ತಿದೆ.

ನಿಮ್ಮ ಮೊದಲ ಮತವನ್ನು ಸಂಭ್ರಮಿಸಿ.. : ನಿಮ್ಮ ಮೊದಲ ಮತವನ್ನು ಸಂಭ್ರಮಿಸಿ ಎಂಬ ಘೋಷವಾಕ್ಯ ಪ್ರಚಾರದ ವಾಹನದ ಮೇಲೆ ಇದ್ದು, ಪ್ರಜ್ಞಾವಂತ ಪ್ರಜೆಯಾಗಿ ನಿಮ್ಮ ಸಂವಿಧಾನ ಬದ್ಧ ಹಕ್ಕನ್ನು 2024ರ ಲೋಕಸಭಾ ಚುನಾವಣೆಯಲ್ಲಿ ಚಲಾಯಿಸಿ ಎನ್ನುವ ಸಂದೇಶ ಸಾರುವ ಪ್ರಚಾರ ವಾಹನ ಕ್ಷೇತ್ರದಲ್ಲಿ ಸದ್ದು ಮಾಡುತ್ತಿದೆ. ಪ್ರಚಾರ ಫ‌ಲಕದಲ್ಲಿ ಕಾಂಗ್ರೆಸ್‌ನ ಎಲ್ಲಾ ನಾಯಕರ ಭಾವಚಿತ್ರಗಳಿರುವುದು ವಿಶೇಷ. ಅಸೆಂಬ್ಲಿ ಚುನಾವಣೆಯಲ್ಲಿ ಸುತ್ತಾಡಿದ್ದ ತಂದೆ-ಮಗ! : ಕಳೆದ ವಿಧಾನಸಭಾ ಚುನಾವಣೆಯಲ್ಲಿಯೇ ಮುಂದಿನ ಲೋಕಸಭಾ ಚುನಾವಣೆಗೆ ಸ್ಪರ್ಧಿಸಲು ವೇದಿಕೆ ಸಿದ್ಧಪಡಿಸಿಕೊಳ್ಳುವ ನಿಟ್ಟಿನಲ್ಲಿ ಮಾಜಿ ಸಚಿವರಾದ ಸೀತಾರಾಮ್‌ ಹಾಗೂ ಅವರ ಪುತ್ರ ರಕ್ಷಾ ರಾಮಯ್ಯ ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ಕಾಂಗ್ರೆಸ್‌ ಗೆಲುವಿಗಾಗಿ ತನು, ಮನ, ಧನ ಅರ್ಪಿಸಿ ಕೆಲಸ ಮಾಡುವ ಮೂಲಕ ಲೋಕಸಭೆ ಚುನಾವಣೆಗೆ ಕಣ ಪರೀಕ್ಷೆ ನಡೆಸಿದ್ದರು. ಚಿಕ್ಕಬಳ್ಳಾಪುರ ಮಾತ್ರವಲ್ಲದೇ ಬಲಿಜ ಸಮುದಾಯ ಹೆಚ್ಚಿರುವ ಬಾಗೇಪಲ್ಲಿ, ಗೌರಿಬಿದನೂರು ಪಟ್ಟಣದಲ್ಲಿ ಸಂಚರಿಸಿ ಕಾಂಗ್ರೆಸ್‌ ಪರ ಪ್ರಚಾರ ನಡೆಸಿದ್ದರು.

ಎಂ.ಆರ್‌.ಸೀತಾರಾಮ್‌ ವಾದ ಏನು?: ಎರಡು ಬಾರಿ ನನ್ನ ಕೈಗೆ ಬಂದಿದ್ದ ಟಿಕೆಟ್‌ ವೀರಪ್ಪ ಮೊಯ್ಲಿಗೆ ಬಿಟ್ಟು ಕೊಟ್ಟಿದ್ದೇನೆ. ಈ ಬಾರಿ ಕ್ಷೇತ್ರದ ಜನರು ನಮ್ಮ ಕುಟುಂಬಸ್ಥರು ಇಲ್ಲಿ ಸ್ಪರ್ಧಿಸಬೇಕೆಂಬ ಒತ್ತಡ ಹಾಕುತ್ತಿದ್ದಾರೆ. ಅಲ್ಲದೇ ಕ್ಷೇತ್ರದಲ್ಲಿ ನಮ್ಮ ಕುಟುಂಬಸ್ಥರು, ಸ್ನೇಹಿತರು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಹಾಗಾಗಿ ಈ ಬಾರಿ ಟಿಕೆಟ್‌ಗೆ ನಾವು ಪ್ರಯತ್ನ ಮಾಡುತ್ತೇವೆಂದು ಕಡ್ಡಿ ಮುರಿದಂತೆ ಮಾಜಿ ಸಚಿವ ಎಂ.ಆರ್‌.ಸೀತಾರಾಮ್‌ ಹೇಳುತ್ತಿದ್ದಾರೆ. ನನಗೆ ಅಥವಾ ನನ್ನ ಮಗನಿಗೆ ಆಗಲಿ ಲೋಕಸಭಾ ಚುನಾವಣೆ ಟಿಕೆಟ್‌ ಕೊಡಲೇಬೇಕೆಂದು ಸೀತಾರಾಮ್‌ ಹೇಳುತ್ತಿದ್ದಾರೆ.

ಕಾಗತಿ ನಾಗರಾಜಪ್ಪ

ಟಾಪ್ ನ್ಯೂಸ್

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Govt Schools: ಈ ಬಾರಿಯೂ ಬೇಸಗೆಯಲ್ಲಿ ಮಕ್ಕಳಿಗೆ ಭರಪೂರ ಬಿಸಿಯೂಟ

Govt Schools: ಈ ಬಾರಿಯೂ ಬೇಸಗೆಯಲ್ಲಿ ಮಕ್ಕಳಿಗೆ ಭರಪೂರ ಬಿಸಿಯೂಟ

MLA Pradeep Eshwar : ಎತ್ತಿನಹೊಳೆ ಕಾಮಗಾರಿಗೆ 500 ಕೋಟಿ ನೀಡಿ; ಪ್ರದೀಪ್‌

MLA Pradeep Eshwar : ಎತ್ತಿನಹೊಳೆ ಕಾಮಗಾರಿಗೆ 500 ಕೋಟಿ ನೀಡಿ; ಪ್ರದೀಪ್‌

chintamai-Murder

Chintamani: ಹಿಂಬಾಲಿಸಿ ಬಂದು ವ್ಯಕ್ತಿಯೊಬ್ಬರ ಹ*ತ್ಯೆಗೈದ ದುಷ್ಕರ್ಮಿಗಳು! 

10-gudibanda

Gudibanda: ವಿವಿಧ ಪ್ರಕರಣಗಳ ಕಳ್ಳನ ಬಂಧನ, 152 ಗ್ರಾಂ ಬಂಗಾರ ವಶ

Sudhakar–sandeep-Reddy

BJP Rift: ಸಂಸದ ಕೆ.ಸುಧಾಕರ್‌ ಚಿಕ್ಕಬಳ್ಳಾಪುರ ಜಿಲ್ಲೆಗೆ ಶಾಪ: ಸಂದೀಪ ರೆಡ್ಡಿ

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

18

Uv Fusion: ಗೆಳೆತನವೆಂಬ ನಿಸ್ವಾರ್ಥ ಬಾಂಧವ್ಯ

17

Uv Fusion: ಎಡವುದು ಕೂಡ ಒಳ್ಳೆಯದೇ ಒಮ್ಮೊಮ್ಮೆ…

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

16

Uv Fusion: ಪೆನ್ನಿಗೊಂದು ಕಥೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.