Opposition parties ಬೆಂಗಳೂರಿನ ಸಭೆ: ಸೋನಿಯಾ ಗಾಂಧಿ ಪಾಲ್ಗೊಳ್ಳುವ ನಿರೀಕ್ಷೆ: ಡಿಕೆಶಿ
ಜುಲೈ 12 ರಂದು ಬಾಯಿಗೆ ಕಪ್ಪು ಬಟ್ಟೆ ಕಟ್ಟಿಕೊಂಡು ಫ್ರೀಡಂ ಪಾರ್ಕ್‌ನಲ್ಲಿ ಮೌನ ಪ್ರತಿಭಟನೆ
Team Udayavani, Jul 10, 2023, 6:12 PM IST
ಬೆಂಗಳೂರು: ಜುಲೈ 17 ಮತ್ತು 18 ರಂದು ಬೆಂಗಳೂರಿನಲ್ಲಿ ನಡೆಯಲಿರುವ ವಿರೋಧ ಪಕ್ಷಗಳ ಸಭೆಯಲ್ಲಿ ಕಾಂಗ್ರೆಸ್ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಪಾಲ್ಗೊಳ್ಳುವ ನಿರೀಕ್ಷೆಯಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೋಮವಾರ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ”ಈಗಾಗಲೇ ಘೋಷಿಸಿರುವಂತೆ ಜುಲೈ 17 ಮತ್ತು 18ರಂದು ದೇಶದ ಎಲ್ಲ ವಿರೋಧ ಪಕ್ಷಗಳ ನಾಯಕರ ಸಭೆ ನಡೆಯಲಿದೆ. ಎಲ್ಲ ನಾಯಕರು ಬರಲಿದ್ದಾರೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಈ ಸಭೆಯಲ್ಲಿ ಭಾಗವಹಿಸುವಂತೆ ಸೋನಿಯಾ ಗಾಂಧಿ ಅವರಿಗೆ ಮನವಿ ಮಾಡಿದ್ದಾರೆ. ಅವರು ಈ ಸಭೆಯಲ್ಲಿ ಭಾಗವಹಿಸುತ್ತಾರೆ ಎಂಬ ಸಂದೇಶ ನಮಗೆ ಬಂದಿದೆ ಎಂದು ಹೇಳಿದರು.
ರಾಹುಲ್ ಗಾಂಧಿ ಅವರನ್ನು ಲೋಕಸಭೆಯಿಂದ ಅನರ್ಹಗೊಳಿಸಿರುವುದನ್ನು ವಿರೋಧಿಸಿ ಜುಲೈ 12 ರಂದು ಎಲ್ಲಾ ರಾಜ್ಯ ಕೇಂದ್ರ ಕಚೇರಿಗಳಲ್ಲಿ ಖರ್ಗೆ ನೇತೃತ್ವದಲ್ಲಿ ಪಕ್ಷವು ಮೌನ ಪ್ರತಿಭಟನೆ ನಡೆಸಲು ನಿರ್ಧರಿಸಿದೆ. ನಾನು ನ್ಯಾಯಾಲಯದ ತೀರ್ಪಿನ ಬಗ್ಗೆ ಮಾತನಾಡಲು ಬಯಸುವುದಿಲ್ಲ, ಆದರೆ ರಾಹುಲ್ ಗಾಂಧಿ ಅವರನ್ನು ರಾಜಕೀಯವಾಗಿ ಮುಗಿಸಲು ಅವರ ವಿರುದ್ಧ ನಡೆಯುತ್ತಿರುವ ರಾಜಕೀಯ ಪಿತೂರಿಯನ್ನು ನಾವು ಖಂಡಿಸುತ್ತೇವೆ” ಎಂದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಬೆಳಗ್ಗೆ 10ರಿಂದ ಸಂಜೆ 4ರವರೆಗೆ ಬಾಯಿಗೆ ಕಪ್ಪು ಬಟ್ಟೆ ಕಟ್ಟಿಕೊಂಡು ಪ್ರತಿಭಟನೆ ನಡೆಸಲಾಗುವುದು ಎಂದು ತಿಳಿಸಿದರು.
ಕೇಂದ್ರದ ಬಿಜೆಪಿ ಸರ್ಕಾರದ ಷಡ್ಯಂತ್ರದ ವಿರುದ್ಧದ ಪ್ರತಿಭಟನೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಪಕ್ಷದ ಎಲ್ಲಾ ಪದಾಧಿಕಾರಿಗಳು, ಸಾರ್ವಜನಿಕ ಪ್ರತಿನಿಧಿಗಳು ಮತ್ತು ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕರ್ತರು ಭಾಗವಹಿಸಲಿದ್ದಾರೆ ಎಂದು ಶಿವಕುಮಾರ್ ಹೇಳಿದರು.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.