3ನೇ ಗ್ಯಾರಂಟಿ ಜಾರಿ: ಅನ್ನಭಾಗ್ಯ ನಗದು ವರ್ಗಾವಣೆಗೆ ಸಿಎಂ ಸಿದ್ದರಾಮಯ್ಯ ಚಾಲನೆ

ಮುಂದಿನ ಹತ್ತು ದಿನಗಳಲ್ಲಿ ಎಲ್ಲ ಫ‌ಲಾನುಭವಿಗಳ ಖಾತೆಗೂ ಹಣ

Team Udayavani, Jul 11, 2023, 7:05 AM IST

3ನೇ ಗ್ಯಾರಂಟಿ ಜಾರಿ: ಅನ್ನಭಾಗ್ಯ ನಗದು ವರ್ಗಾವಣೆಗೆ ಸಿಎಂ ಸಿದ್ದರಾಮಯ್ಯ ಚಾಲನೆ

ಬೆಂಗಳೂರು:ರಾಜ್ಯದ ಬಡ ಕುಟುಂಬಗಳಿಗೆ ಆಹಾರದ ಭದ್ರತೆ ಒದಗಿಸಿರುವ “ಅನ್ನಭಾಗ್ಯ’ಕ್ಕೆ ಈಗ ದಶಕದ ಸಂಭ್ರಮ. ಹೆಚ್ಚುವರಿ ಐದು ಕೆಜಿ ಅಕ್ಕಿಯ ಬದಲಿಗೆ ನಗದು ವರ್ಗಾವಣೆ ಮಾಡುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರ ಸೋಮವಾರ ಈ ಸಂಭ್ರಮವನ್ನು ಅಕ್ಷರಶಃ ಇಮ್ಮಡಿಗೊಳಿಸಿತು.

2013ರಲ್ಲಿ ಇದೇ ಸರ್ಕಾರ ಕೇವಲ 1 ರೂ.ಗೆ ಕೆಜಿಯಂತೆ ಪ್ರತಿ ಕುಟುಂಬದ ವ್ಯಕ್ತಿಗೆ ತಲಾ ಐದು ಕೆಜಿ ಅಕ್ಕಿ ನೀಡುವ ಮೂಲಕ “ಅನ್ನಭಾಗ್ಯ’ಕ್ಕೆ ಚಾಲನೆ ನೀಡಿತ್ತು. ಈಗ ಅದೇ ಸರ್ಕಾರವು ದುಪ್ಪಟ್ಟು ಅಂದರೆ ಐದು ಕೆಜಿ ಅಕ್ಕಿಯ ಜತೆಗೆ ಹೆಚ್ಚುವರಿ ಐದು ಕೆಜಿ ಅಕ್ಕಿಗೆ ತಗಲುವ ಹಣವನ್ನು ನೇರವಾಗಿ ಫ‌ಲಾನುಭವಿಗಳ ಖಾತೆಗೆ ಜಮೆ ಮಾಡುವ ಯೋಜನೆಗೆ ಚಾಲನೆ ನೀಡಿತು. ಇದರೊಂದಿಗೆ ಹತ್ತು ವರ್ಷಗಳ ಅವಧಿಯಲ್ಲಿ ಸರ್ಕಾರದಿಂದ ಬಡವರ್ಗ ಪಡೆಯುವ ಅಕ್ಕಿಯ ಪ್ರಮಾಣ ದುಪ್ಪಟ್ಟಾಗಿದೆ. ಈ ಐತಿಹಾಸಿಕ ಕ್ಷಣಗಳಿಗೆ ವಿಧಾನಸೌಧ ಸೋಮವಾರ ಸಾಕ್ಷಿಯಾಯಿತು.

ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ “ನೆಮ್ಮದಿಯ ಬದುಕಿಗೆ ಅನ್ನಭಾಗ್ಯ’ ಶೀರ್ಷಿಕೆ ಅಡಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಜಂಟಿಯಾಗಿ ಮೈಸೂರು ಮತ್ತು ಕೋಲಾರ ಜಿಲ್ಲೆಗಳ ಫ‌ಲಾನುಭವಿಗಳಿಗೆ ಹೆಚ್ಚುವರಿ 5 ಕೆಜಿ ಅಕ್ಕಿಯ ಬದಲಿಗೆ ಹಣ (ಪ್ರತಿ ವ್ಯಕ್ತಿಗೆ 34×5=170 ರೂ.ಗಳಂತೆ)ವನ್ನು “ನೇರ ನಗದು ವರ್ಗಾವಣೆ’ ಮಾಡುವ ಮೂಲಕ ಚಾಲನೆ ನೀಡಿದರು. ಮುಂದಿನ ಹತ್ತು ದಿನಗಳಲ್ಲಿ ರಾಜ್ಯದ ಎಲ್ಲ ಫ‌ಲಾನುಭವಿಗಳಿಗೆ ಈ ಯೋಜನೆ ಅಡಿ ಹಣ ಕೈಸೇರಲಿದೆ.

2 ತಿಂಗಳು 3 ಗ್ಯಾರಂಟಿಗಳು
ಇದರೊಂದಿಗೆ ಸರ್ಕಾರದ 5 ಗ್ಯಾರಂಟಿಗಳ ಪೈಕಿ ಅಧಿಕಾರಕ್ಕೆ ಬಂದ ಕೇವಲ ಎರಡು ತಿಂಗಳ ಅಂತರದಲ್ಲಿ ಮೂರು ಈಡೇರಿದಂತಾಗಿದೆ. ಈಗಾಗಲೇ ಶಕ್ತಿ ಯೋಜನೆಗೆ ಚಾಲನೆ ದೊರಕಿದ್ದು, ಅಭೂತಪೂರ್ವ ಸ್ಪಂದನೆ ದೊರೆಯುತ್ತಿದೆ. ಇನ್ನು ಉಚಿತ ವಿದ್ಯುತ್‌ ಕಲ್ಪಿಸುವ “ಗೃಹಜ್ಯೋತಿ’ಗೆ ನೋಂದಣಿ ಪ್ರಕ್ರಿಯೆ ಆರಂಭಗೊಂಡಿದ್ದು, ಒಂದು ಕೋಟಿಗೂ ಅಧಿಕ ಗ್ರಾಹಕರು ನೋಂದಾಯಿಸಿಕೊಂಡಿದ್ದಾರೆ. ಬರುವ ತಿಂಗಳಿಂದ ಆ ವರ್ಗ ವಿದ್ಯುತ್‌ ಬಿಲ್‌ ಪಾವತಿಸಬೇಕಿಲ್ಲ. ಈಗ ಇದರ ಸಾಲಿಗೆ “ಅನ್ನಭಾಗ್ಯ’ವೂ ಸೇರಿಕೊಂಡಿದೆ.

ಇದರ ಬೆನ್ನಲ್ಲೇ ಸರ್ಕಾರ ಪ್ರತಿ ಕುಟುಂಬದ ಯಜಮಾನಿಗೆ ಮಾಸಿಕ ಎರಡು ಸಾವಿರ ರೂ. ನೀಡುವ “ಗೃಹಲಕ್ಷ್ಮೀ’ ಯೋಜನೆಗೆ ಸಿದ್ಧತೆ ಮಾಡಿಕೊಂಡಿದ್ದು, ಜುಲೈ 15ರಿಂದ ಯೋಜನೆ ಅಡಿ ನೋಂದಣಿ ಪ್ರಕ್ರಿಯೆ ಆರಂಭಿಸಲಿದೆ. ಇದಾಗಿ ಸರಿಯಾಗಿ ಒಂದು ತಿಂಗಳಲ್ಲಿ ಅಂದರೆ ಆಗಸ್ಟ್‌ 16ರಂದು ಕುಟುಂಬದ ಮುಖ್ಯಸ್ಥರಾಗಿರುವ ಮಹಿಳಾಮಣಿಗಳ ಖಾತೆಗೆ ಸರ್ಕಾರದಿಂದ 2 ಸಾವಿರ ರೂ. ಜಮೆ ಆಗಲಿದೆ. ನಂತರದ 3 ತಿಂಗಳಲ್ಲಿ ಐದನೇ ಗ್ಯಾರಂಟಿ “ಯುವನಿಧಿ’ಯನ್ನೂ ಸರ್ಕಾರ ಅನುಷ್ಠಾನಗೊಳಿಸಲಿದೆ. ಅದರಡಿ 2022-23ನೇ ಸಾಲಿನಲ್ಲಿ ಉತ್ತೀರ್ಣರಾದ ಪದವೀಧರರಿಗೆ ಮಾಸಿಕ ಮೂರು ಸಾವಿರ ರೂ. ಹಾಗೂ ಡಿಪ್ಲೊಮಾ ಪೂರೈಸಿದ ಯುವಕರಿಗೆ 1,500 ರೂ. ನೀಡಲಿದೆ. ಅಂದುಕೊಂಡಂತಾದರೆ, ಕಾಂಗ್ರೆಸ್‌ ಅಧಿಕಾರಕ್ಕೆ ಬಂದ ಕೇವಲ ಎಂಟು ತಿಂಗಳಲ್ಲಿ ಐದೂ ಯೋಜನೆಗಳು ಜಾರಿಗೆ ಬಂದಂತಾಗುತ್ತದೆ. ಇದರಿಂದ ಪ್ರತಿ ಕುಟುಂಬಕ್ಕೆ ಮಾಸಿಕ ಸರಾಸರಿ 4ರಿಂದ 5 ಸಾವಿರ ರೂ. ಸರ್ಕಾರದಿಂದಲೇ ಬರಲಿದೆ ಎಂದು ಅಂದಾಜಿಸಲಾಗಿದೆ.

“1 ಗಂಟೆಯಲ್ಲಿ ಜಾರಿಗೆ ತಂದಿದ್ದೆ’
ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, “ಅನ್ನಭಾಗ್ಯ’ ಹೊಸ ಕಾರ್ಯಕ್ರಮವಲ್ಲ; 2013ರಲ್ಲಿ ನಾನು ಪ್ರಮಾಣವಚನ ಸ್ವೀಕರಿಸಿದ ಒಂದು ಗಂಟೆಯಲ್ಲಿ ಈ ಯೋಜನೆ ಘೋಷಿಸಿದ್ದೆ. ಆಗ 3 ರೂ.ಗೆ ನೀಡುತ್ತಿದ್ದ ಕೆಜಿ ಅಕ್ಕಿಯನ್ನು ಕೇವಲ 1 ರೂ.ಗೆ ನೀಡಲು ಆರಂಭಿಸಿದೆವು. ನಂತರದಲ್ಲಿ ಸಂಪೂರ್ಣ ಉಚಿತವಾಗಿ ವಿತರಿಸಲಾಯಿತು. ಆಮೇಲೆ ತಲಾ 7 ಕೆಜಿಗೆ ಹೆಚ್ಚಿಸಲಾಯಿತು. ಇದು ಈಗ ಹತ್ತು ಕೆಜಿಗೆ ತಲುಪಿದೆ. ಈ ಯೋಜನೆಯನ್ನು ಬೇರೆ ರಾಜಕೀಯ ಪಕ್ಷ ಜಾರಿಗೆ ತಂದಿದ್ದಲ್ಲ’ ಎಂದು ಹೇಳಿದರು.

“ಅನ್ನಭಾಗ್ಯ’ದ ಲೋಗೋ ಬಿಡುಗಡೆಗೊಳಿಸಿ ಮಾತನಾಡಿದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌, ಐದರಲ್ಲಿ ಮೂರು ಗ್ಯಾರಂಟಿಗಳನ್ನು ಸರ್ಕಾರ ಅಲ್ಪಾವಧಿಯಲ್ಲೇ ಜಾರಿಗೆ ತಂದಿದೆ. ಚುನಾವಣೆಗೆ ಮುನ್ನ ನಾವು ನೀಡಿದ ಭರವಸೆಗಳನ್ನು ಈಗ ಈಡೇರಿಸುವ ಮೂಲಕ ಇತರೆ ರಾಜ್ಯಗಳಿಗೆ ಮಾದರಿಯಾಗಿದ್ದೇವೆ. ವಿವಿಧ ಪಕ್ಷಗಳ ನಾಯಕರು ಈ ಅನ್ನಭಾಗ್ಯದ ಬಗ್ಗೆ ಮಾಹಿತಿ ಪಡೆಯುತ್ತಿದ್ದಾರೆ. ಇದು ನಮ್ಮ ಬದ್ಧತೆಗೆ ಸಾಕ್ಷಿ ಎಂದು ಹೇಳಿದರು.

ಮಾಹಿತಿ ಪತ್ರ ಬಿಡುಗಡೆ
“ಆಹಾರ ವೈವಿಧ್ಯತೆಯೊಂದಿಗೆ ಹಸಿವು ಮುಕ್ತ ಕರ್ನಾಟಕ’ ಮಾಹಿತಿ ಪತ್ರವನ್ನು ಆಹಾರ, ನಾಗರಿಕ ಮತ್ತು ಗ್ರಾಹಕರ ವ್ಯವಹಾರಗಳ ಸಚಿವ ಕೆ.ಎಚ್‌. ಮುನಿಯಪ್ಪ ಬಿಡುಗಡೆಗೊಳಿಸಿದರು. ನಂತರ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, “ಇದು ಸರ್ಕಾರದ ದಿಟ್ಟ ಹೆಜ್ಜೆಯಾಗಿದೆ. ಮುಂದಿನ ಹತ್ತು ದಿನಗಳಲ್ಲಿ ರಾಜ್ಯದ ಉಳಿದೆಲ್ಲ ಜಿಲ್ಲೆಗಳಲ್ಲಿನ ಪ್ರತಿನಿಧಿಗಳಿಗೆ ಹಂತ-ಹಂತವಾಗಿ ನಗದು ವರ್ಗಾವಣೆ ಆಗಲಿದೆ’ ಎಂದರು.

ಸ್ಟೇಟಸ್‌ ತಿಳಿಯುವುದು ಹೇಗೆ?
“ಅನ್ನಭಾಗ್ಯ’ದ ಫ‌ಲಾನುಭವಿಗಳು ಖುದ್ದು ತಮ್ಮ ಪಡಿತರಚೀಟಿ ಸಂಖ್ಯೆ ನಮೂದಿಸುವ ಮೂಲಕ ಹಣ ವರ್ಗಾವಣೆ ಬಗ್ಗೆ ತಿಳಿಯಬಹುದು. http://ahara.kar.nic.in/lpg ಗೆ ಭೇಟಿ ನೀಡಿ ಅಲ್ಲಿ ಪಡಿತರಸಂಖ್ಯೆ ನಮೂದಿಸಿ, ಸ್ಟೇಟಸ್‌ ತಿಳಿಯಬಹುದು.

ಡರ್ಟಿ ಪಾಲಿಟಿಕ್ಸ್‌
ಅಕ್ಕಿ ಕೊಡುವುದಾಗಿ ಲಿಖೀತ ಭರವಸೆ ನೀಡಿ ನಂತರ ಕೈಕೊಟ್ಟ ಕೇಂದ್ರ ಸರ್ಕಾರ ಅನ್ನದ ವಿಚಾರದಲ್ಲಿ “ಡರ್ಟಿ ಪಾಲಿಟಿಕ್ಸ್‌’ ಮಾಡುತ್ತಿದೆ. ಇದು ಬಡವರ ವಿರೋಧಿ ಕ್ರಮ ಅಲ್ಲದೆ ಮತ್ತೇನು?
– ಸಿದ್ದರಾಮಯ್ಯ, ಮುಖ್ಯಮಂತ್ರಿ

ಟಾಪ್ ನ್ಯೂಸ್

5-video

ಹೊಸ ಟ್ರೆಂಡ್ ನ ಪ್ಯಾಂಟ್ ಧರಿಸಿದ ಯುವಕ;ಸ್ನೇಹಿತರಿಂದ ಅವಮಾನ, ನೊಂದ ಯುವಕ ಆತ್ಮಹತ್ಯೆಗೆ ಯತ್ನ

Perth Test: ಟೀಂ ಇಂಡಿಯಾಗಿಲ್ಲ ಶುಭಾರಂಭ: ಮೊದಲ ಸೆಶನ್‌ ನಲ್ಲೇ ಪರದಾಡಿದ ಬ್ಯಾಟರ್‌ ಗಳು

Perth Test: ಟೀಂ ಇಂಡಿಯಾಗಿಲ್ಲ ಶುಭಾರಂಭ: ಮೊದಲ ಸೆಶನ್‌ ನಲ್ಲೇ ಪರದಾಡಿದ ಬ್ಯಾಟರ್‌ ಗಳು

Amazon Employee: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು

Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು

3-yellapur

Yellapur: ಕಣ್ಣಿಗೆ ಖಾರಾಪುಡಿ ಎರಚಿ ಹಣ, ಸ್ಕೂಟಿ ದರೋಡೆ; ಆರೋಪಿಗಳ ಬಂಧನ

venkatesh-gowda

Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ

Three Nation Trip: ಮೂರು ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ

Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ

2-biggboss

BBK11: ಸೆಡೆಗಳನ್ನೆಲ್ಲ ಕಳ್ಸಿಯೇ ನಾನು ಮನೆಗೆ ಹೋಗೋದು- ಮತ್ತೆ ಗುಡುಗಿದ ರಜತ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

venkatesh-gowda

Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ

ashok

CM ಸಿದ್ದರಾಮಯ್ಯ ಭ್ರಷ್ಟ ಎಂದು ನಿರೂಪಿಸಲು ಯಶಸ್ವಿ: ಆರ್‌.ಅಶೋಕ್‌

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

1-siddu

Congress; ಅಧಿವೇಶನಕ್ಕೆ ಮುನ್ನ ಸಂಪುಟಕ್ಕೆ ಸರ್ಜರಿ? ಸಾಧ್ಯತೆಗಳೇನು?

High Court: ನಕ್ಸಲ್‌ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್‌ ಮನವಿ ಮರು ಪರಿಶೀಲನೆಗೆ ನಿರ್ದೇಶ

High Court: ನಕ್ಸಲ್‌ ಚಟುವಟಿಕೆ:ಸಾವಿತ್ರಿ ಬಾಡಿ ವಾರಂಟ್‌ ಮನವಿ ಮರು ಪರಿಶೀಲನೆಗೆ ನಿರ್ದೇಶನ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

5-video

ಹೊಸ ಟ್ರೆಂಡ್ ನ ಪ್ಯಾಂಟ್ ಧರಿಸಿದ ಯುವಕ;ಸ್ನೇಹಿತರಿಂದ ಅವಮಾನ, ನೊಂದ ಯುವಕ ಆತ್ಮಹತ್ಯೆಗೆ ಯತ್ನ

Perth Test: ಟೀಂ ಇಂಡಿಯಾಗಿಲ್ಲ ಶುಭಾರಂಭ: ಮೊದಲ ಸೆಶನ್‌ ನಲ್ಲೇ ಪರದಾಡಿದ ಬ್ಯಾಟರ್‌ ಗಳು

Perth Test: ಟೀಂ ಇಂಡಿಯಾಗಿಲ್ಲ ಶುಭಾರಂಭ: ಮೊದಲ ಸೆಶನ್‌ ನಲ್ಲೇ ಪರದಾಡಿದ ಬ್ಯಾಟರ್‌ ಗಳು

4-siruguppa

Siruguppa: ಜೋಡೆತ್ತಿನ ಬಂಡಿಗೆ ಡಿಕ್ಕಿ ಹೊಡೆದ ಬಸ್‌; ಎತ್ತು ಸಾವು

Amazon Employee: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು

Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು

3-yellapur

Yellapur: ಕಣ್ಣಿಗೆ ಖಾರಾಪುಡಿ ಎರಚಿ ಹಣ, ಸ್ಕೂಟಿ ದರೋಡೆ; ಆರೋಪಿಗಳ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.