ಯುವಕನನ್ನು ನಗ್ನಗೊಳಿಸಿ ಹಲ್ಲೆ: ಐವರನ್ನು ವಶಕ್ಕೆ ಪಡೆದ ಪೊಲೀಸರು; ವಿಡಿಯೋ ವೈರಲ್
Team Udayavani, Jul 11, 2023, 4:38 PM IST
ಹುಬ್ಬಳ್ಳಿ: ಯುವಕನೊಬ್ಬನನ್ನು ನಗ್ನಗೊಳಿಸಿ ಹಲ್ಲೆ ಮಾಡಿರುವ ವಿಡಿಯೋಗಳು ವೈರಲ್ ಆಗಿದ್ದು, ಈ ಪ್ರಕರಣದ ಬಗ್ಗೆ ಐವರನ್ನು ಬೆಂಡಿಗೇರಿ ಠಾಣೆ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.
ಮೂಲತಃ ಹುಬ್ಬಳ್ಳಿಯವನಾದ ಧಾರವಾಡ ನಿವಾಸಿ ಸಂದೀಪ್ ಎಂಬಾತನಿಗೆ 5-6 ಜನರ ತಂಡ ನಗ್ನಗೊಳಿಸಿ ಹಲ್ಲೆ ಮಾಡಿದ್ದಾರೆ. ಕಳೆದ ಮೂರು-ನಾಲ್ಕು ತಿಂಗಳ ಹಿಂದೆ ಸಂದೀಪ್ ಹಲ್ಲೆಕೋರರೊಬ್ಬರ ತಾಯಿಗೆ ಇನ್ಸ್ಟಾಗ್ರಾಮ್ ನಲ್ಲಿ ಕೆಟ್ಟದಾಗಿ ಬೈದಿದ್ದ ಎನ್ನಲಾಗಿದೆ.
ಇದೇ ಕಾರಣಕ್ಕೆ ಐದಾರು ಜನರು ಮದ್ಯ ಸೇವಿಸಿ ಸಂದೀಪನನ್ನು ನಗ್ನಗೊಳಿಸಿ ಹಲ್ಲೆ ನಡೆಸಿದ್ದಾರೆ.
ಇದನ್ನೂ ಓದಿ:ʼTOBYʼ ಗೆ ಪ್ರತಿಷ್ಠಿತ ಪ್ರೊಡಕ್ಷನ್ ಸಂಸ್ಥೆ ಸಾಥ್: ಬಿಗ್ ಅಪ್ಡೇಟ್ ಕೊಟ್ಟ ನಟ
ಇಲ್ಲಿನ ಸೆಟ್ಲಮೆಂಟ್ ವ್ಯಾಪ್ತಿಯಲ್ಲಿ ಹಲ್ಲೆ ಘಟನೆ ನಡೆದಿದೆ ಎನ್ನಲಾಗಿದೆ. ಇದಕ್ಕೆ ಸಂಬಂಧಿಸಿದಂತೆ ಪ್ರಜ್ವಲ್, ವಿನಾಯಕ, ಗಣೇಶ, ಸಚಿನ, ಮಂಜು ಎಂಬುವರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡಸಿದ್ದಾರೆ. ಸಂದೀಪನು ಪ್ರಜ್ವಲನ ತಾಯಿಗೆ ಬೈದಿದ್ದ ಎನ್ನಲಾಗಿದೆ.
ಕಳೆದ ಮೂರು-ನಾಲ್ಕು ತಿಂಗಳ ಹಿಂದೆ ಸಂದೀಪ ಎಂಬಾತ ಜಾಲತಾಣಗಳಲ್ಲಿ ಅವಾಚ್ಯವಾಗಿ ಬೈದಿದ್ದಾನೆ ಎಂಬ ಕಾರಣಕ್ಕೆ ಐವರು ಹಲ್ಲೆ ಮಾಡಿದ ಕುರಿತು ವಿಡಿಯೋ ವೈರಲ್ ಆಗಿದೆ. ಈ ಹಿನ್ನೆಲೆಯಲ್ಲಿ ಐವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿದೆ. ಆದರೆ ಹಲ್ಲೆಗೊಳಗಾದ ಯುವಕ ಸಂಪರ್ಕಕ್ಕೆ ಸಿಕ್ಕಿಲ್ಲ. ಆತ ಸಿಕ್ಕ ನಂತರ ಪ್ರಕರಣದ ಸಂಪೂರ್ಣ ಸ್ಪಷ್ಟತೆ ಸಿಗಲಿದೆ. ಸ್ವಯಂ ಆಗಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುವುದು ಎಂದು ಹೆಚ್ಚುವರಿ ಮಹಾನಗರ ಪೊಲೀಸ್ ಆಯುಕ್ತ ಕೆ. ಸಂತೋಷ ಬಾಬು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು
ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ
Hubli: ಅಡವಿಸಿದ್ದೇಶ್ವರ ಮಠದ ಶ್ರೀ ಶಿವಲಿಂಗೇಶ್ವರ ಸ್ವಾಮೀಜಿ ಲಿಂಗೈಕ್ಯ
Hubli: ದಿವಾಳಿಯಾದ ಸರ್ಕಾರ ಬಿಪಿಎಲ್ ಕಾರ್ಡ್ ಕಡಿತ ಮಾಡುತ್ತಿದೆ: ಪ್ರಹ್ಲಾದ ಜೋಶಿ
MUST WATCH
ಹೊಸ ಸೇರ್ಪಡೆ
Someshwara ದೇಗುಲ: ಶಿವಪಂಚಾಕ್ಷರಿ ಕೋಟಿ ನಾಮಜಪ ಯಜ್ಞ ಸಂಪನ್ನ
Maryade Prashne: ಮಧ್ಯಮ ವರ್ಗದ ಸುತ್ತ ಹೀಗೊಂದು ಚಿತ್ರ
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ
Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.