ಸಂಸದ B.Y.ರಾಘವೇಂದ್ರ , ಮಾಜಿ ಸಚಿವ ಹಾಲಪ್ಪ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹ


Team Udayavani, Jul 11, 2023, 6:55 PM IST

HAALAPPA BYR

ಸಾಗರ: ದಾಖಲೆ ಸರಿ ಇದ್ದರೂ ನಮ್ಮ ಜಾಗದ ಬಗ್ಗೆ ತಕರಾರು ತೆಗೆದು, ಪ್ರತಿಬಂಧಕಾಜ್ಞೆ ಮೀರಿ ನಮ್ಮ ಜಾಗದಲ್ಲಿ ಪ್ರತಿಭಟನೆ ಮಾಡಿರುವ ಸಂಸದ ಬಿ.ವೈ.ರಾಘವೇಂದ್ರ, ಮಾಜಿ ಸಚಿವ ಹರತಾಳು ಹಾಲಪ್ಪ ಸೇರಿದಂತೆ ಬಿಜೆಪಿ ಬೆಂಬಲಿಗರ ವಿರುದ್ಧ ಸೂಕ್ತ ಕಾನೂನುಕ್ರಮ ಜರುಗಿಸುವಂತೆ ವಿಜಯಕುಮಾರ್ ಪಾಟೀಲ್ ಒತ್ತಾಯಿಸಿದ್ದಾರೆ.

ಮಂಗಳವಾರ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಮ್ಮ ಜಾಗವನ್ನು ಬಂದೋಬಸ್ತು ಮಾಡಿಕೊಳ್ಳಲು ಕಾಂಪೌಂಡ್ ನಿರ್ಮಿಸುತ್ತಿರುವ ಸಂದರ್ಭದಲ್ಲಿ ಅನಧಿಕೃತ ಪ್ರವೇಶ ಮಾಡಿದ್ದಾರೆ. ಸ್ಥಳಕ್ಕೆ ಬಂದ ಉಪವಿಭಾಗಾಧಿಕಾರಿಗಳಿಗೆ ಕ್ರಮ ಕೈಗೊಳ್ಳಲು ಒತ್ತಾಯಿಸಿದರೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ದೂರಿದರು.

ನಗರದ ಬಿ.ಎಚ್. ರಸ್ತೆಯ ಸ.ನಂ. 5/4 ರಲ್ಲಿ 13.12 ಗುಂಟೆ ಜಾಗವನ್ನು ನಾವು ಖರೀದಿ ಮಾಡಿದ್ದೇವೆ. ಜಾಗಕ್ಕೆ ಸಂಬಂಧಪಟ್ಟಂತೆ ಎಲ್ಲ ದಾಖಲೆಗಳಿವೆ. 1959-60 ರಿಂದ ರಾಘವೇಂದ್ರ ಆಚಾರ್ ಎಂಬುವವರ ಹೆಸರಿನಲ್ಲಿ ಪಹಣಿ ಇದೆ. ಈ ಜಾಗವನ್ನು 2019 ರ ಏಪ್ರಿಲ್ 8 ರಂದು ನಾವು ಖರೀದಿ ಮಾಡಿದ್ದೇವೆ. ನಾವು ಖರೀದಿ ಮಾಡಿದ ಜಾಗದಲ್ಲಿ ಜನಪ್ರಿಯ ಮಟನ್ ಸ್ಟಾಲ್‌ನವರು ಅಕ್ರಮವಾಗಿ ಅಂಗಡಿ ನಿರ್ಮಿಸಿದ್ದಾರೆ. ಕುಮಾರ್ ಎಂಬ ಇನ್ನೋರ್ವರು ಜಲ್ಲಿ, ಇಟ್ಟಿಗೆ ಇನ್ನಿತರ ಇಳಿಸಿಕೊಂಡಿದ್ದಾರೆ. ಈ ಬಗ್ಗೆ ನಗರಸಭೆಗೆ ದೂರು ನೀಡಲಾಗಿತ್ತು. ಅವರು ಕ್ರಮ ಕೈಗೊಳ್ಳದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳಿಗೆ ದೂರು ನೀಡಲಾಗಿತ್ತು. ಜಿಲ್ಲಾಧಿಕಾರಿಗಳು ಸೂಚನೆ ಮೇರೆಗೆ ಮಟನ್ ಸ್ಟಾಲ್‌ಗೆ ಎರಡು ವರ್ಷದಿಂದ ಲೈಸೆನ್ಸ್ ನೀಡಿಲ್ಲ ಎಂದು ತಿಳಿಸಿದರು.

ಜಾಗವನ್ನು ಪುನರ್ ಸರ್ವೇ ಮಾಡಲು ಮುಂದಾಗಿ ನ್ಯಾಯಾಲಯದಿಂದ ಇಂಜೆಕ್ಷನ್ ಆರ್ಡರ್ ತರಲಾಗಿತ್ತು. ಪೊಲೀಸ್ ರಕ್ಷಣೆಯಲ್ಲಿ ಸೋಮವಾರ ಜಾಗಕ್ಕೆ ಕಾಂಪೌಂಡ್ ನಿರ್ಮಿಸುತ್ತಿರುವಾಗ ಸ್ಥಳಕ್ಕೆ ಬಂದು ಸಂಸದರು, ಮಾಜಿ ಶಾಸಕರು ಪ್ರತಿಭಟನೆ ನಡೆಸಿದ್ದು ಖಂಡನೀಯ. ನಮ್ಮ ಜಾಗಕ್ಕೆ ಸಂಬಂಧಪಟ್ಟಂತೆ ತಹಶೀಲ್ದಾರ್ ಕಚೇರಿ, ಸರ್ವೇ ಇಲಾಖೆಯಲ್ಲಿ ದಾಖಲೆ ಇದೆ. ಈ ಸಂಬಂಧ ನಗರಸಭೆಯಲ್ಲಿ ಯಾವುದೇ ದಾಖಲೆ ಇಲ್ಲ. ನಗರಸಭೆ ಜಾಗ ಎನ್ನುವುದಕ್ಕೆ ದಾಖಲೆ ಕೊಡಿ ಎಂದು ಮಾಹಿತಿ ಹಕ್ಕಿನಲ್ಲಿ ಅರ್ಜಿ ಸಲ್ಲಿಸಲಾಗಿತ್ತು. ದಾಖಲೆ ಇಲ್ಲದೆ ಇರುವುದರಿಂದ ನಗರಸಭೆ ಯಾವುದೇ ಮಾಹಿತಿ ನೀಡಿಲ್ಲ. ನಮ್ಮ ಹೆಸರಿನಲ್ಲಿರುವ ಜಾಗವನ್ನು ಅಕ್ರಮ ಎಂದು ಪ್ರತಿಭಟನೆ ಮಾಡಿರುವ ಮಾಜಿ ಶಾಸಕ ಹಾಲಪ್ಪ ನಡೆ ಅತ್ಯಂತ ಕೀಳುಮಟ್ಟದ್ದಾಗಿದೆ ಎಂದು ಹೇಳಿದರು. ಗೋಷ್ಠಿಯಲ್ಲಿ ಬಾಲಕೃಷ್ಣ, ಚಿಂಟೂ ಸಾಗರ್ ಹಾಜರಿದ್ದರು.

ಟಾಪ್ ನ್ಯೂಸ್

Ullala-Auto-Accident

Ullala: ಕೊಣಾಜೆ ಬಳಿ ರಿಕ್ಷಾ ಅಪಘಾತ: ವ್ಯಕ್ತಿ ಮೃತ್ಯು

1-maha

Mahayuti; ಮಹಾರಾಷ್ಟ್ರ ಮುಖ್ಯಮಂತ್ರಿ ನಿರ್ಧರಿಸಲು ಮಹತ್ವದ ಚರ್ಚೆ: ಯಾರಿಗೆ ಪಟ್ಟ?

MB-Patil-Mi

Railway: ಗಂಗಾವತಿ ರೈಲ್ವೆ ನಿಲ್ದಾಣಕ್ಕೆ ಅಂಜನಾದ್ರಿ ಹೆಸರು ಶಿಫಾರಸು: ಸಚಿವ ಎಂ.ಬಿ.ಪಾಟೀಲ್‌

1-kir

All-party meet: ನಾಳೆಯಿಂದ ಚಳಿಗಾಲದ ಅಧಿವೇಶನ: ಸುಗಮಗೊಳಿಸಲು ಬಯಸಿದ ಸರಕಾರ

IPL Auction 2025: ಸೇಲ್‌ ಆದ – ಆಗದ ಪ್ರಮುಖರು.. 3ನೇ ಸುತ್ತಿನ ಸಂಪೂರ್ಣ ಪಟ್ಟಿ ಇಲ್ಲಿದೆ..

IPL Auction 2025: ಸೇಲ್‌ ಆದ – ಆಗದ ಪ್ರಮುಖರು.. 3ನೇ ಸುತ್ತಿನ ಸಂಪೂರ್ಣ ಪಟ್ಟಿ ಇಲ್ಲಿದೆ..

Jarkahnad–CM-Soren

Jharkhand: ಮತ್ತೆ ಮುಖ್ಯಮಂತ್ರಿಯಾಗಿ ಜೆಎಂಎಂ ನಾಯಕ ಹೇಮಂತ್‌ ಸೊರೇನ್‌ ನ.28ಕ್ಕೆ ಪದಗ್ರಹಣ

120

Tourist place: ಲೇಪಾಕ್ಷಿ ಪುರಾಣದ ಕಥೆಯ ಕೈಗನ್ನಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sagara: ಟ್ರಾಫಿಕ್‌ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು

Sagara: ಟ್ರಾಫಿಕ್‌ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು

Shimoga: ಅರಣ್ಯ ಇಲಾಖೆ ಜತೆ ಸೇರಿ ಕಾಡಾನೆಗಳನ್ನು ಓಡಿಸಿದ ಜನ

Shimoga: ಅರಣ್ಯ ಇಲಾಖೆ ಜತೆ ಸೇರಿ ಕಾಡಾನೆಗಳನ್ನು ಓಡಿಸಿದ ಜನ

Sagara: ತರಗತಿ ಕೊಠಡಿ ಅವ್ಯವಸ್ಥೆ; ಎಲ್‌ಬಿ ಕಾಲೇಜಿನ ವಿದ್ಯಾರ್ಥಿಗಳ ದಿಢೀರ್ ಪ್ರತಿಭಟನೆ

Sagara: ತರಗತಿ ಕೊಠಡಿಯಲ್ಲಿ ಅವ್ಯವಸ್ಥೆ… ಕಾಲೇಜು ವಿದ್ಯಾರ್ಥಿಗಳಿಂದ ದಿಢೀರ್ ಪ್ರತಿಭಟನೆ

Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಘಾತ

Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ

Shimoga: ಮಲೆನಾಡಿನಲ್ಲಿ ಮುಂದುವರಿದ ಕಾಡಾನೆ ಕಾಟ; ಇಲಾಖೆ ವಿರುದ್ದ ರೈತರ ಆಕ್ರೋಶ

Shimoga: ಮಲೆನಾಡಿನಲ್ಲಿ ಮುಂದುವರಿದ ಕಾಡಾನೆ ಕಾಟ; ಇಲಾಖೆ ವಿರುದ್ದ ರೈತರ ಆಕ್ರೋಶ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Chhattisgarh: ಐಇಡಿ ಸ್ಫೋ*ಟ: ಪೊಲೀಸ್‌ ಸಿಬ್ಬಂದಿಗೆ ಗಾಯ

Chhattisgarh: ಐಇಡಿ ಸ್ಫೋ*ಟ: ಪೊಲೀಸ್‌ ಸಿಬ್ಬಂದಿಗೆ ಗಾಯ

Ullala-Auto-Accident

Ullala: ಕೊಣಾಜೆ ಬಳಿ ರಿಕ್ಷಾ ಅಪಘಾತ: ವ್ಯಕ್ತಿ ಮೃತ್ಯು

Maharashtra Elections: 22 ಮಹಿಳೆ ಆಯ್ಕೆ, ವಿಪಕ್ಷದಿಂದ ಒಬ್ಬರೇ!

Maharashtra Elections: 21 ಮಹಿಳೆಯರು ಆಯ್ಕೆ, ವಿಪಕ್ಷದಿಂದ ಒಬ್ಬರೇ!

1-maha

Mahayuti; ಮಹಾರಾಷ್ಟ್ರ ಮುಖ್ಯಮಂತ್ರಿ ನಿರ್ಧರಿಸಲು ಮಹತ್ವದ ಚರ್ಚೆ: ಯಾರಿಗೆ ಪಟ್ಟ?

MB-Patil-Mi

Railway: ಗಂಗಾವತಿ ರೈಲ್ವೆ ನಿಲ್ದಾಣಕ್ಕೆ ಅಂಜನಾದ್ರಿ ಹೆಸರು ಶಿಫಾರಸು: ಸಚಿವ ಎಂ.ಬಿ.ಪಾಟೀಲ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.